ಪದವಿ-ಸ್ನಾತಕೋತ್ತರ ಪರೀಕ್ಷೆಗೆ ಗುವಿವಿ ಸಿದ್ಧತೆ


Team Udayavani, Jun 26, 2021, 7:33 PM IST

xಚವಬನಮ,ಮನಲಲಲಲಲಲಲ

ಕಲಬುರಗಿ: ಕೊರೊನಾ ಕಾರಣದಿಂದ ವಿಳಂಬವಾಗಿರುವ ಪದವಿ ಮತ್ತು ಸ್ನಾತಕೋತ್ತರ ಪದವಿ ಪರೀಕ್ಷೆಗಳನ್ನು ನಡೆಸಲು ಗುಲಬರ್ಗಾ ವಿಶ್ವವಿದ್ಯಾಲಯ ಸಜ್ಜಾಗುತ್ತಿದ್ದು, 2020-21ನೇ ಶೈಕ್ಷಣಿಕ ಸಾಲಿನ ಪರೀಕ್ಷೆಯನ್ನು ಸೆಮಿಸ್ಟರ್‌ ಪ್ರಕಾರವೇ ಎರಡು ಹಂತದಲ್ಲಿ ಹಮ್ಮಿಕೊಳ್ಳಲು ಉದ್ದೇಶಿಸಲಾಗಿದೆ ಎಂದು ವಿಶ್ವವಿದ್ಯಾಲಯದ ಕುಲಪತಿ ಪ್ರೊ| ದಯಾನಂದ ಅಗಸರ ತಿಳಿಸಿದರು.

ಗುವಿವಿ ರಾಧಾಕೃಷ್ಣ ಸಭಾಂಗಣದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2020- 21ನೇ ಶೈಕ್ಷಣಿಕ ಸಾಲಿನ ಪರೀಕ್ಷೆಗಳನ್ನು ಪೂರ್ಣಗೊಳಿಸಿ, ಮುಂದಿನ ಶೈಕ್ಷಣಿಕ ವರ್ಷ ಆರಂಭಿಸುವ ಅಗತ್ಯ ಇದೆ. ಆದ್ದರಿಂದ ವಿವಿ ಮಟ್ಟದಲ್ಲಿ ತಾತ್ಕಾಲಿಕವಾದ ವೇಳಾಪಟ್ಟಿ ಸಿದ್ಧಪಡಿಸಲಾಗಿದೆ. ಸರ್ಕಾರದ ಅನುಮತಿಗಾಗಿ ಕಾಯು ತ್ತಿದ್ದೇವೆ ಎಂದು ಹೇಳಿದರು.

ಪದವಿ ಹಂತದ 1, 3, 5ನೇ ಸೆಮಿಸ್ಟರ್‌ ಹಾಗೂ ಸ್ನಾತಕೋತ್ತರ ಪದವಿಯ ಒಂದು ಮತ್ತು 3ನೇ ಸೆಮಿಸ್ಟರ್‌ ಪರೀಕ್ಷೆಗಳನ್ನು ಜುಲೈ 15ರಿಂದ ಆರಂಭಿಸಲಾಗುತ್ತದೆ. ಈ ಪರೀಕ್ಷೆಯನ್ನು 25 ದಿನಗಳಲ್ಲಿ ಮುಗಿಸಲಾಗುವುದು. ನಂತರದ 15 ದಿನಗಳಲ್ಲಿ ಎಲ್ಲ ಸೆಮಿಸ್ಟರ್‌ಗಳ ಫಲಿತಾಂಶ ಪ್ರಕಟಿಸಲಾಗುವುದು ಎಂದರು. ಅದೇ ರೀತಿ ಪದವಿ ಹಂತದ 2, 4, 6ನೇ ಸೆಮಿಸ್ಟರ್‌ ಮತ್ತು ಸ್ನಾತಕೋತ್ತರ ಪದವಿಯ 2 ಮತ್ತು 4ನೇ ಸೆಮಿಸ್ಟರ್‌ನ ಪರೀಕ್ಷೆಗಳನ್ನು ಸೆಪ್ಟೆಂಬರ್‌ ತಿಂಗಳಲ್ಲಿ ನಡೆಸಲು ಉದ್ದೇಶಿಸಲಾಗಿದೆ. ಈ ಪರೀಕ್ಷೆಯ ಫಲಿತಾಂಶ ನವೆಂಬರ್‌ 15ರೊಳಗೆ ಪ್ರಕಟಿಸಿ, 2020-21ನೇ ಸಾಲಿನ ಎಲ್ಲ ಪ್ರಕ್ರಿಯೆಗಳನ್ನು ಅಂತ್ಯಗೊಳಿಸಲು ತೀರ್ಮಾನಿಸಲಾಗಿದೆ ಎಂದು ವಿವರಿಸಿದರು.

