ಕಟ್ಟಿಸಂಗಾವಿ ಬಳಿ ಡ್ಯಾಂಗೆ ಅನುಮೋದನೆ

Team Udayavani, Mar 20, 2018, 1:15 PM IST

75.jpg

ಜೇವರ್ಗಿ: ಪಟ್ಟಣಕ್ಕೆ ಶಾಶ್ವತವಾಗಿ ಕುಡಿಯವ ನೀರಿನ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ತಾಲೂಕಿನ ಕಟ್ಟಿಸಂಗಾವಿ ಹತ್ತಿರ ವೆಂಟೆಡ್‌ ಡ್ಯಾಂ ನಿರ್ಮಾಣಕ್ಕೆ ಅನುಮೋದನೆ ದೊರಕಿದೆ.

ಬೆಂಗಳೂರಿನಲ್ಲಿ ಸೋಮವಾರ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ 12.5 ಕೋಟಿ ರೂ. ವೆಚ್ಚದ ವೆಂಟೆಡ್‌ ಡ್ಯಾಂ ನಿರ್ಮಾಣಕ್ಕೆ ಅನುಮೋದನೆ ದೊರಕಿದೆ. ಪ್ರತಿ ವರ್ಷ ಜೇವರ್ಗಿ ಪಟ್ಟಣಕ್ಕೆ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗುತ್ತಿತ್ತು.

ಕಟ್ಟಿಸಂಗಾವಿ ಹತ್ತಿರ ಜಾಕ್‌ವೆಲ್‌ನಿಂದ ಪೈಪ್‌ಲೈನ್‌ ಮೂಲಕ ಪಟ್ಟಣಕ್ಕೆ ನೀರು ಸರಬರಾಜು ಮಾಡಲಾಗುತ್ತಿತ್ತು. ಬೇಸಿಗೆಯಲ್ಲಿ ನದಿಯಲ್ಲಿ ನೀರಿನ ಪ್ರಮಾಣ ಕಡಿಮೆಯಾಗಿ ವಾರಕ್ಕೊಮ್ಮೆ ನೀರು ಸರಬರಾಜು ಮಾಡುವಂತಹ ಪರಿಸ್ಥಿತಿ ಎದುರಾಗಿತ್ತು. ಪುರಸಭೆ ವತಿಯಿಂದ ಪ್ರತಿ ವರ್ಷ ಕುಡಿಯುವ ನೀರಿಗಾಗಿ ಲಕ್ಷಾಂತರ ರೂ. ಖರ್ಚು ಮಾಡಿದರೂ ಸಮಸ್ಯೆ ಬಗೆಹರಿದಿರಲಿಲ್ಲ.

ಈ ಬಗ್ಗೆ ಹಲವಾರು ಬಾರಿ ಶಾಸಕ ಡಾ| ಅಜಯಸಿಂಗ್‌ ಅವರಿಗೆ ಮನವಿ ಕೂಡ ಮಾಡಲಾಗಿತ್ತು. ಕಳೆದ ಕೆಲವು ತಿಂಗಳ ಹಿಂದೆ ಶಾಸಕ ಡಾ| ಅಜಯಸಿಂಗ್‌ ಹಾಗೂ ಪುರಸಭೆ ಅಧ್ಯಕ್ಷರಾಗಿದ್ದ ಮಲ್ಲಮ್ಮ ಮಲ್ಲಣ್ಣ ಅವುಂಟಿ ಅವರ ಅಧ್ಯಕ್ಷತೆಯಲ್ಲಿ ನಡೆದ ಪುರಸಭೆ ಸಾಮಾನ್ಯ ಸಭೆಯಲ್ಲಿ 12.5 ಕೋಟಿ ರೂ.ವೆಚ್ಚದ ಅಂದಾಜು ಪಟ್ಟಿ ತಯಾರಿಸಿ ನಗರೋತ್ಥಾನ ಹಾಗೂ ಎಚ್‌ಕೆಆರ್‌ಡಿಬಿ ವತಿಯಿಂದ
ಅನುಮೋದನೆ ಪಡೆಯಲಾಗಿತ್ತು.

