ಡಿಸಿಸಿ ಬ್ಯಾಂಕ್‌ ಚುನಾವಣೆ: ನಾಮಪತ್ರ ಸಲ್ಲಿಕೆ ಮುಕ್ತಾಯ

Team Udayavani, Nov 22, 2020, 5:01 PM IST

ಡಿಸಿಸಿ ಬ್ಯಾಂಕ್‌ ಚುನಾವಣೆ: ನಾಮಪತ್ರ ಸಲ್ಲಿಕೆ ಮುಕ್ತಾಯ

ಕಲಬುರಗಿ: ಇದೇ ನ. 29ರಂದು ನಡೆಯುವ ಇಲ್ಲಿನ ಕಲಬುರಗಿ-ಯಾದಗಿರಿ ಜಿಲ್ಲಾ ಸಹಕಾರಿ ಕೇಂದ್ರ (ಡಿಸಿಸಿ) ಬ್ಯಾಂಕ್‌ನ 13 ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ 27 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ.

ನಾಮಪತ್ರ ಸಲ್ಲಿಕೆ ಕೊನೆ ದಿನವಾದ ಶನಿವಾರ ಅಭ್ಯರ್ಥಿಗಳು ಸರದಿಯಲ್ಲಿ ನಿಂತು ತಮ್ಮ ಬೆಂಬಲಿಗರೊಂದಿಗೆ ನಾಮಪತ್ರಸಲ್ಲಿಸಿದರು. ಅಭ್ಯರ್ಥಿಗಳ ನಾಮಪತ್ರ ಸಲ್ಲಿಸುವ ವೇಳೆ ಶಾಸಕರು, ಮಾಜಿ ಶಾಸಕರುಹಾಜರಿದ್ದು, ಬೆಂಬಲಿಸಿದರು. ಹೀಗಾಗಿ ಶನಿವಾರ ಇಡೀ ದಿನ ಬ್ಯಾಂಕ್‌ ಆವರಣಜನ ಜಂಗುಳಿಯಿಂದ ಕೂಡಿತ್ತು. ಒಬ್ಬೊಬ್ಬ ಅಭ್ಯರ್ಥಿಗಳು ಎರಡ್ಮೂರು ಪ್ರತಿಗಳಲ್ಲಿ ನಾಮಪತ್ರ ಸಲ್ಲಿಸಿದ್ದರಿಂದ ಒಟ್ಟಾರೆ 42 ನಾಮಪತ್ರಗಳು ಸಲ್ಲಿಕೆಯಾಗಿವೆ.

ಬ್ಯಾಂಕ್‌ನ ಹಾಲಿ ನಿರ್ದೇಶಕರಲ್ಲಿ ಬಹುತೇಕ ಎಲ್ಲರೂ ಸ್ಪರ್ಧಿಸಿದ್ದು,ಬ್ಯಾಂಕ್‌ಗೆ ಮತ್ತೆ ಲಗ್ಗೆ ಇಡುವಂತಾಗಿದೆ.ಕಳೆದ 20 ವರ್ಷಗಳಿಂದಲೂ ನಿರ್ದೇಶಕರಾಗಿದ್ದುಕೊಂಡವರೆ ಮತ್ತೆನಾಮಪತ್ರ ಸಲ್ಲಿಸಿರುವುದು ವಿಶೇಷವಾಗಿ ಕಂಡು ಬಂತು. ಹೊಸಬರು ಏಳೆಂಟು ಜನಮಾತ್ರ ನಾಮಪತ್ರ ಸಲ್ಲಿಸಿ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ.

ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ (ವಿಎಸ್‌ಎಸ್‌ಎನ್‌) ಸಂಘಗಳಿಂದ 10 ನಿರ್ದೇಶಕರು, ಟಿಎಪಿಸಿಎಂಗಳಿಂದ ಒಂದು, ಪಟ್ಟಣ ಸಹಕಾರಿ ಸಂಘಗಳಿಂದ ಒಂದುಹಾಗೂ ಇತರೆ ಸಹಕಾರಿ ಸಂಸ್ಥೆಗಳಿಂದಒಂದು ಸೇರಿ 13 ನಿರ್ದೇಶಕ ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದೆ.

