ಅಪರಾಧ ಪ್ರಕರಣ ಕಡಿವಾಣಕ್ಕೆ ನಿರ್ದೇಶನ


Team Udayavani, Jul 10, 2017, 11:57 AM IST

10-gub-2.jpg

ಕಲಬುರಗಿ: ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ಕಡಿವಾಣಕ್ಕೆ ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸ್‌ ಇಲಾಖೆಗೆ
ಸ್ಪಷ್ಟ ನಿರ್ದೇಶನ ನೀಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ| ಶರಣಪ್ರಕಾಶ ಪಾಟೀಲ ತಿಳಿಸಿದರು.

ನಗರದಲ್ಲಿ ರವಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಕೆಲವು ತಿಂಗಳಿನಿಂದ ಜಿಲ್ಲೆಯಲ್ಲಿ ಅದರಲ್ಲೂ ಮಹಾನಗರದಲ್ಲಿ ಅಪರಾಧ ಪ್ರಕರಣಗಳು ಹೆಚ್ಚುತ್ತಿರುವುದು ತಮ್ಮ ಗಮನಕ್ಕೂ ಬಂದಿದೆ. ಇದು ತುಂಬಾ ಕಳವಳಕಾರಿ ಸಂಗತಿಯಾಗಿದೆ. ನಿರಂತರ ಕೊಲೆ ಸುಲಿಗೆ ಪ್ರಕರಣಗಳಿಂದ ಜನರು ಭೀತಿಗೆ ಒಳಗಾಗುತ್ತಿದ್ದಾರೆ. ಇದನ್ನು ಮನಗಂಡು ಪೊಲೀಸ್‌ ಅಧಿಕಾರಿಗಳೊಂದಿಗೆ ಚರ್ಚಿಸಿ ಅಪರಾಧ ಪ್ರಕರಣ ಹತ್ತಿಕ್ಕಲು ಸೂಕ್ತ ಕ್ರಮಕ್ಕೆ ಮುಂದಾಗುವಂತೆ ನಿರ್ದೇಶನ ನೀಡಲಾಗಿದೆ ಎಂದು ತಿಳಿಸಿದರು.

ದೂರು ಸಲ್ಲಿಸಲು ಠಾಣೆಗೆ ಹೋದರೆ ಪೊಲೀಸರು ದೂರು ಸ್ವೀಕರಿಸದೇ ಅಸಡ್ಡೆ ತೋರುವುದು ಸರಿಯಲ್ಲ. ದೂರು ಸ್ವೀಕರಿಸಲೇಬೇಕು. ಒಂದು ವೇಳೆ ದೂರು ಸ್ವೀಕರಿಸದಿದ್ದಲ್ಲಿ ತಮ್ಮ ಗಮನಕ್ಕೆ ತರಬೇಕು.ಯಾವುದೇ ಕಾರಣಕ್ಕೂ ಭಯಪಡಬಾರದು ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದರು. 

