ಪಾನಮುಕ್ತ ನಿಂಬಾಳವೀಗ ಸುಕನ್ಯಾ ಸಮೃದ್ಧಿ ಗ್ರಾಮ

Team Udayavani, Nov 30, 2017, 10:36 AM IST

gul2.jpg

ಕಲಬುರಗಿ: ಈಗಾಗಲೇ ಪಾನಮುಕ್ತವಾಗಿ ನಾಲ್ಕು ವರ್ಷಗಳನ್ನು ಪೂರೈಸಿದ್ದಲ್ಲದೇ ಬಹಿರ್ದೆಸೆಮುಕ್ತ ಗ್ರಾಮದತ್ತ ಹೆಜ್ಜೆ ಹಾಕುತ್ತಾ ಆದರ್ಶ ಗ್ರಾಮ ಎಂಬುದಾಗಿ ಹೆಸರು ಗಳಿಸಿರುವ ಆಳಂದ ತಾಲೂಕಿನ ನಿಂಬಾಳ ಗ್ರಾಮ ಈಗ ಮತ್ತೂಂದು ಆದರ್ಶ ಕಾಯಕದತ್ತ ಹೆಜ್ಜೆ ಹಾಕಿದೆ.

ಇಡೀ ಗ್ರಾಮದ ಹೆಣ್ಣು ಮಕ್ಕಳಿಗೆ ಕೇಂದ್ರ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಸುಕನ್ಯಾ ಸಮೃದ್ಧಿ ಯೋಜನೆಯನ್ನು ಅಳವಡಿಸಿದ್ದರಿಂದ ಮಂಗಳವಾರ ಭಾರತೀಯ ಅಂಚೆ ಇಲಾಖೆ ಕಲಬುರಗಿ ವಿಭಾಗದ ವತಿಯಿಂದ ನಿಂಬಾಳ ಗ್ರಾಮವನ್ನು ಸಂಪೂರ್ಣ ಸುಕನ್ಯಾ ಸಮೃದ್ಧಿ ಗ್ರಾಮ ಎಂಬುದಾಗಿ ಘೋಷಣೆ ಮಾಡಲಾಯಿತು.

ಘೋಷಣೆ ಮಾಡುವ ಕಾರ್ಯಕ್ರಮವು ಗ್ರಾಮದ ಶಾಂತಲಿಂಗೇಶ್ವರ ವಿರಕ್ತ ಮಠದ ಆವರಣದಲ್ಲಿ ಮೌನ ತಪಸ್ವಿ ಜಡೆಯ ಶಾಂತಲಿಂಗೇಶ್ವರ ಮಹಾಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ನಡೆಯಿತು. ಈಗಾಗಲೇ ಪೂಜ್ಯರು ಇಡೀ ನಿಂಬಾಳ ಗ್ರಾಮವನ್ನು ಪಾನಮುಕ್ತರನ್ನಾಗಿ ಮಾಡಿ ದೇಶದ ಗಮನ ಸೆಳೆಯುವಂತೆ ಮಾಡಿದ್ದಾರೆ. 

ಅಲ್ಲದೇ ಅವರ ಇಚ್ಚೆ ಮೇರೆಗೆ ಸಂಪೂರ್ಣ ಬಯಲುದೆಸೆಮುಕ್ತ ಗ್ರಾಮದತ್ತ ಹೆಜ್ಜೆ ಹಾಕಿದೆ. ಈಗ ಮತ್ತೂಂದು ಹೆಜ್ಜೆ ಹಾಕುವ ನಿಟ್ಟಿನಲ್ಲಿ ಸುಕನ್ಯಾ ಸಮೃದ್ಧಿ ಗ್ರಾಮವಾಗಿ ಹೊರಹೊಮ್ಮಿರುವುದು ಕಳಸಪ್ರಾಯವಾಗಿದೆ ಎಂದು ಶ್ಲಾಘಿಸಲಾಯಿತು. 

ನಿಂಬಾಳ ಗ್ರಾಮದಲ್ಲಿ ಒಟ್ಟು 235 ಹೆಣ್ಣು ಮಕ್ಕಳು 0-10 ವಯಸ್ಸಿನ ಒಳಗಿದ್ದು, ಎಲ್ಲಾ ಹೆಣ್ಣು ಮಕ್ಕಳ ಹೆಸರಿನಲ್ಲಿ ಅಂಚೆ ಕಚೇರಿಯಲ್ಲಿ ಸುಕನ್ಯಾ ಸಮೃದ್ಧಿ ಖಾತೆ ಆರಂಭಿಸಲಾಗಿದೆ. ಹೀಗಾಗಿ ನಿಂಬಾಳ ಗ್ರಾಮವನ್ನು ಸುಕನ್ಯಾ ಸಮೃದ್ಧಿ ಗ್ರಾಮ
ಎಂದು ಘೋಷಣೆ ಮಾಡಿ, ನಾಲ್ಕು ವರ್ಷದ ಭಾಗ್ಯಶ್ರೀ ಎನ್ನುವ ಬಾಲಕಿಯ ಜನ್ಮದಿನವನ್ನು ಮೌನಯೋಗಿಗಳ ಉಪಸ್ಥಿತಿಯಲ್ಲಿ ಕೇಕ್‌ ಕತ್ತರಿಸುವ ಮೂಲಕ ಆಚರಿಸಲಾಯಿತು. 

