ಕೊರೊನಾ ಇಳಿಕೆ; ಚಟುವಟಿಕೆಗಳಿಗೆ ಮತ್ತ ಷ್ಟು ಸಡಿಲಿಕೆ


Team Udayavani, Oct 26, 2021, 9:30 AM IST

1josna

ಕಲಬುರಗಿ: ಜಿಲ್ಲೆಯಲ್ಲಿ ಕೋವಿಡ್‌ ಸೋಂಕಿನ ಪ್ರಮಾಣ ಇಳಿಕೆ ಹಿನ್ನೆಲೆಯಲ್ಲಿ ಮತ್ತುಷ್ಟು ಚಟುವಟಿಕೆಗಳಿಗೆ ಸಡಿಲಿಕೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ವಿ.ವಿ. ಜ್ಯೋತ್ಸ್ನಾ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಕೊರೊನಾ ಸೋಂಕು ಹರಡದಂತೆ ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ಪರಿಪಾಲನೆ ಮಾಡುವುದರೊಂದಿಗೆ ಕೆಲವು ಚಟುವಟಿಕೆಗಳಿಗೆ ಸಡಿಲಿಕೆ ನೀಡಲಾಗಿದೆ. ಅ.17ರಂದು ತಾಂತ್ರಿಕ ಸಲಹಾ ಸಮಿತಿಯು ರಾಜ್ಯದ ಕೋವಿಡ್‌-19 ಪರಿಸ್ಥಿತಿಯನ್ನು ಪರಿಶೀಲಿಸಲಾಗಿದೆ. ಸಕ್ರಿಯ ಪ್ರಕರಣಗಳು ಸತತವಾಗಿ ಇಳಿಕೆಯಾಗುತ್ತಿರುವುದನ್ನು ಗಮನಿಸಿ ಹೆಚ್ಚಿನ ಚಟುವಟಿಕೆಗಳನ್ನು ಪುನರಾರಂಭಿಸಲು ಶಿಫಾರಸ್ಸು ಮಾಡಿದೆ ಎಂದು ಹೇಳಿದ್ದಾರೆ.

ಜಿಲ್ಲೆಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಆಗಮನದ ಅವಕಾಶ ನೀಡಲಾಗಿದೆ. ಕೇಂದ್ರ ಸರ್ಕಾರದ ನಿಯಮಗಳ ಪ್ರಕಾರ ಆರ್‌ಟಿ-ಪಿಸಿಆರ್‌ ಪರೀಕ್ಷಾ ವರದಿ ಪರಿಶೀಲನೆ ಸ್ಥಗಿತಗೊಳಿಸುವುದು. ಬದಲಾಗಿ ಪ್ರಯಾಣಿಕರು ಏರ್‌ ಸುವಿಧಾ ಪೋರ್ಟಲ್‌ನಲ್ಲಿ (ಆರ್‌ಟಿ-ಪಿಸಿಆರ್‌) ಪರೀಕ್ಷಾ ವರದಿಯನ್ನು ಕಡ್ಡಾಯವಾಗಿ ಅಪ್‌ಲೋಡ್‌ ಮಾಡಬೇಕು ಮತ್ತು ಈ ವರದಿಯನ್ನು ಪ್ರಯಾಣಿಕರು ಹೊರಡುವ ಮುಂಚಿತವಾಗಿ ಸಂಬಂಧಪಟ್ಟ ವಿಮಾನಯಾನ ಸಂಸ್ಥೆಗಳು ಪರೀಕ್ಷಿಸಿಕೊಳ್ಳುವುದು. ಸ್ವಯಂ ಚಾಲಿತ ಥರ್ಮಲ್‌ ಕ್ಯಾಮರಾಗಳ ಮೂಲಕ ಪ್ರಯಾಣಿಕರ ಮೇಲ್ವಿಚಾರಣೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಟಾಲಿವುಡ್‌ ನಲ್ಲಿ ಶ್ರೀಲೀಲಾಗೆ ಬೇಡಿಕೆ