ಶೀಘ್ರದಲ್ಲಿಯೇ ಪೊಲೀಸ್‌ ಆಯುಕ್ತಾಲಯ: ಕಲಬುರಗಿ ಮಹಾನಗರದಲ್ಲಿ ಪೊಲೀಸ್‌ ಕಮಿಷ°ರ್‌ ಕಚೇರಿ ಪ್ರಾರಂಭ ಮಾಡುವ ಕುರಿತು ಬಜೆಟ್‌ನಲ್ಲಿ ಘೋಷಣೆಯಾಗಿದೆ. ಕಾರ್ಯ ಪ್ರಗತಿ ಹಂತದಲ್ಲಿದೆ. ಆದಷ್ಟು ಬೇಗನೇ ಪೊಲೀಸ್‌ ಕಮಿಷನರ್‌ ಕಚೇರಿ ಆರಂಭವಾಗಲಿದೆ. ಇದಾದಲ್ಲಿ ಅಪರಾಧ ಪ್ರಕರಣಗಳಿಗೆ ಕಡಿವಾಣ ಹಾಕಲು ಮತ್ತಷ್ಟು ಬಲ ಬಂದಂತಾಗುತ್ತದೆ. ಪೊಲೀಸ್‌ ಇಲಾಖೆಯಲ್ಲಿ ರಾಜಕೀಯ
ಹಸ್ತಕ್ಷೇಪ ಹೆಚ್ಚಳವಾಗಿದ್ದಕ್ಕೆ ಅಪರಾಧ ಪ್ರಕರಣ ಹೆಚ್ಚಳವಾಗಲು ಕಾರಣ ಎನ್ನಲಾಗುತ್ತಿದೆ ಎಂದು ಕೇಳಲಾದ ಪ್ರಶ್ನೆಗೆ ಉತ್ತರಿಸಿದ 
ಸಚಿವರು, ತಾವಂತೂ ಯಾವುದೇ ಕಾರಣಕ್ಕೂ ಹಸ್ತಕ್ಷೇಪ ಮಾಡಿಲ್ಲ. ಆದರೆ ಬೇರೆ ಯಾರಾದರೂ ಮಾಡಿದ್ದರೆ ಅದಕ್ಕೆ
ಇಲಾಖೆ ಕಿವಿಗೊಡಬಾರದು ಎಂದರು.

ಶೇ.80ರಷ್ಟು ಬಾಕಿ ವಿತರಣೆ: ಬೆಂಬಲ ಬೆಲೆಗೆ ತೊಗರಿ ಮಾರಾಟ ಮಾಡಿದ ರೈತರಿಗೆ ಈಗಾಗಲೇ ಶೇ. 80ರಷ್ಟು ರೈತರಿಗೆ ಹಣ ಪಾವತಿಸಲಾಗಿದೆ. ಇನ್ನೂ 20ರಷ್ಟು ರೈತರಿಗೆ ಬಾಕಿ ನೀಡಬೇಕಾಗಿದೆ. ಅದನ್ನು ಸಹ ವಿತರಣೆಗೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸಚಿವರು ತಿಳಿಸಿದರು. 

ಕಾನೂನು ಅಭಿಪ್ರಾಯ: ಸೇಡಂ ತಾಲೂಕಿನ ಹಂಗನಳ್ಳಿ, ನೃಪತುಂಗ ಗ್ರಾಮಗಳ ರೈತರ ಭೂ ಪರಿಹಾರ ಹೆಚ್ಚಳ ನೀಡುವ ಕುರಿತಾದ ಹೋರಾಟಕ್ಕೆ ಸ್ಪಂದಿಸುವ ನಿಟ್ಟಿನಲ್ಲಿ ಈಗಾಗಲೇ ಎರಡು ಸಲ ಸಭೆ ನಡೆಸಲಾಗಿದೆ. ಸಿಮೆಂಟ್‌ ಕಾರ್ಖಾನೆಯವರು ಹೆಚ್ಚಳದ ಪರಿಹಾರ ನೀಡಬೇಕಿದೆ. ಸರ್ಕಾರ ಮಧ್ಯೆ ಪ್ರವೇಶಿಸುವ ನಿಟ್ಟಿನಲ್ಲಿ ಕಾನೂನು ಅಭಿಪ್ರಾಯ ಪಡೆಯಲಾಗುತ್ತಿದೆ ಎಂದು ಉಸ್ತುವಾರಿ ಸಚಿವರು ತಿಳಿಸಿದರು. 

