ಅಂಬೇಡ್ಕರ್ ಭೇಟಿ ನೀಡಿದ ಕ್ಷೇತ್ರಗಳ ಅಭಿವೃದ್ಧಿಗೆ 25 ಕೋಟಿ : ಛಲವಾದಿ ನಾರಾಯಣಸ್ವಾಮಿ

Team Udayavani, Apr 30, 2022, 8:58 PM IST

ಅಂಬೇಡ್ಕರ್ ಭೇಟಿ ನೀಡಿದ ಕ್ಷೇತ್ರಗಳ ಅಭಿವೃದ್ಧಿಗೆ 25 ಕೋಟಿ : ಛಲವಾದಿ ನಾರಾಯಣಸ್ವಾಮಿ

ವಾಡಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರು ಭೇಟಿ ನೀಡಿದ ಕರ್ನಾಟಕದ ಏಳು ಸ್ಥಳಗಳ ಅಭಿವೃದ್ಧಿಗಾಗಿ ಬಿಜೆಪಿ ಸರ್ಕಾರ 25 ಕೋಟಿ ರೂ. ಅನುದಾನ ಮೀಸಲಿಟ್ಟಿದೆ ಎಂದು ಬಿಜೆಪಿ ಎಸ್‌ಸಿ ಮೋರ್ಚಾ ರಾಜ್ಯಾಧ್ಯಕ್ಷ ಛಲವಾದಿ ನಾರಾಯಣಸ್ವಾಮಿ ಹೇಳಿದರು.

ಶನಿವಾರ ಪಟ್ಟಣಕ್ಕೆ ಭೇಟಿ ನೀಡಿದ ನಾರಾಯಣಸ್ವಾಮಿ, ಅಂಬೇಡ್ಕರ್ ಪ್ರತಿಮೆಗೆ ಪುಷ್ಪಮಾಲೆ ಅರ್ಪಿಸಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಅಂಬೇಡ್ಕರರು ವಾಸವಿದ್ದ ಪಂಚಕ್ಷೇತ್ರಗಳ ಅಭಿವೃದ್ಧಿಗೆ ಪ್ರಧಾನಿ ಮೋದಿಯವರು ಹೇಗೆ ಶ್ರಮಿಸಿದ್ದಾರೋ ಅದೇ ಮಾದರಿಯಲ್ಲಿ ಬಾಬಾಸಾಹೇಬರು ಭೇಟಿ ನೀಡಿದ ಕರ್ನಾಟಕದ ಕಲಬುರಗಿ ಜಿಲ್ಲೆಯ ವಾಡಿ ನಗರ, ಕೋಲಾರದ ಕೆಜಿಎಫ್, ಬೆಂಗಳೂರು, ಹಾಸನ, ದಾರವಾಡ, ವಿಜಯಪುರ, ಬೆಳಗಾವಿ ಸ್ಥಳಗಳನ್ನು ರಾಷ್ಟçಮಟ್ಟದಲ್ಲಿ ಗುರುತಿಸುವಂತೆ ಅಭಿವೃದ್ಧಿಪಡಿಸಲು ನಾನು ಸಿಎಂ ಬೊಮ್ಮಾಯಿ ಅವರಿಗೆ ಮನವಿ ಮಾಡಿದ್ದೆ. ಪರಿಣಾಮ ಮುಖ್ಯಮಂತ್ರಿಗಳು ಏಳು ಕ್ಷೇತ್ರಗಳಿಗೆ ಅನುದಾನ ನೀಡಿದ್ದಾರೆ. ಅಗತ್ಯಬಿದ್ದರೆ 100 ಕೋಟಿಗೂ ಹೆಚ್ಚು ಅನುದಾನ ನೀಡುತ್ತಾರೆಂಬ ಭರವಸೆಯಿದೆ. ಆಯಾ ಸ್ಥಳೀಯ ಮುಖಂಡರ ಅಭಿಪ್ರಾಯದಂತೆ ಸರ್ಕಾರವೇ ಈ ಕ್ಷೇತ್ರಗಳನ್ನು ಸೋಷಿಯಲ್ ವೆಲ್ಫರ್ ಮೂಲಕ ಅಭಿವೃದ್ಧಿಪಡಿಸಲಿದೆ. ಒಟ್ಟಾರೆ ಅಂಬೇಡ್ಕರ್ ಪಾದ ಸ್ಪರ್ಷಿಸಿದ ರಾಜ್ಯದ ಜಾಗಗಳಲ್ಲಿ ಸ್ಮಾರಕ, ವಿದ್ಯಾಮಂದಿರ, ಧ್ಯಾನಕೇಂದ್ರ, ಗ್ರಂಥಾಲಯ, ಭವನಗಳ ನಿರ್ಮಾಣ ಕಾರ್ಯ ಸ್ಥಳೀಯ ಮುಖಂಡರ ಸಲಹೆಗಳ ಮೆರೆಗೆ ನಡೆಯಲಿದೆ ಎಂದು ವಿವರಿಸಿದರು.

ಇದನ್ನೂ ಓದಿ : ಕಲಿಕೆಗೆ ವಯಸ್ಸು ಅಡ್ಡಿಯಲ್ಲ:10ನೇ ತರಗತಿ ಪರೀಕ್ಷೆಗೆ ಹಾಜರಾದ 58 ವರ್ಷದ ಶಾಸಕ !

