ತಾಂಡಾ ಅಭಿವೃದ್ಧಿಗೆ ಸಂಕಲ್ಪ

Team Udayavani, Feb 13, 2017, 2:55 PM IST

gul1.jpg

ಸೇಡಂ: ತಾಲೂಕಿನಲ್ಲಿರುವ 50ಕ್ಕೂ ಹೆಚ್ಚು ತಾಂಡಾಗಳ ಸರ್ವತೋಮುಖ ಅಭಿವೃದ್ಧಿಗೆ ಸಂಕಲ್ಪ ಮಾಡಿದ್ದೇವೆ ಎಂದು ವೈದ್ಯಕೀಯ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವರಿ ಸಚಿವ ಡಾ| ಶರಣಪ್ರಕಾಶ ಪಾಟೀಲ ಹೇಳಿದರು. ಬೊಂದೆಂಪಲ್ಲಿಯ ಇಂದಿರಾನಗರ ತಾಂಡಾದಲ್ಲಿ ಗ್ರಾಮ ವಿಕಾಸ ಯೋಜನೆ ಅಡಿ ವಿವಿಧ ಕಾಮಗಾರಿಗಳಿಗೆ ಅಡಿಗಲ್ಲು ಸಮಾರಂಭ ನೆರವೇರಿಸಿ ಮಾತನಾಡಿದರು.

ತಾಲೂಕಿನಲ್ಲಿರುವ ಎಲ್ಲ ತಾಂಡಾಗಳಿಗೆ ನೀರು, ವಿದ್ಯುತ್‌, ರಸ್ತೆ ಸೇರಿದಂತೆ ಎಲ್ಲ ಮೂಲಭೂತ ಸೌಲಭ್ಯ ಒದಗಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು. ಗ್ರಾಮ ವಿಕಾಸ ಯೋಜನೆ ಅಡಿ ಬೊಂದೆಂಪಲ್ಲಿ ವ್ಯಾಪ್ತಿಯಲ್ಲಿ ಬರುವ ಫಸಲಾದಿ ತಾಂಡಾ, ಗೋಪ್ಯಾನಾಯಕ ತಾಂಡಾ, ಕಾರಬಾರಿ ತಾಂಡಾ, ಬಾಲ್ಯನಾಯಕ ತಾಂಡಾ, ವೆಂಕಟಾಪುರ ತಾಂಡಾಗಳಿಗೆ ಆಟದ ಮೈದಾನ, ರಂಗ ಮಂದಿರ ನಿರ್ಮಾಣ, ಸೌರ ಬೆಳಕು ದೀಪಗಳ ಅಳವಡಿಕೆ, ದೇವಾಲಯಗಳ ಕಟ್ಟೆ ನಿರ್ಮಾಣ ಕಾಮಗಾರಿಗಳಿಗಾಗಿ 75 ಲಕ್ಷ ರೂ. ಅನುದಾನ ಬಿಡುಗಡೆಗೊಳಿಸಲಾಗಿದೆ ಎಂದು ಹೇಳಿದರು. 

ತಾಂಡಾ ಜನರು ಶ್ರಮ ಜೀವಿಗಳಾಗಿದ್ದು, ಗಂಗಾ ಕಲ್ಯಾಣ ಸೇರಿದಂತೆ ಸರ್ಕಾರದಿಂದ ಸಿಗುವ ಎಲ್ಲ ಯೋಜನೆಗಳನ್ನು ಸದುಪಯೋಗ ಮಾಡಿಕೊಳ್ಳಿ ಎಂದರು. ಹೈ.ಕ. ಭಾಗದ ಅಭಿವೃದ್ಧಿಗಾಗಿ 371 (ಜೆ) ನೇ ಕಲಂ ಅನುಷ್ಠಾನಗೊಳಿಸಿದ್ದು, ಕೋಲಕುಂದಾ ಗ್ರಾಮದ ತಾಂಡಾದ ನಿವಾಸಿಗೆ 371 (ಜೆ) ಕಲಂ ಅಡಿಯಲ್ಲಿ ಎಂಬಿಬಿಎಸ್‌ ಸೀಟು ಲಭ್ಯವಾಗಿದೆ. ಹೀಗಾಗಿ ಪಾಲಕರು ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ಕೊಡಿಸಲು ಮುಂದಾಗಬೇಕು ಎಂದರು.

ಜಿಲ್ಲಾ ಪಂಚಾಯತ ಸದಸ್ಯ ದಾಮೋದರರೆಡ್ಡಿಪಾಟೀಲ ಸಿಲಾರಕೋಟ, ಗ್ರಾಪಂ ಅಧ್ಯಕ್ಷ ಕವಿತಾಬಾಯಿ ನಂದಕುಮಾರ, ಉಪಾಧ್ಯಕ್ಷ ಗೋವರ್ಧನರೆಡ್ಡಿ ಲಿಂಗಂಪಲ್ಲಿ, ತಾಪಂ ಉಪಾಧ್ಯಕ್ಷೆ ರೇಣುಕಾ, ಎಪಿಎಂಸಿ ಮಾಜಿ ಅಧ್ಯಕ್ಷ ಸತೀಶರೆಡ್ಡಿಪಾಟೀಲ ರಂಜೋಳ, ಸೈಯ್ಯದ ನಾಜೀಮೋದ್ದೀನ, ಜಯಪಾಲರೆಡ್ಡಿ ಮೋತಕಪಲ್ಲಿ, ಸದಾಶಿವರೆಡ್ಡಿ ಗೋಪಾನಪಲ್ಲಿ, ರಾಜಶೇಖರ ಪುರಾಣಿಕ, ಕರಭೂಪಾಲ ಕಾನಾಗಡ್ಡಾ, ಸಿದ್ಸಯ್ಯಸ್ವಾಮಿ ನಾಡೇಪಲ್ಲಿ, 

