ಮಾನವ ಕಳ್ಳ ಸಾಗಾಣಿಕೆ ತಡೆಗೆ ಶ್ರಮ ಅಗತ್ಯ


Team Udayavani, Aug 2, 2022, 5:12 PM IST

6human

ಕಲಬುರಗಿ: ಮಾನವ ಕಳ್ಳ ಸಾಗಾಣಿಕೆ ತಡೆಗಟ್ಟಲು ಎಲ್ಲ ಇಲಾಖೆಗಳು ಸೇರಿ ಒಗ್ಗಟಿನಿಂದ ಕೆಲಸ ಮಾಡಬೇಕು. ಅಂದಾಗ ಮಾತ್ರ ಈ ಕೃತ್ಯವನ್ನು ಹತೋಟಿ ತರಲು ಸಹಾಯವಾಗುತ್ತದೆ ಎಂದು ಸಹಾಯಕ ಪೊಲೀಸ್‌ ಆಯುಕ್ತ ದೀಪನ್‌ ಎಂ.ಎನ್‌ ಹೇಳಿದರು.

ನಗರದ ಸರ್ಕಾರಿ ಬಾಲಕಿಯರ ಬಾಲಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೊಲೀಸ್‌ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಲಾಗಿದ್ದ ಮಾನವ ಕಳ್ಳ ಸಾಗಾಣಿಕೆ ತಡೆ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮಾನವ ಕಳ್ಳ ಸಾಗಾಣಿಕೆಗೆ ಅನೇಕ ಕಾರಣಗಳಿವೆ. ಅದರಲ್ಲಿ ಪ್ರಮುಖವಾಗಿ ಹೆಣ್ಣು ಮಕ್ಕಳನ್ನು ಲೈಂಗಿಕ ಕ್ರಿಯೆಗೆ ಬಳಸಿಕೊಳ್ಳುವುದು, ಅಂಗಾಂಗ ಮಾರಾಟ, ಬಾಲ ಕಾರ್ಮಿಕತೆ, ಬಾಲ್ಯ ವಿವಾಹದಂತ ಪದ್ಧತಿಗಳು ಕಾರಣವಾಗುತ್ತವೆ. ಇದನ್ನೆಲ್ಲ ತನಿಖೆ ಮಾಡಿ, ಜಾಗೃತಿ ಮೂಡಿಸುವಂತ ಕೆಲಸವಾಗಬೇಕು ಎಂದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ನವೀನ ಕುಮಾರ್‌ ಯು. ಮಾತನಾಡಿ, ಮಾನವ ಕಳ್ಳ ಸಾಗಾಣಿಕೆ ತಡೆಗಟ್ಟಲು ಸಮಾಜದಲ್ಲಿ ಜಾಗೃತಿ ಮೂಡಿಸಬೇಕು. ಕಾಳಜಿಯುತವಾಗಿ ಕೆಲಸ ನಿರ್ವಹಿಸಬೇಕು. ಮಕ್ಕಳಿಗೆ ಸದ್ಗುಣ, ಸಂಪ್ರದಾಯ ಹೇಳಬೇಕು ಎಂದು ಹೇಳಿದರು.

ಜಿಲ್ಲಾ ಕಾರ್ಮಿಕ ಅಧಿಕಾರಿ ರಮೇಶ ಸುಬುಂಡ ಮಾತನಾಡಿ, ಮಕ್ಕಳ ಅಪಹರಣ ಹಾಗೂ ಮಾರಾಟ ದೊಡ್ಡ ಮಾಫಿಯಾ ಆಗಿ ಬೆಳೆಯುತ್ತಿದೆ. ಈ ಕುರಿತು ಪಾಲಕರು ಹಾಗೂ ಮಕ್ಕಳಿಗೆ ಶಾಲೆ-ಕಾಲೇಜುಗಳಲ್ಲಿ ಈ ಕುರಿತು ಮಾಹಿತಿ ನೀಡಬೇಕು. ಅನೇಕ ಕಾರ್ಯಕ್ರಮಗಳ ಮುಖಾಂತರ ಜಾಗೃತಿ ಮೂಡಿಸುವ ಕೆಲಸವಾಗಬೇಕು ಎಂದರು.

ಶಿಶು ಅಭಿವೃದ್ಧಿ ಕಾರ್ಯಕ್ರಮ ಅಧಿಕಾರಿ ಪ್ರವೀಣ್‌ ಹೇರೂರ್‌ ಮಾತನಾಡಿ, ಮಾನವ ಕಳ್ಳ ಸಾಗಾಣಿಕೆಗೆ ಇತ್ತೀಚೆಯ ದಿನಗಳಲ್ಲಿ ಮೊದಲು ಕಾಲೇಜು ವಿದ್ಯಾರ್ಥಿಗಳ ಗುರಿಯಾಗಿಸಿಕೊಂಡು, ಆಕರ್ಷಣೆಗೆ ಒಳಪಡಿಸಿ, ನಂಬಿಸಿ, ಮೋಸ ಮಾಡಿ ಜಾಲದಲ್ಲಿ ಸಿಕ್ಕಿಸಿ ಸಾಗಾಣಿಕೆ ಮಾಡುತ್ತಿದ್ದಾರೆ ಎಂದು ಮಾಹಿತಿ ನೀಡಿದರು.

ಶಿಶು ಅಭಿವೃದ್ಧಿ ಯೋಜನಾಧಿಕಾರಿ ಭೀಮರಾಯ ಕಣ್ಣೂರು ಮಾತನಾಡಿದರು. ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮಲ್ಲಣ್ಣ ದೇಸಾಯಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ಎಂಆರ್‌ಎಂಸಿ ಪ್ರಾಧ್ಯಾಪಕ ಡಾ| ಶ್ರೀಶೈಲ ಘೂಳಿ ಉಪನ್ಯಾಸ ನೀಡಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವಿಜಯಕುಮಾರ, ಸಹಾಯಕ ಶಿಕ್ಷಣ ಅಧಿಕಾರಿ ಎಸ್‌.ಬಿ ಪಾಟೀಲ, ಮಹಿಳಾ ಪೊಲೀಸ್‌ ಠಾಣೆ ಆರಕ್ಷಕ ನದಾಫ್‌, ಕಾನೂನು ಅಧಿಕಾರಿ ಭರತೇಶ ಬಿ. ಶೀಲವಂತರ್‌ ಹಾಗೂ ವಿವಿಧ ಇಲಾಖೆ ಸಿಬ್ಬಂದಿ ಇದ್ದರು. ಇದಕ್ಕೂ ಮುನ್ನ, ಮಾನವ ಕಳ್ಳ ಸಾಗಾಣಿಕೆ ತಡೆ ದಿನಾಚರಣೆ ಅಂಗವಾಗಿ ರಂಗಮಂದಿರದಿಂದ ಜಗತ್‌ ವೃತ್ತದವರೆಗೆ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿತ್ತು.

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.