ಮಾರಕಾಸ್ತ್ರ ದಿಂದ ಕೊಚ್ಚಿ  ಹಣಮಂತ ಕೂಡಲಗಿ ಹತ್ಯೆ


Team Udayavani, Jun 9, 2021, 8:33 PM IST

jhgfds

ಕಲಬುರಗಿ: ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಶಾಂತಪ್ಪ ಕೂಡಲಗಿ ಸಹೋದರರೊಬ್ಬರನ್ನು ಹಾಡಹಗಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ ಘಟನೆ ಜಿಲ್ಲೆಯ ಜೇವರ್ಗಿ ತಾಲೂಕಿನ ಕೆಲ್ಲೂರ (ಕೆ) ಸಮೀಪ ಮಂಗಳವಾರ ನಡೆದಿದೆ. ಹಣಮಂತ ಚಂದ್ರಶ್ಯಾ ಕೂಡಲಗಿ (40) ಕೊಲೆಯಾದ ವ್ಯಕ್ತಿ. ಮತ್ತಿಬ್ಬರು ಗಾಯಗೊಂಡಿದ್ದಾರೆ.

ಜೇವರ್ಗಿ ತಾಲೂಕಿನ ಕೂಡಲಗಿ ಗ್ರಾಮದಿಂದ ಕೊಲ್ಲೂರ ಕೆ. ಗ್ರಾಮದ ಮಾರ್ಗವಾಗಿ ಕಲಬುರಗಿ ನಗರಕ್ಕೆ ಇನ್ನೋವಾ ಕಾರಿನಲ್ಲಿ ಹಣಮಂತ ಕೂಡಲಗಿ, ಮಗ ಕಿರಣ್‌ ಸೇರಿದಂತೆ ಆರು ಜನರು ಬರುತ್ತಿದ್ದರು. ಇವರೆಲ್ಲರೂ ಲಕೀÒ$¾ ದೇವರ ಪೂಜೆ ಊಟಕ್ಕೆಂದು ಕೂಡಲಗಿ ಗ್ರಾಮಕ್ಕೆ ಹೋಗಿದ್ದರು ಎನ್ನಲಾಗಿದೆ. ಗ್ರಾಮದಿಂದ ವಾಪಸ್‌ ಆಗುತ್ತಿದ್ದಾಗ ಸಂಜೆ 4:30ರ ಸುಮಾರಿಗೆ ದುಷ್ಕರ್ಮಿಗಳು ಕಾರು ಅಡ್ಡಗಟ್ಟಿ ದಾಳಿ ಮಾಡಿದ್ದರು.

ಹಣಮಂತ ಕೂಡಲಗಿ ಅವರನ್ನೇ ಗುರಿಯಾಗಿಸಿಕೊಂಡು ಮಾರಕಾಸ್ತ್ರಗಳನ್ನು ಬೀಸಿದ್ದರು. ಸುಮಾರು ಎಂಟು ಜನರ ತಂಡ ಈ ದಾಳಿ ನಡೆಸಿ, ಹಣಮಂತ ಕೂಡಲಗಿ ತಲೆ ಭಾಗಕ್ಕೆ ಹೊಡೆದಿದ್ದಾರೆ. ಇದರಿಂದ ಸ್ಥಳದಲ್ಲೇ ಕುಸಿದು ಬಿದ್ದು, ಹಣಮಂತ ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ಇಬ್ಬರಿಗೆ ಸಣ್ಣ-ಪುಟ್ಟ ಗಾಯಗಳಾಗಿವೆ.

ಉಳಿದವರಿಗೆ ಏನೂ ಆಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಕೊಲೆಯಾದ ಹಣಮಂತ ಕಾಂಗ್ರೆಸ್‌ ಮುಖಂಡರಾದ ಜಿಪಂ ಮಾಜಿ ಸದಸ್ಯ ಶಾಂತಪ್ಪ ಕೂಡಲಗಿ ಅವರ ಕಿರಿಯ ಸಹೋದರ. ಒಂದೂವರೆ ವರ್ಷದ ಹಿಂದೆ ಮಯೂರ ಗ್ರಾಮದ ಬಿಜೆಪಿ ಕಾರ್ಯಕರ್ತ ಶಿವಲಿಂಗ ಭಾವಿಕಟ್ಟಿ ಕೊಲೆ ಪ್ರಕರಣಕ್ಕೆ ಪ್ರತೀಕಾರವಾಗಿ ಈ ಕೊಲೆ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ. ಬೆಚ್ಚಿ ಬಿದ್ದ ಗ್ರಾಮಸ್ಥರು: ನಡುರಸ್ತೆಯಲ್ಲಿ ಹಾಡಹಗಲೇ ನಡೆದ ಕೊಲೆ ಪ್ರಕರಣದಿಂದ ಕೂಡಲಗಿ ಮತ್ತು ಕೆಲ್ಲೂರ (ಕೆ) ಗ್ರಾಮ ಸೇರಿ ಸುತ್ತಮತ್ತಲಿನ ಗ್ರಾಮಸ್ಥರು ಬೆಚ್ಚಿ ಬೀಳುವಂತೆ ಆಗಿದೆ. ಹಣಮಂತ ಕೂಡಲಗಿ ಕೊಲೆ ವಿಷಯ ತಿಳಿದು ಘಟನಾ ಸ್ಥಳದಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ಜನರು ಜಮಾವಣೆ ಆಗಿದ್ದರು.

ಸ್ಥಳಕ್ಕೆ ದಾವಿಸಿದ್ದ ಹಣಮಂತ ಕೂಡಲಗಿ ಕುಟುಂಬಸ್ಥರ ಅಕ್ರಂದನ ಮುಗಿಲು ಮುಟ್ಟಿತ್ತು. ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ| ಸಿಮಿ ಮರಿಯಂ ಜಾರ್ಜ್‌, ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ಪ್ರಸನ್ನ ದೇಸಾಯಿ, ಡಿವೈಎಸ್‌ಪಿ ತಾಯಪ್ಪ ದೊಡ್ಡಮನಿ, ಜೇವರ್ಗಿ ಸಿಪಿಐ ಶಿವಪ್ರಸಾದ, ನೆಲೋಗಿ ಪಿಎಸ್‌ಐ ರಾಜಕುಮಾರ ಜಮಗೊಂಡ ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿದರು. ಕೊಲೆಗೆ ಸಂಬಂಧಿಸಿದಂತೆ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ. ನೆಲೋಗಿ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೇವು?: ಖಂಡ್ರೆ

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

1-wqeqwewq

Minister ಪ್ರಿಯಾಂಕ ಖರ್ಗೆ ಉದ್ಧಟತನ ಅತಿಯಾಗಿದೆ: ಸಂಸದ ಡಾ.ಜಾಧವ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.