ಹೆಣ್ಣು ಶಿಶು ಮಾರಾಟ: ಐವರ ಬಂಧನ

Team Udayavani, Feb 26, 2018, 10:38 AM IST

gul-5.jpg

ಚಿಂಚೋಳಿ: 15 ಸಾವಿರ ರೂ.ಗೆ ಮಾರಾಟವಾಗಿದ್ದ ಹೆಣ್ಣು ಶಿಶುವನ್ನು ಪೊಲೀಸರು ಮತ್ತು ಇತರ ಅಧಿಕಾರಿಗಳು ವಾಪಾಸ್‌ ಪಡೆದ ಘಟನೆ ನಡೆದಿದೆ. ಚಂದು ನಾಯಕ ತಾಂಡಾದಲ್ಲಿ ರಾಮಚಂದ್ರ ಸಕ್ರು ಅನಸೂಯಾ ದಂಪತಿ ಹೊಟ್ಟೆಪಾಡಿಗಾಗಿ ಒಂದು ತಿಂಗಳ ಹೆಣ್ಣು ಹಸುಗೂಸನ್ನು ಆಶಾ ಕಾರ್ಯಕರ್ತೆಯೊಬ್ಬರ ಮಧ್ಯಸ್ಥಿಕೆಯಲ್ಲಿ ಹೈದರಾಬಾದ ಮೂಲದ ದಂಪತಿಗೆ ಕಳೆದ ಗುರುವಾರ ಮಾರಾಟ ಮಾಡಿದ್ದರು.

ಕಲಬುರಗಿ ಮಕ್ಕಳ ಸಹಾಯವಾಣಿಗೆ ಫೆ.22ರಂದು ಅನಾಮಧೇಯ ವ್ಯಕ್ತಿಯೊಬ್ಬರು ದೂರು ನೀಡಿದ ಹಿನ್ನೆಲೆಯಲ್ಲಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸಿ.ವಿ. ರಾಮನ್‌, ಜಿಲ್ಲಾಸಂಯೋಜಕ ಬಸವರಾಜ ತೆಂಗಳಿ, ಸುಂದರ, ಚಿಂಚೋಳಿ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸರೋಜಾರೆಡ್ಡಿ ಚಿಮ್ಮನಚೋಡ, ಕುಂಚಾವರಂ ಪೊಲೀಸರು ಕಾರ್ಯ ಪ್ರವೃತ್ತರಾಗಿ ಶಿಶುವನ್ನು ಮರಳಿ ಪಡೆಯುವಲ್ಲಿ ಯಶಸ್ವಿಯಾದ್ದಾರೆ. 

ಘಟನೆ ವಿವರ: ಚಂದು ನಾಯಕ ತಾಂಡಾದ ರಾಮಚಂದ್ರ ಸಕ್ರು ಎಂಬಾತನಿಗೆ ಮೊದಲ ಪತ್ನಿಯಿಂದ ಇಬ್ಬರು ಹೆಣ್ಣು ಮಕ್ಕಳಿದ್ದರು. ಆದರೆ ಅವಳು ಮೃತಪಟ್ಟ ನಂತರ ಅನುಸೂಯಾ ಎಂಬಾಕೆ ಜತೆ ಎರಡನೇ ಮದುವೆಯಾಯಿತು.

ಸುಜಾತಾ(15), ರಹಿತಾ(10), ಸಂಧ್ಯಾ(9), ಶೋಭಾ(7) ಹಾಗೂ ಶ್ರೀಶಾಂತ(5) ಮಕ್ಕಳಿದ್ದಾರೆ. ಈ ನಡುವೆ ಅನುಸೂಯಾ ಕುಂಚಾವರಂ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಜ.9ರಂದು ಹೆಣ್ಣು ಶಿಶುವಿಗೆ ಜನ್ಮ ನೀಡಿದಳು. ಮತ್ತೆ ಹೆಣ್ಣು ಹುಟ್ಟಿದೆ ಎಂದು ಆಕೆ ಗಂಡ ರಾಮಚಂದ್ರ ಶಾದೀಪುರದ ಆಶಾ ಕಾರ್ಯಕರ್ತೆ ಸುವರ್ಣಾ ಎಂಬುವರ ಮಧ್ಯೆಸ್ಥಿತಿಕೆಯಿಂದ 15 ಸಾವಿರ ರೂ. ಗೆ ಹೈದ್ರಾಬಾದ ನಗರದ ಟಿ. ಪಾಲ್‌ ಮತ್ತು ಶಾರದಾ ಎಂಬ ದಂಪತಿಗೆ ಹೆಣ್ಣು ಮಗುವನ್ನು ಮಾರಾಟ ಮಾಡಿದ್ದ.

