ಸಿಡಿ ಪ್ರೊಡಕ್ಷನ್‌’ ರಾಜಕೀಯಕ್ಕೆ ತರಬೇಡಿ

Team Udayavani, Feb 11, 2019, 7:07 AM IST

gul-3.jpg

ಕಲಬುರಗಿ: ಸಿನಿಮಾ ರಂಗದಿಂದ ಬಂದಿರುವ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ರಾಜಕೀಯದಲ್ಲೂ ಸಿಡಿ, ಕ್ಯಾಸೆಟ್ ಬಿಡುಗಡೆ ಕಾರ್ಯಕ್ರಮ ಮುಂದುವರಿಸಿದ್ದಾರೆ. ಕುಮಾರಸ್ವಾಮಿಗೆ ಆ್ಯಕ್ಟಿಂಗ್‌, ಡಬ್ಬಿಂಗ್‌ ಎಲ್ಲವೂ ಚೆನ್ನಾಗಿ ಗೊತ್ತಿದೆ. ರಾಜಕೀಯ ಷಡ್ಯಂತ್ರ ರೂಪಿಸುವುದರಲ್ಲಿ ಅವರೇ ಹಿರೋ, ಅವರೇ ಪ್ರೊಡ್ಯೂಸರ್‌ ಆಗಿದ್ದಾರೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ, ವಿಧಾನ ಪರಿಷತ್‌ ಸದಸ್ಯ ಎನ್‌. ರವಿಕುಮಾರ ವಾಗ್ಧಾಳಿ ನಡೆಸಿದ್ದಾರೆ.

ರವಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ರಾಜಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ವ್ಯಕ್ತಿತ್ವಕ್ಕೆ ಧಕ್ಕೆ ತರುವ ಕೆಲಸವನ್ನು ಕುಮಾರಸ್ವಾಮಿ ಮಾಡುತ್ತಿದ್ದಾರೆ. ಕುಮಾರಸ್ವಾಮಿ ರೀತಿಯಲ್ಲಿ ಯಡಿಯೂಪ್ಪ ಪಕ್ಷ ಕಟ್ಟಿಲ್ಲ. ಅವರ ತಂದೆ ಆಶೀರ್ವಾದಿಂದ ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದಾರೆ ಎಂದು ಟೀಕಿಸಿದರು.

ರಾಮನಗರದ ಉಪ ಚುನಾವಣೆಯಲ್ಲಿ ಕುಮಾರಸ್ವಾಮಿ ಅವರೇ ಕಾಂಗ್ರೆಸ್‌ನ ವ್ಯಕ್ತಿಯನ್ನು ಬಿಜೆಪಿಗೆ ಕಳುಹಿಸಿದ್ದರು. ನಂತರ ಅವರೇ ಅಭ್ಯರ್ಥಿಯನ್ನು ಗಾಯಬ್‌ ಮಾಡಿದರು. ಈಗ ತಾವೇ ಜೆಡಿಎಸ್‌ ಶಾಸಕ ನಾಗನಗೌಡರ ಮಗ ಶರಣಗೌಡರನ್ನು ಯಡಿಯೂರಪ್ಪ ಅವರ ಬಳಿ ಕಳುಹಿಸಿ ಅವರ ವ್ಯಕ್ತಿತ್ವಕ್ಕೆ ಮಸಿ ಬಳಿಯುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದೇ ಕುಮಾರಸ್ವಾಮಿ ವಿಜುಗೌಡರನ್ನು ಎಂಎಲ್‌ಸಿ ಮಾಡಲು 25 ಕೋಟಿ ರೂ. ಕೇಳಿದ್ದರು. ಸಚಿವ ಸ್ಥಾನದ ಆಮಿಷವೊಡ್ಡಿ ಆಳಂದ ಕ್ಷೇತ್ರದ ಬಿಜೆಪಿ ಶಾಸಕ ಸುಭಾಷ ಗುತ್ತೇದಾರ ಅವರನ್ನು ಸೆಳೆಯುವ ಯತ್ನ ಮಾಡಿದ್ದರು. ಕುಮಾರಸ್ವಾಮಿ ತಾವೇ ಸರ್ವಜ್ಞನೆಂದು ತಿಳಿದುಕೊಂಡಿದ್ದಾರೆ ಎಂದು ಹರಿಹಾಯ್ದರು.

