ಉದ್ಯಮಿಗಳ ಚೌಕಿದಾರ್‌; ಪ್ರಧಾನಿ ಮೋದಿ ವಿರುದ್ಧ ರಾಹುಲ್‌ ವಾಗ್ಧಾಳಿ

Team Udayavani, Mar 19, 2019, 12:30 AM IST

190318kpn78.jpg

ಕಲಬುರಗಿ: “ರಫೇಲ್‌ ಡೀಲ್‌ನಲ್ಲಿ ಸಿಕ್ಕಿ ಹಾಕಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರು, ತಮ್ಮನ್ನು ರಕ್ಷಿಸಿಕೊಳ್ಳಲು ಇಡೀ ದೇಶದ ಜನರನ್ನೇ ಚೌಕಿದಾರರನ್ನಾಗಿ ಮಾಡಲು ಹೊರಟಿದ್ದಾರೆ” ಎಂದು ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ವಾಗ್ಧಾಳಿ ನಡೆಸಿದ್ದಾರೆ. ಈ ಮೂಲಕ ಬಿಜೆಪಿಯ “ನಾನು ಚೌಕಿದಾರ್‌’ಅಭಿಯಾನಕ್ಕೆ ಟಾಂಗ್‌ ನೀಡಿದ್ದಾರೆ.

ಕಲಬುರಗಿಯ ನೂತನ ಮಹಾವಿದ್ಯಾಲಯ ಮೈದಾನದಲ್ಲಿ ಸೋಮವಾರ ನಡೆದ ಕಾಂಗ್ರೆಸ್‌ ಪರಿವರ್ತನಾ ರ್ಯಾಲಿ ಹಾಗೂ ಲೋಕಸಭಾ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿ, “ಪ್ರಧಾನಿ ಮೋದಿ ದೊಡ್ಡ  ಉದ್ದಿಮೆದಾರರ ಕಾವಲುಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಬಡ ಹಾಗೂ ದೇಶದ ಜನರ ಕಾವಲುಗಾರರಾಗಿ ಅಲ್ಲ. ಉದ್ಯಮಿದಾರರಾದ ಅನಿಲ ಅಂಬಾನಿ, ಮೆಹುಲ್‌ ಚೌಕ್ಸಿ, ನೀರವ್‌ ಮೋದಿ, ಲಲಿತ ಮೋದಿ, ವಿಜಯ ಮಲ್ಯರಂತವರ ಕಾವಲುಗಾರರಾಗಿ ಕೆಲಸ ಮಾಡುತ್ತಿದ್ದಾರೆ’ ಎಂದು ಆರೋಪಿಸಿದರು.

ಕಾಶ್ಮೀರದ ಪುಲ್ವಾಮದಲ್ಲಿ ಸೈನಿಕರ ಮೇಲೆ ಭಯೋತ್ಪಾದಕ ದಾಳಿಯ ದಿನ ಚೌಕಿದಾರ್‌ ದೇಶದ ಆರು ವಿಮಾನ ನಿಲ್ದಾಣಗಳನ್ನು ಅದಾನಿಗೆ ಉಡುಗೊರೆಯಾಗಿ ನೀಡಿದ್ದರು. ರಫೇಲ್‌ ವಿಮಾನ ಖರೀದಿ ಜಗತ್ತಿನ ಅತ್ಯಂತ ದೊಡ್ಡ ರಕ್ಷಣಾ ಹಗರಣ. ಯುಪಿಎ ಸರ್ಕಾರ ಬೆಂಗಳೂರಿನ ಎಚ್‌ಎಎಲ್‌ಗೆ ಗುತ್ತಿಗೆ ನೀಡಲು ಮುಂದಾಗಿತ್ತು. ಒಂದು ಫೈಟರ್‌ ಜೆಟ್‌ ಬೆಲೆಯನ್ನು 526 ಕೋಟಿ ರೂ.ಗೆ ನಿಗದಿ ಮಾಡಿತ್ತು. ಆದರೆ, ಮೋದಿ ಅವರು, ಇದನ್ನು ಅನಿಲ್‌ ಅಂಬಾನಿಗೆ ಲಾಭ ಮಾಡಿಕೊಡಲು 1600 ಕೋಟಿಗೆ ಖರೀದಿ ಮಾಡಿದ್ದಾರೆ ಎಂದು ಆರೋಪಿಸಿದರು.

