ತೊಗರಿ ಖರೀದಿ ಕೇಂದ್ರಕ್ಕೆ ಮುತ್ತಿಗೆ


Team Udayavani, Feb 16, 2017, 3:07 PM IST

gul2.jpg

ಅಫಜಲಪುರ: ಬೆಳೆಗೆ ಬೆಂಬಲ ಬೆಲೆ ನೀಡಿ ರೈತರಿಗೆ ಅನೂಕುಲ ಮಾಡಿಕೊಡುವ ನಿಟ್ಟಿನಲ್ಲಿ ಸರ್ಕಾರ ತೊಗರಿ ಖರೀದಿ ಕೇಂದ್ರಗಳನ್ನು ತೆರೆದಿದೆ. ಆದರೆ ಖರೀದಿ ಕೇಂದ್ರದಲ್ಲಿ ಅಧಿಕಾರಿಗಳು ಮತ್ತು ದಲ್ಲಾಳಿಗಳ ಕಮಿಷನ್‌ ಧಂದೆ ಮಿತಿ ಮೀರಿದ್ದು ಅವ್ಯವಹಾರ ನಡೆದಿದೆ ಎಂದು ತಾಲೂಕು ದ್ರಾಕ್ಷಿ ಬೆಳೆಗಾರರ ಸಂಘದ ಅಧ್ಯಕ್ಷ ಲಚ್ಚಪ್ಪ ಜಮಾದಾರ ಆರೋಪಿಸಿದರು.

ಪಟ್ಟಣದ ಎಪಿಎಂಸಿ ಆವರಣದಲ್ಲಿರುವ ತೊಗರಿ ಖರೀದಿ ಕೇಂದ್ರಕ್ಕೆ ರೈತರೊಂದಿಗೆ ಮುತ್ತಿಗೆ ಹಾಕಿ ಮಾತನಾಡಿ, ಅಧಿಧಿಕಾರಿಗಳು ಮತ್ತು ದಲ್ಲಾಳಿಗಳು ಸೇರಿಕೊಂಡು ಬೇರೆ ಕಡೆಯಿಂದ 4000ರೂ.ದಿಂದ 4500ರೂ.ದಂತೆ ತಾವೇ ತೊಗರಿ ಖರೀದಿಸಿ, ಸರ್ಕಾರಿ ಖರೀದಿ ಕೇಂದ್ರಕ್ಕೆ ತಂದು ಯಾರಾದರೂ ರೈತರ ಹೆಸರಿನಲ್ಲಿ ಸರ್ಕಾರದ ಬೆಂಬಲ ಬೆಲೆ ಸೇರಿಸಿ ಅನ್ಯಾಯ ಮಾಡುತ್ತಿದ್ದಾರೆ.

ಇದರಿಂದಾಗಿ ನಿಜವಾದ ಬಡ ರೈತರಿಗೆ ಭಾರಿ ಅನ್ಯಾಯವಾಗುತ್ತಿದೆ. ಅಲ್ಲದೆ ವಾರಗಟ್ಟಲೇ ರೈತರು ತಮ್ಮ ತೊಗರಿ ಇಟ್ಟುಕೊಂಡು ಖರೀದಿ ಕೇಂದ್ರದ ಎದುರು ಕಾಯುವಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಸರ್ಕಾರಿ ಆದೇಶದ ಪ್ರಕಾರ ರೈತರಿಂದ ಎಕರೆಗೆ ಐದು ಚೀಲ ಖರೀದಿಸಬೇಕು ಎಂದಿದೆ.

ಆದರೆ ಇಲ್ಲಿ ಸರ್ಕಾರಿ ಆದೇಶವನ್ನು ಲೆಕ್ಕಕ್ಕೆ ತೆಗೆದುಕೊಳ್ಳದೆ ಒಬ್ಬ ರೈತನ ಹೆಸರಿನ ಮೇಲೆ ನೂರಾರು ಚೀಲ ತೊಗರಿಯನ್ನು ಖರೀದಿಸಲಾಗಿದೆ. ಅಲ್ಲದೆ ಖರೀದಿ ಕೇಂದ್ರ ಆರಂಭಕ್ಕೂ ಮೊದಲು ರೈತರ ಸರ್ವೇ ನಂಬರ್‌, ಎಷ್ಟು ಎಕರೆ ಇದೆ, ಮೊಬೈಲ್‌ ಸಂಖ್ಯೆ ಪಡೆಯಲಾಗಿತ್ತು. ಆದರೆ ಈಗ ರಿಜಿಸ್ಟರ್‌ ಪ್ರಕಾರ ನಡೆದುಕೊಳ್ಳದೆ ಮನಸ್ಸಿಗೆ ಬಂದ ಹಾಗೆ ನಡೆದುಕೊಳ್ಳುತ್ತಿದ್ದಾರೆ.