ಸಂಪುಟದಲ್ಲಿ ನಿರ್ಣಯ: ಸೇಡಂ ತಾಲೂಕಿನಲ್ಲಿ ಸಿಮೆಂಟ್‌ ಕಾರ್ಖಾನೆಗೆ ಭೂಮಿ ನೀಡುವ ಸಲುವಾಗಿ ಸರ್ಕಾರಿ ಭೂಮಿ ಎನ್‌ಎ ಮಾಡುವ ಕುರಿತು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಭೂಮಿ ನೀಡುವ ಬಗ್ಗೆ ಈ ಹಿಂದೆಯೇ ಸಚಿವ
ಸಂಪುಟದಲ್ಲಿ ನಿರ್ಣಯ ಆಗಿದೆ. ಉದ್ಯೋಗಾವಕಾಶ ದೊರಕಬೇಕು ಎಂಬ ನಿಟ್ಟಿನಲ್ಲಿ ಭೂಮಿ ನೀಡಲು ಮುಂದಾಗಿದೆ
ಎಂದು ಸ್ಪಷ್ಟಪಡಿಸಿದರು. ಮದರ್‌ ತೆರೇಸಾ ಶಾಲೆ ಹತ್ತಿರದ ರೇಲ್ವೆ ಮೇಲ್ಸೇತುವೆ ನಿರ್ಮಾಣ ಹಾಗೂ ಸಂಪರ್ಕ ರಸ್ತೆಗಳ ಅಭಿವೃದ್ಧಿಗಾಗಿ 23 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಟ್ರಾಮಾ ಸೆಂಟರ್‌ ಸಹ ಸ್ಥಾಪಿಸಲು ಉದ್ದೇಶಿಸಲಾಗಿದೆ. ಜಿಲ್ಲಾಸ್ಪತ್ರೆಯಲ್ಲಿ ತಾಯಿ ಮತ್ತು ಮಗುವಿನ ಪ್ರತ್ಯೇಕ ವಾರ್ಡ್‌ ಸ್ಥಾಪನೆಗೂ ಹೆಜ್ಜೆ ಇಡಲಾಗುತ್ತಿದೆ. ಯಾದಗಿರಿಯಲ್ಲಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ಕಲಬುರಗಿಯಲ್ಲೂ ಸೂಪರ್‌ ಸ್ಪೇಷಾಲಿಟಿ ಆಸ್ಪತ್ರೆ:
ಕಲಬುರಗಿಯಲ್ಲಿ ಸೂಪರ್‌ ಸ್ಪೇಷಾಲಿಟಿ ಆಸ್ಪತ್ರೆ ಸ್ಥಾಪನೆಗೆ ಸರ್ಕಾರ ಮುಂದಾಗಿದೆ. ಇದಾದಲ್ಲಿ ಈ ಭಾಗದ ಜನರಿಗೆ
ಉತ್ಕೃಷ್ಟ ವೈದ್ಯಕೀಯ ಸೇವೆ ಸಿಗಲಿದೆ. ಜಿಲ್ಲಾಸ್ಪತ್ರೆಯಲ್ಲಿ 60 ಹಾಸಿಗೆ ಇರುವ ಎನ್‌ಐಸಿಯು ಘಟಕವನ್ನು 1.60 ಕೋಟಿ
ರೂ. ವೆಚ್ಚದಲ್ಲಿ ಮೇಲ್ದರ್ಜೆಗೇರಿಸಲಾಗುತ್ತಿದೆ. ಸರ್ಕಾರಿ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳು ಜಿಲ್ಲಾಸ್ಪತ್ರೆಗೆ 
ಹೊಂದಿಕೊಂಡಿರುವುದರಿಂದ ವೈದ್ಯಕೀಯ ಸೇವೆ ಮತ್ತಷ್ಟು ಬಲಗೊಂಡಿದೆ. 

ಟಾಪ್ ನ್ಯೂಸ್

ಲಸಿಕೆ ಕಡ್ಡಾಯ; ಜಾರಿ ಸಾಧ್ಯವೇ?

ಕೋವಿಡ್‌ ಲಸಿಕೆ ಕಡ್ಡಾಯ; ಜಾರಿ ಸಾಧ್ಯವೇ?