ಕಾಂಗ್ರೆಸ್‌ನಲ್ಲಿ ಖರ್ಗೆ ಸಿಎಂ ಆಗಲ್ಲ:

ಅರವತ್ತು ವರ್ಷಗಳ ಕಾಲ ಕಾಂಗ್ರೆಸ್ ದೇಶವನ್ನು ಆಳಿದೆ. ದಲಿತರ ದೊಡ್ಡ ನಾಯಕರೊಬ್ಬರು ಕಳೆದ ಐವತ್ತು ವರ್ಷಗಳಿಂದ ಕಲಬುರಗಿ ಜಿಲ್ಲೆಯನ್ನು ಪ್ರತಿನಿಧಿಸುತ್ತಿದ್ದಾರೆ. ಅಂಬೇಡ್ಕರ್ ಹೆಸರಿನ ಪಂಚ ಕ್ಷೇತ್ರಗಳನ್ನು ಮೋದಿ ಗುರುತಿಸಿದರು. ಈಗ ರಾಜ್ಯದ ಏಳು ಕ್ಷೇತ್ರಗಳನ್ನು ಬಿಜೆಪಿ ಗುರುತಿಸಿದೆ. ಕಾಂಗ್ರೆಸ್ ಏಕೆ ಗುರುತಿಸಲಿಲ್ಲ? ಅಂಬೇಡ್ಕರ್ ಅವರನ್ನು ಸೋಲಿಸಿದ್ದು ಯಾರು? ಅಂಬೇಡ್ಕರ್ ವಿರೋಧಿಗಳು ಬಿಜೆಪಿನಾ ಕಾಂಗ್ರೆಸ್ಸಾ ಎಂಬುದು ಜನ ತೀರ್ಮಾನ ಮಾಡಲಿ. ಅಲ್ಲದೆ ಅರವತ್ತು ವರ್ಷಗಳಿಂದ ದಲಿತರು ಮುಖ್ಯಮಂತ್ರಿ ಆಗಬೇಕು ಎಂದು ಹೋರಾಟ ನಡೆಯುತ್ತಿದೆ. ಮಲ್ಲಿಕಾರ್ಜುನ ಖರ್ಗೆ ಅವರ ಹೆಸರು ಪ್ರಬಲವಾಗಿ ಕೇಳಿಬಂತು. ನಂತರ ಜಿ.ಪರಮೇಶ್ವರ, ಕೆ.ಎಚ್.ಮುನಿಯಪ್ಪ, ಟಿ.ಎನ್.ನರಸಿಂಹಮೂರ್ತಿ, ಎನ್.ರಾಚಯ್ಯ ಸೇರಿದಂತೆ ದೊಡ್ಡ ನಾಯಕ ಎನ್ನಿಸಿಕೊಂಡ ಬಸವಲಿಂಗಪ್ಪನವರನ್ನೂ ಮಾಡಲಿಲ್ಲ. ಇಂದು ಹೇಳ ಹೆಸರಿಲ್ಲದಂತೆ ನಾಶವಾಗಿರುವ ಕಾಂಗ್ರೆಸ್ ಪಕ್ಷದಿಂದ ಖರ್ಗೆ ಸಿಎಂ ಆಗ್ತಾರಾ? ಎಂದು ವ್ಯಂಗ್ಯವಾಡಿದ ನಾರಾಯಣಸ್ವಾಮಿ, ಬಿಜೆಪಿಯಲ್ಲಿ ದಲಿತರು ಮುಖ್ಯಮಂತ್ರಿ ಆಗುವ ಅವಕಾಶಗಳಿವೆ. ಆ ದಿನಗಳು ಬರುತ್ತವೆ ಕಾದು ನೋಡಿ ಎಂದರು.

ಬಿಜೆಪಿ ಎಸ್‌ಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷ ಅಂಬಾರಾಯ ಅಷ್ಟಗಿ, ಭಾಜಪ ನಗರ ಶಕ್ತಿಕೇಂದ್ರ ಅಧ್ಯಕ್ಷ ಶಿವರಾಮ ಪವಾರ, ಪ್ರಧಾನ ಕಾರ್ಯದರ್ಶಿ ರಾಹುಲ ಸಿಂಧಗಿ, ತಾಲೂಕು ಉಪಾಧ್ಯಕ್ಷರಾದ ಗಿರಿಮಲ್ಲಪ್ಪ ಕಟ್ಟಿಮನಿ, ವೀರಣ್ಣ ಯಾರಿ, ಎಸ್‌ಸಿ ಮೋರ್ಚಾ ತಾಲೂಕು ಅಧ್ಯಕ್ಷ ರಾಜು ಮುಕ್ಕಣ್ಣ, ಮುಖಂಡರಾದ ವಿಠ್ಠಲ ವಾಲ್ಮೀಕಿ ನಾಯಕ, ಆನಂದ ಇಂಗಳಗಿ, ವಿಶಾಲ ನಿಂಬರ್ಗಾ, ದೌಲತರಾವ ಚಿತ್ತಾಪುರಕರ, ಭೀಮಶಾ ಜಿರೊಳ್ಳಿ, ಸಿದ್ದಣ್ಣ ಕಲಶೆಟ್ಟಿ, ಕಿಶನ ಜಾಧವ, ರವಿ ನಾಯಕ, ಹರಿ ಗಲಾಂಡೆ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.