ಶಾಲೆಗಳ ಆರಂಭ ಹಿನ್ನೆಲೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯಿಂದ ಹೊರಡಿಸಲಾಗುವ ಪ್ರಮಾಣಿತ ಕಾರ್ಯ ವಿಧಾನಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಭೌತಿಕ ತರಗತಿಗಳಿಗೆ ಹಾಜರಾಗಲು ಪೋಷಕರ ಒಪ್ಪಿದ ಪತ್ರ ಪಡೆಯುವುದು ಕಡ್ಡಾಯಗೊಳಿಸಲಾಗಿದೆ. ಶಾಲೆಯ ಪ್ರವೇಶ ದ್ವಾರಗಳಲ್ಲಿ ಕೊರೊನಾ ಲಕ್ಷಣಗಳ ತಪಾಸಣೆ, ತರಗತಿ ಕೋಣೆಗಳ ಸಾಮರ್ಥ್ಯದ ಶೇ.50ರಷ್ಟು ಮಾತ್ರ ಭರ್ತಿ ಮಾಡಬೇಕು. ಹ್ಯಾಂಡ್‌ ಸ್ಯಾನಿಟೈಸರ್‌ಗಳನ್ನು ಒದಗಿಸುವುದು, ಪ್ರಾಯೋಗಿಕವಾಗಿ ಸಾಧ್ಯವಾಗುವಂತೆ ಕನಿಷ್ಟ ಒಂದು ಮೀಟರ್‌ ದೈಹಿಕ ಅಂತರ ಕಾಪಾಡಿಕೊಳ್ಳಬೇಕು. ಪ್ರಮುಖವಾಗಿ ಶಾಲಾ ಪ್ರವೇಶ ಮತ್ತು ನಿರ್ಗಮನದ ಸ್ಥಳಗಳಲ್ಲಿ ಜನದಟ್ಟಣೆ ಉಂಟಾಗದಂತೆ ಕ್ರಮವಹಿಸಬೇಕೆಂದು ಸೂಚಿಸಲಾಗಿದೆ.

ಕೆಲವು ಷರತ್ತುಗೊಳಪಟ್ಟು ಈಜುಕೊಳ ಆರಂಭಿಸಲು ಅನುಮತಿ ನೀಡಲಾಗಿದ್ದು, ಪ್ರತಿ ತಂಡದ ಶೇ.50ರಷ್ಟು ಸಾಮರ್ಥ್ಯಕ್ಕೆ ಅನುಮತಿಸಬೇಕು. ಪ್ರವೇಶ ದ್ವಾರಗಳಲ್ಲಿ ಅನುಮತಿಸಬಹುದಾದ ಈಜುಗಾರರ ಸಂಖ್ಯೆಯನ್ನು ಪ್ರದರ್ಶಿಸಬೇಕು. ಪ್ರವೇಶ ದ್ವಾರದಲ್ಲಿ ಎಲ್ಲ ರೀತಿಯ ಜ್ವರ ಮತ್ತು ಉಸಿರಾಟದ ಲಕ್ಷಣಗಳನ್ನು ಪರೀಕ್ಷಿಸಬೇಕು. ಯಾವುದೇ ರೋಗಲಕ್ಷಣಗಳು ಇಲ್ಲದವರಿಗೆ ಮತ್ತು ಎರಡು ಡೋಸ್‌ ಕೋವಿಡ್‌ 19 ಲಸಿಕೆ ಪಡೆದ ಪ್ರಮಾಣ ಪತ್ರ ಹೊಂದಿದವರಿಗೆ ಮಾತ್ರ ಅವಕಾಶ ನೀಡಬೇಕು. ಪ್ರತಿ ತಂಡದ ನಂತರ – ಈಜುಗಾರರು ಬಳಸುವ ವಿಶ್ರಾಂತಿ ಕೊಠಡಿಗಳು, ಕಾಲುದಾರಿಗಳು ಮತ್ತು ಇತರೆ ಸಾಮಾನ್ಯ ಸ್ಥಳಗಳನ್ನು ಸೋಡಿಯಂ ಹೈಪೋಕ್ಲೋರೈಟ್‌ ಮಿಶ್ರಿತ ದಾವಣನಿಂದ ಸೋಂಕು ರಹಿತಗೊಸಬೇಕು ಎಂದು ಅವರು ತಿಳಿಸಿದ್ದಾರೆ.

