ಬಿಎಫ್‌ಟಿ ಪರೀಕ್ಷೆ: ಕೆಲ ಅಭ್ಯರ್ಥಿಗಳ ಹೈಡ್ರಾಮಾ


Team Udayavani, Sep 30, 2020, 4:14 PM IST

gb-tdy-2

ಕಲಬುರಗಿ: ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ಬರಿಗಾಲು ತಜ್ಞರು (ಬಿಎಫ್‌ಟಿ-ಬೇರ್‌ ಫೂಟ್‌ ಟೆಕ್ನಿಷಿಯನ್‌) ತರಬೇತಿ ಪೂರಕ ಪರೀಕ್ಷೆಗೆ ಅರ್ಜಿದಾರ ಅಭ್ಯರ್ಥಿಗಳಿಗೆ ಮಾಹಿತಿ ನೀಡಿಲ್ಲ ಎಂದು ಆರೋಪಿಸಿ ಕೆಲ ಅಭ್ಯರ್ಥಿಗಳು ನಗರದಲ್ಲಿ ಹೈಡ್ರಾಮಾ ಸೃಷ್ಟಿಸಿದರು.

ರಾಜ್ಯದ 12 ಜಿಲ್ಲೆಗಳಲ್ಲಿ ಮಂಗಳವಾರ ಏಕಕಾಲಕ್ಕೆ ಬಿಎಫ್‌ಟಿ ತರಬೇತಿಗೆ ಸ್ಕ್ರೀನಿಂಗ್‌ ಟೆಸ್ಟ್‌ ಆಯೋಜಿಸಲಾಗಿತ್ತು. ಅದರಂತೆ ನಗರದಲ್ಲಿ ಜಿಪಂಯಿಂದ ನೂತನ ಸಭಾಂಗಣದಲ್ಲಿ ಪರೀಕ್ಷೆ ನಡೆಯಿತು. ಈ ವೇಳೆ ಪರೀಕ್ಷಾ ಸ್ಥಳಕ್ಕೆ ಬಂದ ಕೆಲ ಅಭ್ಯರ್ಥಿಗಳು ಜಿಲ್ಲೆಯಲ್ಲಿ 800 ಜನರು ಅರ್ಜಿ ಸಲ್ಲಿಸಿದ್ದೇವೆ. ಆದರೆ, ಅಧಿಕಾರಿಗಳು ಕೆಲವರನ್ನು ಮಾತ್ರ ಪರೀಕ್ಷೆಗೆ ಕರೆದಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮುಖಂಡ ಅಶೋಕ ಮ್ಯಾಗೇರಿ, ಅಭ್ಯರ್ಥಿಗಳಾದ ಶಿವಕುಮಾರ್‌, ವಿದ್ಯಾವತಿ ಗುತ್ತೇದಾರ, ಬಾಬುರಾವ್‌,ಪ್ರಭಾವತಿ, ಅನಿಲ್‌ ಕುಮಾರ ಪಾಟೀಲ, ಸಂತೋಷ ಕುಮಾರ ಮುಂತಾದವರು ಏಕಾಏಕಿ ಮುಖ್ಯ ರಸ್ತೆ ಮೇಲೆ ಕುಳಿತು ಪ್ರತಿಭಟನೆ ನಡೆಸಿ, ಅಧಿಕಾರಿಗಳು ಲಂಚ ಪಡೆದು ತಮಗೆ ಬೇಕಾದ ಅಭ್ಯರ್ಥಿಗಳಿಗೆ ಮಾತ್ರವೇ ಪರೀಕ್ಷೆ ಬರೆಯಲು ಅವಕಾಶ ಕೊಟ್ಟಿದ್ದಾರೆ ಎಂದು ದೂರಿದರು. ಈ ವೇಳೆ ಜಿಪಂ ಅಧಿಕಾರಿಗಳು ಅಭ್ಯರ್ಥಿಗಳಿಗೆ ತಿಳಿ ಹೇಳಲು ಯತ್ನಿಸಿದರೂ ವಿಫಲವಾದರು. ನಂತರ ಸ್ಥಳಕ್ಕೆ ಬಂದ ಪೊಲೀಸರು ಎಲ್ಲರನ್ನೂ ಚದುರಿಸಿದರು.

19 ಹುದ್ದೆಗಳಿಗೆ ಟೆಸ್ಟ್‌: ಜಿಲ್ಲೆಯಲ್ಲಿ ಬಿಎಫ್‌ಟಿ 19 ಹುದ್ದೆಗಳ ಭರ್ತಿಗೆ ಅವಕಾಶ ಇದ್ದು, ನರೇಗಾ ಯೋಜನೆಯ ಕ್ಷೇತ್ರದ ಮಟ್ಟದ ಸಹಾಯಕರು ಮತ್ತು ಕೂಲಿ ಕೆಲಸ ಮಾಡಿ ಹೊರ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿತ್ತು. ಆದರೆ, ಕ್ಷೇತ್ರದ ಮಟ್ಟದ ಸಹಾಯಕರಿಗೆ ಪ್ರಥಮ ಆದ್ಯತೆ ನೀಡಬೇಕೆಂದು ಸರ್ಕಾರ ಆದೇಶದ ಇದ್ದು, ಅದರಂತೆ 1:3 ಅನುಪಾತದಲ್ಲಿ ಕ್ಷೇತ್ರದ ಮಟ್ಟದ ಸಹಾಯಕರಾದ 57 ಅಭ್ಯರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿತ್ತು ಎಂದು ಅಧಿಕಾರಿಯೊಬ್ಬರು ತಿಳಿಸಿದರು.

ಸರ್ಕಾರ ನಿಮಯದಂತೆ ಪರೀಕ್ಷೆ ನಡೆಸಲಾಗಿದೆ. ಸಂಜೆ ವೇಳೆಗೆ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಮಾಡಿ, ಸರ್ಕಾರಕ್ಕೆ ಸಲ್ಲಿಸಲಾಗಿದೆ ಎಂದು ಸ್ಪಷ್ಟಪಡಿಸಿ ಅವರು, ನರೇಗಾ ಕೂಲಿ ಮಾಡಿದವರೂ ಅರ್ಜಿ ಸಲ್ಲಿಸಲು ಅವಕಾಶ ಇರುವುದರಿಂದ ಒಟ್ಟು620 ಅರ್ಜಿಗಳು ಸಲ್ಲಿಕೆಯಾಗಿದ್ದವು ಎಂದರು.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.