ಸೋಮವಾರ ನಡೆದ ಸಂಪುಟ ಸಭೆಯಲ್ಲಿ ಸಣ್ಣ ನೀರಾವರಿ ಇಲಾಖೆ ವತಿಯಿಂದ ಕೂಡ ಅನುಮೋದನೆ ದೊರಕಿದೆ. ನಗರೋತ್ಥಾನ ವತಿಯಿಂದ 4.5 ಕೋಟಿ, ಎಚ್‌ಕೆಆರ್‌ಡಿಬಿ ವತಿಯಿಂದ 4 ಕೋಟಿ ಹಾಗೂ ಸಣ್ಣ ನೀರಾವರಿ ಇಲಾಖೆ ವತಿಯಿಂದ 4 ಕೋಟಿ ರೂ.ಅನುದಾನ ಮೀಸಲಿಡಲಾಗಿದೆ. ಈ ಭಾಗದ ಜನರ ಹಲವು ದಿನಗಳ ಬೇಡಿಕೆ ಶಾಶ್ವತವಾಗಿ ಬಗೆಹರಿದಂತಾಗಿದೆ. ಶೀಘ್ರದಲ್ಲಿ ಟೆಂಡರ್‌ ಕರೆದು ಕಾಮಗಾರಿಗೆ ಚಾಲನೆ ನೀಡಲಾಗುವುದು ಎಂದು ಶಾಸಕ ಡಾ| ಅಜಯಸಿಂಗ್‌ ದೂರವಾಣಿ ಮೂಲಕ ಉದಯವಾಣಿಗೆ ತಿಳಿಸಿದ್ದಾರೆ.

ಟಾಪ್ ನ್ಯೂಸ್

14-

Kasaragodu: ಹಣದ ವಿವಾದ: ಪೆಟ್ರೋಲ್‌ ಸುರಿದು ಮಹಿಳೆಯ ಕೊಲೆಗೆ ಯತ್ನ

13-mulleria

Mulleria: ವ್ಯಕ್ತಿಯ ನಿಗೂಢ ಸಾವು : ತಲೆಗೆ ಗಂಭೀರ ಗಾಯ ಮರಣಕ್ಕೆ ಕಾರಣ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

Election ಗೆದ್ದ ನಂತರ ಜನರಿಂದ ದೂರವಾಗದೆ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು

Election ಗೆದ್ದ ಬಳಿಕ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು; ಬಿ.ವೈ.ರಾಘವೇಂದ್ರ

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

Kalaburagi; ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

crime (2)

Kalaburagi:ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ

Lok Sabha Elections; ಸೋಲಿನ ಭೀತಿಯಿಂದ ಸ್ಪರ್ಧೆ ಮಾಡದ ಖರ್ಗೆ: ಅಗರವಾಲ್‌

Lok Sabha Elections; ಸೋಲಿನ ಭೀತಿಯಿಂದ ಸ್ಪರ್ಧೆ ಮಾಡದ ಖರ್ಗೆ: ಅಗರವಾಲ್‌

ಮೊದಲಿನ ಗ್ಯಾರಂಟಿಗಳೇ ಕೊಟ್ಟಿಲ್ಲ, ಈಗೇನು ಕೊಡ್ತಾರೆ: ಕೇಂದ್ರಕ್ಕೆ ಖರ್ಗೆ ಪ್ರಶ್ನೆ

ಮೊದಲಿನ ಗ್ಯಾರಂಟಿಗಳೇ ಕೊಟ್ಟಿಲ್ಲ, ಈಗೇನು ಕೊಡ್ತಾರೆ: ಕೇಂದ್ರಕ್ಕೆ ಖರ್ಗೆ ಪ್ರಶ್ನೆ

Election; ದಿಂಗಾಲೇಶ್ವರ ಸ್ವಾಮೀಜಿ ಕಾಂಗ್ರೆಸ್ ಸೇರುವ ವಿಚಾರ ಸದ್ಯಕ್ಕಿಲ್ಲ:ಡಿಕೆ ಶಿವಕುಮಾರ್

Election; ದಿಂಗಾಲೇಶ್ವರ ಸ್ವಾಮೀಜಿ ಕಾಂಗ್ರೆಸ್ ಸೇರುವ ವಿಚಾರ ಸದ್ಯಕ್ಕಿಲ್ಲ:ಡಿಕೆ ಶಿವಕುಮಾರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

14-

Kasaragodu: ಹಣದ ವಿವಾದ: ಪೆಟ್ರೋಲ್‌ ಸುರಿದು ಮಹಿಳೆಯ ಕೊಲೆಗೆ ಯತ್ನ

13-mulleria

Mulleria: ವ್ಯಕ್ತಿಯ ನಿಗೂಢ ಸಾವು : ತಲೆಗೆ ಗಂಭೀರ ಗಾಯ ಮರಣಕ್ಕೆ ಕಾರಣ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

12-

Gangolli: ರಿಕ್ಷಾ-ಕಾರು ಢಿಕ್ಕಿ

11-

UPSC ಪರೀಕ್ಷೆಯಲ್ಲಿ ಹುಣಸೂರಿನ ಲೇಖನ್‌ಗೆ 77ನೇ ರ‍್ಯಾಂಕ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.