ಸಿಎಂ ಗ್ರಾಮ ವಾಸ ನಡೆ-ನುಡಿ

•ಈ ಗ್ರಾಮಗಳ ಸುತ್ತಲೂ ಹರಿಸಬೇಕಿದೆ ಗಮನ•ಕೊಟ್ಟ ಮಾತಿಗೆ ಸಿಗಬೇಕಿದೆ ಮೂರ್ತರೂಪ

Team Udayavani, Jun 18, 2019, 8:49 AM IST

kalburgi-tdy-1..

ಕಲಬುರಗಿ: ಮಣ್ಣೂರ ಗ್ರಾಮದಲ್ಲಿ ಸಿಸಿ ರಸ್ತೆ ನಿರ್ಮಾಣವಾಗದ್ದರಿಂದ ಕೆಸರು ಗದ್ದೆಯಂತಾದ ರಸ್ತೆ.

ಕಲಬುರಗಿ: ಬರೋಬ್ಬರಿ 13 ವರ್ಷಗಳ ಹಿಂದೆ ಜಿಲ್ಲೆಯ ಅಫಜಲಪುರದ ತಾಲೂಕಿನ ಭೀಮಾ ನದಿ ತಟದ ಗ್ರಾಮ ಮಣ್ಣೂರಲ್ಲಿ ಗ್ರಾಮ ವಾಸ್ತವ್ಯ ಮಾಡಿದ್ದ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಈಗ ಮತ್ತೆ ಅದೇ ತಾಲೂಕಿನಲ್ಲಿ ವಾಸ್ತವ್ಯ ಮಾಡಲಿದ್ದಾರೆ.

2006ರಲ್ಲಿ ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದಾಗ ಗ್ರಾಮ ವಾಸ್ತವ್ಯ ಮಾಡುವ ಮೂಲಕ ರಾಜ್ಯದಲ್ಲಿ ಹೊಸ ಅಲೆ ಎಬ್ಬಿಸಿದ್ದರು. ಆ ಸಂದರ್ಭದಲ್ಲಿ ಅಫಜಲಪುರ ತಾಲೂಕಿನ ಮಣ್ಣೂರ ಗ್ರಾಮದಲ್ಲಿ ಗ್ರಾಮ ವಾಸ್ತವ್ಯ ಮಾಡಿ ಅನೇಕ ಭರವಸೆ ನೀಡಿದ್ದರು. ಆದರೆ ಸಿಎಂ ವಾಸ್ತವ್ಯದ ಬಳಿಕ ಮಣ್ಣೂರ ಗ್ರಾಮದಲ್ಲಿ ಹೇಳಿಕೊಳ್ಳುವ ಬದಲಾವಣೆಗಳೇನು ಆಗಿಲ್ಲ.

ಮುಖ್ಯಮಂತ್ರಿಗಳು ಗ್ರಾಮ ವಾಸ್ತವ್ಯ ಮಾಡಿದ ಬಳಿಕ ಮಣ್ಣೂರ ಗ್ರಾಮವನ್ನು ಸುವರ್ಣ ಗ್ರಾಮ ಯೋಜನೆಗೆ ಆಯ್ಕೆ ಮಾಡಿಕೊಳ್ಳಲಾಗಿತ್ತು. ಈ ಯೋಜನೆ ಅಡಿಯಲ್ಲಿ ಗ್ರಾಮದ ಪ್ರತಿಯೊಂದು ಬಡಾವಣೆಯಲ್ಲಿ ಸಿಸಿ ರಸ್ತೆ ಕಾಮಗಾರಿ, ಚರಂಡಿ, ಬೀದಿ ದೀಪ ಸೇರಿದಂತೆ ಮೂಲಭೂತ ಸೌಕರ್ಯ ಗಳನ್ನು ಕಲ್ಪಿಸುವುದಾಗಿತ್ತು. ಆದರೆ ಸುವರ್ಣ ಗ್ರಾಮವಾಗಿ ಆಯ್ಕೆಯಾದ ಬಳಿಕವು ಗ್ರಾಮದಲ್ಲಿ ಹೇಳಿಕೊಳ್ಳುವ ಬದಲಾವಣೆಗಳಾಗಿಲ್ಲ. ಕೆಲವು ಬಡಾವಣೆಗಳಲ್ಲಿ ಮಾತ್ರ ಸಿಸಿ ರಸ್ತೆಗಳನ್ನು ನಿರ್ಮಿಸಲಾಗಿದೆ. ಚರಂಡಿಗಳನ್ನು ನಿರ್ಮಿಸಿಲ್ಲ, ಹೀಗಾಗಿ ಚರಂಡಿ ನೀರು ರಸ್ತೆಗಳ ಮೇಲೆ ಹರಿದಾಡುತ್ತಿದೆ. ಬೀದಿ ದೀಪಗಳನ್ನು ಅಳವಡಿಸಿಲ್ಲ. ಸುವರ್ಣ ಗ್ರಾಮವಾದ ಬಳಿಕವೂ ಗ್ರಾಮದ ಸ್ಥಿತಿ ಬದಲಾಗಿಲ್ಲ ಎನ್ನುತ್ತಾರೆ ಮಣ್ಣೂರ ಗ್ರಾಮಸ್ಥರು.

