ಚರಂಡಿ ಸ್ವತ್ಛತಾ ಅಭಿಯಾನಕ್ಕೆ ಡಿಸಿ ಸೂಚನೆ

Team Udayavani, Oct 10, 2018, 11:35 AM IST

gul-1.jpg

ಕಲಬುರಗಿ: ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿನ ಎಲ್ಲ ಚರಂಡಿಗಳನ್ನು ಏಕಕಾಲದಲ್ಲಿ 10 ದಿನದೊಳಗೆ ಸ್ವತ್ಛಗೊಳಿಸಲು ಮುಂದಿನ ವಾರ “ಚರಂಡಿ ಸ್ವತ್ಛತಾ ಅಭಿಯಾನ’ ಕೈಗೊಳ್ಳುವಂತೆ ಪಾಲಿಕೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಆರ್‌. ವೆಂಕಟೇಶಕುಮಾರ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಹಾನಗರ ಪಾಲಿಕೆ, ಜಿಲ್ಲಾ ನಗರಾಭಿವೃದ್ಧಿ ಕೋಶ ಮತ್ತು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧಿಕಾರಿಗಳೊಂದಿಗೆ ನಗರದ ಅಭಿವೃದ್ಧಿ, ಸ್ವತ್ಛತೆ, ಕುಡಿಯುವ ನೀರು ಕುರಿತು ಕರೆಯಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಆವರು ಮಾತನಾಡಿದರು.

ಈ ವಿಶೇಷ ಅಭಿಯಾನ ಕೈಗೊಳ್ಳುವ ಪೂರ್ವ ಪ್ರಸ್ತುತ ಪೌರಕಾರ್ಮಿಕರ ಸಂಖ್ಯೆ, ಚರಂಡಿ ಸ್ವತ್ಛತೆಗೆ ನಿಯೋಜನೆಗೊಂಡಿರುವ ಸಫಾಯಿ ಕರ್ಮಚಾರಿಗಳ ಸಂಖ್ಯೆಯ ವಿವರದೊಂದಿಗೆ ವಿಶೇಷ ಅಭಿಯಾನದ ಸಂಪೂರ್ಣ ಕ್ರಿಯಾ ಯೋಜನೆಯನ್ನು ಮೂರು ದಿನದೊಳಗೆ ಸಲ್ಲಿಸುವಂತೆ ಪಾಲಿಕೆ ಪರಿಸರ ಅಭಿಯಂತರರಿಗೆ ನಿರ್ದೇಶನ ನೀಡಿದರು. 

ಇತ್ತೀಚೆಗೆ ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ನಗರ ಪ್ರದಕ್ಷಿಣೆ ಕೈಗೊಂಡ ಸಂದರ್ಭದಲ್ಲಿ ಚರಂಡಿ ಸ್ವತ್ಛತೆ ಸಂಬಂಧ ದೂರುಗಳು ಕೇಳಿಬಂದಿವೆ. ಚರಂಡಿಯಲ್ಲಿ ರೊಚ್ಚು ನೀರು ಸರಾಗವಾಗಿ ಸಾಗದ ಪರಿಣಾಮ ಕೆಟ್ಟ ವಾಸನೆ ಪ್ರದೇಶದ ತುಂಬಾ ಹಬ್ಬಿ ಜನರ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತಿದೆ. ಹೀಗಾಗಿ ಆಗಾಗ ಚರಂಡಿಯನ್ನು ಸ್ವತ್ಛಗೊಳಿಸುತ್ತಿರಬೇಕು ಎಂದು ಹೇಳಿದರು.

ಪಾಲಿಕೆ ವ್ಯಾಪ್ತಿಯಲ್ಲಿ ಬರುವ ತೆರೆದ ಚರಂಡಿ ಕುರಿತು ಸಮೀಕ್ಷೆ ಕೈಗೊಂಡು ಮೂರು ದಿನದೊಳಗೆ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಿಗೆ ವರದಿ ಸಲ್ಲಿಸಬೇಕು ಎಂದು ಆದೇಶಿಸಿದರು.

ನಗರದಲ್ಲಿ ಚರಂಡಿ ಸ್ವತ್ಛತೆ, ಕುಡಿಯುವ ನೀರಿನ ತೊಂದರೆ ಬಗ್ಗೆ ಸಾಕಷ್ಟು ದೂರುಗಳು ಬರುತ್ತಿವೆ. ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ಹೇಳಲು ಕರೆ ಮಾಡಿದಾಗ ಕರೆ ಸ್ವೀಕರಿಸಿ ಸಮಸ್ಯೆಗೆ ಕೂಡಲೇ ಸ್ಪಂದಿಸಬೇಕು. ಪತ್ರಿಕೆಯಲ್ಲಿ ಬರುವ ಕುಂದು ಕೊರತೆಗಳನ್ನು ಗಮನಿಸಿ ಅದರ ನಿವಾರಣೆಗೂ ಕಾರ್ಯಪ್ರವೃತ್ತರಾಗಬೇಕು ಎಂದು ಪಾಲಿಕೆ ಮತ್ತು ಜಲಮಂಡಳಿ ಅಧಿಕಾರಿಗಳಿಗೆ ಸೂಚಿಸಿದರು.

