ಮಾವನೂರಗೆ 8 ವರ್ಷದಿಂದ ಬಂದೇ ಇಲ್ಲ ಬಸ್‌

Team Udayavani, Jul 24, 2022, 12:29 PM IST

7bus

ಜೇವರ್ಗಿ: ಪಟ್ಟಣದಿಂದ 14ಕಿ.ಮೀ ದೂರದಲ್ಲಿರುವ ತಾಲೂಕಿನ ಮಾವನೂರ ಗ್ರಾಮಕ್ಕೆ ಕಳೆದ ಎಂಟು ವರ್ಷಗಳಿಂದ ಬಸ್‌ ಸೌಲಭ್ಯವೇ ಇಲ್ಲ. ಹೀಗಾಗಿ ಗ್ರಾಮಸ್ಥರು, ವಿದ್ಯಾರ್ಥಿಗಳು ಪರದಾಡುವಂತಾಗಿದೆ.

ಇದಕ್ಕೂ ಮೊದಲು ಜೇವರ್ಗಿಯಿಂದ ಮಾವನೂರ ಮೂಲಕ ಹರವಾಳ ಗ್ರಾಮಕ್ಕೆ ಬಸ್‌ ಸೌಲಭ್ಯ, ತದ ನಂತರ ಜೇವರ್ಗಿಯಿಂದ ಮಾವನೂರ ಮೂಲಕ ಹರನೂರ ಗ್ರಾಮಕ್ಕೆ ಬಸ್‌ ಸಂಚಾರ ವ್ಯವಸ್ಥೆ ಇತ್ತು. ರಸ್ತೆ ಸರಿಯಿಲ್ಲ ಎಂಬ ಕುಂಟು ನೆಪ ಹೇಳಿ ಕಳೆದ ಎಂಟು ವರ್ಷಗಳ ಹಿಂದೆಯೇ ಈ ಎರಡು ಬಸ್‌ ಗಳ ಸಂಚಾರ ಸ್ಥಗಿತಗೊಳಿಸಲಾಗಿದೆ.

ತಾಲೂಕಿನ ಮಾವನೂರ ಗ್ರಾಮದಿಂದ ನಿತ್ಯ 50ಕ್ಕೂ ಹೆಚ್ಚು ವಿದ್ಯಾರ್ಥಿ-ವಿದ್ಯಾರ್ಥಿನಿಯರು ಶಾಲೆ-ಕಾಲೇಜಿಗೆಂದು ಜೇವರ್ಗಿ ಬಂದು ಹೋಗುತ್ತಾರೆ. ನಿತ್ಯ ಶಾಲೆಗೆ ಹೋಗಲು ಮಕ್ಕಳು 2ಕಿ.ಮೀ ದೂರದ ರಾಷ್ಟ್ರೀಯ ಹೆದ್ದಾರಿ-50ರ ತನಕ ನಡೆದುಕೊಂಡೇ ಬಂದು ಖಾಸಗಿ ವಾಹನಗಳ ಮೂಲಕ ಜೇವರ್ಗಿಗೆ ಬರಬೇಕು. ಸಾರಿಗೆ ಬಸ್‌ನ ವ್ಯವಸ್ಥೆ ಇಲ್ಲದ ಕಾರಣ ಬೈಕ್‌, ಟಂಟಂ ಸೇರಿದಂತೆ ಇನ್ನಿತರೆ ವಾಹನ ಸವಾರರಿಗೆ ಕೈ ಮಾಡಿ ವಾಹನ ನಿಲ್ಲಿಸಿ ಹತ್ತುವ ಪರಿಸ್ಥಿತಿ ಇದೆ. ಮಕ್ಕಳು ಹತ್ತುವಾಗ ಏನಾದರೂ ಅಪಘಾತ ಸಂಭವಿಸಿದರೆ ಯಾರು ಹೊಣೆ ಎಂದು ಪ್ರಜ್ಞಾವಂತ ನಾಗರಿಕರು ಪ್ರಶ್ನಿಸಿದ್ದಾರೆ.

