ಬಿರುಗಾಳಿ ಸಹಿತ ಮಳೆಗೆ ನೆಲಕ್ಕುರಳಿದ ಜೋಳದ ಬೆಳೆ

Team Udayavani, Feb 19, 2018, 12:03 PM IST

gul-8.jpg

ಆಳಂದ: ಹಿಂಗಾರು ಹಂಗಾಮಿನಲ್ಲಿ ಸಕಾಲಕ್ಕೆ ಮಳೆಯಾದ ಹಿನ್ನೆಲೆಯಲ್ಲಿ ಭರದಿಂದ ಬಿತ್ತನೆ ಕೈಗೊಂಡಿದ್ದ ಬೀಳಿ ಜೋಳದ ಬೆಳೆ ಇನ್ನೇನು ಕೈಗೆ ಬರಲಿದೆ ಎಂಬ ಆಶಾದಾಯಕ ಪರಿಸ್ಥಿತಿಯಲ್ಲಿ ಈಚೆಗೆ ಅಕಾಲಿಕವಾಗಿ ಬೀಸಿದ ಬಿರುಗಾಳಿ ಮತ್ತು ಮಳೆಗೆ ನೆಲಕ್ಕುರುಳಿ ಅಪಾರ ಪ್ರಮಾಣದಲ್ಲಿ ನಷ್ಟವಾಗಿದೆ.

ಅಲ್ಲಲ್ಲಿ ತೋಟಗಾರಿಕೆ ಬೆಳೆ ಟೋಮ್ಯಾಟೋ, ಸವತೆ, ಕಲ್ಲಂಗಡಿ, ದ್ರಾಕ್ಷಿ, ಬಾಳೆ, ಕಬ್ಬಿನ ಬೆಳೆಗೆ ಸ್ವಲ್ಪ ಧಕ್ಕೆಯಾಗಿದೆ ಎಂದು ವರದಿಯಾಗಿದೆ. ತಾಲೂಕಿನ ಸರಸಂಬಾ, ಖಜೂರಿ, ಸಾಲೇಗಾಂವ, ಪಡಸಾವಳಿ, ನಿರಗುಡಿ, ಆಳಂದ ವಲಯ ತೀರ್ಥ, ಲಾಡಚಿಂಚೋಳಿ, ಕಡಗಂಚಿ ಸೇರಿ ಇನ್ನಿತರ ಭಾಗದಲ್ಲಿ ಬೆಳೆದು ತೆನೆ ಕಟ್ಟಿದ ಜೋಳ ಬಿರುಗಾಳಿ ಸಹಿತ ಆಲಿಕಲ್ಲು ಮಳೆಗೆ ನೆಲಕ್ಕುರುಳಿ ಹಾನಿಯಾಗಿದೆ. ಬೆಳೆ ಮಧ್ಯದಲ್ಲಿ ಅರ್ಧದಷ್ಟು ಹಾನಿಗೀಡಾದರೆ, ಇನ್ನರ್ಧದಷ್ಟು ಬೆಳೆ
ಉಳಿಸಿಕೊಳ್ಳಲು ರೈತರು ಪರದಾಡುವಂತಾಗಿದೆ.

ಕೆಲ ಭಾಗದ ಹೊಲಗಳಲ್ಲಿ ಶೇ. 80ರಷ್ಟು ಜೋಳ ನೆಲಕ್ಕುರಳಿ ಹಾನಿಯಾಗಿದೆ. ನೋಡಲು ಅಲ್ಲಲ್ಲಿ ಜೋಳದ ದಂಟು ಕಾಣಿಸುತ್ತಿರುವುದು ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ ಎಂದು ಗೋಳಾಡುತ್ತಿದ್ದಾರೆ. ಈ ಕುರಿತು ಸಂಬಂಧಿಸಿದ ಇಲಾಖೆಯಿಂದ ಹಾನಿ ಮಾಹಿತಿ ಕಲೆ ಹಾಕುವ ಕಾರ್ಯ ನಡೆದಿಲ್ಲ. ರೈತರು ತೊಗರಿ ಮಾರಾಟಕ್ಕೆ ಪರದಾಡುತ್ತಿದ್ದಾರೆ. ಇನ್ನೂ ಕೆಲವರು ಮಾರಿದ ತೊಗರಿ ಹಣ ಯಾವಾಗ ಬರುತ್ತದೆ ಎಂಬ ಸಂಕಷ್ಟದ ನಡುವೆ ಜೋಳದ ಬೆಳೆ ನಷ್ಟವಾಗಿರುವುದು ಮತ್ತಷ್ಟು ಕಂಗಾಲಾಗಿಸಿದೆ.

ತಾಲೂಕಿನ ಐದು ಹೋಬಳಿ ಕೇಂದ್ರಗಳಾದ ಆಳಂದ, ಖಜೂರಿ, ನರೋಣಾ, ನಿಂಬರಗಾ, ಮಾದನಹಿಪ್ಪರಗಾದಲ್ಲಿ ಒಟ್ಟು ಬೀಳಿ ಜೋಳ ನೀರಾವರಿ 800 ಹೆಕ್ಟೇರ್‌ ಮತ್ತು ಖುಷ್ಕಿಯಲ್ಲಿ 34500 ಹೆಕ್ಟೇರ್‌ ಬಿತ್ತನೆಯಾಗಿದೆ. ಆದರೆ
ಬಿರುಗಾಳಿ ಸಹಿತ ಆಲಿಕಲ್ಲು ಮಳೆಗೆ ಅಪಾರ ಪ್ರಮಾಣದಲ್ಲಿ ಹಾನಿಯಾಗಿದೆ. ಅನೇಕರ ಹೊಲದಲ್ಲಿ ನೆಲಕ್ಕುರುಳಿದ ಜೋಳವನ್ನು ಜಾನುವಾರುಗಳಿಗೆ ಮೇವಿಗಾದರು ಆಗುತ್ತದೆ ಎಂದು ದುಬಾರಿ ಕೂಲಿಯಾಳಗಳಿಂದ ಸಂಗ್ರಹಿಸುತ್ತಿರುವುದು ಕಂಡು ಬರತೊಡಗಿದೆ.

ಹಿಂಗಾರು ಬೆಳೆ ಕ್ಷೇತ್ರ: ಕೃಷಿ ಇಲಾಖೆ ಅಂದಾಜಿನಂತೆ ತಾಲೂಕಿನ ನೀರಾವರಿ 4395 ಹೆಕ್ಟೇರ್‌ ಹಾಗೂ ಖುಷ್ಕಿಯಲ್ಲಿ 72618 ಹೆಕ್ಟೇರ್‌ ಸೇರಿ 77013 ಹೆಕ್ಟೇರ್‌ ಪ್ರದೇಶದಲ್ಲಿ ಹಿಂಗಾರು ಜೋಳ, ಗೋದಿ, ಮುಸುಕಿನ ಜೋಳ, ಕಡಲೆ,
ಹುರುಳಿ, ಸೂರ್ಯಕಾಂತಿ, ಅಗಸೆ, ಶೇಂಗಾ ಬಿತ್ತನೆ ಮಾಡಲಾಗಿದೆ. ಆದರೆ ಕುಸುಬೆ, ಕಡಲೆ, ಶೇಂಗಾ ಬೆಳೆಗೆ ನೀರಿನ ಕೊರತೆ ಹಾಗೂ ಬೆಳೆದ ನಿಂತ ಜೋಳ ನೆಲಕ್ಕುರಳಿರುವುದು ಉತ್ಪಾದನೆಯಲ್ಲಿ ಕುಂಠಿವಾಗಲಿದೆ ಎಂದು  ಅಂದಾಜಿಸಲಾಗಿದೆ.

ಟಾಪ್ ನ್ಯೂಸ್

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Kundapura; ಹಲ್ಲೆ , ಬೆದರಿಕೆ, ಚಿನ್ನದ ಸರ ಲೂಟಿ: ದೂರು

Kundapura; ಹಲ್ಲೆ,ಬೆದರಿಕೆ, ಚಿನ್ನದ ಸರ ಲೂಟಿ: ದೂರು

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.