ಶಿಕ್ಷಣಕ್ಕೆ ನಿಜಾಮರ ಕಾಲದಿಂದಲೂ ಅನುದಾನ


Team Udayavani, Aug 24, 2017, 9:56 AM IST

gul 1.jpg

ಕಲಬುರಗಿ: ಹೈದ್ರಾಬಾದ ಕರ್ನಾಟಕದಲ್ಲಿ ಹೈದ್ರಾಬಾದ ನಿಜಾಮನ ಕಾಲದಿಂದಲೂ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಅನುದಾನ ಹಾಗೂ ಶಿಕ್ಷಕರಿಗೆ ವೇತನ ಅನುದಾನ ನೀಡಿರುವ ಇತಿಹಾಸವಿದೆ ಎಂದು ಹಿರಿಯ ಸಾಹಿತಿ ಹಾಗೂ ಈಶಾನ್ಯ ವಲಯ ಶಿಕ್ಷಕರ ವೇದಿಕೆ ಗೌರವ ಅಧ್ಯಕ್ಷ ಪ್ರೊ| ವಸಂತ ಕುಷ್ಟಗಿ ಹೇಳಿದರು. ಇಲ್ಲಿನ ಕನ್ನಡ ಭವನದಲ್ಲಿ ಬುಧವಾರ ಈಶಾನ್ಯ ವಲಯ ಶಿಕ್ಷಕರ ವೇದಿಕೆ, ಹೈಕ ಖಾಸಗಿ ಶಾಲೆಗಳ ಒಕ್ಕೂಟದ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು. ಇವತ್ತು ಸರಕಾರ ಹೈಕ ಭಾಗದ ಖಾಸಗಿ ಶಾಲೆಗಳಿಗೆ ಅನುದಾನವನ್ನು ನೀಡಲು ಮೀನಾಮೇಷ ಎಣಿಸುತ್ತಿದೆ. ಆದರೆ, ನಿಜಾಮ ಕೆಲವು ಅಪವಾದಗಳ ಮಧ್ಯೆ ಶಿಕ್ಷಣಕ್ಕೆ ಬಹಳಷ್ಟು ಕೊಡುಗೆ ನೀಡಿದ್ದಾನೆ. ಶಿಕ್ಷಕರಿಗೆ 10 ರೂ. ಸಂಬಳ ನೀಡುವುದಲ್ಲದೆ, ಶಾಲೆಯ ನಿರ್ವಹಣೆಗಾಗಿ 5 ರೂ.ಗಳನ್ನು ನೀಡುತ್ತಿದ್ದ. ಇದರಿಂದಾಗಿ ಈ ಭಾಗದಲ್ಲಿ ಶಿಕ್ಷಣವನ್ನು ನೀಡುವ ಪ್ರಯತ್ನವನ್ನು ಮಾಡಿರುವುದು ನಿಜಕ್ಕೂ ಶ್ಲಾಘನೀಯ. ಆದ್ದರಿಂದ ಈ ಪ್ರದೇಶದಲ್ಲಿ ಇಂದು ಶಾಲೆಗಳು ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ವ್ಯವಹಾರಗಳು ನಮ್ಮನ್ನು ತುಂಬಾ ಹಿಂದಕ್ಕೆ ತಳ್ಳುತ್ತಿವೆ. ಆದ್ದರಿಂದ ಕೆಲವು ಒಳ್ಳೆಯ ಸಂಸ್ಥೆಗಳಿಗೆ ಹೈದ್ರಾಬಾದ ಕರ್ನಾಟಕ ಅಭಿವೃದ್ಧಿ ಪ್ರದೇಶ ಮಂಡಳಿಯಿಂದ ಅನುದಾನವನ್ನು ನೀಡಬೇಕು ಎಂದರು. ದೇವದುರ್ಗದ ಬಸವೇಶ್ವರ ಶಿಕ್ಷಣ ಸಂಸ್ಥೆಯ ಅಧ್ಯಕ್ಷೆ ಲತಾ ದೇವರು ಮಾತನಾಡಿ, ಹೈಕ ಭಾಗದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಜನರಿಗೆ ಉತ್ತಮ ಸೇವೆ ನೀಡುವ ನಿಟ್ಟಿನಲ್ಲಿ ಸಾಕಷ್ಟು ಪರಿಶ್ರಮವನ್ನು ಪಡುತ್ತಿವೆ. ಶಿಕ್ಷಕರಿಗೆ ಉದ್ಯೋಗ ನೀಡುವ ನಿಟ್ಟಿನಲ್ಲೂ ಮತ್ತು ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಲು ಹರಸಾಹಸ ನಡೆಯುತ್ತಿದೆ. ಆದ್ದರಿಂದ ಸರಕಾರ ಕೂಡಲೇ ಹೆಚ್‌ಕೆಡಿಬಿಯಿಂದ ಅನುದಾನವನ್ನು ನೀಡಬೇಕು. ಕೊನೆಯ ಪಕ್ಷ ಸೌಕರ್ಯಗಳನ್ನು ನೀಡಲು ಮುಂದಾಗಬೇಕು. ಈ ಭಾಗದ ಅಭಿವೃದ್ಧಿಗಾಗಿ ಬರುವ ಹಣದಲ್ಲಿ ಶಿಕ್ಷಣ ಕ್ಷೇತ್ರಕ್ಕೂ ಒಂದಷ್ಟು ಅನುದಾನವನ್ನು ನೀಡಬೇಕು ಎಂದರು. ವೇದಿಕೆ ಅಧ್ಯಕ್ಷ ಹಾಗೂ ಕಾರ್ಯಕ್ರಮದ ರೂವಾರಿ ಪ್ರೋ| ಎಂ.ಬಿ.ಅಂಬಲಗಿ ಮಾತನಾಡಿ, ಇಂದು ಈ ಭಾಗದ ಶಿಕ್ಷಣ ಸಂಸ್ಥೆಗಳು ಕವಲು ದಾರಿಯಲ್ಲಿವೆ. ಸರಕಾರದ ಜೊತೆಯಲ್ಲಿ ಈ ಸಂಸ್ಥೆಗಳು ಉತ್ತಮವಾಗಿ ಶಿಕ್ಷಣ ನೀಡಲು ಅನುದಾನ ಅವಶ್ಯಕತೆ ಇದೆ ಎನ್ನುವುದನ್ನು ಹಲವಾರು ಬಾರಿ ಮುಖ್ಯಮಂತ್ರಿಗಳಿಗೆ ಹಾಗೂ ಶಿಕ್ಷಣ ಸಚಿವರಿಗೆ ಮನವರಿಕೆ ಮಾಡಿ ಕೊಟ್ಟಿದ್ದು, ಈ ತಿಂಗಳ 29ರಂದು ಮತ್ತೂಮ್ಮೆ ಹೈಕದ ಎಲ್ಲಾ ಖಾಸಗಿ ಸಂಸ್ಥೆಗಳ ಅಧ್ಯಕ್ಷರು ಹಾಗೂ ಕಾರ್ಯದರ್ಶಿಗಳೊಂದಿಗೆ ನಿಯೋಗದಲ್ಲಿ ಹೋಗಿ ಮುಖ್ಯಮಂತ್ರಿಗಳಿಗೂ ಹಾಗೂ ಸಚಿವ ತನ್ವೀರಸೇಠ್ಠ್  ಅವರಿಗೂ ಮನವಿ ನೀಡಲಾಗುವುದು ಎಂದರು. ಇದೇ ವೇಳೆ ಪ್ರಮುಖವಾದ ಮೂರು ನಿರ್ಣಯಗಳನ್ನು ಕೈಗೊಳ್ಳಲಾಯಿತು. ಈ ಭಾಗದಲ್ಲಿನ ಎಲ್ಲಾ ಖಾಸಗಿ ಸಂಸ್ಥೆಗಳಿಗೆ ಮೂಲ ಸೌಕರ್ಯ ಅಭಿವೃದ್ಧಿಗೆ ಅನುದಾನ ನೀಡಬೇಕು. ಖಾಸಗಿ ಅನುದಾನ ರಹಿತ ಶಾಲೆಗಳ ಮಕ್ಕಳಿಗೆ ಬಿಸಿಯೂಟ, ಸೈಕಲ್‌, ಬೂಟು, ಶಾಕ್ಸಗಳನ್ನು ನೀಡಬೇಕು ಅಲ್ಲದೆ, ಶಿಕ್ಷಕರಿಗೆ ಸಮರ್ಪಕ ವೇತನ ನೀಡಲು ಅನುದಾನವನ್ನು ಬಿಡುಗಡೆ ಮಾಡಬೇಕು ಎಂದು ನಿರ್ಣಯಿಸಲಾಯಿತು. ಸಭೆಯಲ್ಲಿ ರಾಯಚೂರು, ಬಳ್ಳಾರಿ, ದೇವದುರ್ಗ, ಯಾದಗಿರಿ, ಬೀದರ, ಕಲಬುರಗಿ, ಕೊಪ್ಪಳ ಜಿಲ್ಲೆಯ ಖಾಸಗಿ ಸಂಸ್ಥೆಗಳ ಆಡಳಿತ ಮಂಡಳಿ ಸದಸ್ಯರು ಭಾಗವಹಿಸಿದ್ದರು. ರಾಜ್ಯಸಭೆ ಸದಸ್ಯ ಬಸವರಾಜ ಪಾಟೀಲ ಸೇಡಂ, ನೋಬಲ್‌ ಸಂಸ್ಥೆಯ ಅನ್ವರ ಉಲ್‌ ಹಕ್‌, ಬೀದರ ಬಸವತೀರ್ಥ ವಿದ್ಯಾಪೀಠದ ಕೇಶವರಾವ ತಳಘಟಕರ್‌, ಕೋಸಗಿ ಶಿಕ್ಷಣ ಸಂಸ್ಥೆಯ ಡಾ| ವಿಜಯಲಕ್ಷ್ಮಿ ಕೋಸಗಿ, ಬೀದರನ ಜನಸೇವಾ ಪ್ರತಿಷ್ಠಾನದ ರೇವಣಸಿದ್ದಪ್ಪ ಜಲಾದೆ, ನಿವೃತ್ತ ಶಿಕ್ಷಣ ಇಲಾಖೆ ಅಧಿಕಾರಿ ಅಡಿವೆಪ್ಪ ಚಿಂಚೋಳಿ, ಕುರಿಕೋಟಾದ ಬಸವೇಶ್ವರ ಸಂಸ್ಥೆಯ ಚನ್ನವೀರಪ್ಪ ಸಲಗರ, ಲಿಂಗನಗೌಡ ಸಿರಗುಪ್ಪಾ, ಬಳ್ಳಾರಿಯ ನ್ಯಾಷನಲ್‌ ಸಂಸ್ಥೆಯ ಗೊಮ್ಮಟೇಶ್ವರ ಗೋಗಿ, ಯಾದಗಿರಿಯ ಶಿವಣ್ಣಗೌಡ ಪಾಟೀಲ, ಗಂಗಾವತಿಯ ಮನೋಜ ಹಿರೇಮಠ, ಧರ್ಮಣ್ಣ ಧನ್ನಿ, ಶಾಂತಕುಮಾರ ಬೆಳಮಗಿ ಇದ್ದರು. ಪರಮೇಶ್ವರ ಬನಸೋಡೆ ಕಾರ್ಯಕ್ರಮ ನಿರೂಪಿಸಿದರು. ನಿತೀನ ಕೋಸಗಿ ವಂದಿಸಿದರು.