ಕೊರೊನಾ ಹಾವಳಿಯಿಂದ ಪರೀಕ್ಷೆಗಳು ವಿಳಂಬ ವಾಗಿವೆ. ಈಗಾಗಲೇ ವಿದ್ಯಾರ್ಥಿಗಳು ಮುಂದಿನ ಸೆಮಿಸ್ಟರ್‌ಗಳಿಗೆ ಪ್ರವೇಶ ಪಡೆದಿದ್ದಾರೆ. ಈಗ ಅವರೆಲ್ಲರೂ ಮುಂದಿನ ಸೆಮಿಸ್ಟರ್‌ನ ಅಭ್ಯಾಸ ಮಾಡುತ್ತಿದ್ದಾರೆ. ಆದರೆ, ಎಲ್ಲ ವಿದ್ಯಾರ್ಥಿಗಳ ಭವಿಷ್ಯದ ಉದ್ದೇಶದಿಂದ ಎರಡೂ ಸೆಮಿಸ್ಟರ್‌ ಪರೀಕ್ಷೆಗಳನ್ನು ನಡೆಸಲು ಉದ್ದೇಶಿಸಲಾಗಿದೆ ಎಂದು ಕುಲಪತಿಗಳು ಸ್ಪಷ್ಟಪಡಿಸಿದರು. ಈಗಾಗಲೇ ನಾವು ಮುಂದಿನ ಸೆಮಿಸ್ಟರ್‌ಗೆ ಹೋಗಿ ದ್ದರಿಂದ ಹಿಂದಿನ ಸೆಮಿಸ್ಟರ್‌ನ ಪರೀಕ್ಷೆ ಬರೆಯಲು ಕಷ್ಟ ವಾಗುತ್ತದೆ. ಹೀಗಾಗಿ ಹಿಂದಿನ ಸೆಮಿಸ್ಟರ್‌ ಪರೀಕ್ಷೆಗಳನ್ನು ಕೈಬಿಡಬೇಕೆಂದು ವಿದ್ಯಾರ್ಥಿಗಳಿಂದ ಒತ್ತಾಯ ಕೇಳಿ ಬಂದಿದೆ.

ವಿದ್ಯಾರ್ಥಿಗಳ ಭವಿಷ್ಯ ಮುಖ್ಯವಾಗಿದ್ದರಿಂದ ಅವರಿಗೆ ತೊಂದರೆಯಾಗದಂತೆ ಪರೀಕ್ಷೆ ನಡೆಸಲಾಗುತ್ತದೆ. ಇದಕ್ಕಾಗಿ ಎರಡು ಅಥವಾ ಮೂರು ವಾರಗಳ ತರಗತಿಗಳನ್ನು ಹಮ್ಮಿಕೊಳ್ಳಲಾಗುವುದು. ಈ ಮೂಲಕ ಹಿಂದಿನ ಪಠ್ಯಕ್ರಮದ ಗೊಂದಲ ಬಗೆಹರಿಸಿ ಪರೀಕ್ಷೆ ನಡೆಸಲಾಗುವುದು ಎಂದು ಮಾಹಿತಿ ನೀಡಿದರು.