ಇದೇ ಸಮಯದಲ್ಲಿ ಶಾಂತಲಿಂಗೇಶ್ವರ ಸ್ವಾಮಿಜೀಯವರು ಹಾಗೂ ಅಂಚೆ ಇಲಾಖೆ ಅಧಿಕಾರಿಗಳು ಸುಕನ್ಯಾ ಸಮೃದ್ಧಿ ಖಾತೆ ತೆಗೆದ ಎಲ್ಲಾ ಹೆಣ್ಣು ಮಕ್ಕಳಿಗೆ ಅಂಚೆ ಕಚೇರಿ ಪಾಸ್‌ಬುಕ್‌ ಅನ್ನು ವಿತರಿಸಲಾಯಿತು.

ಅಂಚೆ ಇಲಾಖೆಯ ಹಿರಿಯ ಅಧೀಕ್ಷಕ ಶಿವಾನಂದ ಎಸ್‌.ಪಾಟೀಲ ಅಧ್ಯಕ್ಷತೆ ವಹಿಸಿ, ಯೋಜನೆಯ ಲಾಭವನ್ನು ಪಡೆದು ಎಲ್ಲರು ತಮ್ಮ ಮಕ್ಕಳ ಆರ್ಥಿಕ ಹಾಗೂ ಶೆ„ಕ್ಷಣಿಕ ಭದ್ರತೆಯನ್ನು ಪಡೆಯಬೇಕೆಂದು ವಿವರಣೆ ನೀಡಿದರು.

ಸಹಾಯಕ ಅಂಚೆ ಅಧೀಕ್ಷಕ ಶಿವಾನಂದ ಆರ್‌. ಹೀರಾಪುರ ಸುಕನ್ಯಾ ಸಮೃದ್ಧಿ ಯೋಜನೆ ಕುರಿತು ಮಾತನಾಡಿ, ಸುತ್ತಮುತ್ತಲಿನ ಎಲ್ಲ ಗ್ರಾಮದವರು ತಮ್ಮ ಮಕ್ಕಳ ಹೆಸರಿನಲ್ಲಿ ಸುಕನ್ಯಾ ಸಮೃದ್ಧಿ ಖಾತೆ ಆರಂಭಿಸಬೇಕೆಂದು ವಿನಂತಿಸಿಕೊಂಡರು. ಸಹಾಯಕ ಅಂಚೆ ಅಧೀಕ್ಷಕ ವಿ.ಎಲ್‌ ಚಿತ್ತಕೋಟೆ ಮಾತನಾಡಿ, ಎಸ್‌.ಬಿ, ಆರ್‌.ಡಿ, ಟಿ.ಡಿ, ಪಿಪಿಎಫ್‌ ಮುಂತಾದ ಉಳಿತಾಯ ಖಾತೆಗಳ ಬಗ್ಗೆ ತಿಳಿ ಹೇಳಿದರು.

ಸಹಾಯಕ ಅಂಚೆ ಅಧೀಕ್ಷಕ ಆರ್‌.ಕೆ ಉಮ್ರಾಣಿ, ಅಂಚೆ ನಿರೀಕ್ಷಕ ರಾಮಕೃಷ್ಣ ವಂಶಿ ಪ್ರಧಾನ ಮಂತ್ರಿಯವರ ಸುರಕ್ಷಾ ಭೀಮಾ ಯೋಜನೆ, ಜೀವನ ಜ್ಯೋತಿ ಯೋಜನೆ ಹಾಗೂ ಅಟಲ್‌ ಪೆನ್‌ ಷನ್‌ ಯೋಜನೆ ಕುರಿತು ಮಾತನಾಡಿದರು. ಸಿದ್ದಣ್ಣ ಬೋಲಾ ನಿರೂಪಿಸಿದರು. ಸುಶೀಲ ಕುಮಾರ ತಿವಾರಿ ವಂದಿಸಿದರು.

ಟಾಪ್ ನ್ಯೂಸ್

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

14-

Kasaragodu: ಹಣದ ವಿವಾದ: ಪೆಟ್ರೋಲ್‌ ಸುರಿದು ಮಹಿಳೆಯ ಕೊಲೆಗೆ ಯತ್ನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

Kalaburagi; ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

crime (2)

Kalaburagi:ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ

Lok Sabha Elections; ಸೋಲಿನ ಭೀತಿಯಿಂದ ಸ್ಪರ್ಧೆ ಮಾಡದ ಖರ್ಗೆ: ಅಗರವಾಲ್‌

Lok Sabha Elections; ಸೋಲಿನ ಭೀತಿಯಿಂದ ಸ್ಪರ್ಧೆ ಮಾಡದ ಖರ್ಗೆ: ಅಗರವಾಲ್‌

ಮೊದಲಿನ ಗ್ಯಾರಂಟಿಗಳೇ ಕೊಟ್ಟಿಲ್ಲ, ಈಗೇನು ಕೊಡ್ತಾರೆ: ಕೇಂದ್ರಕ್ಕೆ ಖರ್ಗೆ ಪ್ರಶ್ನೆ

ಮೊದಲಿನ ಗ್ಯಾರಂಟಿಗಳೇ ಕೊಟ್ಟಿಲ್ಲ, ಈಗೇನು ಕೊಡ್ತಾರೆ: ಕೇಂದ್ರಕ್ಕೆ ಖರ್ಗೆ ಪ್ರಶ್ನೆ

Election; ದಿಂಗಾಲೇಶ್ವರ ಸ್ವಾಮೀಜಿ ಕಾಂಗ್ರೆಸ್ ಸೇರುವ ವಿಚಾರ ಸದ್ಯಕ್ಕಿಲ್ಲ:ಡಿಕೆ ಶಿವಕುಮಾರ್

Election; ದಿಂಗಾಲೇಶ್ವರ ಸ್ವಾಮೀಜಿ ಕಾಂಗ್ರೆಸ್ ಸೇರುವ ವಿಚಾರ ಸದ್ಯಕ್ಕಿಲ್ಲ:ಡಿಕೆ ಶಿವಕುಮಾರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.