ಎರಡನೇ ಡೋಸ್‌ ಲಸಿಕೆಗೆ ಹಿಂದೇಟು

Team Udayavani, Jun 19, 2021, 3:36 PM IST

zsdfghn zxcvbvcxz

ಕಲಬುರಗಿ: ಕೊರೊನಾ ಮೊದಲ ಡೋಸ್‌ ಲಸಿಕೆ ಪಡೆದವರು ಎರಡನೇ ಲಸಿಕೆ ಹಾಕಿಸಿಕೊಳ್ಳಲು ಮುಂದೆ ಬರುತ್ತಿಲ್ಲ. ಒಂದೇ ಡೋಸ್‌ ಲಸಿಕೆ ಪಡೆದರೆ ಸಾಕು ಎಂದು ಹಲವರು ಹಿಂದೇಟು ಹಾಕುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ವಾಸಿರೆಡ್ಡಿ ವಿಜಯಾ ಜ್ಯೋತ್ಸ್ನಾ  ಬೇಸರ ವ್ಯಕ್ತಪಡಿಸಿದರು.

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲಾದ್ಯಂತ ಇದುವರೆಗೆ 3,31,259 ಜನರಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು ಜಿಲ್ಲೆಯ ಜನಸಂಖ್ಯೆಯಲ್ಲಿ ಶೇ.17ರಷ್ಟು ಲಸಿಕೆ ಸಾಧನೆಯಾಗಿದೆ. ಇದರಲ್ಲಿ 66,971 ಜನ ಮಾತ್ರ ಎರಡನೇ ಡೋಸ್‌ ಲಸಿಕೆ ಪಡೆದಿದ್ದಾರೆ. ಹಲವರಿಗೆ ತಮ್ಮ ಎರಡನೇ ಡೋಸ್‌ ಪಡೆಯವ ಸಮಯವಾದರೂ ಲಸಿಕಾ ಕೇಂದ್ರಗಳಿಗೆ ಬರುತ್ತಿಲ್ಲ. ಬಹುತೇಕರು ಒಂದೇ ಡೋಸ್‌ ಲಸಿಕೆ ಪಡೆದರೇ ಸಾಕು ಎನ್ನುವ ಮನಸ್ಥಿತಿಯಲ್ಲಿ ಇದ್ದಂತೆ ಕಾಣುತ್ತಿದೆ.

ಆದರೆ, ಕೊರೊನಾದಿಂದ ರಕ್ಷಣೆ ಪಡೆಯಬೇಕಾದರೆ ಎರಡೂ ಡೋಸ್‌ ಲಸಿಕೆ ಪಡೆಯಲೇಬೇಕು ಎಂದರು. ಕೊರೊನಾ ಎರಡನೇ ಡೋಸ್‌ ಲಸಿಕೆ ಪಡೆಯವ ಬಗ್ಗೆ ಸರ್ಕಾರದಿಂದ ಆಯಾ ಸಮಯಕ್ಕೆ ಮೊಬೈಲ್‌ಗೆ ಸಂದೇಶ ರವಾನೆ ಆಗುತ್ತದೆ. ಅಲ್ಲದೇ, ದೂರವಾಣಿ ಕರೆ ಮಾಡಿ ನೆನಪಿಸಲಾಗುತ್ತದೆ. ಮೊದಲ ಡೋಸ್‌ ಪಡೆದವರು ತಪ್ಪದೇ ಎರಡನೇ ಡೋಸ್‌ ಲಸಿಕೆ ಪಡೆಯಬೇಕೆಂದು ಮನವಿ ಮಾಡಿದರು. ಲಸಿಕೆ ಕೇಂದ್ರಗಳಿಂದ ದೂರು ಇರುವ ಗ್ರಾಮಗಳಲ್ಲಿ ಸಂಚಾರಿ ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ.

ನರೇಗಾ ಸೇರಿ ವಿವಿಧ ಕಾಮಗಾರಿ ಸ್ಥಳಗಳಲ್ಲೂ ಲಸಿಕೆ ವಿತರಣೆಗೆ ಕ್ರಮ ವಹಿಸಲಾಗುತ್ತಿದೆ. ದಿನದಿಂದ ದಿನ ಕೊರೊನಾ ಪಾಸಿಟಿವ್‌ ಪ್ರಮಾಣ ಕಡಿಮೆ ಆಗುತ್ತಿದೆ. ಜಿಲ್ಲೆಯಲ್ಲಿ ಸದ್ಯ ಕೇವಲ ಶೇ.1.6ಕ್ಕೆ ಪಾಸಿಟಿವ್‌ ಪ್ರಮಾಣ ಇಳಿದಿದ್ದು, ಫೆಬ್ರವರಿ ತಿಂಗಳ ಮಟ್ಟಕ್ಕೆ ಕುಸಿದಂತೆ ಆಗಿದೆ. ಆದರೂ, ಪಾಸಿಟಿವ್‌ ಪ್ರಮಾಣ 1ಕ್ಕಿಂತ ಕಡಿಮೆ ಇಳಿಸುವ ಪ್ರಯತ್ನವನ್ನೂ ಮಾಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ವಿವರಿಸಿದರು.

ಟಾಪ್ ನ್ಯೂಸ್

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೇವು?: ಖಂಡ್ರೆ

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೆಟಿಯಾದ ಜಗದೀಶ್ ಶೆಟ್ಟರ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಜಗದೀಶ್ ಶೆಟ್ಟರ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.