ಇದರ ಬಗ್ಗೆ ಜಿಲ್ಲಾಧಿಕಾರಿಗಳು ಗಮನ ಹರಿಸುತ್ತಿಲ್ಲ. ಹೀಗಾಗಿ ರೈತರು ರೋಸಿ ಹೋಗಿದ್ದಾರೆ. ಒಟ್ಟಿನಲ್ಲಿ ತೊಗರಿ ಖರೀದಿಯಲ್ಲಿ ಭಾರಿ ಅವ್ಯವಹಾರ ನಡೆಯುತ್ತಿದ್ದು ಸಂಬಂಧಪಟ್ಟವರು ಇತ್ತ ಕಡೆ ಗಮನ ಹರಿಸಬೇಕು ಎಂದು ಒತ್ತಾಯಿಸಿದರು. 

ತಹಶೀಲ್ದಾರ ಶಶಿಕಲಾ ಪಾದಗಟ್ಟಿ , ಗ್ರೇಡ್‌ 2 ತಹಶೀಲ್ದಾರ ಪಿ.ಜಿ ಪವಾರ  ಸ್ಥಳಕ್ಕೆ ಭೇಟಿ ನೀಡಿ ಮನವಿ ಸ್ವೀಕರಿಸಿ ಸಮಸ್ಯೆ ಬಗೆಹರಿಸುವುದಾಗಿ ಭರವಸೆ  ನೀಡಿ ಮಾತನಾಡಿ, ತೊಗರಿ ಖರೀದಿ ಕೇಂದ್ರದ ಮುಖ್ಯಸ್ಥ ಎ.ಜಿ ಮುರಾಳಕರ್‌, ಟಿಎಪಿಸಿಎಂಎಸ್‌ ವ್ಯವಸ್ಥಾಪಕ ಎ.ಎಸ್‌.ಎಸ್‌ ಕಲಶೆಟ್ಟಿ ಅವರಿಗೆ ರಜಿಸ್ಟರ್‌ ಪ್ರಕಾರ ತೊಗರಿ ಖರೀದಿಸುವಂತೆ ತಾಕೀತು ಮಾಡಿದರು. 

ಸಿದ್ದಪ್ಪ ಸಿನ್ನೂರ, ಸಾಯಬಣ್ಣ ಮ್ಯಾಕೇರಿ, ಸಿದ್ರಾಮ ಖೇಡಗಿಕರ್‌, ಸದಾಶಿವ ಪಾಟೀಲ, ತುಕಾರಾಮ ಸಲಗರ, ವಿಶ್ವನಾಥ ಸುತಾರ, ಸಾಯಬಣ್ಣ ಅರಳಗುಂಡಗಿ, ರಿಯಾಜುದ್ದಿನ್‌ ಚೌಧರಿ, ಮನೋಹರ ರಾಠೊಡ, ಶರಣಪ್ಪ ಕಲ್ಲೂರ ಸೇರಿದಂತೆ ಇತರರು ಇದ್ದರು.   

ಟಾಪ್ ನ್ಯೂಸ್

shivamogga

Shimoga; ವಾಲ್ಮೀಕಿನಿಗಮದ ಚಂದ್ರಶೇಖರ್ ಆತ್ಮಹತ್ಯೆ: ಇಬ್ಬರು ಆರೋಪಿಗಳು ನ್ಯಾಯಾಲಯಕ್ಕೆ ಹಾಜರು

Panaji: Smart city ಕಾಮಗಾರಿಗಳ ವರದಿಯನ್ನು ಸರ್ಕಾರ ಸಿದ್ಧಪಡಿಸುತ್ತಿದೆ: ಗೋವಾ ಸಿಎಂ

Panaji: Smart city ಕಾಮಗಾರಿಗಳ ವರದಿಯನ್ನು ಸರ್ಕಾರ ಸಿದ್ಧಪಡಿಸುತ್ತಿದೆ: ಗೋವಾ ಸಿಎಂ

Chirathe

Chittapura: ಮೇಯಲು ತೆರಳಿದ್ದ ಹೋರಿ ಮೇಲೆ ಚಿರತೆ ದಾಳಿ

ಕೊಹ್ಲಿ, ರೋಹಿತ್ ಕರಿಯರ್ ಮುಗಿಸುವಂತಹ ಷರತ್ತು ಹಾಕಿದ ಗೌತಿ; ಒಪ್ಪಿಗೆ ಕೊಟ್ತಾ ಬಿಸಿಸಿಐ?

ಕೊಹ್ಲಿ, ರೋಹಿತ್ ಕರಿಯರ್ ಮುಗಿಸುವಂತಹ ಷರತ್ತು ಹಾಕಿದ ಗೌತಿ; ಒಪ್ಪಿಗೆ ಕೊಟ್ತಾ ಬಿಸಿಸಿಐ?

