ಖಾಸಗಿ ಆಸ್ಪತ್ರೆಯ ಆಯಾಗೆ ಕೋವಿಡ್-19 ದೃಢ: ಕಲಬುರಗಿಯಲ್ಲಿ ಸೋಂಕಿತರ 11ಕ್ಕೆ ಏರಿಕೆ
Team Udayavani, Apr 11, 2020, 3:24 PM IST
ಕಲಬುರಗಿ: ನಗರದ ಖಾಸಗಿ ಆಸ್ಪತ್ರೆಯಲ್ಲಿ ಆಯಾ ಕೆಲಸ ಮಾಡುತ್ತಿದ್ದ 38 ವರ್ಷದ ಮಹಿಳೆಗೆ ಕೋವಿಡ್-19 ಸೋಂಕು ದೃಢ ಪಟ್ಟಿದ್ದು, ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ.
ಏ.8ರಂದು ಕೋವಿಡ್-19 ಸೋಂಕಿನಿಂದ ಮೃತಪಟ್ಟ ಹಣ್ಣಿನ ವ್ಯಾಪಾರಿ ಚಿಕಿತ್ಸೆ ಪಡೆದಿದ್ದ ಬಹಮನಿ ಆಸ್ಪತ್ರೆಯಲ್ಲಿ ಈಕೆ ಕೆಲಸ ಮಾಡುತ್ತಿದ್ದಳು. ಸೋಂಕಿತ ವ್ಯಕ್ತಿ ಸಾವನ್ನಪ್ಪಿದ್ದರಿಂದ ಆಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿ ಮೇಲೆ ನಿಗಾ ವಹಿಸಿತ್ತು. ಇದೀಗ ಆಯಾ ಕೆಲಸ ಮಾಡುತ್ತಿದ್ದ ಮಹಿಳೆಗೆ ಸೋಂಕು ಕಾಣಿಸಿಕೊಂಡಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಡಿಸಿಎಂ ಗೋವಿಂದ ಕಾರಜೋಳ ಮಾಹಿತಿ ನೀಡಿದರು.
ಹಣ್ಣಿನ ವ್ಯಾಪಾರಿ ಅನಾರೋಗ್ಯ ಹಿನ್ನೆಲೆಯಲ್ಲಿ ಬಹಮನಿ ಆಸ್ಪತ್ರೆಗೆ ದಾಖಲಾಗಿದ್ದ. ಆದರೆ, ಕೋವಿಡ್-19 ರೋಗದ ಲಕ್ಷಣಗಳು ಕಂಡುಬಂದರೂ ಚಿಕಿತ್ಸೆ ನೀಡಿದ್ದರು. ಆತನ ಆರೋಗ್ಯ ಸಂಪೂರ್ಣ ಹದಗೆಟ್ಟ ನಂತರ ಆಸ್ಪತ್ರೆಯವರು ಜಿಲ್ಲಾಡಳಿತ ಗಮನಕ್ಕೆ ತಂದಿದ್ದರು.
ಹೀಗಾಗಿ ಈಗಾಗಲೇ ಆಸ್ಪತ್ರೆಗೆ ಜಿಲ್ಲಾಡಳಿತ ಬೀಗ ಹಾಕಿ, ಆಸ್ಪತ್ರೆ ಆಡಳಿತ ಮಂಡಳಿ ಹಾಗೂ ವೈದ್ಯರ ವಿರುದ್ದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್
Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ
ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್ಡಿಐಎ ಧ್ಯೇಯ: ಜೆ.ಪಿ. ನಡ್ಡಾ
MUST WATCH
ಹೊಸ ಸೇರ್ಪಡೆ
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!