ಮ್ಯಾನ್‌ ಹೋಲ್‌ಗ‌ಳಲ್ಲಿ ಕಾರ್ಮಿಕರು ಇಳಿಯುವುದು ಅಥವಾ ಇಳಿಸುವುದು ಅಕ್ಷಮ್ಯ ಅಪರಾಧವಾಗಿದೆ. ಒಂದು ವೇಳೆ ಮ್ಯಾನ್‌ ಹೋಲ್‌ಗ‌ಳಲ್ಲಿ ಸಫಾಯಿ ಕಾರ್ಮಿಕರನ್ನು ಇಳಿಸಿದಲ್ಲಿ ಅಂತಹವರ ವಿರುದ್ಧ ಮ್ಯಾನ್ವಲ್‌ ಸ್ಕಾವೆಂಜರ್‌ ಕಾಯ್ದೆಯನ್ವಯ ಕಠಿಣ ಕ್ರಮ ಕೈಗೊಳ್ಳಬೇಕು. ಅಲ್ಲದೇ ನಗರದಲ್ಲಿ ಮ್ಯಾನ್‌ ಹೋಲ್‌ ಸಂಖ್ಯೆ ಕುರಿತು ವಾಟರ್‌ ಮ್ಯಾನ್‌ ಗಳಿಂದ ಸರ್ವೇ ಮಾಡಿಸಿ ಮೂರು ದಿನದೊಳಗೆ ವರದಿ ಸಲ್ಲಿಸಿ ಎಂದು ಮಂಡಳಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬಿಡಾಡಿ ದನಗಳಿಗೆ ಕಡಿವಾಣ ಹಾಕಿ: ನಗರದ ಪ್ರಮುಖ ರಸ್ತೆಗಳಲ್ಲಿ ಬಿಡಾಡಿ ದನಗಳು ಎಲ್ಲೆಂದರಲ್ಲಿ ಓಡಾಡುತ್ತಿರುವುದರಿಂದ ರಸ್ತೆ ಸವಾರರಿಗೆ ತೊಂದರೆಯಾಗುತ್ತಿದ್ದು, ಸ್ಥಳೀಯ ಎನ್‌.ಜಿ.ಒ.ಗಳ ಸಹಕಾರದಿಂದ ಇದಕ್ಕೆ ಕಡಿವಾಣ ಹಾಕಿ ಎಂದರು.

ಜಿಲ್ಲಾ ಆಸ್ಪತ್ರೆಗೆ ನೀರು ಪೂರೈಸಿ: ಜಿಲ್ಲಾ ಆಸ್ಪತ್ರೆಗೆ ಪ್ರತಿನಿತ್ಯ ನೂರಾರು ಸಂಖ್ಯೆಯಲ್ಲಿ ರೋಗಿಗಳು ಚಿಕಿತ್ಸೆಗೆ ದಾಖಲಾಗುತ್ತಾರೆ. ಹೀಗಿದ್ದಾಗ ಸಮರ್ಪಕವಾಗಿ ನೀರು ಸರಬರಾಜಾಗದಿದ್ದರೆ ತೀವ್ರ ತೊಂದರೆಯಾಗುತ್ತದೆ. ಆದ್ದರಿಂದ ಆಸ್ಪತ್ರೆಗೆ ಬೇಡಿಕೆಯಂತೆ ಕುಡಿಯುವ ನೀರನ್ನು ಪ್ರಥಮಾದ್ಯತೆ ಮೇರೆಗೆ ಟ್ಯಾಂಕರ್‌ ಮೂಲಕ ಸರಬರಾಜು ಮಾಡಿ. ಇಲ್ಲದಿದ್ದಲ್ಲಿ ಶಿಸ್ತು ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ನೀರು ಸರಬರಾಜು ಮಂಡಳಿ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಆರ್‌. ವೆಂಕಟೇಶಕುಮಾರ ಎಚ್ಚರಿಕೆ ನೀಡಿದರು. 