ನಾಮಪತ್ರ ಸಲ್ಲಿಸಿದವರು: ಎ ವರ್ಗದಿಂದ ಅಂದರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ (ವಿಎಸ್‌ಎಸ್‌ಎನ್‌) ಸಂಘದ ಕ್ಷೇತ್ರಕ್ಕೆ ಕಲಬುರಗಿ ತಾಲೂಕಿನಿಂದ ಹಾಲಿ ನಿರ್ದೇಶಕ ಶರಣಬಸಪ್ಪ ಪಾಟೀಲ ಅಷ್ಠಗಾ ಹಾಗೂ ಕಲ್ಯಾಣರಾವ ಶಿವಶರಣಪ್ಪ ಮೂಲಗೆ ನಾಮಪತ್ರ ಸಲ್ಲಿಸಿದ್ದಾರೆ.ಜೇವರ್ಗಿ ತಾಲೂಕಿನಿಂದ ಹಾಲಿ ನಿರ್ದೇಶಕ ಕೇದಾರಲಿಂಗಯ್ಯ ಹಿರೇಮಠ, ನಿಂಗಣ್ಣ ಮಾಳಪ್ಪ ದೊಡ್ಡಮನಿ ಹಾಗೂ ಬಸವರಾಜ ಪ್ರಭುರಾಯ ಖಾನಗೌಡ್ರ,ಆಳಂದ ತಾಲೂಕಿನಿಂದ ಹಾಲಿ ನಿರ್ದೇಶಕ ಅಶೋಕ ಸಾವಳೇಶ್ವರ ಹಾಗೂ ಕಲ್ಲಪ್ಪ ಸಿದ್ರಾಮಪ್ಪ ಹತ್ತರಕಿ ನಾಮಪತ್ರ ಸಲ್ಲಿಸಿದ್ದಾರೆ.

ಚಿಂಚೋಳಿ ತಾಲೂಕಿನಿಂದ ಹಾಲಿ ನಿರ್ದೇಶಕ ಗೌತಮ ವೈಜನಾಥ ಪಾಟೀಲ, ಶೈಲೇಶಕುಮಾರ ಪ್ರಭುಲಿಂಗ ಹುಲಿ ನಾಮಪತ್ರ ಸಲ್ಲಿಸಿದ್ದಾರೆ. ಅಫ‌ಜಲಪುರ ತಾಲೂಕಿನಿಂದ ಮಹಾಂತಗೌಡ ಸಿದ್ದಣ್ಣಗೌಡ ಪಾಟೀಲ (ಎಸ್‌.ವೈ. ಪಾಟೀಲ ಪುತ್ರ) ಹಾಗೂ ಸೋಮನಾಥ ಶರಣಪ್ಪ ನೂಲಾ ನಾಮಪತ್ರ ಸಲ್ಲಿಸಿದ್ದು, ಚಿತ್ತಾಪುರ ತಾಲೂಕಿನಿಂದ ಬಸವರಾಜ ಅಣ್ಣಾರಾವ ಪಾಟೀಲ ಹೇರೂರ, ಭೀಮರೆಡ್ಡಿ ಮಲ್ಲಣ್ಣಗೌಡ ಕುರಾಳ ನಾಮಪತ್ರ ಸಲ್ಲಿಸಿದ್ದಾರೆ. ಸೇಡಂ ತಾಲೂಕಿನಿಂದ ಬಿ. ನಂದಕಿಶೋರ ರೆಡ್ಡಿ ಜನಾರ್ಧನರೆಡ್ಡಿ ಮಾತ್ರನಾಮಪತ್ರ ಸಲ್ಲಿಸಿದ್ದು, ಅವಿರೋಧವಾಗಿ ಆಯ್ಕೆಯಾಗುವ ಸಾಧ್ಯತೆಗಳಿವೆ.

ಯಾದಗಿರಿ ತಾಲೂಕಿನಿಂದ ಮಲ್ಲಿಕಾರ್ಜುನ ರೆಡ್ಡಿ ಕೌಳುರ ಮಾತ್ರ ನಾಮಪತ್ರ ಸಲ್ಲಿಸಿದ್ದು, ಇವರು ಅವಿರೋಧವಾಗಿ ಪುನರಾಯ್ಕೆಯಾಗಲಿದ್ದಾರೆ. ಶಹಾಪುರ ತಾಲೂಕಿನಿಂದ ಹಾಲಿ ನಿರ್ದೇಶಕ ಸಿದ್ರಾಮರೆಡ್ಡಿ ವಿ. ಪಾಟೀಲ ಹಾಗೂ ಗುರುನಾಥರೆಡ್ಡಿ ಪರ್ವತರೆಡ್ಡಿ ನಾಮಪತ್ರ ಸಲ್ಲಿಸಿದ್ದಾರೆ. ಸುರಪುರ ತಾಲೂಕಿನಿಂದ ಹಾಲಿ ನಿರ್ದೇಶಕ ಬಾಪುಗೌಡ ದುಂಡಪ್ಪಗೌಡ ಮಾತ್ರ ನಾಮಪತ್ರ ಸಲ್ಲಿಸಿದ್ದು, ಇವರೂ ಪುನರಾಯ್ಕೆಯಾಗಲಿದ್ದಾರೆ.

