ಬಸ್‌ಗಳ ಡಿಕ್ಕಿ: ಶಿಕ್ಷಕಿಯರು ಸೇರಿ ನಾಲ್ವರ ಸಾವು


Team Udayavani, Jun 3, 2018, 2:15 PM IST

gul-6.jpg

ಜೇವರ್ಗಿ: ಈಶಾನ್ಯ ಸಾರಿಗೆ ಸಂಸ್ಥೆ ಬಸ್‌ಗಳ ನಡುವೆ ಶನಿವಾರ ಬೆಳಗ್ಗೆ ಸಂಭವಿಸಿದ ಮುಖಾಮುಖೀ ಡಿಕ್ಕಿಯಲ್ಲಿ ಮೂವರು ಶಿಕ್ಷಕಿಯರು ಹಾಗೂ ಬಸ್‌ ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿದ್ದು, 10ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡ ಘಟನೆ ಪಟ್ಟಣದ ತಾಲೂಕು ಕ್ರೀಡಾಂಗಣದ ಎದುರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ.

ಮೃತರನ್ನು ತಾಲೂಕಿನ ಸಿಗರಥಹಳ್ಳಿ ಸರಕಾರಿ ಉರ್ದು ಕಿರಿಯ ಪ್ರಾಥಮಿಕ ಶಾಲೆ ಸಹ ಶಿಕ್ಷಕಿಯರಾದ ಸಹರಾ ಕಾತೂಲ್‌ (30), ಆಯೇಶಾ ಸಿದ್ಧಿಕಿ (35), ಯಾಳವಾರ ಸರಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯ ಪ್ರಭಾರಿ ಮುಖ್ಯಶಿಕ್ಷಕಿ ಪರವೀನ್‌ ಬೇಗಂ (40) ಹಾಗೂ ಕಲಬುರಗಿ ಘಟಕದ ದಾವಣಗೆರೆ ಬಸ್‌ ಚಾಲಕ ರುಕ್ಕಪ್ಪ ಯಶವಂತರಾಯ (55) ಎಂದು ಗುರುತಿಸಲಾಗಿದೆ. 

ಏನಾಯ್ತು?: ಕಲಬುರಗಿಯಿಂದ ದಾವಣಗೆರೆ ಕಡೆ ಹೊರಟಿದ್ದ ಬಸ್‌ ಹಾಗೂ ಸುರಪುರದಿಂದ ಕಲಬುರಗಿ ಕಡೆ ತೆರಳುತ್ತಿದ್ದ ಸಾರಿಗೆ ಬಸ್‌ಗಳು ಮುಖಾಮುಖೀ ಡಿಕ್ಕಿಯಾಗಿ, ನಂತರ ದಾವಣಗೆರೆಗೆ ಹೊರಟಿದ್ದ ಬಸ್‌ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದೆ. ಬಸ್‌ಗಳು ಎದುರು ಬದುರು ಬರುತ್ತಿರುವಾಗ ನಾಯಿಯೊಂದು ಅಡ್ಡಬಂದಿದೆ. 

ಅದನ್ನು ಉಳಿಸಲು ಹೋಗಿ ಈ ಘಟನೆ ನಡೆದಿದೆ ಎನ್ನಲಾಗಿದೆ. ದಾವಣಗೆರೆಗೆ ತೆರಳುತ್ತಿದ್ದ ಬಸ್‌ನ ಮುಂಭಾಗ ನಜ್ಜುಗುಜ್ಜಾಗಿದೆ. ಘಟನೆಯಲ್ಲಿ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟಿದ್ದು, 10ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿವೆ. ಗಾಯಗೊಂಡವರನ್ನು ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ, ಹೆಚ್ಚಿನ ಚಿಕಿತ್ಸೆಗೆ ಕಲಬುರಗಿ ಆಸ್ಪತ್ರೆಗೆ ಸಾಗಿಸಲಾಗಿದೆ. ಬೆಳಗ್ಗೆ ಜಿಟಿಜಿಟಿ ಮಳೆ ಬರುತ್ತಿದ್ದರಿಂದ ರಕ್ಷಣಾ ಕಾರ್ಯಕ್ಕೆ ಅಡೆ ತಡೆ ಉಂಟಾಯಿತು.

ಸ್ಥಳಕ್ಕೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎನ್‌. ಶಶಿಕುಮಾರ, ಹೆಚ್ಚುವರಿ ಎಸ್ಪಿ ಜಯಪ್ರಕಾಶ, ಗ್ರಾಮೀಣ ಉಪವಿಭಾಗದ ಡಿವೈಎಸ್ಪಿ ಪವನಂದಿ, ಸಿಪಿಐ ಡಿ.ಬಿ. ಪಾಟೀಲ, ಪಿಎಸ್‌ಐ ರಾಜಕುಮಾರ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜೇವರ್ಗಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪಟ್ಟಣದ ಸರ್ಕಾರಿ
ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿದ ಬಿಜೆಪಿ ಜಿಲ್ಲಾಧ್ಯಕ್ಷ, ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ ನರಿಬೋಳ, ಅಪಘಾತದಲ್ಲಿ ಗಾಯಗೊಂಡವರ ಆರೋಗ್ಯ ವಿಚಾರಿಸಿ ಮೃತ ಕುಟುಂಬಗಳಿಗೆ ಸಾಂತ್ವನ ಹೇಳಿದರು.

 ಅಪಘಾತದಲ್ಲಿ ಮೃತಪಟ್ಟ ಮೂವರು ಶಿಕ್ಷಕಿಯರು ಹಾಗೂ ಬಸ್‌ ಚಾಲಕನ ಕುಟುಂಬಕ್ಕೆ ದೇವರು ದುಃಖ ಭರಿಸುವ ಶಕ್ತಿ ನೀಡಲಿ. ಮೃತಪಟ್ಟ ಹಾಗೂ ಗಾಯಗೊಂಡ ಕುಟುಂಬಗಳಿಗೆ ಸರ್ಕಾರದ ವತಿಯಿಂದ ಸೂಕ್ತ ಪರಿಹಾರ ಕೊಡಿಸಲಾಗುವುದು ಎಂದು ಶಾಸಕ ಡಾ.ಅಜಯಸಿಂಗ್‌ ತಿಳಿಸಿದ್ದಾರೆ. 

ಟಾಪ್ ನ್ಯೂಸ್

Ashwin Vaishnav

Bullet train ಮೊದಲ ಬಾರಿಗೆ ಬ್ಯಾಲೆಸ್ಟ್‌ಲೆಸ್‌ ಟ್ರ್ಯಾಕ್‌: ರೈಲ್ವೇ ಸಚಿವ ವೈಷ್ಣವ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೇವು?: ಖಂಡ್ರೆ

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

1-wqeqwewq

Minister ಪ್ರಿಯಾಂಕ ಖರ್ಗೆ ಉದ್ಧಟತನ ಅತಿಯಾಗಿದೆ: ಸಂಸದ ಡಾ.ಜಾಧವ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Ashwin Vaishnav

Bullet train ಮೊದಲ ಬಾರಿಗೆ ಬ್ಯಾಲೆಸ್ಟ್‌ಲೆಸ್‌ ಟ್ರ್ಯಾಕ್‌: ರೈಲ್ವೇ ಸಚಿವ ವೈಷ್ಣವ್‌

1-addasd

Mumbai Indians: ಸೂರ್ಯಕುಮಾರ್‌ ಶೀಘ್ರ ಚೇತರಿಕೆ ಸಾಧ್ಯತೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.