ಜಾಹೀರಾತುಗಳಿಗೆ ಅನುಮತಿ ಕಡ್ಡಾಯ: ಪಾಲಿಕೆ ವ್ಯಾಪ್ತಿಯಲ್ಲಿನ ಫಲಕಗಳ ಮೇಲೆ ಜಾಹೀರಾತು ಪ್ರದರ್ಶನಕ್ಕೆ ಖಾಸಗಿ ವ್ಯಕ್ತಿಗಳು, ಸಂಘ-ಸಂಸ್ಥೆಗಳು, ರಾಜಕೀಯ ಪಕ್ಷಗಳು, ಸಾರ್ವಜನಿಕ ಉದ್ದಿಮೆಗಳು ಪಾಲಿಕೆಯಿಂದ ಅನುಮತಿ ಪಡೆಯುವುದು ಕಡ್ಡಾಯವಾಗಿದೆ. ಈ ನಿಟ್ಟಿನಿಲ್ಲಿಯೂ ಪಾಲಿಕೆ ಅಧಿಕಾರಿಗಳು ಗಮನಹರಿಸಬೇಕು. ನಗರದ ಸ್ವತ್ಛತೆ ಮತ್ತು ಸೌಂದರ್ಯಕ್ಕೆ ಧಕ್ಕೆಯಾಗುವಂತಹ ಅನಧಿಕೃತ ಜಾಹೀರಾತು ಫಲಕಗಳಿಗೆ ಕಡಿವಾಣ ಹಾಕಿ ಎಂದು ಜಿಲ್ಲಾಧಿಕಾರಿಗಳು ಅಧಿಕಾರಿಗಳಿಗೆ ಸೂಚಿಸಿದರು.

ಹಂದಿ ಸಾಕುವವರ ವಿರುದ್ಧ ಕ್ರಿಮಿನಲ್‌ ಕೇಸ್‌: ನಗರದ ಕೆಲವೆಡೆ ಹಂದಿಗಳ ಸಾಕಾಣಿಕೆಯಿಂದ ಸಾಂಕ್ರಾಮಿಕ ರೋಗಗಳು ಹರಡಿ ಜನರ ಆರೋಗ್ಯ ಮೇಲೆ ಪರಿಣಾಮ ಬೀರುತ್ತಿದೆ. ಈ ಹಿನ್ನೆಲೆಯಲ್ಲಿ ಹಂದಿ ಸಾಕಾಣಿಕೆ ಇರುವ ಪ್ರದೇಶವನ್ನು ಗುರುತಿಸಿ. ದಸರಾ ಹಬ್ಬದ ನಂತರ ಅವುಗಳನ್ನು ಹಿಡಿಯಲು ಕಾರ್ಯಪ್ರವೃತ್ತರಾಗಬೇಕು.
ಹಂದಿಗಳನ್ನು ಹಿಡಿಯುವ ಸಂದರ್ಭದಲ್ಲಿ ಹಂದಿ ಮಾಲೀಕರು ಎಂದು ಹೇಳಿಕೊಂಡು ಯಾರಾದರೂ ಮುಂದೆ ಬಂದು ಈ ಕಾರ್ಯಕ್ಕೆ ಅಡ್ಡಿಪಡಿಸಿದ್ದಲ್ಲಿ ನಿಯಮಾನುಸಾರ ಅಂತಹವರ ವಿರುದ್ಧ ಪಾಲಿಕೆಯಿಂದ ಕ್ರಿಮಿನಲ್‌ ಮೊಕದಮೆ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಿ ಎಂದರು. 

ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಶಿವಶರಣಪ್ಪ ನಂದಗಿರಿ, ಕಾರ್ಯನಿರ್ವಾಹಕ ಅಭಿಯಂತ ಶಿವಣಗೌಡ ಪಾಟೀಲ, ಸಹಾಯಕ ಕಾರ್ಯನಿರ್ವಾಹಕ ಅಭಿಯಂತ ಎಂ.ಎ.ಆರಿಫ್‌, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ತಾಂತ್ರಿಕ ಸಹಾಯಕ ಆರ್‌.ವಿ.ಪಾಟೀಲ, ಸಹಾಯಕ ಕಾರ್ಯನಿವಾಹಕ
ಅಭಿಯಂತರರಾದ ನರಸಿಂಹರೆಡ್ಡಿ, ಉಮೇಶ ಪಾಂಚಾಳ, ಮಹಾನಗರ ಪಾಲಿಕೆ ಕಾರ್ಯನಿರ್ವಾಹಕ ಅಭಿಯಂತ ರಂಗಯ್ಯ ಬಡಿಗೇರ, ಪರಿಸರ ಅಭಿಯಂತರರು ಹಾಗೂ ಇನ್ನಿತರ ಅಧಿಕಾರಿಗಳು ಹಾಜರಿದ್ದರು.

ಟಾಪ್ ನ್ಯೂಸ್

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೇವು?: ಖಂಡ್ರೆ

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.