ಟಿಎಪಿಸಿಎಂ ಕ್ಷೇತ್ರದಿಂದ ಅಫ‌ಜಲಪುರ ತಾಲೂಕಿನಿಂದ ಶಿವಾನಂದ ಮಾನಕರ ಹಾಗೂ ಶಿವಮಾಂತಪ್ಪ ಹಣಮಂತರಾಯ ಶಹಾಪುರ ತಾಲೂಕಿನಿಂದ ಹಾಗೂ ಮಹ್ಮದ ಇಬ್ರಾಹಿಂ ಶಿರವಾಳ ನಾಮಪತ್ರ ಸಲ್ಲಿಸಿದ್ದಾರೆ. ಪಟ್ಟಣ ಸಹಕಾರಿ ಸಂಘಗಳ ಕ್ಷೇತ್ರದಿಂದ ಹಾಲಿ ನಿರ್ದೇಶಕ ಸೋಮಶೇಖರ ಗೋನಾಯಕ ಹಾಗೂ ಸಾವಿತ್ರಿ ಶಿವಶರಣಪ್ಪ ಕುಳಗೇರಿ ನಾಮಪತ್ರ ಸಲ್ಲಿಸಿದ್ದಾರೆ. ಇನ್ನುಳಿದಂತೆ ಇತರೆ ಸಹಕಾರಿ ಸಂಸ್ಥೆಗಳಿಂದಸುರೇಶ ಸಜ್ಜನ, ಬಸವರಾಜ ಮಲ್ಲಪ್ಪ ಪೂಜಾರಿ ಕೂಟನೂರ, ಹಾಗೂ ಗುರುಬಸಪ್ಪ ಮಲ್ಲಿಕಾರ್ಜುನ ಪಾಟೀಲ್‌,ಕಲ್ಯಾಣಪ್ಪ ಶಿವಶರಣಪ್ಪ ಜೇವರ್ಗಿ ನಾಮಪತ್ರ ಸಲ್ಲಿಸಿದ್ದಾರೆ.

ನಾಲ್ವರು ಅವಿರೋಧಾಯ್ಕೆ: ಎಲ್ಲರೂ ಕಾಂಗ್ರೆಸ್ಸಿಗರು : ಯಾದಗಿರಿ ತಾಲೂಕಿನಿಂದ ಹಾಲಿ ನಿರ್ದೇಶಕ, ಬ್ಯಾಂಕ್‌ನ ಮಾಜಿ ಅಧ್ಯಕ್ಷ ಮಲ್ಲಿಕಾರ್ಜುನರೆಡ್ಡಿ ಕೌಳುರ, ಸೇಡಂ ತಾಲೂಕಿನಿಂದ ಬಿ. ನಂದಕಿಶೋರ ರೆಡ್ಡಿ ಜನಾರ್ಧನರೆಡ್ಡಿ, ಅಫ‌ಜಲಪುರ ತಾಲೂಕಿನಿಂದ ಮಹಾಂತಗೌಡ ಸಿದ್ದಣ್ಣಗೌಡ ಪಾಟೀಲ ಹಾಗೂ ಸುರಪುರ ತಾಲೂಕಿನಿಂದ ಹಾಲಿ ನಿರ್ದೇಶಕ ಬಾಪುಗೌಡ ದುಂಡಪ್ಪಗೌಡ ಅವಿರೋಧವಾಗಿ ಆಯ್ಕೆಯಾಗಲಿದ್ದು, ಅಧಿಕೃತ ಪ್ರಕಟಣೆ ಮಾತ್ರ ಬಾಕಿ ಉಳಿದಿದೆ. ಈ ನಾಲ್ವರೂ ಕಾಂಗ್ರೆಸ್‌ನವರಾಗಿದ್ದಾರೆ. ಒಟ್ಟಾರೆ 13 ನಿರ್ದೇಶಕ ಸ್ಥಾನಗಳಲ್ಲಿ ಕಾಂಗ್ರೆಸ್‌ ನಾಲ್ಕು ಸ್ಥಾನ ಪಡೆದಂತಾಗಿದೆ.

ಟಾಪ್ ನ್ಯೂಸ್

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.