ಟಾಪ್ ನ್ಯೂಸ್

rwytju11111111111

ರಾಯರ ವಾರದಂದು ನಿಮ್ಮ ರಾಶಿಫಲ ಹೇಗಿದೆ ನೋಡಿ!

ಕಡತಯಜ್ಞ : ಲಭಿಸಿತು ಅಗಾಧ ಜಾಗ! ಪ್ರಧಾನಿ ಸೂಚನೆಯನುಸಾರ ಸಮರೋಪಾದಿ ಕೆಲಸ

ಕಡತಯಜ್ಞ : ಲಭಿಸಿತು ಅಗಾಧ ಜಾಗ! ಪ್ರಧಾನಿ ಸೂಚನೆಯನುಸಾರ ಸಮರೋಪಾದಿ ಕೆಲಸ

ಚಿತ್ರಮಂದಿರಗಳ ಸಮಸ್ಯೆಯಲ್ಲಿ ಬಾಲಿವುಡ್‌

ಚಿತ್ರಮಂದಿರಗಳ ಸಮಸ್ಯೆಯಲ್ಲಿ ಬಾಲಿವುಡ್‌

ಅತ್ಯಂತ ಯಶಸ್ವಿ ಆಡಳಿತಗಾರ ಮೋದಿ: ಗೃಹ ಸಚಿವ ಅಮಿತ್‌ ಶಾ

ಅತ್ಯಂತ ಯಶಸ್ವಿ ಆಡಳಿತಗಾರ ಮೋದಿ: ಗೃಹ ಸಚಿವ ಅಮಿತ್‌ ಶಾ

ಚೀನಾ ಕಾಯ್ದೆಗೆ ಆಕ್ಷೇಪ; ಗಡಿ ಕಾಯ್ದೆ ಬಾಂಧವ್ಯಕ್ಕೆ ಧಕ್ಕೆ ತರಲಿದೆ

ಚೀನಾ ಕಾಯ್ದೆಗೆ ಆಕ್ಷೇಪ; ಗಡಿ ಕಾಯ್ದೆ ಬಾಂಧವ್ಯಕ್ಕೆ ಧಕ್ಕೆ ತರಲಿದೆ

ಖೇಲ್‌ರತ್ನಕ್ಕೆ 11 ಹೆಸರು ಶಿಫಾರಸು; ನೀರಜ್‌ ಚೋಪ್ರಾ,ಮಿಥಾಲಿ, ಚೆಟ್ರಿ ಹೆಸರು ಮುಂಚೂಣಿಯಲ್ಲಿ

ಖೇಲ್‌ರತ್ನಕ್ಕೆ 11 ಹೆಸರು ಶಿಫಾರಸು; ನೀರಜ್‌ ಚೋಪ್ರಾ,ಮಿಥಾಲಿ, ಚೆಟ್ರಿ ಹೆಸರು ಮುಂಚೂಣಿಯಲ್ಲಿ

ಸಂಕಷ್ಟದಲ್ಲಿ ಕನ್ನಡ ಪುಸ್ತಕೋದ್ಯಮ; ಕೋವಿಡ್‌ದಿಂದಾಗಿ ಬಿದ್ದಿದೆ ಪೆಟ್ಟು

ಸಂಕಷ್ಟದಲ್ಲಿ ಕನ್ನಡ ಪುಸ್ತಕೋದ್ಯಮ; ಕೋವಿಡ್‌ದಿಂದಾಗಿ ಬಿದ್ದಿದೆ ಪೆಟ್ಟು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6[police