ಹೊಸ ಶೈಕ್ಷಣಿಕ ವರ್ಷ: 2020-21ನೇ ಶೈಕ್ಷಣಿಕ ಸಾಲಿನ ಪರೀಕ್ಷೆಗಳನ್ನು ಮುಗಿಸಿ, 2021-22ನೇ ಸಾಲಿನ ಶೈಕ್ಷಣಿಕ ವರ್ಷ ಆರಂಭಿಸಲು ಸಜ್ಜು ಮಾಡಿಕೊಳ್ಳಲಾಗುತ್ತಿದೆ. ಕೆಲವು ವಿಶ್ವವಿದ್ಯಾಲಯಗಳು ಅಕ್ಟೋಬರ್‌ ಮೊದಲ ವಾರದಲ್ಲಿ ಹೊಸ ಶೈಕ್ಷಣಿಕ ಚಟುವಟಿಕೆಗಳನ್ನು ಆರಂಭಿಸುವುದಾಗಿ ಹೇಳಿದ್ದಾರೆ. ಆದರೆ, ಗುಲಬರ್ಗಾ ವಿಶ್ವವಿದ್ಯಾಲಯ ನವೆಂಬರ್‌ 15ರ ವೇಳೆ ತನ್ನ ಶೈಕ್ಷಣಿಕ ವರ್ಷಕ್ಕೆ ಚಾಲನೆ ನೀಡಲಿದೆ ಎಂದು ತಿಳಿಸಿದರು.

ಅನುದಾನ ಬಳಕೆ ವಿವರ: ಶೈಕ್ಷಣಿಕ ಚಟುವಟಿಕೆಗಳ ಜತೆಗೆ ಅಭಿವೃದ್ಧಿ ಕಾರ್ಯಗಳನ್ನು ಮಾಡಲಾಗುತ್ತಿದೆ. ಗುವಿವಿಗೆ ರೂಸಾ ಅನುದಾನದಲ್ಲಿ 20 ಕೋಟಿ ರೂ. ಅನುದಾನ ಬಂದಿತ್ತು. ಇದರಲ್ಲಿ ಶೇ.80ರಷ್ಟು ಅನುದಾನ ಬಳಸಿಕೊಳ್ಳಲಾಗಿದೆ ಕುಲಪತಿಗಳು ಮಾಹಿತಿ ನೀಡಿದರು. ರೂಸಾ ಅನುದಾನದಲ್ಲಿ ಪರಿಸರ ವಿಜ್ಞಾನ ವಿಭಾಗದ ಕಟ್ಟಡ ಪೂರ್ಣವಾಗಿದೆ. ಮಹಿಳಾ ವಸತಿ ನಿಲಯ, ಹೇಮರಡ್ಡಿ ಮಲ್ಲಮ್ಮ ಅಧ್ಯಯನ ಕೇಂದ್ರದ ಕಟ್ಟಡಗಳು ಉದ್ಘಾಟನೆಗೆ ಸಿದ್ಧವಾಗಿವೆ.

ಜತೆಗೆ ವರ್ಚುವಲ್‌ ಲೈಬ್ರರಿ ಪುನೆcàತನಕ್ಕೆ ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಮತ್ತು ಸಾಂಸ್ಕೃತಿಕ ಸಂಘದಿಂದ ಒಂದು ಕೋಟಿ ರೂ. ಬಿಡುಗಡೆಯಾಗಿದೆ. ಕೌಶಲ ಹಾಗೂ ಔದ್ಯೋಗಿಕ ಆಧಾರಿತ ಚಟುವಟಿಕೆಗಳಿಗಾಗಿ ಕೆಕೆಆರ್‌ಡಿಬಿಯಿಂದ ಐದು ಕೋಟಿ ಅನುದಾನ ನೀಡುವಂತೆ ಪ್ರಸ್ತಾವವೆ ಸಲ್ಲಿಸಲಾಗಿದೆ ಎಂದರು.

ಟಾಪ್ ನ್ಯೂಸ್

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.