

Team Udayavani, Feb 13, 2017, 2:57 PM IST
ಕಲಬುರಗಿ: ನಗರದಲ್ಲಿನ ವಿಶ್ವಜ್ಯೋತಿ ಪ್ರತಿಷ್ಠಾನ ಮಾ.4 ಹಾಗೂ 5 ರಂದು ನಗರದ ಶೇಠ ಶಂಕರಲಾಲ ಲಾಹೋಟಿ ಕಾನೂನು ಕಾಲೇಜಿನಲ್ಲಿ ಹಮ್ಮಿಕೊಳ್ಳಲಿರುವ ಕಲ್ಯಾಣ ಕರ್ನಾಟಕ ಸಾಹಿತ್ಯ ಸಂಭ್ರಮದ ಅಂಗವಾಗಿ ರವಿವಾರ ಸಂಗಮೇಶ್ವರ ಮಹಿಳಾ ಮಂಡಳದಲ್ಲಿ ನಡೆದ ಸಾಹಿತಿಗಳ ಪೂರ್ವಭಾವಿ ಸಭೆಯಲ್ಲಿ ಸ್ವಾಗತ ಸಮಿತಿ ಅಧ್ಯಕ್ಷರಾಗಿ ಹಿರಿಯ ಸಾಹಿತಿ ಡಾ| ನಾಗೇಂದ್ರ ಮಸೂತಿ ಅವರನ್ನು ಆಯ್ಕೆ ಮಾಡಿ, ಸನ್ಮಾನಿಸಲಾಯಿತು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಡಾ| ಮಸೂತಿ, ಸಾಹಿತ್ಯದಿಂದ ಸಮಾಜ ಸುಧಾರಣೆ ಸಾಧ್ಯವಿರುವುದರಿಂದಯುವಕರು ಓದಿನಲ್ಲಿ ತೊಡಗಿಸಿಕೊಳ್ಳುವ ಜೊತೆಗೆ ತಮ್ಮ ಅನುಭವವನ್ನು ವಿಸ್ತಾರಗೊಳಿಸಿಕೊಳ್ಳಬೇಕು. ಸಮಾಜದಲ್ಲಿ ಮಾನವೀಯತೆ, ಅಂತಃಕರಣ ಮೂಡಿಸುವ ಮಹತ್ತರ ಜವಾಬ್ದಾರಿ ಲೇಖಕನಿಗಿದೆ ಎಂದರು.
ಈ ನಿಟ್ಟಿನಲ್ಲಿ ಸಾಹಿತಿಗಳು ಆತ್ಮಾವಲೋಕನ ಮಾಡಿಕೊಳ್ಳುವುದು ಅಗತ್ಯ. ಎರಡು ದಿನ ಕಾಲ ನಡೆಯುವ ಕಲ್ಯಾಣ ಕರ್ನಾಟಕ ಸಾಹಿತ್ಯ ಸಂಭ್ರಮವನ್ನು ಅರ್ಥಪೂರ್ಣವಾಗಿ ನಡೆಸಲು ಸಹಕರಿಸುತ್ತೇನೆ ಎಂದು ತಿಳಿಸಿದರು. ವಿಶ್ವಜ್ಯೋತಿ ಪ್ರತಿಷ್ಠಾನದ ಸಂಸ್ಥಾಪಕ ವಿಜಯಕುಮಾರ ತೇಗಲತಿಪ್ಪಿ, ಕಲ್ಯಾಣರಾವ ಭಕ್ಷಿ, ರವಿಂದ್ರಕುಮಾರ ಭಂಟನಳ್ಳಿ,
ಪ್ರತಿಷ್ಠಾನದ ಅಧ್ಯಕ್ಷ ಶ್ರೀಕಾಂತ ಪಾಟೀಲ ತಿಳಗೂಳ, ಹಿರಿಯ ನಾಟಕಕಾರ ರಮಾನಂದ ಹಿರೇಜೇವರ್ಗಿ, ಶರಣಪ್ಪ ದೇಸಾಯಿ, ಬಸವರಾಜ ಮೊರಬದ, ಡಾ| ಬಾಬುರಾವ್ ಶೇರಿಕಾರ, ಪರಮೇಶ್ವರ ಶಟಕಾರ, ನಾಗೇಂದ್ರಪ್ಪ ಮಾಡ್ಯಾಳೆ, ಲಗುಮಣ್ಣಾ ಕರಗುಪ್ಪಿ, ನೀಲಾಂಬಿಕಾ ಚೌಕಿಮಠ, ಸಂಗಣ್ಣ ಹೊಸ್ಮನಿ ಭಾಗವಹಿಸಿದ್ದರು.
