25 ಕೇಂದ್ರದಲ್ಲಿ ಸಿಇಟಿ ಪರೀಕ್ಷೆ


Team Udayavani, Jul 28, 2020, 10:03 AM IST

25 ಕೇಂದ್ರದಲ್ಲಿ ಸಿಇಟಿ ಪರೀಕ್ಷೆ

ಕಲಬುರಗಿ: ವೈದ್ಯ, ಇಂಜಿನಿಯರಿಂಗ್‌ ಸೇರಿ ವೃತಿಪರ ಕೋರ್ಸ್‌ ಗಳ ಪ್ರವೇಶಕ್ಕಾಗಿ ಜಿಲ್ಲೆಯಲ್ಲಿ 25 ಪರೀಕ್ಷಾ ಕೇಂದ್ರಗಳಲ್ಲಿ ಜು.30 ಮತ್ತು 31ರಂದು ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ನಡೆಯಲಿದೆ. ಯಾವುದೇ ಅಹಿತಕರ ಘಟನೆಗೆ ಆಸ್ಪದ ನೀಡದೇ ತೀವ್ರ ಕಟ್ಟೆಚ್ಚರ ವಹಿಸುವಂತೆ ಪರೀಕ್ಷಾ ಕೇಂದ್ರ ಮುಖ್ಯಸ್ಥರಿಗೆ ಅಪರ ಜಿಲ್ಲಾಧಿಕಾರಿ ಡಾ| ಶಂಕರ ವಣಿಕ್ಯಾಳ ಸೂಚಿಸಿದರು.

ಡಿಸಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಸಿಇಟಿ ಪರೀಕ್ಷೆ ಪೂರ್ವಸಿದ್ಧತಾ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ 8,496 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಇದಕ್ಕಾಗಿ ಕಲಬುರಗಿ ನಗರದಲ್ಲಿ 23 ಮತ್ತು ಆಳಂದ ಮತ್ತು ಚಿತ್ತಾಪುರದಲ್ಲಿ ತಲಾ ಒಂದು ಪರೀಕ್ಷಾ ಕೇಂದ್ರಗಳು ಇರಲಿವೆ. ಕೇಂದ್ರದ ಮುಖ್ಯಸ್ಥರು ಹಾಗೂ ಮಾರ್ಗಾಧಿಕಾರಿಗಳು ಪರೀಕ್ಷೆಯನ್ನು ಗಂಭೀರವಾಗಿ ಪರಿಗಣಿಸಿ ಯಾವುದೇ ಲೋಪಕ್ಕೆ ಅವಕಾಶ ನೀಡದೆ ಸುಗಮವಾಗಿ ನಡೆಸಲು ಕ್ರಮ ವಹಿಸಬೇಕೆಂದರು.

27 ಮಾರ್ಗಾಧಿಕಾರಿ ಹಾಗೂ ವೀಕ್ಷಕರನ್ನು ನೇಮಿಸಲಾಗಿದೆ. ಕೇಂದ್ರದಲ್ಲಿ ಆಸನ, ಕುಡಿಯುವ ನೀರಿನ, ಸಾಕಷ್ಟು ಬೆಳಕಿನ ಮತ್ತು ಶೌಚಾಲಯ ವ್ಯವಸ್ಥೆ ಬಗ್ಗೆ ಖಾತ್ರಿಪಡಿಸಿಕೊಳ್ಳಬೇಕು. ಪ್ರತಿ ಪರೀಕ್ಷಾ ಕೇಂದ್ರಕ್ಕೆ ಪ್ರತ್ಯೇಕ ಮಹಿಳಾ ಮತ್ತು ಪುರುಷ ಪೊಲೀಸರನ್ನು ನೇಮಿಸಲಾಗುವುದು. ಪರೀಕ್ಷೆ ಸಂಪೂರ್ಣವಾಗಿ ಸಿಸಿ ಕ್ಯಾಮೆರಾ ಕಣ್ಗಾವಲಿನಲ್ಲಿ ನಡೆಯಲಿದೆ ಎಂದರು.

ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಶಿವಶರಣಪ್ಪ ಮೂಳೆಗಾಂವ ಪರೀಕ್ಷೆಗೆ ಕೈಗೊಂಡಿರುವ ಸಿದ್ಧತೆಗಳನ್ನು ವಿವರಿಸಿದರು. ಪರೀಕ್ಷಾ ಕೇಂದ್ರದ ಮುಖ್ಯಸ್ಥರು, ವೀಕ್ಷಕರು ಮತ್ತು ಮಾರ್ಗಾಧಿಕಾರಿಗಳು ಉಪಸ್ಥಿತರಿದ್ದರು.

ಕೋವಿಡ್ ಸೋಂಕು ಹರಡದಂತೆ ಪರೀಕ್ಷಾ ಕೋಣೆಗಳನ್ನು ಸ್ಯಾನಿಟೈಸ್‌ ಮಾಡಿಸಬೇಕು. ವಿದ್ಯಾರ್ಥಿಗಳನ್ನು ಡಿಜಿಟಲ್‌ ಥರ್ಮೋಮೀಟರ್‌ನಿಂದ ಪರೀಕ್ಷಿಸಬೇಕು. ಹ್ಯಾಂಡ್‌ ಸ್ಯಾನಿಟೈಸರ್‌ ಬಳಕೆ ಮತ್ತು ಮಾಸ್ಕ್ ಧರಿಸುವುದು ಕಡ್ಡಾಯ. ಸೋಂಕಿತರ ಸಂಪರ್ಕದಲ್ಲಿ  ಬಂದಿರುವ ಅಥವಾ ಕಂಟೇನ್ಮೆಂಟ್‌ ಝೋನ್‌ ಪ್ರದೇಶದಿಂದ ವಿದ್ಯಾರ್ಥಿ ಬಂದಲ್ಲಿ ಅವರಿಗೆ ಪ್ರತ್ಯೇಕ ಕೋಣೆಯಲ್ಲಿ ಪರೀಕ್ಷೆ ಬರೆಯಲು ಅನುಕೂಲ ಮಾಡಿಕೊಡಲಾಗುವುದು. -ಡಾ| ಶಂಕರ ವಣಿಕ್ಯಾಳ, ಅಪರ ಜಿಲ್ಲಾಧಿಕಾರಿ

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.