ಪಚ್ಚನಾಡಿ ಭೂ ಭರ್ತಿ ಘಟಕದ ತ್ಯಾಜ್ಯ ವಿಲೇವಾರಿ: ಶೀಘ್ರ ಪೂರ್ಣಗೊಳಿಸಲು ಆದೇಶ

ಪಚ್ಚನಾಡಿ ಭೂ ಭರ್ತಿ ಘಟಕದ ತ್ಯಾಜ್ಯ ವಿಲೇವಾರಿ: ಶೀಘ್ರ ಪೂರ್ಣಗೊಳಿಸಲು ಆದೇಶ

thumb 1

ಸೋಂಕು ಪರೀಕ್ಷೆ ಹೆಚ್ಚಿಸಿ: ಕೇಂದ್ರದ ಸೂಚನೆ

ತಂತ್ರಗಾರಿಕೆ ಬದಲಿಸಿದ ಬಿಜೆಪಿ! ಉತ್ತರ ಪ್ರದೇಶ ಚುನಾವಣೆಗೆ ಹೊಸ ಕಾರ್ಯತಂತ್ರ

ತಂತ್ರಗಾರಿಕೆ ಬದಲಿಸಿದ ಬಿಜೆಪಿ! ಉತ್ತರ ಪ್ರದೇಶ ಚುನಾವಣೆಗೆ ಹೊಸ ಕಾರ್ಯತಂತ್ರ

ಹೊಸ ಇತಿಹಾಸ ಬರೆದಿದ ಭಾರತದ ಅಂಡರ್‌-19 ವಿಶ್ವಕಪ್‌ ಕೂಟದ ಯಶಸ್ವಿ ನಾಯಕ ಉನ್ಮುಕ್ತ್ ಚಂದ್‌

ಹೊಸ ಇತಿಹಾಸ ಬರೆದಿದ್ದ ಭಾರತದ ಅಂಡರ್‌-19 ವಿಶ್ವಕಪ್‌ ಕೂಟದ ಯಶಸ್ವಿ ನಾಯಕ ಉನ್ಮುಕ್ತ್ ಚಂದ್‌

astrology today

ಬುಧವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹ ಬಲ

3ನೇ ಕೋವಿಡ್ ಅಲೆಯಲ್ಲಿ ಪ್ರತಿ ದಿನ 1.2 ಲಕ್ಷ ಪ್ರಕರಣ: ತಜ್ಞರ ಎಚ್ಚರಿಕೆ : ಡಾ. ಸುಧಾಕರ್‌

3ನೇ ಕೋವಿಡ್ ಅಲೆಯಲ್ಲಿ ಪ್ರತಿ ದಿನ 1.2 ಲಕ್ಷ ಪ್ರಕರಣ: ತಜ್ಞರ ಎಚ್ಚರಿಕೆ : ಡಾ. ಸುಧಾಕರ್‌ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಗಸ್ ಹಾಜರಿ ಹಾಕಲು ಗ್ರಾಪಂ ಸದಸ್ಯರಿಂದಲೇ ಒತ್ತಡ: ಆಕ್ರೋಶ