Ad
Kalaburagi: ರಸ್ತೆ ಕಾಮಗಾರಿ ಬಿಲ್ ಮಾಡಲು ಕಮಿಷನ್ ಕೇಳಿದ ಇಬ್ಬರು ಅಧಿಕಾರಿಗಳು ಸಸ್ಪೆಂಡ್
ಜನೌಷಧಿ ಕೇಂದ್ರ ಮುಚ್ಚುವ ರಾಜ್ಯ ಸರಕಾರ ಆದೇಶಕ್ಕೆ ಹೈಕೋರ್ಟ್ ತಡೆ
ನಟ ದರ್ಶನ್ ಆ್ಯಂಡ್ ಗ್ಯಾಂಗ್ ಕೇಸ್ ರೀತಿ ಮತ್ತೆರಡು ಭೀಭತ್ಸ ಕೃತ್ಯ!
Recruitments: ಅರಣ್ಯ ಇಲಾಖೆಯಲ್ಲಿ 540 ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಆರಂಭ: ಸಚಿವ ಖಂಡ್ರೆ
Kalaburagi: ಆರ್‌ಎಸ್‌ಎಸ್ ನ ನೂರು ವರ್ಷದ ಇತಿಹಾಸ ಜನರಿಗೆ ತಿಳಿಸಿ: ಸಚಿವ ಪ್ರಿಯಾಂಕ್ ಖರ್ಗೆ
Shocking! ಬುದ್ಧಿಮಾತು ಹೇಳಿದ್ದಕ್ಕೆ ಕೊಡಲಿಯಿಂದ ಹ*ಲ್ಲೆ ನಡೆಸಿ ಅಜ್ಜಿಯನ್ನೇ ಕೊಂ*ದ ಮೊಮ್ಮಗ
ENG vs IND: 3ನೇ ಟೆಸ್ಟ್‌ಗೆ ಇಂಗ್ಲೆಂಡ್ ತಂಡ ಪ್ರಕಟ; 4 ವರ್ಷದ ಬಳಿಕ ಮರಳಿದ ಘಾತಕ ವೇಗಿ
Dharawad: ಕಾಂಗ್ರೆಸ್-ಬಿಜೆಪಿಯಿಂದ ಹಿಂದಿ ಹೇರಿಕೆ ತಡೆ ಅಸಾಧ್ಯ: ಪ್ರೊ.ಬಿಳಿಮಲೆ
ಆ ನಟಿ ʼಬಿಗ್ ಬಾಸ್ʼ ಮನೆಯಲ್ಲೇ ಆತ್ಮಹ*ತ್ಯೆಗೆ ಯತ್ನಿಸಿದ್ದರು- ಶಾಕಿಂಗ್ ಸಂಗತಿ ರಿವೀಲ್
Kejriwal: ಉತ್ತಮ ಆಡಳಿತಕ್ಕಾಗಿ ನನಗೆ ನೊಬೆಲ್ ಪ್ರಶಸ್ತಿ ಸಿಗಬೇಕು!: ಕೇಜ್ರಿವಾಲ್
You seem to have an Ad Blocker on.
To continue reading, please turn it off or whitelist Udayavani.