ಬೆಳೆವಿಮೆ ಕಂಪನಿ ಜತೆ ಕೈ ಜೋಡಿಸಿದರೆ ಶಾಸ್ತಿ

Team Udayavani, Nov 19, 2019, 10:25 AM IST

gb–tdy-1

ಕಲಬುರಗಿ: ಕಳೆದ ವರ್ಷದ ಬೆಳೆವಿಮೆ ಮಂಜೂರಾತಿ ತಾರತಮ್ಯ ಈ ವರ್ಷ ಪುನರಾವರ್ತನೆಯಾಗುವುದನ್ನು ತಪ್ಪಿಸಲು, ಸಮರ್ಪಕವಾಗಿ ರೈತರಿಗೆ ಬೆಳೆವಿಮೆ ಸಿಗುವ ನಿಟ್ಟಿನಲ್ಲಿ ವಿಮಾ ಕಂಪನಿ ಅಧಿಕಾರಿಗಳೊಂದಿಗೆ ಬೆಳೆ ಇಳುವರಿ ಪ್ರಮಾಣ (ಕ್ರಾಪ್‌ ಕಟಿಂಗ್‌ ಎಕ್ಸಪಿರಿಮೆಂಟ್‌) ಅಳೆಯುವ ಮುಂಚೆ ಕಡ್ಡಾಯವಾಗಿ ಸಂಬಂಧಿಸಿದ ಇಲಾಖೆಗಳ ಸಭೆ ನಡೆಸುವಂತೆ ಶಾಸಕ ದತ್ತಾತ್ರೇಯ ಪಾಟೀಲ್‌ ರೇವೂರ ಅಧಿಕಾರಿಗಳಿಗೆ ಸೂಚನೆ ನೀಡಿದರು.

ತಾಪಂ ಸಭಾಂಗಣದಲ್ಲಿ ಸೋಮವಾರ ನಡೆದ ಕಲಬುರಗಿ ದಕ್ಷಿಣ ಮತಕ್ಷೇತ್ರದ ಸಂಬಂಧಪಟ್ಟಂತೆ ಅಭಿವೃದ್ಧಿ ಕಾಮಗಾರಿಗಳ ತ್ತೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು. ಬೆಳೆ ಹಾನಿಗೆ ತಕ್ಕಂತೆ ವರದಿ ರೂಪಿಸುವಲ್ಲಿ ಅಧಿಕಾರಿಗಳು ನಿಗಾ ವಹಿಸದಿರುವುದು ನಿಜಕ್ಕೂ ದುರಂತವೆಂದೇ ಹೇಳಬಹುದು. ವಿಮಾ ಕಂಪನಿಗಳ ಜತೆ ಕೈಜೋಡಿಸಿ ಅವರಿಗೆ ತಕ್ಕಂತೆ ಹಾನಿ ರೂಪಿಸುವ ಷಡ್ಯಂತ್ರ ಇನ್ನು ಮುಂದೆಯಾದರೂ ನಿಲ್ಲಲಿ. ಇಲ್ಲದಿದ್ದರೆ ರೈತರೇ ರೊಚ್ಚಿಗೆದ್ದು ಛಳಿ ಬಡಿಸಿದರೆ ಯಾರೂ ರಕ್ಷಣೆ ಬಾರರು ಎಂದು ಶಾಸಕರು ಗುಡುಗಿದರು.

ಶಾಸಕರು ಮುಂದಿನ ಸಲ ಸಭೆಗೆ ಬರುವಾಗ ಆಯಾ ಇಲಾಖೆಯಲ್ಲಿ ಕನಿಷ್ಠ ಮೂರು ವರ್ಷಗಳ ಪ್ರಗತಿ ವಿವರಣೆಯನ್ನು ಅಧಿಕಾರಿಗಳು ಕಡ್ಡಾಯವಾಗಿ ಸಭೆಗೆ ತರಬೇಕು. ರಾಜ್ಯದಲ್ಲಿ ಸರ್ಕಾರ ಬದಲಾಗಿದ್ದರೂ ಅಧಿಕಾರಿಗಳ ಮನಸ್ಥಿತಿ ಇನ್ನೂ ಬದಲಾದಂತೆ ಕಾಣುತ್ತಿಲ್ಲ. ಕಚೇರಿಗಳಿಗೆ ಕೆಲಸಕ್ಕಾಗಿ ಬರುವ ಜನರನ್ನು ಗೌರವದಿಂದ ನಡೆಸಿಕೊಂಡು ಅವರ ದೂರು-ದುಮ್ಮಾನಗಳಿಗೆ ಸ್ಪಂದಿಸಿ ಕೆಲಸ ಮಾಡಿಕೊಡಿ ತಾಕೀತು ಮಾಡಿದರು.

