ಬಂಜಾರಾ ಜನಾಂಗ ಹೋರಾಟದ ಶಕಿಯಾಗಲಿ

Team Udayavani, Aug 28, 2017, 10:42 AM IST

gul 4.jpg

ವಾಡಿ: ಬಂಜಾರಾ ಜನಾಂಗವನ್ನು ತುಳಿಯುವ ಷಡ್ಯಂತ್ರ ನೆಡೆಯುತ್ತಿದೆ. ಅನ್ಯಾಯದ ವಿರುದ್ಧ ಹೋರಾಡಲು ಲಂಬಾಣಿಗರು ಪಕ್ಷ ಬೇಧ ಮರೆತು ಸಂಘಟಿತರಾಗಬೇಕು ಎಂದು ಅಖೀಲ ಭಾರತ ಬಂಜಾರಾ ಸೇವಾ ಸಂಘದ ರಾಷ್ಟ್ರೀಯ ಅಧ್ಯಕ್ಷ ಬಾಬುರಾವ ಚವ್ಹಾಣ ಕರೆ ನೀಡಿದರು. ಪಟ್ಟಣದ ಸಾಹೇಬ್‌ ಫಂಕ್ಷನ್‌ ಹಾಲ್‌ನಲ್ಲಿ ಏರ್ಪಡಿಸಲಾಗಿದ್ದ ಬಂಜಾರಾ ಸೇವಾ ಸಂಘ ವಾಡಿ ಘಟಕದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು. ಬಂಜಾರಾ ಜನಾಂಗದವರು ಯಾವುದೇ ರಾಜಕೀಯ ಪಕ್ಷದಲ್ಲಿರಲಿ. ವಿವಿಧ ಸಂಘ ಸಂಸ್ಥೆಗಳಲ್ಲಿರಲಿ. ಸಮಾಜದ ಏಕತೆಗೆ ಧಕ್ಕೆಯಾದಾಗ ಮತ್ತು ವಿವಿಧ ನಗರಗಳಲ್ಲಿ ವಾಸಿಸುವವರ ಮೇಲೆ ದಾಳಿಗಳು ನಡೆದಾಗ ಒಗ್ಗಟ್ಟಿನಿಂದ ಹೋರಾಟ ಮಾಡಲು ಮುಂದಾಗಬೇಕು ಎಂದು ಹೇಳಿದರು. ಲಂಬಾಣಿ ಜನರ ಕುಟುಂಬದಲ್ಲಿ ಕಲಹಗಳು ನಡೆದಾಗ ಹಣ ಪಡೆಯದೆ ನ್ಯಾಯ ದೊರಕಿಸಿಕೊಡಬೇಕು. ಸಂಘಟನೆ ಹೆಸರನ್ನು ದುರ್ಬಳಕೆ ಮಾಡಿಕೊಳ್ಳಬಾರದು. ಸರಕಾರದ ಯೋಜನೆಗಳನ್ನು ನಮ್ಮ ಸಮುದಾಯದವರ ಮನೆ ಬಾಗಿಲಿಗೆ ಮುಟ್ಟಿಸುವ ಕಾರ್ಯ ಮಾಡಬೇಕು. ಬಂಜಾರಾ ಸಂಘ ಜನ ಕಲ್ಯಾಣಕ್ಕೆ ಬಳಕೆಯಾಗಬೇಕು ಎಂದು ಕಿವಿಮಾತು ಹೇಳಿದರು. ಮಾಜಿ ಶಾಸಕ ವಾಲ್ಮೀಕಿ ನಾಯಕ ಮಾತನಾಡಿ, ಸಮಾಜ ಸೇವೆಯೇ ಮುಖ್ಯ ಎಂಬ ನಿಲುವು ಹೊಂದುವ ಮೂಲಕ ಸಾರ್ವಜನಿಕ ಜಾಗೃತಿಗಾಗಿ ಸಂಘ ಕೆಲಸ ಮಾಡಬೇಕು ಎಂದು ಹೇಳಿದರು. ಜಿಪಂ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಅರವಿಂದ ಚವ್ಹಾಣ, ಪೋಮು ರಾಠೊಡ, ಶ್ರೀನಿವಾಸ ಸಗರ, ಭಾವಸಿಂಗ್‌ ಚವ್ಹಾಣ ಮಾತನಾಡಿದರು.
ಶ್ರೀಜೇಮಸಿಂಗ್‌ ಮಹಾರಾಜ ಹಾಗೂ ಶ್ರೀಬಳಿರಾಮ ಮಹಾರಾಜ ಸಾನ್ನಿಧ್ಯ ವಹಿಸಿದ್ದರು. ಬಂಜಾರಾ ಸೇವಾ ಸಂಘದ ಅಧ್ಯಕ್ಷ ಶಂಕರ ಜಾಧವ, ತಾಪಂ ಸದಸ್ಯೆ ವಿಜಯಲಕ್ಷ್ಮೀ ರಾಠೊಡ, ಶಾಂತಾ ಯಾಕಾಪುರ, ಪುರಸಭೆ ಸದಸ್ಯರಾದ ದೇವಿಂದ್ರ ಕರದಳ್ಳಿ, ಪ್ರಕಾಶ ನಾಯಕ, ರಾಜೇಶ ಅಗರವಾಲ, ಶರಣು ನಾಟೀಕಾರ, ಮುಖಂಡರಾದ ಲಿಂಗಾರೆಡ್ಡಿಗೌಡ ಬಾಸರೆಡ್ಡಿ, ಬಸವರಾಜ ಪಂಚಾಳ,
ಇಬ್ರಾಹಿಂ ಪಟೇಲ, ಈರಣ್ಣ ಮಲಕಂಡಿ, ಸಾಬಣ್ಣ ಆನೇಮಿ, ಮರಿಗೌಡ ಪಾಟೀಲ, ರಾಮಚಂದ್ರ ರಾಠೊಡ, ದಿಲೀಪ ನಾಯಕ, ವಿಠuಲ ಚವ್ಹಾಣ, ಕಿಶನ ನಾಯಕ ಪಾಲ್ಗೊಂಡಿದ್ದರು. ಶಾಂತಕುಮಾರ ಎಣ್ಣಿ ನಿರೂಪಿಸಿ, ವಂದಿಸಿದರು. ಇದಕ್ಕೂ ಮೊದಲು ಸೇವಾಲಾಲ ನಗರ ತಾಂಡಾದಿಂದ ಲಂಬಾಣಿ ಮಹಿಳೆಯರ ರ್ಯಾಲಿ ನಡೆಯಿತು.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.