ಕಿರಿಯ ಪ್ರಾಥಮಿಕ ಶಾಲೆಗಳು ಆರಂಭವಾದ ಹಿನ್ನೆಲೆಯಲ್ಲಿ ಎರಡು ಡೋಸ್‌ ಕೋವಿಡ್‌ ಲಸಿಕೆ ಪಡೆದಂತಹ ಶಿಕ್ಷಕರು ಮತ್ತು ಸಿಬ್ಬಂದಿಗೆ ಮಾತ್ರ 1ರಿಂದ 5ನೇ ತರಗತಿ ಕೊಠಡಿಗಳಿಗೆ ಪ್ರವೇಶಿಸಲು ಅವಕಾಶ ಕಲ್ಪಿಸಬೇಕು. 50 ವರ್ಷಕ್ಕಿಂತ ಮೇಲ್ಪಟ್ಟ ಶಿಕ್ಷಕರು ಕಡ್ಡಾಯವಾಗಿ ಫೇಸ್‌ ಶೀಲ್ಡ್‌ ಬಳಸಬೇಕು. -ವಿ.ವಿ.ಜ್ಯೋತ್ಸ್ನಾ, ಜಿಲ್ಲಾಧಿಕಾರಿ

ಟಾಪ್ ನ್ಯೂಸ್

ವಿಶ್ವ ಚಾಂಪಿಯನ್‌ಶಿಪ್‌: ಮೊದಲ ಬಾರಿ ಸೈನಾ ನೆಹ್ವಾಲ್‌ ಗೈರು

ವಿಶ್ವ ಚಾಂಪಿಯನ್‌ಶಿಪ್‌: ಮೊದಲ ಬಾರಿ ಸೈನಾ ನೆಹ್ವಾಲ್‌ ಗೈರು

ಜೂನಿಯರ್‌ ವಿಶ್ವಕಪ್‌ ಹಾಕಿ: ಭಾರತ ಸೆಮಿಫೈನಲ್‌ಗೆ ಲಗ್ಗೆ

ಜೂನಿಯರ್‌ ವಿಶ್ವಕಪ್‌ ಹಾಕಿ: ಭಾರತ ಸೆಮಿಫೈನಲ್‌ಗೆ ಲಗ್ಗೆ

ನವೆಂಬರ್‌ ಜಿಎಸ್‌ಟಿ ಸಂಗ್ರಹ 1.31 ಲಕ್ಷ ಕೋ.ರೂ.

ನವೆಂಬರ್‌ ಜಿಎಸ್‌ಟಿ ಸಂಗ್ರಹ 1.31 ಲಕ್ಷ ಕೋ.ರೂ.

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌100 ರೂ. ಏರಿಕೆ

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌100 ರೂ. ಏರಿಕೆ

ಕತ್ರಿನಾ-ವಿಕ್ಕಿ ಮದುವೆ ಆಹ್ವಾನಿತರಿಗೆ ಇದೆಯಂತೆ ಟಫ್ ರೂಲ್ಸ್‌

ಕತ್ರಿನಾ-ವಿಕ್ಕಿ ಮದುವೆ ಆಹ್ವಾನಿತರಿಗೆ ಇದೆಯಂತೆ ಟಫ್ ರೂಲ್ಸ್‌

ವೃದ್ಧರೇ ಅಂತರಾಷ್ಟ್ರೀಯ ಪ್ರಯಾಣ ಮುಂದೂಡಿ : ವಿಶ್ವ ಆರೋಗ್ಯ ಸಂಸ್ಥೆಯಿಂದಲೇ ಎಚ್ಚರಿಕೆ

ವೃದ್ಧರೇ ಅಂತರಾಷ್ಟ್ರೀಯ ಪ್ರಯಾಣ ಮುಂದೂಡಿ : ವಿಶ್ವ ಆರೋಗ್ಯ ಸಂಸ್ಥೆಯಿಂದಲೇ ಎಚ್ಚರಿಕೆ

ಬಿಹಾರದ ದೇಗುಲಗಳಿಗೆ ಶೇ. 4 ತೆರಿಗೆ! ರಾಜ್ಯ ಸರ್ಕಾರದ ನಿರ್ಧಾರ

ಬಿಹಾರದ ದೇಗುಲಗಳಿಗೆ ಶೇ. 4 ತೆರಿಗೆ! ರಾಜ್ಯ ಸರ್ಕಾರದ ನಿರ್ಧಾರಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಈಶ್ವರಪ್ಪ

