ಮೊಬೈಲ್‌ ಆ್ಯಪ್‌ ಮೂಲಕ ಬೆಳೆ ಸಮೀಕ್ಷೆ: ಜಿಲ್ಲಾಧಿಕಾರಿ


Team Udayavani, Sep 23, 2018, 4:49 PM IST

gul-2.jpg

ಕಲಬುರಗಿ: ಜಿಲ್ಲೆಯಲ್ಲಿ ಮುಂಗಾರು, ಹಿಂಗಾರು ಹಾಗೂ ಬೇಸಿಗೆ ಬೆಳೆಗಳ ಸಮೀಕ್ಷೆಯನ್ನು ಇನ್ನು ಮುಂದೆ ಸರ್ಕಾರದ ಮೊಬೈಲ್‌ ಆ್ಯಪ್‌ ಮೂಲಕ ನಡೆಸಲಾಗುವುದು ಎಂದು ಜಿಲ್ಲಾಧಿಕಾರಿ ಆರ್‌. ವೆಂಕಟೇಶಕುಮಾರ ತಿಳಿಸಿದರು.

ನಗರದ ಡಾ| ಎಸ್‌.ಎಂ. ಪಂಡಿತ ಮಂದಿರದಲ್ಲಿ ಹಮ್ಮಿಕೊಳ್ಳಲಾಗಿದ್ದ ಬೆಳೆ ಸಮೀಕ್ಷೆ ಮೊಬೈಲ್‌ ಆ್ಯಪ್‌ ಬಳಕೆದಾರರ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿ, ಜಿಲ್ಲೆಯಲ್ಲಿ 1068 ಜನರನ್ನು ಮೊಬೈಲ್‌ ಆ್ಯಪ್‌ ಮೂಲಕ ಬೆಳೆ ಸಮೀಕ್ಷೆಗಾಗಿ ಗುರುತಿಸಲಾಗಿದ್ದು, ಒಂದು ಪ್ಲಾಟಿನ ಸಮೀಕ್ಷೆ ಕೈಗೊಂಡರೆ ಸೂಕ್ತ ಗೌರವ ಧನ ನೀಡಲಾಗುವುದು ಎಂದರು.

ಬೆಳೆ ಸಮೀಕ್ಷೆ ಸೂಕ್ತ ಸಮಯದಲ್ಲಿ ಕೈಗೊಳ್ಳಬೇಕಾಗುತ್ತದೆ. ಕಂದಾಯ ಇಲಾಖೆ ಅಧಿಕಾರಿಗಳು ಮೊಬೈಲ್‌ ಹೊಂದಿರುವ ಖಾಸಗಿ ವ್ಯಕ್ತಿಗಳಿಗೆ ಸಮೀಕ್ಷೆಗಾಗಿ ಸಹಾಯ ಮಾಡಬೇಕು. ಗ್ರಾಮ ಲೆಕ್ಕಿಗರನ್ನು ಮೇಲ್ವಿಚಾರಕರೆಂದು ನೇಮಿಸಲಾಗುತ್ತಿದ್ದು, ಖಾಸಗಿ ವ್ಯಕ್ತಿಗಳು ಕೈಗೊಂಡಿರುವ 40 ಪ್ಲಾಟುಗಳ ಬೆಳೆ ಸಮೀಕ್ಷೆ ಪರಿಶೀಲಿಸಿ, ದೃಢೀಕರಿಸಿ ಸಲ್ಲಿಸಬೇಕು. ಪ್ರತಿ ವರ್ಷ ಮೂರು ಖುತುಮಾನಗಳಲ್ಲಿ ಬೆಳೆ ಸಮೀಕ್ಷೆ ಕೈಗೊಳ್ಳಲು ಅಧಿಕಾರಿಗಳಿಂದ ಸಾಧ್ಯವಿಲ್ಲ ಎನ್ನುವ ಭಾವನೆಯಿಂದ ಸಮೀಕ್ಷೆಗಾಗಿ ಖಾಸಗಿ ವ್ಯಕ್ತಿಗಳ ಸಹಾಯ ಪಡೆಯಲಾಗುತ್ತಿದೆ ಎಂದರು.

