ಕಾಂಗ್ರೆಸ್‌ ತನ್ನ ಸ್ಥಾನ ಉಳಿಸಿಕೊಳ್ಳಲಿದೆ: ವೇಣುಗೋಪಾಲ

ಚಿಂಚೋಳಿಯಲ್ಲಿ ಕಾಂಗ್ರೆಸ್‌ ಮುಖಂಡರ ಸಭೆ•ಮನೆ-ಮನೆಗೆ ಹೋಗಿ ಪ್ರಚಾರ ನಡೆಸಲು ಕಾರ್ಯಕರ್ತರಿಗೆ ಕರೆ

Team Udayavani, May 14, 2019, 4:20 PM IST

ಚಿಂಚೋಳಿ: ಪಟ್ಟಣದ ವೀರೇಂದ್ರ ಪಾಟೀಲ ಪಬ್ಲಿಕ್‌ ಶಾಲೆ ಸಭಾಂಗಣದಲ್ಲಿ ಎಐಸಿಸಿ(ಐ) ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ ಮಾತನಾಡಿದರು.

ಚಿಂಚೋಳಿ: ಕುಂದಗೋಳ ಮತ್ತು ಚಿಂಚೋಳಿ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ ತನ್ನ ಸ್ಥಾನ ಉಳಿಸಿಕೊಳ್ಳಲಿದೆ. ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಗಳು ಎರಡು ಕ್ಷೇತ್ರಗಳಲ್ಲಿ ಜಯ ಸಾಧಿಸಲಿದ್ದಾರೆ ಎಂದು ಎಐಸಿಸಿ(ಐ) ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ ವಿಶ್ವಾಸ ವ್ಯಕ್ತಪಡಿಸಿದರು.

ಪಟ್ಟಣದ ವೀರೇಂದ್ರ ಪಾಟೀಲ ಪಬ್ಲಿಕ್‌ ಶಾಲೆ ಸಭಾಂಗಣದಲ್ಲಿ ನಡೆದ ಕಾಂಗ್ರೆಸ್‌ ಕಾರ್ಯಕರ್ತರ ಮತ್ತು ಮುಖಂಡರ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಎರಡು ಉಪಚುನಾವಣೆ ಯಾಕೆ? ನಡೆಯುತ್ತಿವೆ ಎಂಬ ವಿಷಯ ಮತದಾರರಿಗೆ ಗೊತ್ತಿರುವ ವಿಷಯ. ಕುಂದಗೋಳ ಕ್ಷೇತ್ರದ ಸಚಿವ ಎಸ್‌.ಸಿ. ಶಿವಳ್ಳಿ ಅವರ ಅಕಾಲಿಕ ನಿಧನದಿಂದ ಅಲ್ಲಿ ಉಪಚುನಾವಣೆ ನಡೆಯುತ್ತಿದೆ. ಆದರೆ ಚಿಂಚೋಳಿ ಮತಕ್ಷೇತ್ರದ ಕಾಂಗ್ರೆಸ್‌ ಪಕ್ಷದ ಮಾಜಿ ಶಾಸಕ ಡಾ| ಜಾಧವ್‌ ಅವರು ಬಿಜೆಪಿಗೆ ಹೋಗಿದ್ದರಿಂದ ಮತಕ್ಷೇತ್ರದಲ್ಲಿ ಉಪಚುನಾವಣೆ ಎದುರಿಸಬೇಕಾಗಿದೆ. ಎರಡು ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳು ಭರ್ಜರಿ ಗೆಲುವು ಸಾಧಿಸಲಿದ್ದಾರೆ ಎಂದರು. ಬೀದರ ಮತ್ತು ಕಲಬುರಗಿ ಲೋಕಸಭೆ ಚುನಾವಣೆಯಲ್ಲಿ ಈಶ್ವರ ಖಂಡ್ರೆ ಮತ್ತು ಡಾ| ಮಲ್ಲಿಕಾರ್ಜುನ ಖರ್ಗೆ ಗೆಲುವು ಸಾಧಿಸಲಿದ್ದಾರೆ. ಆದರೆ ಕೇಂದ್ರದಲ್ಲಿ ಎನ್‌ಡಿಎ ಸರಕಾರ ಪತನವಾಗಿ ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬರಲಿದೆ ಎಂದರು.

ಕೆಪಿಸಿಸಿ(ಐ) ಅಧ್ಯಕ್ಷ ದಿನೇಶ ಗುಂಡೂರಾವ್‌, ಕಾರ್ಯಧ್ಯಕ್ಷ ಈಶ್ವರ ಖಂಡ್ರೆ, ಸಚಿವರಾದ ಪ್ರಿಯಾಂಕ್‌ ಖರ್ಗೆ, ರಹೀಮಖಾನ್‌, ರಾಜಶೇಖರ ಪಾಟೀಲ, ಮಾಜಿ ಶಾಸಕ ಕೈಲಾಶನಾಥ ಪಾಟೀಲ, ಬಿ.ಕೆ. ಹರಿಪ್ರಸಾದ, ಬಿ.ಆರ್‌. ಪಾಟೀಲ, ರಾಜಾರಂಗಪ್ಪ ನಾಯಕ, ಸುಭಾಷ ರಾಠೊಡ, ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಜಗದೇವ ಗುತ್ತೆದಾರ, ತಾಲೂಕಾಧ್ಯಕ್ಷ ಅನಿಲಕುಮಾರವ ಜಮಾದಾರ, ರಾಮಶೆಟ್ಟಿ ಪವಾರ, ತುಕಾರಾಮ ಪವಾರ, ಗೋಪಾಲರಾವ ಕಟ್ಟಿಮನಿ, ಅಮರ ಲೊಡನೋರ, ಕೆ.ಎಂ. ಬಾರಿ, ಅಲ್ಲಮಪ್ರಭು ಪಾಟೀಲ, ಸಂತೋಷ ಗುತ್ತೆದಾರ, ಸವಿತಾ ಸಜ್ಜನಶೆಟ್ಟಿ, ಬಸವರಾಜ ಮಲಿ ಇದ್ದರು.


ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