ಇಡೀ ಸಾಲ ಮನ್ನಾ ಪ್ರಕ್ರಿಯೆಯನ್ನು 12 ಸಾವಿರ ಕೋಟಿ ರೂ.ಗಳಲ್ಲೇ ಕುಮಾರಸ್ವಾಮಿ ಪೂರ್ಣಗೊಳಿಸಬೇಕೆಂದು ಕೊಂಡಿದ್ದಾರೆ. ಇದೇನಾ ಮಣ್ಣಿನ ಮಕ್ಕಳ ಧೋರಣೆ? ಈ ಕುರಿತು ಕುಮಾರಸ್ವಾಮಿ ಸ್ಪಷ್ಟೀಕರಣ ನೀಡಬೇಕೆಂದು ಆಗ್ರಹಿಸಿದರು.

ಹೊಸ ತಾಂತ್ರಿಕ ವಿವಿ ಕೈಬಿಡಿ: ಬೆಳಗಾವಿಯಲ್ಲಿ ರಾಜ್ಯ ಮಟ್ಟದ ತಾಂತ್ರಿಕ ವಿಶ್ವವಿದ್ಯಾಲಯವಿದ್ದರೂ ಹಾಸನದಲ್ಲಿ ಮತ್ತೂಂದು ತಾಂತ್ರಿಕ ವಿಶ್ವವಿದ್ಯಾಲಯ ಸ್ಥಾಪಿಸುವ ಅವಶ್ಯಕತೆ ಏನಿದೆ? ಈಗಾಗಲೇ ಇಂಜಿನಿಯರ್‌ ಸೀಟುಗಳು ಖಾಲಿ ಇವೆ. ಹೊಸ ತಾಂತ್ರಿಕ ವಿವಿ ಘೋಷಣೆ ಮಾಡಿದ್ದು ಎಷ್ಟು ಸರಿ? ಅಲ್ಲಿ ಏನಾದರೂ ದೇವೇಗೌಡರ ಮಕ್ಕಳು, ಮೊಮ್ಮಕ್ಕಳು ಕುಲಪತಿ ಆಗಬೇಕಿದೆಯೇ? ಇಲ್ಲ ವಿಶ್ವವಿದ್ಯಾಲಯ ಹೆಸರಲ್ಲಿ ಮತ್ತೂಂದು ಆಸ್ತಿ ಕೊಳ್ಳೆಹೊಡೆಯವ ಹುನ್ನಾರವಿದೆಯೇ? ಕೂಡಲೇ ಹಾಸನ ತಾಂತ್ರಿಕ ವಿವಿಯನ್ನು ಕೈ ಬಿಡಬೇಕೆಂದು ಒತ್ತಾಯಿಸಿದರು.

ಮತ್ತೂಮ್ಮೆ ಮೋದಿ ಸಂಕಲ್ಪ: ಕೇಂದ್ರದಲ್ಲಿ ಮತ್ತೂಮ್ಮೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಬೇಕು. ನರೇಂದ್ರ ಮೋದಿ ಅವರೇ ಮತ್ತೂಮ್ಮೆ ಪ್ರಧಾನಿ ಆಗಬೇಕೆಂಬ ಸಂಕಲ್ಪದೊಂದಿಗೆ ಫೆ.11ರಿಂದ ದೇಶಾದ್ಯಂತ ಬಿಜೆಪಿ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ.

