ಅರ್ಥ ವ್ಯವಸ್ಥೆಯಲ್ಲಿ ಬ್ಯಾಂಕ್‌ ಪಾತ್ರ ಮಹತ್ವದು

Team Udayavani, Dec 30, 2017, 12:13 PM IST

bid-1.jpg

ಬೀದರ: ಪ್ರತಿಯೊಂದು ದೇಶದ ಅರ್ಥ ವ್ಯವಸ್ಥೆಯಲ್ಲಿ ಬ್ಯಾಂಕ್‌ ಗಳು ಅತಿ ಮಹತ್ವದ ಪಾತ್ರ ನಿವಹಿಸುತ್ತವೆ ಎಂದು ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಉಮಾಕಾಂತ ನಾಗಮಾರಪಳ್ಳಿ ಹೇಳಿದರು.

ನಗರದ ಕರ್ನಾಟಕ ಸಾಹಿತ್ಯ ಸಂಘದಲ್ಲಿ ನಡೆದ ಸಮಾರಂಭದಲ್ಲಿ ಅಕ್ಕಮಹಾದೇವಿ ಬ್ಯಾಂಕಿಗೆ ಪ್ರಸಕ್ತ ವರ್ಷದ
ರಾಜ್ಯ ಸಹಕಾರ ಮಹಾಮಂಡಳದ “ಉತ್ತಮ ಸಹಕಾರ ಸಂಘ’ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ಅವರು, ಬ್ಯಾಂಕ್‌ಗಳ ಆರ್ಥಿಕ ಶಕ್ತಿಗೆ ಮಹಿಳಾ ಶಕ್ತಿ ಅವಶ್ಯ. ಪ್ರತಿ ಕ್ಷೇತ್ರ ಯಶಸ್ವಿಯಾಗಲು ಸ್ತ್ರೀಶಕ್ತಿ ಪ್ರಮುಖ ಕಾರಣವಾಗಿದ್ದು,
ಮಹಿಳೆಯರು ಮತ್ತು ಯುವ ಜನರಿಗೆ ಆರ್ಥಿಕ ನೆರವು ನೀಡಿ ಸ್ವಾವಲಂಬಿಗಳನ್ನಾಗಿ ಮಾಡಬೇಕಿದೆ ಎಂದರು.

ನಿಸ್ವಾರ್ಥ, ಪ್ರಾಮಾಣಿಕ ಹಾಗೂ ಪಾರದರ್ಶಕತೆಯಿಂದ ಮಾಡುವ ಪ್ರತಿಯೊಂದು ಕಾರ್ಯ ಯಶಸ್ವಿಯಾಗುತ್ತದೆ ಎಂಬುದಕ್ಕೆ ಇಲ್ಲಿಯ ಅಕ್ಕಮಹಾದೇವಿ ಪತ್ತಿನ ಸಹಕಾರ ಸಂಘವೇ ನಿದರ್ಶನ ಎಂದು ಹೇಳಿದರು.

ಸಂಘದ ಅಧ್ಯಕ್ಷ ಡಾ| ಜಗನ್ನಾಥ ಹೆಬ್ಟಾಳೆ ಮಾತನಾಡಿ, 70 ವರ್ಷದ ಇತಿಹಾಸವಿರುವ ಸಾಹಿತ್ಯ ಸಂಘದಲ್ಲಿ ಎರಡು ದಶಕಗಳಿಂದ ಅಕ್ಕಮಹಾದೇವಿ ಸಹಕಾರ ಪತ್ತಿನ ಸಂಘ ಬೆಳೆದು ಹೆಮ್ಮರವಾಗಿದೆ. ಜಿಲ್ಲೆಯ ಬಡ ಕಲಾವಿದರು, ಸಣ್ಣ ವ್ಯಾಪಾರಿಗಳು, ಸಾಹಿತ್ಯಾಸಕ್ತರಿಗೆ ಸಾಲ ನೀಡಿ, ಸಾಮಾಜಿಕ, ಆರ್ಥಿಕ ಹಾಗೂ ಸಾಂಸ್ಕೃತಿಕ ಸೇವೆ ಸಲ್ಲಿಸುತ್ತಿರುವ ವಿಶಿಷ್ಟ ಬ್ಯಾಂಕ್‌ ಇದಾಗಿದೆ ಎಂದರು.

ಸಂಘದ ಅಧ್ಯಕ್ಷೆ ಸಾವಿತ್ರಿಬಾಯಿ ಹೆಬ್ಟಾಳೆ ಅಧ್ಯಕ್ಷತೆ ವಹಿಸಿ ಮಾತನಾಡಿ, ಈ ಸಂಘವು ಈವರೆಗೆ ಹೊರಗಿನಿಂದ ನಯಾ ಪೈಸೆ ಸಾಲ ಪಡೆಯದೇ ಆರ್ಥಿಕ ಸ್ವಾವಲಂಬನೆ ಸಾಧಿಸಿದೆ. ಬ್ಯಾಂಕ್‌ ಈ ವರ್ಷ 11,83,531 ರೂ. ನಿವ್ವಳ ಲಾಭ ಗಳಿಸಿದೆ. 86,80,818 ರೂ. ದುಡಿಯುವ ಬಂಡವಾಳವಿದ್ದು, 74,57,063 ರೂ. ಠೇವಣಿ ಇಡಲಾಗಿದೆ. 61,12,575 ರೂ. ಸಾಲ ನೀಡಲಾಗಿದೆ ಎಂದರು. ಮಹಾಮಂಡಳ ನಿರ್ದೇಶಕ ಆಕಾಶ ಪಾಟೀಲ ವೇದಿಕೆಯಲ್ಲಿದ್ದರು. ಬ್ಯಾಂಕಿನ ಮುಖ್ಯಅಡಳಿತಾ ಧಿಕಾರಿ ನರೇಶ ರೆಡ್ಡಿ ಪ್ರಾಸ್ತಾವಿಕ ಮಾತನಾಡಿದರು.

ಪ್ರೊ| ಎಸ್‌.ಬಿ.ಬಿರಾದಾರ, ರಾಜಕುಮಾರ ಹೆಬ್ಟಾಳೆ, ಶಿವಾನಂದ ಗುಂದಗಿ, ಶಿವಶರಣಪ್ಪ ಗಣೇಶಪೂರ, ಲಿಂಗಪ್ಪ ಮಡಿವಾಳ್‌, ಸುರೇಶ ಯಾದವ, ಸುನಿತಾ ಹುಡೇರ್‌, ಶಾಂತಾಬಾಯಿ ಗುಂದಗಿ, ಇಂದುಮತಿ ಮಾಳಗೆ, ಅಂಬಿಕಾ ಬಿರಾದಾರ ಮತ್ತಿತರರು ಇದ್ದರು. ಉಪಾಧ್ಯಕ್ಷೆ ಕಲಾವತಿ ಬಿರಾದಾರ ಸ್ವಾಗತಿಸಿದರು. ನಿರ್ದೇಶಕಿ ಸುನಿತಾ ಕೂಡ್ಲಿಕರ್‌ ನಿರೂಪಿಸಿದರು. ಶಾಮಲಾ ಎಲಿ ವಂದಿಸಿದರು.

ಟಾಪ್ ನ್ಯೂಸ್

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.