ಹಣವುಳ್ಳ ವಿದ್ಯಾರ್ಥಿಗಳು ಆಟೋ, ಜೀಪ್‌ಗ್ಳಿಗೆ ಹಣ ಕೊಟ್ಟು ಹೋದರೆ, ಬಡ ವಿದ್ಯಾರ್ಥಿಗಳು ಮಾತ್ರ ನಿತ್ಯ 4 ಕಿ.ಮೀ ನಡೆದುಕೊಂಡು ಹೋಗಿ ಬಂದು ತೊಂದರೆ ಅನುಭವಿಸುವಂತಾಗಿದೆ. ಗ್ರಾಮ ಪಂಚಾಯಿತಿ ಸದಸ್ಯ ಸಿದ್ಧು ಮಾವನೂರ ನೇತೃತ್ವದಲ್ಲಿ ವಿದ್ಯಾರ್ಥಿಗಳು ಜೇವರ್ಗಿ ಬಸ್‌ ಘಟಕದ ವ್ಯವಸ್ಥಾಪಕರಿಗೆ ಅನೇಕ ಬಾರಿ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಈ ಬಗ್ಗೆ ಸಾರಿಗೆ ಅಧಿಕಾರಿಗಳಿಗೆ ಕೇಳಿದರೆ ಇಲ್ಲಸಲ್ಲದ ಕುಂಟು ನೆಪ ಹೇಳಿಕೊಂಡು ವಿದ್ಯಾರ್ಥಿಗಳ ಭವಿಷ್ಯ ಜತೆ ಚೆಲ್ಲಾಟವಾಡುತ್ತಿದ್ದಾರೆ.

ಸಾರಿಗೆ ಅಧಿಕಾರಿಗಳು ಕೂಡಲೇ ನಿತ್ಯ ಬೆಳಗ್ಗೆ ಸಮಯಕ್ಕೆ ಸರಿಯಾಗಿ ಎರಡು ಬಸ್‌, ಸಂಜೆ ಎರಡು ಬಸ್‌ ವ್ಯವಸ್ಥೆ ಮಾಡಬೇಕು. ಒಂದು ವೇಳೆ ನಿರ್ಲಕ್ಷ್ಯ ತೋರಿದರೆ ಜೇವರ್ಗಿ ಪಟ್ಟಣದಲ್ಲಿ ವಿದ್ಯಾರ್ಥಿಗಳೊಂದಿಗೆ ಉಗ್ರ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಗ್ರಾಮಸ್ಥರು ಎಚ್ಚರಿಸಿದ್ದಾರೆ.

ಮೊದಲು ರಸ್ತೆ ಸಮಸ್ಯೆಯಿಂದ ಮಾವನೂರ ಗ್ರಾಮಕ್ಕೆ ಬಸ್‌ ಸಂಚಾರ ಸ್ಥಗಿತಗೊಳಿಸಲಾಗಿತ್ತು. ಮೂರ್‍ನಾಲ್ಕು ದಿನಗಳಲ್ಲಿ ಸಾರಿಗೆ ಸಂಸ್ಥೆ ಅಧಿಕಾರಿಗಳು ಗ್ರಾಮಕ್ಕೆ ತೆರಳಿ ರಸ್ತೆ ಸರ್ವೇ ನಡೆಸಿದ ನಂತರ ಬಸ್‌ ಸಂಚಾರಕ್ಕೆ ಅನುಕೂಲ ಕಲ್ಪಿಸಲಾಗುವುದು. -ಕೃಷ್ಣ ಪವಾರ, ಪ್ರಭಾರಿ ವ್ಯವಸ್ಥಾಪಕ, ಬಸ್‌ ಘಟಕ, ಜೇವರ್ಗಿ.

ವಿದ್ಯಾರ್ಥಿಗಳು ಅನೇಕ ಬಾರಿ ಜೇವರ್ಗಿ ಬಸ್‌ ಘಟಕದ ವ್ಯವಸ್ಥಾಪಕರಿಗೆ ಮನವಿ ಪತ್ರ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಈ ಬಗ್ಗೆ ಸಾರಿಗೆ ಅಧಿಕಾರಿಗಳಿಗೆ ಕೇಳಿದರೆ ಇಲ್ಲಸಲ್ಲದ ಕುಂಟು ನೆಪ ಹೇಳಿಕೊಂಡು ವಿದ್ಯಾರ್ಥಿಗಳ ಭವಿಷ್ಯ ಜತೆ ಚೆಲ್ಲಾಟವಾಡುತ್ತಿದ್ದಾರೆ. -ಸಿದ್ಧು ಮಾವನೂರ, ಗ್ರಾಪಂ ಸದಸ್ಯ

-ವಿಜಯಕುಮಾರ ಎಸ್‌.ಕಲ್ಲಾ

ಟಾಪ್ ನ್ಯೂಸ್

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

1-wqqwqwqeqwe

Kodava Hockey: ಚೇಂದಂಡಕ್ಕೆ 3ನೇ ಪ್ರಶಸ್ತಿ

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

1-wwwewqe

IPL; ವಿಲ್‌ ಜಾಕ್ಸ್‌ ಭಾರೀ ಸಂಚಲನ: ಆರೇ ನಿಮಿಷದಲ್ಲಿ ಅರ್ಧ ಶತಕ!

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.