ಬೋಗಸ್ ಹಾಜರಿ ಹಾಕಲು ಗ್ರಾಪಂ ಸದಸ್ಯರಿಂದಲೇ ಒತ್ತಡ: ಆಕ್ರೋಶ

ಪ್ರಧಾನಿ ಮೋದಿಯಿಂದ ಕಾಶಿ ಕ್ಷೇತ್ರಕ್ಕೆ ವಿಶ್ವ ಪ್ರಸಿದ್ಧಿ: ಶಿವಾಚಾರ್ಯ ಮಹಾಸ್ವಾಮೀಜಿ

ಪ್ರಧಾನಿ ಮೋದಿಯಿಂದ ಕಾಶಿ ಕ್ಷೇತ್ರಕ್ಕೆ ವಿಶ್ವ ಪ್ರಸಿದ್ಧಿ: ಶಿವಾಚಾರ್ಯ ಮಹಾಸ್ವಾಮೀಜಿ

16treatment

ಕ್ಷಯ ರೋಗದ ಭಯಬೇಡ; ಚಿಕಿತ್ಸೆ ಪಡೆಯಿರಿ

15parking

ಬೈಕ್‌ ನಿಲುಗಡೆ: ಸಂಚಾರಕ್ಕೆ ಅಡ್ಡಿ

14education

ಶಿಕ್ಷಣ ಇಲಾಖೆಯಲ್ಲಿ ದೊಡ್ಡ ಪ್ರಮಾಣದ ಬಡ್ತಿ: ನಮೋಶಿ

MUST WATCH

udayavani youtube

ಕೃಷ್ಣಾಪುರ ಪರ್ಯಾಯ – 2022 Highlights

udayavani youtube

18 ವರ್ಷಗಳ ವೈವಾಹಿಕ ಜೀವನಕ್ಕೆ ಅಂತ್ಯ ಹಾಡಿದ ಧನುಷ್ – ಐಶ್ವರ್ಯಾ

udayavani youtube

ಪರ್ಯಾಯ ಮಹೋತ್ಸವ : ದಂಡ ತೀರ್ಥದಲ್ಲಿ ಶ್ರೀ ಕೃಷ್ಣಾಪುರ ಮಠಾಧೀಶರಿಂದ ಪವಿತ್ರ ಸ್ನಾನ

udayavani youtube

ನಿಷೇಧದ ನಡುವೆಯೂ ರಥೋತ್ಸವ : ಜನರನ್ನು ನಿಯಂತ್ರಿಸಲು ಪೊಲೀಸರು ವಿಫಲ

udayavani youtube

ಉಡುಪಿ : ಇಂದು (ಜ.17) ರಾತ್ರಿ 10 ಗಂಟೆ ಒಳಗೆ ಅಂಗಡಿ ಮುಂಗಟ್ಟು ಮುಚ್ಚಲು ನಗರ ಸಭೆ ಆದೇಶ

ಹೊಸ ಸೇರ್ಪಡೆ

ಲಸಿಕೆ ಕಡ್ಡಾಯ; ಜಾರಿ ಸಾಧ್ಯವೇ?

ಕೋವಿಡ್‌ ಲಸಿಕೆ ಕಡ್ಡಾಯ; ಜಾರಿ ಸಾಧ್ಯವೇ?

ಪಚ್ಚನಾಡಿ ಭೂ ಭರ್ತಿ ಘಟಕದ ತ್ಯಾಜ್ಯ ವಿಲೇವಾರಿ: ಶೀಘ್ರ ಪೂರ್ಣಗೊಳಿಸಲು ಆದೇಶ

ಪಚ್ಚನಾಡಿ ಭೂ ಭರ್ತಿ ಘಟಕದ ತ್ಯಾಜ್ಯ ವಿಲೇವಾರಿ: ಶೀಘ್ರ ಪೂರ್ಣಗೊಳಿಸಲು ಆದೇಶ

thumb 1

ಸೋಂಕು ಪರೀಕ್ಷೆ ಹೆಚ್ಚಿಸಿ: ಕೇಂದ್ರದ ಸೂಚನೆ

ತಂತ್ರಗಾರಿಕೆ ಬದಲಿಸಿದ ಬಿಜೆಪಿ! ಉತ್ತರ ಪ್ರದೇಶ ಚುನಾವಣೆಗೆ ಹೊಸ ಕಾರ್ಯತಂತ್ರ

ತಂತ್ರಗಾರಿಕೆ ಬದಲಿಸಿದ ಬಿಜೆಪಿ! ಉತ್ತರ ಪ್ರದೇಶ ಚುನಾವಣೆಗೆ ಹೊಸ ಕಾರ್ಯತಂತ್ರ

ಹೊಸ ಇತಿಹಾಸ ಬರೆದಿದ ಭಾರತದ ಅಂಡರ್‌-19 ವಿಶ್ವಕಪ್‌ ಕೂಟದ ಯಶಸ್ವಿ ನಾಯಕ ಉನ್ಮುಕ್ತ್ ಚಂದ್‌

ಹೊಸ ಇತಿಹಾಸ ಬರೆದಿದ್ದ ಭಾರತದ ಅಂಡರ್‌-19 ವಿಶ್ವಕಪ್‌ ಕೂಟದ ಯಶಸ್ವಿ ನಾಯಕ ಉನ್ಮುಕ್ತ್ ಚಂದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.