ಡಿ. 2ರಂದು ನಟ ರಿಷಬ್ ಶೆಟ್ಟಿಗೆ ಸಿದ್ದಶ್ರೀ ಪ್ರಶಸ್ತಿ ಪ್ರದಾನ
Team Udayavani, Nov 27, 2022, 8:15 AM IST
ಕಲಬುರಗಿ: ಕಾಂತಾರ ಖ್ಯಾತಿಯ ನಟ, ನಿರ್ದೇಶಕ ರಿಷಬ್ ಶೆಟ್ಟಿ ಅವರಿಗೆ ಡಿ.2ರಂದು ನಡೆಯಲಿರುವ ಶ್ರೀ ಷಡಕ್ಷರಿ ಶಿವಯೋಗಿ ಡಾ| ಮುರುಘ ರಾಜೇಂದ್ರ ಮಹಾ ಸ್ವಾಮಿಗಳ 38ನೇ ಗುರು ವಂದನಾ ಮಹೋತ್ಸವದಲ್ಲಿ ರಾಷ್ಟ್ರ ಮಟ್ಟದ ಸಿದ್ಧಶ್ರೀ ಪ್ರಶಸ್ತಿ ನೀಡಿ ಗೌರವಿಸ ಲಾಗುವುದು ಎಂದು ಗುರುವಂದನ ಸ್ವಾಗತ ಸಮಿತಿ ಗೌರವ ಅಧ್ಯಕ್ಷ ಅಭಿನವ ಶಿವಲಿಂಗ ಸ್ವಾಮೀಜಿ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 38ನೇ ಗುರುವಂದನೆ ಮಹೋತ್ಸವದ ಅಂಗವಾಗಿ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ. ಡಿ.1ರಂದು ಮುಗಳಖೋಡ ಶ್ರೀಮಠದ ಗೋ ಶಾಲೆಯಲ್ಲಿ 38 ಗೋಮಾತೆ ಪೂಜೆ ನೆರವೇರಿಸಲಾಗುವುದು. ಪರಿಸರ ಕಾಳಜಿಯ ಹಿನ್ನೆಲೆಯಲ್ಲಿ 5 ಸಾವಿರ ಸಸಿಗಳನ್ನು ನೆಡಲಾಗುವುದು.
ಮಹೋತ್ಸವದಲ್ಲಿ ಹರ-ಗುರು-ಚರ ಮೂರ್ತಿಗಳು ರಾಜಕೀಯ ಧುರೀಣರು ಉಪಸ್ಥಿತರಿರಲಿದ್ದು, ಐದು ರಾಜ್ಯಗಳಿಂದ 1.5 ಲಕ್ಷಕ್ಕೂ ಅಧಿಕ ಭಕ್ತರು ಪಾಲ್ಗೊಳ್ಳಲಿದ್ದಾರೆ. ಖ್ಯಾತ ಸಾಹಿತಿಗಳಾದ ವಿ.ನಾಗೇಂದ್ರ ಪ್ರಸಾದ ಮತ್ತು ಡಾ|ಶಿವಶಂಕರಪ್ಪ ಸಾಹುಕಾರ, ಕೆಪಿಎಸ್‌ಸಿ ಚೇರ್ಮನ್ ಅವರನ್ನು ವಿಶೇಷವಾಗಿ ಗೌರವಿಸಲಾಗುವುದು. ಸಂಜೆ ಖ್ಯಾತ ಹಿನ್ನೆಲೆ ಗಾಯಕರಾದ ವಿಜಯ ಪ್ರಕಾಶ ತಂಡದಿಂದ ಸ್ವರ ಸಂಗೀತ ಸಂಭ್ರಮ ಹಾಗೂ ಗುರುವಂದನ ಮಹೋತ್ಸವ ಹಾಗೂ ವಿವಿಧ ಸಾಂಸ್ಕೃತಿಕ ಕಲಾ ತಂಡಗಳಿಂದ ವಿಶೇಷ ಪ್ರತಿಭೆಗಳು ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಆರ್ ಟಿಐ ಕಾರ್ಯಕರ್ತ ಸಾಯಿದತ್ತ ನಿಧನ
ಹಾಲಿ ಶಾಸಕರಿಗೆ ಟಿಕೆಟ್ ಪಕ್ಕಾ: ಆಕಾಂಕ್ಷಿಗಳಲ್ಲಿ ತಳಮಳ
ಹಿರಿಯ-ಕಿರಿಯ ಶಾಲೆಗಳ ವಿಲೀನ ಹತ್ತಿರದಲ್ಲಿರುವ ಶಾಲೆಗಳನ್ನು ಒಂದೆಡೆ ಸೇರಿಸಿ
ದಾವಣಗೆರೆಯಲ್ಲಿ ಕೇಸರಿ ಮಹಾಸಂಗಮ: ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ನಿರ್ಧಾರ
ರಾಜ್ಯಕ್ಕೆ ಬಂಪರ್: ಬಜೆಟ್ನಲ್ಲಿ ನೈಋತ್ಯ ರೈಲ್ವೇಗೆ 9,200 ಕೋ.ರೂ. ಅನುದಾನ
MUST WATCH
ಮಿಸ್ಟರ್ ಬೀನ್ ಈಗ ಎಲ್ಲಿದ್ದಾರೆ? ಹೇಗಿದ್ದಾರೆ |ಯಾರು ಈ ಮಿಸ್ಟರ್ ಬೀನ್ ?
ಮಲ್ಪೆ ಮೀನಿನ ಮಾರುಕಟ್ಟೆ ಹೇಗೆದೆ ನೋಡಿ | ಯಾವ ಮೀನಿಗೆ ಎಷ್ಟು ಬೆಲೆ ?
ವಿದ್ಯಾರ್ಥಿ ಭವನ್ ವೈಟರ್ ಸಾಹಸಕ್ಕೆ ಆನಂದ್ ಮಹೀಂದ್ರ ಫುಲ್ ಖುಷ್; ಇಲ್ಲಿದೆ ವಿಡಿಯೋ
ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು
ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ
ಹೊಸ ಸೇರ್ಪಡೆ
ನಾದಿನಿಗೆ ದೈಹಿಕ, ವರದಕ್ಷಿಣೆ ಕಿರುಕುಳ: ಡ್ಯಾನ್ಸರ್ ಸ್ವಪ್ನ ಚೌಧರಿ, ಕುಟುಂಬದ ವಿರುದ್ಧ FIR
ಗುಪ್ತಚರ ಇಲಾಖೆ ನಿರ್ದೇಶಕರ ಮನೆಯಲ್ಲಿ ಸಿಆರ್ ಪಿಎಫ್ ಜವಾನ್ ಗುಂಡು ಹಾರಿಸಿಕೊಂಡು ಆತ್ಮಹತ್ಯೆ
ಅಡೆತಡೆಗಳ ದಾಟಿ ಗೆದ್ದ ‘ತನುಜಾ’
ಮೋದಿ ಉತ್ತರಾಧಿಕಾರಿಯಾಗುತ್ತಾರಾ ಯು.ಪಿ ಸಿಎಂ?: ಯೋಗಿ ಆದಿತ್ಯನಾಥ್ ಹೇಳುವುದೇನು?
ದೇಶದ ಮೊದಲ ಪ್ರಕರಣ: ಮಗುವಿನ ನಿರೀಕ್ಷೆಯಲ್ಲಿ ತೃತೀಯ ಲಿಂಗಿ ದಂಪತಿ