ವ್ಯಕ್ತಿಗೆ ಪೊಲೀಸರಿಂದ ಥಳಿತ-ಆರೋಪ

5gas

ಬೆಲೆ ಏರಿಕೆ: ಸಿಲಿಂಡರ್‌ ಹೊತ್ತು ಪ್ರತಿಭಟನೆ

4chincholi

ಕಟ್ಟಡ ಕಾಮಗಾರಿ ಗುಣಮಟ್ಟದ್ದಿರಲಿ

3kannada

ಅದ್ದೂರಿ ರಾಜ್ಯೋತ್ಸವಕ್ಕೆ ಒತ್ತಾಯ

2life

ಆದರ್ಶ ನಂಬಿದ ಬದುಕು ಮಾದರಿ: ಡಾ|ಅಪ್ಪ

MUST WATCH

udayavani youtube

ಹಿಂದೂಗಳ ನಡುವೆ ನಮಾಜ್ : ಹೇಳಿಕೆಗಾಗಿ ಕ್ಷಮೆಯಾಚಿಸಿದ ವಕಾರ್ ಯೂನಿಸ್

udayavani youtube

ಅಂಗಾಂಗ ದಾನ ಎಂದರೇನು ಏನಿದರ ಮಹತ್ವ ?

udayavani youtube

ಸಾವಯವ ಕೃಷಿಯಲ್ಲಿ ಅನುಸರಿಸಬೇಕಿರುವ ಪ್ರಮುಖ ಅಂಶಗಳ ಬಗ್ಗೆ ನಿಮಗೆ ಗೊತ್ತೇ?

udayavani youtube

ಶಾಲೆಗೆ ಬಂತು ಬಿಸಿಯೂಟ : ದೋಟಿಹಾಳ ಶಾಲಾ ಮಕ್ಕಳ ಒಂದು ಕಿಲೋಮೀಟರ್ ಪಾದಯಾತ್ರೆಗೆ ಬ್ರೇಕ್

udayavani youtube

ಸಾವಿರಾರು ವರ್ಷಗಳ ಇತಿಹಾಸವಿರುವ ಕನ್ನಡ ಭಾಷೆಯನ್ನು ಉಳಿಸಬೇಕಾಗಿದೆ : ಆರ್. ಅಶೋಕ್

ಹೊಸ ಸೇರ್ಪಡೆ

rwytju11111111111

ರಾಯರ ವಾರದಂದು ನಿಮ್ಮ ರಾಶಿಫಲ ಹೇಗಿದೆ ನೋಡಿ!

ಕಡತಯಜ್ಞ : ಲಭಿಸಿತು ಅಗಾಧ ಜಾಗ! ಪ್ರಧಾನಿ ಸೂಚನೆಯನುಸಾರ ಸಮರೋಪಾದಿ ಕೆಲಸ

ಕಡತಯಜ್ಞ : ಲಭಿಸಿತು ಅಗಾಧ ಜಾಗ! ಪ್ರಧಾನಿ ಸೂಚನೆಯನುಸಾರ ಸಮರೋಪಾದಿ ಕೆಲಸ

ಚಿತ್ರಮಂದಿರಗಳ ಸಮಸ್ಯೆಯಲ್ಲಿ ಬಾಲಿವುಡ್‌

ಚಿತ್ರಮಂದಿರಗಳ ಸಮಸ್ಯೆಯಲ್ಲಿ ಬಾಲಿವುಡ್‌

ಶ್ರೀಕ್ಷೇತ್ರ ಧರ್ಮಸ್ಥಳ: ದೇವರ ದರ್ಶನ ಸಮಯ ಬದಲು

ಶ್ರೀಕ್ಷೇತ್ರ ಧರ್ಮಸ್ಥಳ: ದೇವರ ದರ್ಶನ ಸಮಯ ಬದಲು

ತನಿಖೆಯಿಂದ ವಾಂಖೆಡೆ ತೆರವಿಲ್ಲ; ಎನ್‌ಸಿಬಿ ಸ್ಪಷ್ಟನೆ

ತನಿಖೆಯಿಂದ ವಾಂಖೆಡೆ ತೆರವಿಲ್ಲ; ಎನ್‌ಸಿಬಿ ಸ್ಪಷ್ಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.