ವಿ.ವಿ. ಕಲಬುರ್ಗಿ, ಎಇಇ ಪಲ್ಲಾ ಲಕ್ಷಿಕಾಂತರೆಡ್ಡಿ, ಎಇ ವಿಜಯದಶರಥ ಸಂಗನ, ಖುನ್ಯಾನಾಯಕ, ಹಣ್ಮಂತರೆಡ್ಡಿ, ಗೌರಿಬಾಯಿ, ಬಾಬಾ ಲಿಂಗಂಪಲ್ಲಿ, ಸಿಡಿಪಿಒ  ಅಶೋಕರಾಜನ, ಹೇಮ್ಲಾನಾಯಕ, ಸತ್ಯನಾರಾಯಣರೆಡ್ಡಿ ಜಿಲ್ಲೇಡಪಲ್ಲಿ, ವೆಂಕಟರಾವ ಖೇವಜಿ, ಚಂದ್ರಪ್ಪ ಮಡಗು, ಮುರುಳೀದರರೆಡ್ಡಿ ಕೊಂತನಪಲ್ಲಿ, ನ್ಯಾಯವಾದಿ ಚಂದ್ರಪ್ಪ ಯಾದವ, ಭೀಮರೆಡ್ಡಿ ದೇವಡಿ ಸಿಲಾರಕೋಟ, ನವೀನ ರಾಜೋಳ್ಳ, ಇಸ್ಮಾಯಿಲ್‌ ಇದ್ದರು. 

ಮನವಿ: ಲಿಂಗಂಪಲ್ಲಿ ಗ್ರಾಪಂ ವ್ಯಾಪ್ತಿಯಲ್ಲಿ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ವಸತಿ ಶಾಲೆ ಪ್ರಾರಂಭಿಸುವಂತೆ ಹಣ್ಮಂತರೆಡ್ಡಿ ಬೊಂದೆಂಪಲ್ಲಿ ಸಚಿವ ಡಾ| ಶರಣಪ್ರಕಾಶ ಪಾಟೀಲ ಅವರಿಗೆ ಮನವಿ ಪತ್ರ ಸಲ್ಲಿಸಿದರು.  