ಚೌಕಿದಾರ್‌ ಉದ್ಯೋಗ ಕಿತ್ತುಕೊಳ್ಳುವುದಲ್ಲದೇ 30 ಸಾವಿರ ಕೋಟಿ ರೂ. ಹಗರಣ ಎಸಗಿದ್ದಾರೆ. ರಫೇಲ್‌ ಒಪ್ಪಂದ ಕುರಿತು ರಾಷ್ಟ್ರೀಯ ಪತ್ರಿಕೆಯೊಂದರಲ್ಲಿ ಬಂದ ವರದಿ ಪ್ರಧಾನಿಯು ರಕ್ಷಣಾ ಇಲಾಖೆಯನ್ನು ಹೊರಗಿಟ್ಟು ಫ್ರಾನ್ಸ್‌ನೊಂದಿಗೆ ರಫೆಲ್‌ ಒಪ್ಪಂದ ಕುರಿತು ನೇರವಾಗಿ ಮಾತುಕತೆ ನಡೆಸಿರುವುದು ಸಾಬೀತಾಗಿದೆ. ಮಾತುಕತೆ ತಂಡ ಹೇಳುವಂತೆ ಚೌಕಿದಾರ್‌ ಸ್ವತಂತ್ರವಾಗಿ ಹಾಗೂ ನೇರವಾಗಿ ಫ್ರಾನ್ಸ್‌ನೊಂದಿಗೆ ಮಾತುಕತೆ ನಡೆಸಲು ಅವಕಾಶ ನೀಡಿಲ್ಲ ಎಂಬುದು ದಾಖಲೆಗಳಿಂದ ತಿಳಿದಿದೆ. ಚೌಕಿದಾರ್‌ ಕಳ್ಳತನ ಮಾಡುವಾಗ ಸಿಕ್ಕಿಬಿದ್ದಿದ್ದು, ಈಗ ಇಡೀ ದೇಶವನ್ನೇ ಚೌಕಿದಾರ್‌ ಎಂದು ಹೇಳಲು ಹೊರಟಿದ್ದಾರೆ. ಇದು ಸರಿಯಲ್ಲ. ಸಿಕ್ಕಿ ಬೀಳುವ ಮೊದಲು ನರೇಂದ್ರ ಮೋದಿ ಮಾತ್ರ ಚೌಕಿದಾರರಾಗಿದ್ದರು. ಸಿಕ್ಕಿ ಬಿದ್ದ ನಂತರ ಇಡೀ ಭಾರತವನ್ನು ಚೌಕಿದಾರರನ್ನಾಗಿಸಲು ಹೊರಟಿದ್ದಾರೆ ಎಂದರು.

ಕರ್ನಾಟಕದಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಹೊಂದಾಣಿಕೆಯಿಂದ ಸ್ಪರ್ಧಿಸಿದ್ದು, ಎಲ್ಲ ಕ್ಷೇತ್ರಗಳಲ್ಲಿ ಮೈತ್ರಿಕೂಟ ಜಯ ಸಾಧಿಸಲಿದೆ. ನಿರೀಕ್ಷೆಯಂತೆ ಕಾಂಗ್ರೆಸ್‌ ಸ್ಥಾನಗಳನ್ನು ಗೆದ್ದು ಜನರ ವಿಶ್ವಾಸ ಗಳಿಸಲಿದೆ.
– ರಾಹುಲ್‌ಗಾಂಧಿ, ಎಐಸಿಸಿ ಅಧ್ಯಕ್ಷ

ಟಾಪ್ ನ್ಯೂಸ್

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

1-eqewqe

JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

1-qwewweq

K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.