ದೇವಸ್ಥಾನಗಳಿಗೆ ಸಿಕ್ಕಿಲ್ಲ ಕಾಯಕಲ್ಪ: ಮಣ್ಣೂರ ಗ್ರಾಮದಲ್ಲಿ ಐತಿಹಾಸಿಕ ಚನ್ನಕೇಶವ ದೇವಸ್ಥಾನ ಹಾಗೂ ಯಲ್ಲಮ್ಮ ದೇವಿ ದೇವಸ್ಥಾನಗಳಿವೆ. ಮುಖ್ಯಮಂತ್ರಿಗಳು ಗ್ರಾಮ ವಾಸ್ತವ್ಯ ಮಾಡಿದ್ದ ಸಂದರ್ಭದಲ್ಲಿ ಈ ದೇವಸ್ಥಾನಗಳಿಗೆ ಕಾಯಕಲ್ಪ ಕಲ್ಪಿಸುವ ಭರವಸೆ ನೀಡಿದ್ದರು. ದೇವಸ್ಥಾನಕ್ಕೆ ಹೋಗುವ ಮಾರ್ಗದಲ್ಲಿ ಸಂಪೂರ್ಣ ವಿದ್ಯುತ್‌ ಸಂಪರ್ಕ, ಸಿಸಿ ರಸ್ತೆ ನಿರ್ಮಿಸಬೇಕಾಗಿತ್ತು. ಭೀಮಾ ನದಿಯಲ್ಲಿರುವ ಯಲ್ಲಮ್ಮ ದೇವಸ್ಥಾನಕ್ಕೆ ಸುಸಜ್ಜಿತ ಸೇತುವೆ, ತಡೆಗೋಡೆ ಸೇರಿದಂತೆ ದೇವಸ್ಥಾನದ ಜೀರ್ಣೋದ್ಧಾರ ಮಾಡಿಸುವುದಾಗಿಯೂ ಭರವಸೆ ನೀಡಿದ್ದರು. ಈಗ ಅವರು ನೀಡಿದ ಭರವಸೆಗಳಲ್ಲಿ ಅರ್ಧದಷ್ಟು ಈಡೇರಿಲ್ಲ. ಐತಿಹಾಸಿಕ ದೇವಸ್ಥಾನಗಳಿಗೆ ಕಾಯಕಲ್ಪ ಕಲ್ಪಿಸುವುದಾಗಿ ಹೇಳಿ ಈಡೇರಿಸದೆ ಹೋಗಿದ್ದಾರೆ ಎನ್ನುವ ಆರೋಪವಿದೆ.

•13 ವರ್ಷಗಳ ಹಿಂದೆ ಮಣ್ಣೂರಿನಲ್ಲಿ ವಾಸ್ತವ್ಯ ಮಾಡಿದ್ದ ಸಿಎಂ

•ಕೊಟ್ಟ ಭರವಸೆಯಲ್ಲಿ ಒಂದನ್ನೂ ಈಡೇರಿಸಿಲ್ಲ

ಅಫಜಲಪುರ ತಾಲೂಕಿನಲ್ಲಿ ವಾಸ್ತವ್ಯ ನಡೆಸುವ ಬಗ್ಗೆ ಸಿಎಂ ಕುಮಾರಸ್ವಾಮಿ ಮಂಗಳವಾರ ಬೆಂಗಳೂರಿನಲ್ಲಿ ಅಫಜಲಪುರ ಶಾಸಕ ಎಂ.ವೈ. ಪಾಟೀಲ ಅವರೊಂದಿಗೆ ಚರ್ಚಿಸಿದ್ದರು. ಈ ಸಂದರ್ಭದಲ್ಲಿ ಸಿಎಂ ತಮ್ಮ ವಾಸ್ತವ್ಯಕ್ಕೆ ಸಮಸ್ಯಾತ್ಮಕ ಸರ್ಕಾರಿ ಶಾಲೆ ಆಯ್ಕೆ ಮಾಡುವಂತೆ ಸೂಚಿಸಿದ್ದಾರೆ. ಮುಖ್ಯಮಂತ್ರಿಗಳ ಸಲಹೆಯಂತೆ ಬೆಂಗಳೂರಿನಿಂದ ಕ್ಷೇತ್ರಕ್ಕೆ ಆಗಮಿಸಿದ ಬಳಿಕ ವಾಸ್ತವ್ಯ ಹೂಡಬೇಕಾದ ಶಾಲೆಯನ್ನು ಪರಿಶೀಲಿಸಿ ಅಂತಿಮಗೊಳಿಸಲಾಗುವು ಎಂದು ಶಾಸಕ ಎಂ.ವೈ. ಪಾಟೀಲ ‘ಉದಯವಾಣಿ’ಗೆ ತಿಳಿಸಿದ್ದಾರೆ.