ಹೈಕಮಾಂಡ್ ನಿಂದ ಸಚಿವರ ರಹಸ್ಯ ವರದಿ ವಿಚಾರ ನನಗೆ ಗೊತ್ತಿಲ್ಲ: ಈಶ್ವರಪ್ಪ

11police’

ಅಬಕಾರಿ ದಾಳಿ: 1 ಲಕ್ಷ ಮೌಲ್ಯದ ಮದ್ಯ ಜಪ್ತಿ

10crop

ಬೆಳೆ ಹಾನಿ; ಎಕರೆಗೆ 40 ಸಾವಿರ ನೀಡಲು ರೈತರ ಆಗ್ರಹ

8bankloan

ಸಾಲ ಪಡೆಯಲು ಜನಜಂಗುಳಿ

7devolop

ವಿಜ್ಞಾನ ಬೆಳವಣಿಗೆಗೆ ಕೊಡುಗೆ ನೀಡಿ: ಅಗಸರ

MUST WATCH

udayavani youtube

ಜಡೇಜಾಗಾಗಿ ಮೊದಲ ಸ್ಥಾನವನ್ನೇ ಬಿಟ್ಟುಕೊಟ್ಟ ಮಾಹಿ

udayavani youtube

ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಕಾಡಿನಲ್ಲಿ ಹೂತಿಟ್ಟ ರೀತಿಯಲ್ಲಿ ಪತ್ತೆ, ಕೊಲೆ ಶಂಕೆ

udayavani youtube

ತುಂಗಭದ್ರಾ ನದಿಯಿಂದ ಹಳ್ಳಗಳಿಗೆ ಬಂದ ಮೊಸಳೆ! ಜನರಲ್ಲಿ ಆತಂಕ

udayavani youtube

ದಾಂಡೇಲಿ :ತಹಶೀಲ್ದಾರ್ ಕಚೇರಿ ಆವರಣದಲ್ಲಿ ಎರಡು ತಂಡಗಳ ನಡುವೆ ಹೊಡೆದಾಟ

udayavani youtube

ಮನೆ ಮಂದಿ ಬರುವಿಕೆಗಾಗಿ ದಾಂಡೇಲಿಯ ಬಸ್ ನಿಲ್ದಾಣದಲ್ಲಿ ಕಾಯುತ್ತಿರುವ ವಯೋವೃದ್ದೆ

ಹೊಸ ಸೇರ್ಪಡೆ

ವಿಶ್ವ ಚಾಂಪಿಯನ್‌ಶಿಪ್‌: ಮೊದಲ ಬಾರಿ ಸೈನಾ ನೆಹ್ವಾಲ್‌ ಗೈರು

ವಿಶ್ವ ಚಾಂಪಿಯನ್‌ಶಿಪ್‌: ಮೊದಲ ಬಾರಿ ಸೈನಾ ನೆಹ್ವಾಲ್‌ ಗೈರು

ಜೂನಿಯರ್‌ ವಿಶ್ವಕಪ್‌ ಹಾಕಿ: ಭಾರತ ಸೆಮಿಫೈನಲ್‌ಗೆ ಲಗ್ಗೆ

ಜೂನಿಯರ್‌ ವಿಶ್ವಕಪ್‌ ಹಾಕಿ: ಭಾರತ ಸೆಮಿಫೈನಲ್‌ಗೆ ಲಗ್ಗೆ

ನವೆಂಬರ್‌ ಜಿಎಸ್‌ಟಿ ಸಂಗ್ರಹ 1.31 ಲಕ್ಷ ಕೋ.ರೂ.

ನವೆಂಬರ್‌ ಜಿಎಸ್‌ಟಿ ಸಂಗ್ರಹ 1.31 ಲಕ್ಷ ಕೋ.ರೂ.

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌100 ರೂ. ಏರಿಕೆ

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌100 ರೂ. ಏರಿಕೆ

ಕತ್ರಿನಾ-ವಿಕ್ಕಿ ಮದುವೆ ಆಹ್ವಾನಿತರಿಗೆ ಇದೆಯಂತೆ ಟಫ್ ರೂಲ್ಸ್‌

ಕತ್ರಿನಾ-ವಿಕ್ಕಿ ಮದುವೆ ಆಹ್ವಾನಿತರಿಗೆ ಇದೆಯಂತೆ ಟಫ್ ರೂಲ್ಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.