Gundlupete: ಕಚೇರಿಯ ಕೊಠಡಿಯಲ್ಲೇ ನೇಣಿಗೆ ಶರಣಾದ ಪೈನಾನ್ಸ್ ಸಿಬ್ಬಂದಿ… ಕಾರಣ ನಿಗೂಢ

Gundlupete: ಕಚೇರಿಯ ಕೊಠಡಿಯಲ್ಲೇ ನೇಣಿಗೆ ಶರಣಾದ ಫೈನಾನ್ಸ್ ಸಿಬ್ಬಂದಿ… ಕಾರಣ ನಿಗೂಢ

protest

BJP protest: ಶಾಸಕ ಅಭಯ ಪಾಟೀಲರನ್ನು ಹೊತ್ತುಕೊಂಡು ವ್ಯಾನ್ ಗೆ ಹಾಕಿದ ಪೊಲೀಸರು

15-subrahmanya

ರಾಜ್ಯ ಸರಕಾರ ಜನಹಿತ ಮರೆತಿದೆ- ಕುಕ್ಕೆಯಲ್ಲಿ ಮಾಜಿ ಸಿಎಂ ಬಿ.ಎಸ್.ವೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chirathe

Chittapura: ಮೇಯಲು ತೆರಳಿದ್ದ ಹೋರಿ ಮೇಲೆ ಚಿರತೆ ದಾಳಿ

Revenue Minister Byre Gowda’s progress review meeting at Kalaburagi

Kalaburagi: ಕಂದಾಯ ಸಚಿವ ಕೃಷ್ಣ ಬೈರೇಗೌಡ ಪ್ರಗತಿ ಪರಿಶೀಲನಾ ಸಭೆ

Bomb threat to Kalaburagi Airport: flight cancelled

Bomb threat; ಕಲಬುರಗಿ ವಿಮಾನ ನಿಲ್ದಾಣಕ್ಕೆ‌ ಬಾಂಬ್ ಬೆದರಿಕೆ: ವಿಮಾನಯಾನ ರದ್ದು

Chittapur ಕಾಡು ಹಂದಿ ಬೇಟೆ: ಇಬ್ಬರ ಬಂಧನ

Chittapur ಕಾಡು ಹಂದಿ ಬೇಟೆ: ಇಬ್ಬರ ಬಂಧನ

Kalaburagi; ಸೂರಜ್ ಪ್ರಕರಣ ವಿಚಿತ್ರ, ವಿಕೃತ, ಅಸಹ್ಯವಾದದ್ದು: ಸಚಿವ ಪ್ರಿಯಾಂಕ್ ಖರ್ಗೆ

Kalaburagi; ಸೂರಜ್ ಪ್ರಕರಣ ವಿಚಿತ್ರ, ವಿಕೃತ, ಅಸಹ್ಯವಾದದ್ದು: ಸಚಿವ ಪ್ರಿಯಾಂಕ್ ಖರ್ಗೆ

MUST WATCH

udayavani youtube

ಮಾವುತನನ್ನು ಕಾಲಿನಿಂದ ತುಳಿದು ಅಪ್ಪಚ್ಚಿ ಮಾಡಿದ ಆನೆ!

udayavani youtube

“ನನ್ನಿಂದ ತಪ್ಪಾಗಿದೆ ಸರ್‌ ಆದರೆ..” | ಸಪ್ತಮಿ ಅವರದ್ದು ಎನ್ನಲಾದ Audio

udayavani youtube

ಹುಣಸೂರು ತಾಲೂಕಿನ ಸಮಗ್ರ ಅಭಿವೃದ್ದಿಗೆ ಬದ್ದ: ಸಂಸದ ಯದುವೀರ್‌ ಒಡೆಯರ್

udayavani youtube

ಈಕೆ ಭಾರತದ ಮೊದಲ ಸರಣಿ ಕೊಲೆಗಾರ್ತಿ | ಸೈನೈಡ್ ಮಲ್ಲಿಕಾ

udayavani youtube

ಮುಳ್ಳಯ್ಯನಗಿರಿ,ದತ್ತಪೀಠ, ಸೀತಾಳಯ್ಯನಗಿರಿಯಲ್ಲಿ ಜನಜಾತ್ರೆ; ಖಾಕಿ ಹೈ ಅಲರ್ಟ್

ಹೊಸ ಸೇರ್ಪಡೆ

shivamogga

Shimoga; ವಾಲ್ಮೀಕಿನಿಗಮದ ಚಂದ್ರಶೇಖರ್ ಆತ್ಮಹತ್ಯೆ: ಇಬ್ಬರು ಆರೋಪಿಗಳು ನ್ಯಾಯಾಲಯಕ್ಕೆ ಹಾಜರು

20-uv-fusion

UV Fusion: ಪ್ರಕೃತಿ ಶಾಶ್ವತ ಮನುಷ್ಯನ ಕೊಡುಗೆ ನಿಮಿತ್ತ…

Panaji: Smart city ಕಾಮಗಾರಿಗಳ ವರದಿಯನ್ನು ಸರ್ಕಾರ ಸಿದ್ಧಪಡಿಸುತ್ತಿದೆ: ಗೋವಾ ಸಿಎಂ

Panaji: Smart city ಕಾಮಗಾರಿಗಳ ವರದಿಯನ್ನು ಸರ್ಕಾರ ಸಿದ್ಧಪಡಿಸುತ್ತಿದೆ: ಗೋವಾ ಸಿಎಂ

19-fusion

Father: ನಮಗಾಗಿ ದುಡಿದ ನಾಯಕ ನಮ್ಮ ಜನಕ

18-koratagere

Koratagere ಬಂದ್‌ಗೆ ಕರೆ ನೀಡಿದ ನೀರಾವರಿ ಸಂಘಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.