ನೀರಿನ ಸೌಲಭ್ಯ ಕಲ್ಪಿಸಿಲ್ಲ:
ಗ್ರಾಮದಲ್ಲಿ ಸಮರ್ಪಕ ಕುಡಿಯುವ ನೀರಿನ ಸೌಕರ್ಯ ಕಲ್ಪಿಸಿಲ್ಲ. ಗ್ರಾಮ ವಾಸ್ತವ್ಯದ ಸಂದರ್ಭದಲ್ಲಿ ಮಣ್ಣೂರ ಗ್ರಾಮದಲ್ಲಿ ಸಮರ್ಪಕ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸುವ ಸಲುವಾಗಿ ವಿಶೇಷ ಅನುದಾನ ಕಲ್ಪಿಸುವುದಾಗಿ ಸಿಎಂ ಹೇಳಿದ್ದರು. ಆದರೆ ಇಲ್ಲಿಯವರೆಗೂ ಗ್ರಾಮದಲ್ಲಿ ಸಮರ್ಪಕವಾಗಿ ಕುಡಿಯುವ ನೀರಿನ ಪೂರೈಕೆ ಸಾಧ್ಯವಾಗಿಲ್ಲ. ಮಣ್ಣೂರ ಗಡಿ ಗ್ರಾಮವಾಗಿದ್ದು, ಪಕ್ಕದಲ್ಲಿ ಮಹಾರಾಷ್ಟ್ರ ರಾಜ್ಯವಿದೆ. ತಾಲೂಕು ಕೇಂದ್ರದಿಂದ ದೂರವಿರುವ ಈ ಗ್ರಾಮದಲ್ಲಿ ಸಾಕಷ್ಟು ಪ್ರತಿಭಾವಂತರಿದ್ದಾರೆ. ಇವರಿಗೆಲ್ಲ ಮಣ್ಣೂರ ಗ್ರಾಮದಲ್ಲಿಯೇ ಸರ್ಕಾರಿ ಐಟಿಐ, ಪಾಲಿಟೆಕ್ನಿಕ್‌ ಕಾಲೇಜು ಬೇಕಾಗಿತ್ತು. ಸಿಎಂ ಗ್ರಾಮ ವಾಸ್ತವ್ಯದ ಸಂದರ್ಭದಲ್ಲಿ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವ ಭರವಸೆಗಳನ್ನು ನೀಡಿದ್ದರು. ಈಗ ಗ್ರಾಮವನ್ನೇ ಮರೆತಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸುತ್ತಾರೆ.

ಗ್ರಾಮ ವಾಸ್ತವ್ಯದ ಸಂದರ್ಭದಲ್ಲಿ ಕುಮಾರಸ್ವಾಮಿ ಅವರು ಗ್ರಾಮಸ್ಥರಿಗೆ ಅನೇಕ ಭರವಸೆಗಳನ್ನು ಕೊಟ್ಟಿದ್ದರು. ಆದರೆ ಅವರು ಕೊಟ್ಟ ಭರವಸೆಯ ಅರ್ಧದಷ್ಟು ಈಡೇರಿಲ್ಲ. ವಸತಿ ಯೋಜನೆಗಳಲ್ಲಿ ಮನೆಗಳನ್ನು ನೀಡುವ ಭರವಸೆ ಕೂಡ ನೀಡಿ ಈಗ ಮರೆತಿದ್ದಾರೆ. ಮುಖ್ಯಮಂತ್ರಿಗಳಾಗಿ ಕೊಟ್ಟ ಭರವಸೆಗಳನ್ನು ಮರೆತಿರುವ ಕುಮಾರಸ್ವಾಮಿ ಅವರು ಈಗ ಮತ್ತೂಮ್ಮೆ ಮುಖ್ಯಮಂತ್ರಿಯಾಗಿದ್ದಾರೆ. 2006ರಲ್ಲಿ ಗ್ರಾಮ ವಾಸ್ತವ್ಯ ಮಾಡಿದ್ದ ಅವರು ಈಗ ಮತ್ತೂಮ್ಮೆ ಗ್ರಾಮ ವಾಸ್ತವ್ಯದ ಹೆಸರಲ್ಲಿ ತಾಲೂಕಿಗೆ ಬರುತ್ತಿದ್ದಾರೆ. ಜತೆಗೆ ಮೊದಲು ಕೊಟ್ಟ ಭರವಸೆಗಳನ್ನು ಈಡೇರಿಸುವ ಕಡೆ ಗಮನ ಹರಿಸಬೇಕೆಂದು ಮಣ್ಣೂರ ಗ್ರಾಮದ ಮಾಜಿ ಗ್ರಾಪಂ ಅಧ್ಯಕ್ಷ ಸಿದ್ರಾಮಪ್ಪ ಹಿರೇಕೂರುಬರ್‌, ಮಾಜಿ ಸದಸ್ಯ ಶ್ರೀಕಾಂತ ನೀವರಗಿ, ಗ್ರಾಮಸ್ಥ ರಾಚಪ್ಪ ಕೊಪ್ಪ ಮತ್ತಿತರರು ಒತ್ತಾಯಿಸಿದ್ದಾರೆ.

•ಹಣಮಂತ ಬೈರಾಮಡಗಿ

ಟಾಪ್ ನ್ಯೂಸ್

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.