
ಕಲಬುರಗಿಯಲ್ಲಿ ಸಿಎಂ ಬೊಮ್ಮಾಯಿಗೆ ಕಪ್ಪು ಬಾವುಟ ಪ್ರದರ್ಶನ
Team Udayavani, Sep 17, 2022, 9:45 AM IST

ಕಲಬುರಗಿ: ತಳವಾರ ಸಮುದಾಯಕ್ಕೆ ಎಸ್ ಟಿ ಪ್ರಮಾಣ ಪತ್ರ ನೀಡುವಂತೆ ಆಗ್ರಹಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ತಳವಾರ ಸಮುದಾಯದವರು ಕಪ್ಪುಪಟ್ಟಿ ಪ್ರದರ್ಶಿಸಿದ ಘಟನೆ ನಡೆಯಿತು.
ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವ ಅಂಗವಾಗಿ ಕಲಬುರಗಿ ನಗರದ ಸರ್ದಾರ್ ವಲ್ಲಭಭಾಯ್ ಪಟೇಲ್ ವೃತ್ತದಲ್ಲಿ ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯಿ ಪಟೇಲರ ಪುತ್ಥಳಿ ಗೆ ಮಾಲಾರ್ಪಣೆಗೈದು ಭಾಷಣ ಮಾಡಬೇಕೆನ್ನುವಷ್ಟರಲ್ಲಿ ಘೋಷಣೆ ಕೂಗಿ ಪ್ರತಿಭಟಿಸಿದರು.
ಇದನ್ನೂ ಓದಿ:ಕುಷ್ಟಗಿ : ರಾಷ್ಟ್ರ ಧ್ವಜಾರೋಹಣದ ವೇಳೆ ತೊಡಕು, ಎರಡು ನಿಮಿಷ ತಡವಾಗಿ ನೆರವೇರಿದ ಧ್ವಜಾರೋಹಣ
ತಳವಾರ ಸಮುದಾಯಕ್ಕೆ ಎಸ್ ಟಿ ಪ್ರಮಾಣ ಪತ್ರ ನೀಡುವಂತೆ ಆಗ್ರಹಿಸಿ ಹೋರಾಟ ನಡೆಸಲಾಯಿತು.
ಹೋರಾಟಕ್ಕೆ ಸರ್ಕಾರ ಸ್ಪಂದಿಸದ ಹಿನ್ನಲೆಯಲ್ಲಿ ಸಿಎಂಗೆ ಕಪ್ಪುಪಟ್ಟಿ ಪ್ರದರ್ಶಿಸಿದರು.
ಕಪ್ಪುಪಟ್ಟಿ ಪ್ರದರ್ಶಿಸಿದ 25 ಕ್ಕೂ ಅಧಿಕ ಜನರನ್ನು ಪೊಲೀಸರು ಬಂಧಿಸಿದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?