ಕಂದಾಯ, ಕೃಷಿ, ತೋಟಗಾರಿಕೆ ಹಾಗೂ ಕೃಷಿಗೆ ಸಂಬಂಧಿತ ಇನ್ನಿತರ ಇಲಾಖೆಗಳಿಂದ ಪ್ರತಿವರ್ಷ ಬೆಳೆ ಸಮೀಕ್ಷೆ ಮಾಡುವ ಪದ್ಧತಿ ಈ ಹಿಂದಿನಿಂದಲೂ ಇದೆ. ಈ ವರ್ಷದಿಂದ ಬೆಳೆ ಸಮೀಕ್ಷೆಯನ್ನು ಗಣಕೀಕೃತಗೊಳಿಸಲಾಗುತ್ತಿದ್ದು, ಮೊಬೈಲ್‌ ಆ್ಯಪ್‌ ಮೂಲಕ ಕೃಷಿ ಕ್ಷೇತ್ರದ ಹಾಗೂ ಇಳುವರಿ ಗಣಕೀಕರಣ ಮಾಡಲಾಗುತ್ತಿದೆ.

ಮೊಬೈಲ್‌ ಆ್ಯಪ್‌ನಿಂದ ಕೈಗೊಳ್ಳಲಾಗುವ ನಿಖರವಾದ ಬೆಳೆ ಸಮೀಕ್ಷೆಯಿಂದ ಬರಗಾಲ ಅಥವಾ ಅತಿವೃಷ್ಟಿ ಸಮಯದಲ್ಲಿ ರೈತರಿಗೆ ಪರಿಹಾರ ನಿಗದಿಪಡಿಸಲು ಅನುಕೂಲವಾಗುವುದು. ಬೆಳೆ ಸಮೀಕ್ಷೆಯಿಂದಾಗಿ ಎಷ್ಟು ಪ್ರದೇಶದಲ್ಲಿ ಯಾವ ಬೆಳೆ ಇದೆ ಹಾಗೂ ಎಷ್ಟು ಇಳುವರಿ ಬರುತ್ತದೆ ಎಂಬ ಅಂಕಿ-ಅಂಶಗಳನ್ನು ಸಂಗ್ರಹಿಸಲು ಸಾಧ್ಯವಾಗಿ ಆಹಾರ ಭದ್ರತೆ ಯೋಜನೆ ರೂಪಿಸಲು ಅನುಕೂಲವಾಗುವುದು ಎಂದರು. 

ರೈತರು ಪ್ರತಿ ವರ್ಷ ತಮ್ಮ ಹೊಲಗಳಲ್ಲಿ ಬೆಳೆ ಪದ್ಧತಿಯನ್ನು ಬದಲಿಸುತ್ತಾರೆ. ಇದರ ಮಾಹಿತಿ ಸೂಕ್ತವಾಗಿ ಲಭ್ಯವಾಗುವುದಿಲ್ಲ. ಪ್ರಸಕ್ತ ವರ್ಷದಿಂದ ಕೈಗೊಳ್ಳಲಾಗುತ್ತಿರುವ ಮೊಬೈಲ್‌ ಆ್ಯಪ್‌ ಸಮೀಕ್ಷೆಯಿಂದ ನಿಖರವಾಗಿ ಯಾವ ಹೊಲದಲ್ಲಿ ಯಾವ ಬೆಳೆ ಇದೆ ಎಂಬುದನ್ನು ತಿಳಿಯಬಹುದಾಗಿದೆ ಎಂದರು. ಪ್ರೊಬೇಷನರಿ ಐ.ಎ.ಎಸ್‌. ಅಧಿಕಾರಿ ಲೋಖಂಡೆ ಸ್ನೇಹಲ್‌ ಸುಧಾಕರ, ಕಲಬುರಗಿ ಸಹಾಯಕ ಆಯುಕ್ತ ರಾಚಪ್ಪ, ಕೃಷಿ, ತೋಟಗಾರಿಕೆ ಇಲಾಖೆ ಅಧಿಕಾರಿಗಳು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.