ಟಾಪ್ ನ್ಯೂಸ್

2

Viral Video: ಎಂಜಲು ಉಗುಳಿ ಗ್ರಾಹಕನಿಗೆ ಫೇಸ್‌ ಮಸಾಜ್‌ ಮಾಡಿದ್ದ ಕ್ಷೌರಿಕ ಬಂಧನ

1

ಐ ಮಿಸ್‌ ಯೂ ಅಪ್ಪಾ.. ನೀವು ಯಾವಾಗಲೂ ನನ್ನ ಹೀರೋ.. ದರ್ಶನ್‌ ಪುತ್ರನಿಂದ ಮತ್ತೊಂದು ಪೋಸ್ಟ್

Michigan; ವಾಟರ್ ಪಾರ್ಕ್ ನಲ್ಲಿ ಗುಂಡಿನ ಮಳೆಗರೆದ ಬಂದೂಕುಧಾರಿ; ಮಗು ಸೇರಿ ಹಲವರಿಗೆ ಗಾಯ

Michigan; ವಾಟರ್ ಪಾರ್ಕ್ ನಲ್ಲಿ ಗುಂಡಿನ ಮಳೆಗರೆದ ಬಂದೂಕುಧಾರಿ; ಮಗು ಸೇರಿ ಹಲವರಿಗೆ ಗಾಯ

2-lungs

Lung Health: ಶ್ವಾಸಕೋಶಗಳ ಆರೋಗ್ಯದಲ್ಲಿ ವಿಟಮಿನ್‌ಗಳ ಪಾತ್ರ

200 days of shooting for yash toxic movie

Yash ಟಾಕ್ಸಿಕ್‌ ಸಿನಿಮಾ 200 ದಿನಗಳ ಶೂಟಿಂಗ್‌; ಬಹುತೇಕ ಲಂಡನ್ ನಲ್ಲಿ ಚಿತ್ರೀಕರಣ

T20 WC: ಹೋರಾಡಿ ಸೋತು ಹೊರಬಿದ್ದ ಸ್ಕಾಟ್ಲೆಂಡ್; ಆಸೀಸ್ ಗೆಲುವಿನಿಂದ ಸೂಪರ್8 ಗೆ ಆಂಗ್ಲರು

T20 WC: ಹೋರಾಡಿ ಸೋತು ಹೊರಬಿದ್ದ ಸ್ಕಾಟ್ಲೆಂಡ್; ಆಸೀಸ್ ಗೆಲುವಿನಿಂದ ಸೂಪರ್8 ಗೆ ಆಂಗ್ಲರು

David Wiese: ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿದ ಡೇವಿಡ್ ವೀಸ

David Wiese: ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿದ ಡೇವಿಡ್ ವೀಸ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Alanda; ಕುವೈತ್ ಅಗ್ನಿ ದುರಂತದಲ್ಲಿ ಮೃತ ವ್ಯಕ್ತಿಯ ಶವ ಸ್ವಗ್ರಾಮಕ್ಕೆ ಆಗಮನ: ಅಂತ್ಯಕ್ರಿಯೆ

Alanda; ಕುವೈತ್ ಅಗ್ನಿ ದುರಂತದಲ್ಲಿ ಮೃತ ವ್ಯಕ್ತಿಯ ಶವ ಸ್ವಗ್ರಾಮಕ್ಕೆ ಆಗಮನ: ಅಂತ್ಯಕ್ರಿಯೆ

4-chincholi

Chincholi ತಾಲೂಕಿನಾದ್ಯಂತ ಧಾರಾಕಾರ ಮಳೆ, ಜಲಾಶಯದಲ್ಲಿ ನೀರಿನ ಪ್ರಮಾಣ ಹೆಚ್ಚಳ

1-bbb

Kuwait ಭೀಕರ ಅಗ್ನಿ ದುರಂತದಲ್ಲಿ ಕಲಬುರಗಿಯ ವ್ಯಕ್ತಿ ಸಾವು

KKRDB : ಜೂನ್ 14 ರಂದು ಸಿಎಂ ಪ್ರಗತಿ ಪರಿಶೀಲನೆ ಸಭೆ: ಡಾ. ಅಜಯಸಿಂಗ್

KKRDB : ಜೂನ್ 14 ರಂದು ಸಿಎಂ ಪ್ರಗತಿ ಪರಿಶೀಲನೆ ಸಭೆ: ಡಾ. ಅಜಯಸಿಂಗ್

MLC: ಈಶಾನ್ಯ ಕರ್ನಾಟಕ ಪದವೀಧರ ಚುನಾವಣೆಯಲ್ಲಿ ಕಾಂಗ್ರೆಸ್ ನ ಡಾ. ಚಂದ್ರಶೇಖರ ಪಾಟೀಲ ಗೆಲುವು

MLC: ಈಶಾನ್ಯ ಕರ್ನಾಟಕ ಪದವೀಧರ ಚುನಾವಣೆಯಲ್ಲಿ ಕಾಂಗ್ರೆಸ್ ನ ಡಾ. ಚಂದ್ರಶೇಖರ ಪಾಟೀಲ ಗೆಲುವು

MUST WATCH

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

udayavani youtube

ಕಾಂಗ್ರೆಸ್ ಹಿರಿಯ ಶಾಸಕ ಸಿ.ಎಸ್.ನಾಡಗೌಡರಿಂದ ರಾಜಕೀಯ ತ್ಯಾಗದ ಮಾತು

udayavani youtube

ಇಳಿಕೆಯಾದ ಘಟಪ್ರಭಾ ನದಿ

ಹೊಸ ಸೇರ್ಪಡೆ

2

Viral Video: ಎಂಜಲು ಉಗುಳಿ ಗ್ರಾಹಕನಿಗೆ ಫೇಸ್‌ ಮಸಾಜ್‌ ಮಾಡಿದ್ದ ಕ್ಷೌರಿಕ ಬಂಧನ

udupi

Udupi; ಆದರ್ಶ ಆಸ್ಪತ್ರೆಯ ಹಿರಿಯ ವೈದ್ಯ ಡಾ.ರಾಜಾ ನಿಧನ

1

ಐ ಮಿಸ್‌ ಯೂ ಅಪ್ಪಾ.. ನೀವು ಯಾವಾಗಲೂ ನನ್ನ ಹೀರೋ.. ದರ್ಶನ್‌ ಪುತ್ರನಿಂದ ಮತ್ತೊಂದು ಪೋಸ್ಟ್

Michigan; ವಾಟರ್ ಪಾರ್ಕ್ ನಲ್ಲಿ ಗುಂಡಿನ ಮಳೆಗರೆದ ಬಂದೂಕುಧಾರಿ; ಮಗು ಸೇರಿ ಹಲವರಿಗೆ ಗಾಯ

Michigan; ವಾಟರ್ ಪಾರ್ಕ್ ನಲ್ಲಿ ಗುಂಡಿನ ಮಳೆಗರೆದ ಬಂದೂಕುಧಾರಿ; ಮಗು ಸೇರಿ ಹಲವರಿಗೆ ಗಾಯ

2-lungs

Lung Health: ಶ್ವಾಸಕೋಶಗಳ ಆರೋಗ್ಯದಲ್ಲಿ ವಿಟಮಿನ್‌ಗಳ ಪಾತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.