ಸಮರ್ಪಣಾ ದಿನ: ಬಿಜೆಪಿಗೆ ದೇಣಿಗೆ ಸಂಗ್ರಹಿಸುವ ಉದ್ದೇಶದಿಂದ ದೇಶಾದ್ಯಂತ ಫೆ.11ರಂದು ಸಮರ್ಪಣಾ ದಿನವನ್ನಾಗಿ ಆಚರಿಸಲಾಗುತ್ತಿದೆ. ಅಂದು ಪಕ್ಷದ ಕಾರ್ಯಕರ್ತರು, ನಾಯಕರು, ಬೆಂಬಲಿಗರು ಯಾರೇ ಆದರೂ 5ರಿಂದ 1,000 ರೂ. ವರೆಗೆ ಮೋದಿ ಆ್ಯಪ್‌ ಇಲ್ಲವೇ, ಚೆಕ್‌ ಮೂಲಕ ದೇಣಿಗೆ ಕಳುಹಿಸಬಹುದಾಗಿದೆ.

ಧ್ವಜ ಹಾರಾಟ ದಿನ: ಫೆ.12ರಂದು ಬೆಳಗ್ಗೆ 9 ಗಂಟೆಗೆ ಬಿಜೆಪಿ ಕಾರ್ಯಕರ್ತರು, ಬೆಂಬಲಿಗರು ಎಲ್ಲರೂ ತಮ್ಮ ಮನೆಗಳು ಹಾಗೂ ಬೂತ್‌ ಮಟ್ಟದ ಕಚೇರಿಗಳ ಮೇಲೆ ಬಿಜೆಪಿ ಧ್ವಜ ಹರಿಸುವ ಮೂಲಕ ಮೋದಿ ಅವರನ್ನು, ಮೋದಿ ಸರ್ಕಾರವನ್ನು ಮತ್ತೂಮ್ಮೆ ಸ್ಥಾಪಿಸಲು ಸಂಕಲ್ಪ ಮಾಡಲಾಗುವುದು.

ಕಮಲ ಜ್ಯೋತಿ: ಫೆ.26ರಂದು ಸಂಜೆ 7 ಗಂಟೆಗೆ ಎಲ್ಲ ಕಾರ್ಯಕರ್ತರು ತಮ್ಮ-ತಮ್ಮ ಮನೆಗಳ ಮುಂದೆ ರಂಗೋಲಿ ಹಾಕಿ ಕಮಲ ಜ್ಯೋತಿ ಹಚ್ಚಲಾಗುವುದು.

ಗಿನ್ನಿಸ್‌ ದಾಖಲೆಯ ಬೈಕ್‌ ರ್ಯಾಲಿ: ಮಾ.2ರಂದು ದೇಶಾದ್ಯಂತ ಬೈಕ್‌ ರ್ಯಾಲಿ ನಡೆಸಲಾಗುವುದು. ಪ್ರತಿ ವಿಧಾನಸಭೆ ಕ್ಷೇತ್ರಗಳಲ್ಲಿ 1,000ದಿಂದ 1,500 ಬೈಕ್‌ಗಳು ರ್ಯಾಲಿಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ. ಇದು ಗಿನ್ನಿಸ್‌ ದಾಖಲೆ ಸೃಷ್ಟಿಸುವ ಸಾಧ್ಯತೆ ಇದೆ ಎಂದು ಹೇಳಿದರು. ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಶಾಸಕರಾದ ಸುಭಾಷ ಗುತ್ತೇದಾರ, ಬಸವರಾಜ ಮತ್ತಿಮಡು, ಎಂಎಲ್‌ಸಿ, ಬಿಜೆಪಿ ನಗರಾಧ್ಯಕ್ಷ ಬಿ.ಜಿ. ಪಾಟೀಲ, ಬಿಜೆಪಿ ರಾಜ್ಯ ಸಹ ವಕ್ತಾರ ಶಶೀಲ ನಮೋಶಿ, ಮುಖಂಡರಾದ ಸುಭಾಷ ರಾಠೊಡ, ರಾಜು ವಾಡೇಕರ್‌, ವಿಜಯಕುಮಾರ ಹಳಕಟ್ಟಿ, ದಯಾಘನ ಧಾರವಾಡಕರ್‌ ಹಾಗೂ ಮತ್ತಿತರರು ಇದ್ದರು.

ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ನ ಹಾಲಿ ಸಂಸದ ಡಾ| ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಬಿಜೆಪಿ ಅಭ್ಯರ್ಥಿ ಗೆಲ್ಲುವುದು ಖಚಿತ. ಕಲಬುರಗಿಯಲ್ಲಿ ಕಮಲ ಅರಳುವುದು ನಿಶ್ಚಿತ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ, ವಿಧಾನ ಪರಿಷತ್‌ ಸದಸ್ಯ ಎನ್‌. ರವಿಕುಮಾರ ವಿಶ್ವಾಸ ವ್ಯಕ್ತಪಡಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಬಿಜೆಪಿಯಲ್ಲಿ ಅಭ್ಯರ್ಥಿಗಳಿಗೆ ಬರವಿಲ್ಲ. ಸಾಕಷ್ಟು ಜನರು ಟಿಕೆಟ್ ಆಕಾಂಕ್ಷಿಗಳಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಕಣಕ್ಕಿಳಿಯುವ ಅಭ್ಯರ್ಥಿಯನ್ನು ಪಕ್ಷದ ಹೈಕಮಾಂಡ್‌ ಆಯ್ಕೆ ಮಾಡುತ್ತದೆ. ಸ್ವಲ್ಪ ದಿನ ತಾಳಿದರೆ ಅಭ್ಯರ್ಥಿ ಗೊತ್ತಾಗಲಿದ್ದಾರೆ ಎಂದಷ್ಟೇ ಹೇಳಿದರು.

ಮೈತ್ರಿ ಸರ್ಕಾರದಲ್ಲಿ ಜೆಡಿಎಸ್‌ ಆಡಳಿತ ಬಗ್ಗೆ ಕಾಂಗ್ರೆಸ್‌ ಶಾಸಕರಿಗೆ ಅಸಮಾಧಾನವಿದೆ. 20 ಹೆಚ್ಚು ಕಾಂಗ್ರೆಸ್‌ ಶಾಸಕರು ಸಿದ್ದರಾಮಯ್ಯ ತಮ್ಮ ಮುಖ್ಯಮಂತ್ರಿ ಎನ್ನುತ್ತಿದ್ದಾರೆ. ನಾವು ಯಾವುದೇ ಕಾಂಗ್ರೆಸ್‌ ಶಾಸಕರನ್ನು ಹೈಜಾಕ್‌ ಮಾಡಿಲ್ಲ. ಸದ್ಯಕ್ಕೆ ನಾವು ಕಾಯ್ದು ನೋಡುವ ತಂತ್ರಕ್ಕೆ ಶರಣಾಗಿದ್ದೇವೆ ಎಂದರು.

ಮಾ.1ಕ್ಕೆ ಪ್ರಧಾನಿ ಮೋದಿ ಆಗಮನ: ಪ್ರಧಾನಿ ನರೇಂದ್ರ ಮೋದಿ ಮಾ. 1ರಂದು ಕಲಬುರಗಿಗೆ ಬರಲಿದ್ದಾರೆ. ಫೆ.17 ಇಲ್ಲವೇ, 19ಕ್ಕೆ ಕಲಬುರಗಿಗೆ ಪ್ರಧಾನಿ ಮೋದಿ ಬರಬೇಕಿತ್ತು. ಆದರೆ, ವೇಳಾಪಟ್ಟಿಯಲ್ಲಿ ಮಾರ್ಪಾಡು ಆಗಿದೆ ಎಂದು ರವಿಕುಮಾರ ತಿಳಿಸಿದರು.

ಮಲ್ಲಿಕಾರ್ಜುನಖರ್ಗೆ ವಿರುದ್ಧ ಗೆಲುವು ಖಚಿತ

ಟಾಪ್ ನ್ಯೂಸ್

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.