ಮಳೆ ಬಂದಿದೆ. ಆದರೆ ಅಂತರ್ಜಲ ಮಟ್ಟ ಹೆಚ್ಚಳವಾಗಿಲ್ಲ. ಆದ್ದರಿಂದ ಕುಡಿಯುವ ನೀರಿನ ಬಗ್ಗೆ ನಿರ್ಲಕ್ಷ್ಯ ವಹಿಸದಿರಿ. 30 ಕುಡಿಯುವ ಕಾಮಗಾರಿಗಳಿಗೆ ಆರು ತಿಂಗಳ ಹಿಂದೆಯೇ ಅನುಮೋದನೆ ನೀಡಲಾಗಿದೆ. ಆದರೆ ಟೆಂಡರ್‌ ಯಾಕೆ ಕರೆದಿಲ್ಲ?. ಟಾಸ್ಕ್ಫೋರ್ಸ್‌ನ ಕಾಮಗಾರಿಗಳ ವಿವರಣೆ ಇಲ್ಲದಿರುವುದನ್ನು ಕೆಲಸ ಏನು ಮಾಡುತ್ತಿದ್ದೀರಿ ಎಂಬುದೇ ಗೊತ್ತಾಗುತ್ತಿಲ್ಲ ಎಂದು ಕುಡಿಯವ ನೀರು ಸರಬರಾಜು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕರು, ವಿವಿಧ ಇಲಾಖೆಗಳಿಂದ ಕೈಗೆತ್ತಿಕೊಂಡರುವ ಹಲವು

ಯೋಜನೆಗಳ ಪೂರ್ಣ ಮಾಹಿತಿ ನೀಡದ ಅಧಿಕಾರಿಗಳ ಬಗ್ಗೆ ತೀವ್ರ ಅಸಮಾಧಾನ ಮತ್ತು ಆಕ್ರೋಶ ವ್ಯಕ್ತಪಡಿಸಿದರು. ಜತೆಗೆ ನಿರ್ಲಕ್ಷ್ಯ ಮಾಡುತ್ತಿರುವ ಅಧಿಕಾರಿಗಳಿಗೆ ನೊಟೀಸ್‌ ನೀಡಿ ಕ್ರಮ ಕೈಗೊಳ್ಳುವಂತೆ ತಾಪಂ ಇಒ ಮಾನಪ್ಪ ಕಟ್ಟಿಮನಿಯವರಿಗೆ ನಿರ್ದೇಶನ ನೀಡಿದರು. ರೇಷ್ಮೆ ಇಲಾಖೆ ಹೆಸರಿಗೆ ಎನ್ನುವಂತಾಗಿದೆ.

ಆದ್ದರಿಂದ ಇಲಾಖೆ ಇದೆ ಎಂಬುದನ್ನು ತೋರಿಸಲು ಯೋಜನೆಗಳನ್ನು ಎಲ್ಲ ರೈತರಿಗೆ ತಲುಪಿಸಿ ಎಂದು ಇಲಾಖಾಧಿಕಾರಿಗಳಿಗೆ ಸೂಚಿಸಿದರಲ್ಲದೇ ರೇಷ್ಮೆ ಪ್ರೋತ್ಸಾಹ ಧನ ರೈತರಿಗೆ ತಲುಪಿಸಬೇಕು. ಶೈಕ್ಷಣಿಕ ಸುಧಾರಣೆಗೆ ಶ್ರಮಿಸಬೇಕು. ಕೊನೆ ಹಣೆಪಟ್ಟಿ ತೊಲಗಿಸಲು ಶ್ರಮಿಸಿ. ಬಹು ಮುಖ್ಯವಾಗಿ ಫ‌ಲಿತಾಂಶ ಸುಧಾರಣೆ ಕಾರ್ಯ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಕೈಗೊಳ್ಳಿ. ಆರೋಗ್ಯ ಸೇವೆ ಸಹ ಕೊರತೆಯಾಗದಂತೆ ನಿಗಾ ವಹಿಸಿ, ಬಹು ಮುಖ್ಯವಾಗಿ ಪಟ್ಟಣದಲ್ಲಿ ಸ್ಥಾಪಿಸಬೇಕೆಂದಿರುವ ಸಮುದಾಯ ಆರೋಗ್ಯ ಕೇಂದ್ರ ಕಾರ್ಯಾನುಷ್ಠಾನಕ್ಕೆ ಇಚ್ಚಾಶಕ್ತಿ ತೋರಿಸಿ ಎಂದು ಶಾಸಕ ರೇವೂರ ಅಧಿಕಾರಿಗಳಿಗೆ ಸಲಹೆ ನೀಡಿದರು. ತಾಪಂ ಅಧ್ಯಕ್ಷ ಶಿವರಾಜ ಸಜ್ಜನ, ಇಒ ಮಾನಪ್ಪ ಕಟ್ಟಿಮನಿ, ಸ್ಥಾಯಿ ಸಮಿತಿ ಅಧ್ಯಕ್ಷ ಆನಂದ ಚವ್ಹಾಣ ಸೇರಿದಂತೆ ಇತರರಿದ್ದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.