ಚುನಾವಣೆ ಬಳಿಕ ಸರಕಾರ ಪತನ: ಜಾಧವ್‌

Team Udayavani, Mar 18, 2019, 5:56 AM IST

gul-3.jpg

ವಾಡಿ: ಲೋಕಸಭೆ ಚುನಾವಣೆ ನಡೆದು 15 ದಿನಗಳ ನಂತರ ರಾಜ್ಯದ ಮೈತ್ರಿಕೂಟ ಸರಕಾರ ಉರುಳಿ ಹೋಗಲಿದೆ. ಕೇಂದ್ರ ಮತ್ತು ರಾಜ್ಯದಲ್ಲೂ ಬಿಜೆಪಿ ಸರಕಾರವೇ ಆಡಳಿತ ನಡೆಸಲಿದೆ ಎಂದು ಶಾಸಕ ಡಾ| ಉಮೇಶ ಜಾಧವ್‌ ಭವಿಷ್ಯ ನುಡಿದರು.

ರಾವೂರ ಗ್ರಾಮದಲ್ಲಿ ರವಿವಾರ ಏರ್ಪಡಿಸಲಾಗಿದ್ದ ಜಿಪಂ ವಲಯ ಬಿಜೆಪಿ ಕಾರ್ಯಕರ್ತರ ಸಭೆ ಉದ್ದೇಶಿಸಿ ಅವರು ಮಾತನಾಡಿದರು. ಕಲಬುರಗಿ ಲೋಕಸಭೆಯ ಅಧಿ ಕೃತ ಬಿಜೆಪಿ ಅಭ್ಯರ್ಥಿಯಾಗಿ ನನ್ನ ಹೆಸರು ಘೋಷಣೆಯಾಗಲಿದೆ. ಉಮೇಶ ಜಾಧವ್‌ ಎಂದು ತಿಳಿದು ನನಗೆ ಮತ ನೀಡಬೇಡಿ. ದೇಶದ ಸುಭದ್ರತೆ ಕಾಪಾಡುತ್ತಿರುವ ದಿಟ್ಟ ರಾಜಕಾರಣಿ ನರೇಂದ್ರ ಮೋದಿ ಅವರನ್ನು ಮನದಲ್ಲಿಟ್ಟುಕೊಂಡು ಮತ ಕೊಡಿ ಎಂದರು.

ಕ್ಷೇತ್ರದಾದ್ಯಂತ ನನಗೆ ಉತ್ತಮ ಸ್ಪಂದನೆ ಸಿಗುತ್ತಿದೆ. ಬಿಜೆಪಿಯ ಬಿರುಗಾಳಿ ಎಲ್ಲೆಡೆ ಬೀಸುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅಭಿವೃದ್ಧಿ ಕಾರ್ಯಗಳು ನನಗೆ ಶ್ರೀರಕ್ಷೆಯಾಗಲಿವೆ. ದೇಶ ಮತ್ತು ಮೋದಿ ಅವರಿಗಾಗಿ ನಾವು ಒಗ್ಗಟ್ಟಾಗಬೇಕು. ಬದಲಾವಣೆ ಗಾಳಿಯನ್ನು ನಾವು ಚೆನ್ನಾಗಿ ಉಪಯೋಗಿಸಿಕೊಳ್ಳಬೇಕಿದೆ. ಒಂದೊಮ್ಮೆ ಬಿಜೆಪಿ ಸೋತರೆ, ಮತ್ತೆ 40 ವರ್ಷ ನಾವು ಕಾಂಗ್ರೆಸ್‌ನ ಜೀತದಾಳುಗಳಾಗಿ ಬದುಕಬೇಕಾಗುತ್ತದೆ. ಕಲಬುರಗಿ ಲೋಕಸಭೆ ಚುನಾವಣೆಯನ್ನು ಕಾರ್ಯಕರ್ತರು ಗಂಭೀರವಾಗಿ ಪರಿಗಣಿಸುವ ಮೂಲಕ ಐತಿಹಾಸಿಕ ಫಲಿತಾಂಶ ನೀಡಬೇಕು ಎಂದು ಹೇಳಿದರು.

ಜಿಲ್ಲೆಯಲ್ಲಿ ಆಡಳಿತ ಯಂತ್ರ ಕಾಂಗ್ರೆಸ್‌ಗೆ ಬಳಕೆಯಾಗದೆ ಪಾರದರ್ಶಕ ಚುನಾವಣೆ ನಡೆದರೆ ಎರಡು ಲಕ್ಷ ಮತಗಳ ಅಂತರದಿಂದ ನಾನು ಗೆಲ್ಲುವುದು ಖಚಿತ. ಮೇರಾ ಭೂತ್‌ ಸಬ್‌ ಸೇ ಮಜೂತ್‌ ಎನ್ನುವ ಘೋಷವಾಕ್ಯದಡಿ ಕಾರ್ಯಕರ್ತರು ಸ್ಫೂರ್ತಿಯಿಂದ ಚುನಾವಣೆ ಪ್ರಚಾರ ಕೈಗೊಳ್ಳಬೇಕು. ಕಾರ್ಯಕರ್ತರು ಯಾರಿಗೂ ಹೆದರಬಾರದು. 20 ಜನರುಳ್ಳ ಒಂದು ಟೀಂ ಕಲಬುರಗಿ ನಗರದಲ್ಲಿ ಇರಲಿದೆ. ಯಾವುದೇ ಗಲಾಟೆ ಸಂದರ್ಭದಲ್ಲಿ ಕರೆದರೂ ಆ ತಂಡ ತಕ್ಷಣ ನೀವಿದ್ದಲ್ಲಿಗೆ ಬಂದು ನೆರವಾಗಲಿದೆ ಎಂದು ಹೇಳಿದರು.

ಮಾಜಿ ಶಾಸಕರಾದ ವಾಲ್ಮೀಕಿ ನಾಯಕ, ವಿಶ್ವನಾಥ ಪಾಟೀಲ ಹೆಬ್ಟಾಳ, ಎಸ್‌ಸಿ ಮೋರ್ಚಾ ತಾಲೂಕು ಅಧ್ಯಕ್ಷ ರಾಜು ಮುಕ್ಕಣ್ಣ ಮಾತನಾಡಿದರು. ಜಿಪಂ ಸದಸ್ಯ ಅಶೋಕ ಸಗರ ಅಧ್ಯಕ್ಷತೆ ವಹಿಸಿದ್ದರು. ಲೋಕ ಚುನಾವಣೆ ಚಿತ್ತಾಪುರ ಪ್ರಭಾರಿ ಶರಣಪ್ಪ ತಳವಾರ, ಅಶೋಕ ಹೂಗಾರ, ಬಿಜೆಪಿ ತಾಲೂಕು ಅಧ್ಯಕ್ಷ ಮಲ್ಲಿಕಾರ್ಜುನ ಎಮ್ಮೆನೋರ, ಪ್ರಧಾನ ಕಾರ್ಯದರ್ಶಿ ಶರಣು ಜ್ಯೋತಿ, ಮುಖಂಡರಾದ ಶಿವಲಿಂಗಪ್ಪ ವಾಡೇದ, ಡಾ| ಗುಂಡಣ್ಣ ಬಾಳಿ, ಚೆನ್ನಣ್ಣ ಬಾಳಿ, ದೇವಿಂದ್ರ ತಳವಾರ, ಬಸವರಾಜ ಇಂಗಿನ್‌, ಅಣ್ಣಾರಾವ್‌ ಬಾಳಿ, ಅರವಿಂದ ಚವ್ಹಾಣ ಪರಶುರಾಮ ತುನ್ನೂರ, ಮಲ್ಲಿನಾಥ ದೊಡ್ಡಮನಿ, ಸಾಯಬಣ್ಣ ತಳವಾರ ಹಾಗೂ ನೂರಾರು ಕಾರ್ಯಕರ್ತರು ಪಾಲ್ಗೊಂಡಿದ್ದರು

ಟಾಪ್ ನ್ಯೂಸ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.