3 ಹೆಣ್ಣು ಹೆತ್ತಿದ್ದಕ್ಕೆ ಕಿರುಕುಳ : ಮಕ್ಕಳೊಂದಿಗೆ ಬಾವಿಗೆ ಜಿಗಿದು ಮಹಿಳೆ ಆತ್ಮಹತ್ಯೆ
Team Udayavani, Oct 24, 2021, 12:42 PM IST
ಕಲಬುರಗಿ : ಮೂರು ಬಾರಿಯೂ ಹೆಣ್ಣು ಮಕ್ಕಳನ್ನು ಹೆತ್ತಿದ್ದಕ್ಕೆ ಗಂಡನ ಮನೆಯವರು ನೀಡುತ್ತಿದ್ದ ಕಿರುಕುಳ ತಾಳಲಾರದೆ ಮಹಿಳೆಯೊಬ್ಬಳು ಮೂರು ಹೆಣ್ಣು ಮಕ್ಕಳೊಂದಿಗೆ ಬಾವಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಆಳಂದ ತಾಲೂಕಿನ ಮಾಡ್ಯಾಳ ಗ್ರಾಮದಲ್ಲಿ ಭಾನುವಾರ ನಡೆದಿದೆ.
ತಾಯಿ ಮತ್ತು ಇಬ್ಬರು ಮಕ್ಕಳು ಸಾವನ್ನಪ್ಪಿದ್ದು, ಒಂದು ಮಗುವನ್ನು ರಕ್ಷಿಸಲಾಗಿದೆ ಎಂದು ತಿಳಿದು ಬಂದಿದೆ.
ಮೃತ ದುರ್ದೈವಿಗಳು, ತಾಯಿ ಲಕ್ಷ್ಮಿ ಏಳಕೆ (28), ಮಕ್ಕಳಾದ ಗೌರಮ್ಮ (6), ಸಾವಿತ್ರಿ (1) ಎನ್ನುವವರಾಗಿದ್ದಾರೆ. ಇನ್ನೋರ್ವ ಬಾಲಕಿ ಈಶ್ವರಿ (4)ಯನ್ನು ಸ್ಥಳಿಯರು ರಕ್ಷಣೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.
ಮೂರು ಜನ ಹೆಣ್ಣು ಮಕ್ಕಳಿರುವ ಕಾರಣಕ್ಕೆ ಗಂಡ, ಗಂಡನ ಮನೆಯವರು ನಿರಂತರವಾಗಿ ಕಿರುಕುಳ ನೀಡುತ್ತಿದ್ದರು ಎಂದು ಆರೋಪಿಸಲಾಗಿದ್ದು, ಕಿರುಕುಳದಿಂದ ಬೇಸತ್ತು ಗ್ರಾಮದ ಹೊರವಲಯದ ಜಮೀನಿನೊಂದರ ಬಾವಿಯಲ್ಲಿ ಸಾವಿಗೆ ಶರಣಾಗಿದ್ದಾರೆ ಎಂದು ಹೇಳಲಾಗಿದೆ.
ನಿಂಬರ್ಗಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಭೇಟಿ ನೀಡಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು