ಅಧಿಕಾರ ಸಿಕ್ಕಿದೆ ಕೆಲಸ ಮಾಡಿ ಮಾತನಾಡಿ

Team Udayavani, Jan 19, 2018, 10:54 AM IST

02-mallikarjun-kharge2.jpg

ಕಲಬುರಗಿ: ಕೈಗೆ ಅಧಿಕಾರ ಸಿಕ್ಕಿದೆ. ಮೊದಲು ಕೆಲಸ ಮಾಡಿ, ತದನಂತರ ಮಾತನಾಡಿ ಎಂದು ಕಾಂಗ್ರೆಸ್‌ ಸಂಸದೀಯ ನಾಯಕ ಡಾ| ಮಲ್ಲಿಕಾರ್ಜುನ ಖರ್ಗೆ ಸಲಹೆ ನೀಡಿದರು. ಗುರುವಾರ ಎಚ್‌ಕೆಇ ಸಂಸ್ಥೆಯ ಪಿಡಿಎ ಇಂಜಿನಿಯರಿಂಗ್‌ ಕಾಲೇಜಿನ ಆಡಳಿತ ಭವನ ಉದ್ಘಾಟನೆ ನೆರವೇರಿಸಿ ತದನಂತರ ನಡೆದ ಸಮಾರಂಭ ಉದ್ದೇಶಿಸಿ ಮಾತನಾಡಿದ ಅವರು, ಅನಂತಕುಮಾರ ಹೆಗಡೆ ಸಚಿವರಾಗಿ ಹೈ.ಕ ಭಾಗಕ್ಕೆ ಅದರಲ್ಲೂ ರಾಜ್ಯಕ್ಕೆ ಏನು ಕೊಡುಗೆ ನೀಡಿದ್ದಾರೆ. ಒಂದು ಸಂಸ್ಥೆಯನ್ನು ತರದೇ ತಳಬುಡವಿಲ್ಲದ ಟೀಕೆ ಮಾಡುವುದರಲ್ಲಿ ಯಾವುದೇ ಅರ್ಥವಿಲ್ಲ. ಅಧಿಕಾರ ಸಿಕ್ಕಿದೆ. ಮೊದಲು ಕೆಲಸ ಮಾಡಿ, ನಂತರ ಮಾತನಾಡಿ ಎಂದು ವಾಗ್ಧಾಳಿ ನಡೆಸಿದರು. ಗುಲಾಮರ ಗುಲಾಮಗಿರಿಯಿಂದ ಸ್ವಾತಂತ್ರ್ಯ ಪಡೆದ ನಾವು ಆರಂಭದಿಂದಲೂ ಹಿಂದೆ ಇದ್ದೇವೆ ಎಂದರು.

ಸ್ವಾತಂತ್ರ್ಯದ ನಂತರದ ದಿನಗಳಲ್ಲಿ ಮೈಸೂರು, ಕರಾವಳಿ ಭಾಗದಲ್ಲಿ ಹಲವು ಕಾಲೇಜುಗಳಿದ್ದರೆ ಕಲಬುರಗಿಯಲ್ಲಿ ಒಂದೇ ಕಾಲೇಜಿತ್ತು. ಹೀಗೆ ಹಲವು ಅಭಿವೃದ್ಧಿ ಕಾರ್ಯಗಳು ಮೊದಲು ಆ ಭಾಗದಲ್ಲಿ ಆರಂಭಗೊಂಡ ನಂತರ ಈ ಕಡೆ ಬರುತ್ತಿದ್ದವು. ಇದೇ ಹಿನ್ನೆಲೆಯಲ್ಲಿ ಅಭಿವೃದ್ಧಿಯಲ್ಲಿ ಸಮಾನತೆ ಸಾಧಿಸಲು 371ನೇ (ಜೆ) ವಿಧಿ ತರಲಾಗಿದೆ. 371ನೇ ವಿಧಿಗೆ ಇದೇ ಬಿಜೆಪಿಯವರು ವಿರೋಧ ವ್ಯಕ್ತಪಡಿಸಿದ್ದರು ಎಂದರು.

ಈ ಹಿಂದೆ ತಾವು ಕೈಗಾರಿಕಾ ಸಚಿವರಾಗಿದ್ದಾಗ ಕಲಬುರಗಿಗೆ ಜರ್ಮನ್‌ ಸಹಾಯದೊಂದಿಗೆ 12 ಕೋಟಿ ರೂ. ವೆಚ್ಚದಲ್ಲಿ ಸರ್ಕಾರಿ ತಾಂತ್ರಿಕ ಉಪಕರಣಗಾರ (ಜಿಟಿಡಿಸಿ) ಕಾಲೆಜು ಸ್ಥಾಪನೆಗೆ ತಿಂಗಳೊಳಗೆ ಅಗತ್ಯ ಭೂಮಿ ನೀಡಿ ಕಾಲೇಜನ್ನು ಪ್ರಾರಂಭಿಸಿ ಕೌಶಲ್ಯಾಭಿವೃದ್ಧಿಗೆ ನಾಂದಿ ಹಾಡಲಾಗಿದೆ ಎಂದು ಹೇಳಿದರು. 

ಜಿಟಿಡಿಸಿಯಲ್ಲಿ ಶಿಕ್ಷಣ ಪಡೆದು ಪ್ರಮಾಣ ಪತ್ರ ಪಡೆದರೆ ವಿಶ್ವದ ಯಾವುದೇ ಮೂಲೆಯಲ್ಲಿದ್ದರೂ ನೌಕರಿ ದೊರೆಯುತ್ತದೆ. ಆದರೆ ಇವರು ಈ ಭಾಗಕ್ಕೆ ಏನನ್ನೂ ತರದೇ ಕೌಶಲ್ಯಾಭಿವೃದ್ಧಿ ಬಗ್ಗೆ ಮಾತನಾಡುತ್ತಾರೆ. ಇದನ್ನೆಲ್ಲ ಜನ ಅರ್ಥ ಮಾಡಿಕೊಳ್ಳುತ್ತಾರೆ ಎಂದು ಹೇಳಿದರು. ತಾವು ಕೇಂದ್ರದ ಕಾರ್ಮಿಕ ಸಚಿವರಾಗಿದ್ದಾಗ ದೇಶದಲ್ಲಿ ಸ್ವಾತಂತ್ರ್ಯ ಬಂದಾಗಿನಿಂದ ಕೇವಲ ಐದು ಸಾವಿರವಿದ್ದ ಐಟಿಐ ಕಾಲೇಜುಗಳನ್ನು ದ್ವಿಗುಣ ಗೊಳಿಸಿದ್ದೆವು. ಕಲಬುರಗಿ-ಹಾಗೂ ಬೆಂಗಳೂರಿಗೆ ಇಎಸ್‌ಐ ಕಾಲೇಜು ಹಾಗೂ ಆಸ್ಪತ್ರೆ ತರಲಾಯಿತು. ಅದೇ ರೀತಿ ರೈಲ್ವೆ ಸಚಿವರಾಗಿದ್ದ ಒಂಭತ್ತು ತಿಂಗಳ ಅವಧಿಯಲ್ಲಿಯೇ 27 ಹೊಸ ರೈಲುಗಳನ್ನು ಓಡಿಸಲಾಯಿತು. ಹೀಗೆ ಅಭಿವೃದ್ಧಿ ಕಾರ್ಯಗಳನ್ನು ಹೇಳುತ್ತಾ ಹೋದರೆ ಒಂದು ದಿನ ಸಾಕಾಗುವುದಿಲ್ಲ. ಇದನ್ನೆಲ್ಲ ಅರ್ಥ ಮಾಡಿಕೊಳ್ಳದೇ ಜೋರಾಗಿ ಮಾತನಾಡಿದರೆ ಸಾಧನೆ ಎನ್ನಬಹುದೇ? ಎಂದು ಪ್ರಶ್ನಿಸಿ ಸಂಸದ ಖರ್ಗೆ ವಿರೋಧಿಗಳಿಗೆ ತಿರುಗೇಟು ನೀಡಿದರು. 

ನಿಷ್ಠೆಗೆ ಫಲ ಸಿಗುತ್ತದೆಂದು ನಂಬಿರುವೆ ತಾವು ಮುಖ್ಯಮಂತ್ರಿಯಾಗಲು ಏಕೆ ಪ್ರಯತ್ನಿಸುತ್ತಿಲ್ಲ ಎಂದು ಹಲವರು ಕೇಳುತ್ತಲೇ ಇರುತ್ತಾರೆ. ಆದರೆ ಮುಖ್ಯಮಂತ್ರಿ ಆಗ್ತೀನೆ ಎಂದು ಬಹಿರಂಗವಾಗಿ ಹೇಳಲಿಕ್ಕಾಗುತ್ತದೆಯೇ? ಎಲ್ಲಿ ಹೇಳಬೇಕೋ ಹಾಗೂ ಯಾರಿಗೆ ಹೇಳಬೇಕೋ ಅವರಿಗೆ ಹೇಳೆದ್ದೆವೆ. ಶಾಸಕಾಂಗ ಪಕ್ಷದ ನಾಯಕನಾಗಿದ್ದ ವೇಳೆ ತಮ್ಮನ್ನು ಲೋಕಸಭೆಗೆ ಸ್ಪರ್ಧಿಸುವಂತೆ ಪಕ್ಷದ ಅಧಿನಾಯಕರು ಹೇಳಿದರು. ಅವರ ಸೂಚನೆಯಂತೆ ಸ್ಪರ್ಧಿಸಿ ಸಂಸತ್‌ಗೆ ಪ್ರವೇಶಿಸಿದೆ. ಸಚಿವ ಪದವಿ ಆಸೆ ಹೊಂದಿರಲಿಲ್ಲ. ಆದರೆ ಸಚಿವ ಪದವಿ ನೀಡಲಾಯಿತು. ಎರಡನೇ ಬಾರಿಗೆ ಮತ್ತೆ ಸಂಸತ್‌ ಚುನಾವಣೆಗೆ ಸ್ಪರ್ಧಿಸಿದೆ. ಮೋದಿ ಗಾಳಿ ನಡುವೆ ಕಲಬುರಗಿ ಮತದಾರರು ದೊಡ್ಡ ರೀತಿಯಲ್ಲಿ ತಮಗೆ
ಆಶೀರ್ವಾದ ಮಾಡಿದರು. ತಾವಂತು ಪಕ್ಷಕ್ಕೆ ನಿಷ್ಠೆ ಇಟ್ಟು ದುಡಿಯುತ್ತಾ ಬಂದಿದ್ದೇವೆ. ನಿಷ್ಠೆಗೆ ಫಲ ಸಿಗುತ್ತದೆ ಎಂದು ನಂಬಿದ್ದೇನೆ.
●ಮಲ್ಲಿಕಾರ್ಜುನ ಖರ್ಗೆ, ಸಂಸದ

ಟಾಪ್ ನ್ಯೂಸ್

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೇವು?: ಖಂಡ್ರೆ

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

18-

Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.