ಕಲಬುರಗಿ ಮಕ್ಕಳ ಸಹಾಯವಾಣಿಗೆ ಬಂದ ದೂರು ಆಧರಿಸಿ ಅಧಿಕಾರಿಗಳು ಮೊದಲು ಶಾದೀಪುರ ಆಶಾ ಕಾರ್ಯಕರ್ತೆಯನ್ನು ತಮ್ಮ ವಶಕ್ಕೆ ಪಡೆದು ವಿಚಾರಿಸಿದರು. ನಂತರ ತಾಂಡೂರ, ವಿಕಾರಾಬಾದ, ಬಶಿರಾಬಾದಗೆ ಭೇಟಿ ನೀಡಿ ಪರಿಶೀಲಿಸಿದರು. ಖಚಿತ ಮಾಹಿತಿ ಮೇರೆಗೆ ಹೈದ್ರಾಬಾದಿನಲ್ಲಿರುವ ಟಿ.ಪಾಲ್‌, ಶಾರದ ದಂಪತಿ ಸಂಪರ್ಕಿಸಿದಾಗ ವಿಕಾರಾಬಾದ ಹತ್ತಿರ ಕೆರೋಳಿ ಕ್ರಾಸ್‌ ಪೊಲೀಸರು ಹೆಣ್ಣು ನವಜಾತ ಶಿಶುವನ್ನು ವಶಕ್ಕೆ ಪಡೆದುಕೊಂಡರು. 

ಕುಂಚಾವರಂ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಆಶಾ ಕಾರ್ಯಕರ್ತೆ ಸುವರ್ಣ, ರಾಮಚಂದ್ರ, ಅನುಸೂಯಾ ಮತ್ತು ಟಿ. ಪಾಲ್‌, ಶಾರದ ಎಂಬುವರನ್ನು ಶನಿವಾರ ಬಂಧಿಸಿ, ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ ಎಂದು ಕುಂಚಾವರ ಠಾಣೆ ಎಎಸ್‌ಐ ಮೈನೋದ್ದಿನ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

RBI

RBI; 2 ವರ್ಷದಲ್ಲಿ ಗೃಹ ಸಾಲ ಬಾಕಿ 10 ಲಕ್ಷ‌ ಕೋಟಿ ರೂ.ಗೆ ಏರಿಕೆ

1-wqeqwe

Congress; ಖರ್ಗೆ, ರಾಹುಲ್‌, ಸಿಎಂ ಸಿದ್ದು ಚಿಟ್‌ ಚಾಟ್‌ ವೀಡಿಯೋ ವೈರಲ್‌

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

1-anna

BJP; ಅಸಮರ್ಥ ಅಣ್ಣಾಮಲೈ ರಾಜ್ಯ ಬಿಟ್ಟಿದ್ದು ಒಳ್ಳೆಯದಾಯಿತು: ಪ್ರಿಯಾಂಕ್‌ ಖರ್ಗೆ

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Ramalinga reddy 2

BJP ಒಂದಂಕಿಗೆ ಕುಸಿತ: ಸಚಿವ ರಾಮಲಿಂಗಾ ರೆಡ್ಡಿ ಭವಿಷ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-anna

BJP; ಅಸಮರ್ಥ ಅಣ್ಣಾಮಲೈ ರಾಜ್ಯ ಬಿಟ್ಟಿದ್ದು ಒಳ್ಳೆಯದಾಯಿತು: ಪ್ರಿಯಾಂಕ್‌ ಖರ್ಗೆ

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

DK Sivakumar: ಪ್ರಜ್ವಲ್‌ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ

DK Sivakumar: ಪ್ರಜ್ವಲ್‌ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ

Prajwal Revanna: ಪ್ರಜ್ವಲ್‌ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್‌

Prajwal Revanna: ಪ್ರಜ್ವಲ್‌ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್‌

Kamalapur: ಜಾತಿ ನಿಂದನೆ ಕೇಸ್‌ಗೆ ಹೆದರಿ ಯುವಕ ಆತ್ಮಹತ್ಯೆ

Kamalapur: ಜಾತಿ ನಿಂದನೆ ಕೇಸ್‌ಗೆ ಹೆದರಿ ಯುವಕ ಆತ್ಮಹತ್ಯೆ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

BJP Symbol

Madhya Pradesh: ಮತ್ತೊಬ್ಬ ಕಾಂಗ್ರೆಸ್‌ ಎಂಎಲ್‌ಎ ಬಿಜೆಪಿಗೆ

arrested

ನೂಪುರ್‌ ಶರ್ಮಾ, ಬಿಜೆಪಿ ಶಾಸಕನ ಹತ್ಯೆ ಸಂಚು: ಮೌಲ್ವಿ ಬಂಧನ

RBI

RBI; 2 ವರ್ಷದಲ್ಲಿ ಗೃಹ ಸಾಲ ಬಾಕಿ 10 ಲಕ್ಷ‌ ಕೋಟಿ ರೂ.ಗೆ ಏರಿಕೆ

1-wqeqwe

Congress; ಖರ್ಗೆ, ರಾಹುಲ್‌, ಸಿಎಂ ಸಿದ್ದು ಚಿಟ್‌ ಚಾಟ್‌ ವೀಡಿಯೋ ವೈರಲ್‌

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.