ಎಚ್‌ಕೆಆರ್‌ಡಿಬಿ ಅನುದಾನ ಹೆಚಳಕೆc ಸಮ್ಕತಿ


Team Udayavani, Dec 13, 2018, 5:41 PM IST

gul-2.jpg

ಬೆಳಗಾವಿ: ಹೈದರಾಬಾದ್‌ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ(ಎಚ್‌ಕೆಆರ್‌ಡಿಬಿ) ಅನುದಾನವನ್ನು ಪ್ರಸ್ತುತವಿರುವ 1500 ಕೋಟಿ ರೂ.ನಿಂದ 2 ಸಾವಿರ ಕೋಟಿಗಳಿಗೆ ಹೆಚ್ಚಿಸಬೇಕೆಂದು ಆ ಭಾಗದ ಶಾಸಕರು ಮಾಡಿದ ಮನವಿಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಸಕಾರಾತ್ಮಕವಾಗಿ ಸ್ಪಂದಿಸಿದ್ದು, 2 ಸಾವಿರ ಕೋಟಿ ರೂ. ಕ್ರಿಯಾ ಯೋಜನೆ ಸಿದ್ಧಪಡಿಸುವಂತೆ ಸೂಚನೆ ನೀಡಿದ್ದಾರೆ.

ಸುವರ್ಣ ವಿಧಾನಸೌಧದ ಸಭಾಂಗಣದಲ್ಲಿ ಬುಧವಾರ ಹೈದ್ರಾಬಾದ್‌ ಕರ್ನಾಟಕ ಭಾಗದ ಶಾಸಕರೊಂದಿಗೆ ಆ ಭಾಗದ ಸಮಸ್ಯೆಗಳ ಬಗ್ಗೆ ಸಮಾಲೋಚನಾ ಸಭೆ ನಡೆಸಿ ಮಾತನಾಡಿದರು. ಎಚ್‌ಕೆಡಿಬಿಗೆ ಪ್ರಸ್ತುತ ಬಜೆಟ…ನಲ್ಲಿ 1500 ಕೋಟಿ ರೂ. ಅನುದಾನ ನಿಗದಿಪಡಿಸಲಾಗಿದೆ. ಆದರೆ ಒಂದು ಸಾವಿರ ರೂ. ಕಾಮಗಾರಿಗಳಿಗೆ ಕ್ರಿಯಾ ಯೋಜನೆ ಸಿದ್ಧಪಡಿಸಿ ಅನುದಾನ ಬಿಡುಗಡೆ ಮಾಡಲಾಗಿದೆ. ಈ ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ 2 ಸಾವಿರ ಕೋಟಿ ರೂ.ಗಳಿಗೆ ಹೆಚ್ಚಿಸಬೇಕು ಎಂದು ಶಾಸಕರು ಮುಖ್ಯಮಂತ್ರಿ ಅವರನ್ನು ಒತ್ತಾಯಿಸಿದರು. 

ಇದಕ್ಕೆ ಪ್ರತಿಕ್ರಿಯಿಸಿದ ಸಿಎಂ ಕುಮಾರಸ್ವಾಮಿ, 2 ಸಾವಿರ ಕೋಟಿ ರೂ.ಗಳಿಗೆ ಕ್ರಿಯಾ ಯೋಜನೆಯನ್ನು ಸಿದ್ಧಪಡಿಸಿ ಸಲ್ಲಿಸಿ. ಪ್ರಸ್ತುತ ಸಾಲಿನಲ್ಲಿ ಇದುವರೆಗೆ ಹೈದ್ರಾಬಾದ್‌ ಕರ್ನಾಟಕ ಪ್ರದೇಶಾಭಿವೃದ್ಧಿಗಾಗಿ 692 ಕೋಟಿ ರೂ. ವೆಚ್ಚ ಮಾಡಲಾಗಿದೆ. ಮುಂದಿನ ಮೂರು ತಿಂಗಳ ಅವಧಿಯಲ್ಲಿ ಕಾಮಗಾರಿಗಳನ್ನು ತ್ವರಿತವಾಗಿ ಮುಗಿಸಿ ಹಣ ಬಳಕೆ ಪ್ರಮಾಣ ಪತ್ರ ಸಲ್ಲಿಸಿದಂತೆ ಉಳಿದ ಅನುದಾನವನ್ನು ಬಿಡುಗಡೆ ಮಾಡಲು ಸಿದ್ಧ ಎಂದು ಉತ್ತರಿಸಿದರು.

ಎಚ್‌ಕೆಆರ್‌ಡಿಬಿ ಅನುದಾನದಲ್ಲಿ ನಗರ ಪ್ರದೇಶಗಳಿಗೆ ತಾರತಮ್ಯ ಮಾಡಲಾಗುತ್ತಿದೆ ಎಂದು ಕೆಲವು ಶಾಸಕರು ತಿಳಿಸಿದ್ದು, ಇದನ್ನು ಸರಿಪಡಿಸಲಾಗುವುದು. ಡಾ| ನಂಜುಂಡಪ್ಪವರದಿ ಅನುಷ್ಠಾನದ ಬಳಿಕ ಆ ಭಾಗದಲ್ಲಿ ಉಂಟಾಗಿರುವ ಅಭಿವೃದ್ಧಿಗಳನ್ನು ಪರಿಶೀಲಿಸಿ, ಇನ್ನೂ ಅಭಿವೃದ್ಧಿ ಹೊಂದಬೇಕಾದ ಪ್ರದೇಶಗಳಿಗೆ ಹೆಚ್ಚಿನ ಅನುದಾನ ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು. 

ಎಚ್‌ಕೆಆರ್‌ಡಿಬಿ ಕಾರ್ಯದರ್ಶಿ ಅವರು ಆ ಭಾಗದಲ್ಲಿ ಹಲವಾರು ಹುದ್ದೆಗಳು ಖಾಲಿಯಿರುವುದಾಗಿ ಪ್ರಸ್ತಾಪಿಸಿದ್ದು, ಅಗತ್ಯ ಹುದ್ದೆಗಳನ್ನು ತಕ್ಷಣ ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುವುದು. ಮುಂದಿನ ವರ್ಷದ ಬಜೆಟ್‌ನಲ್ಲಿ ಈ ಭಾಗದಲ್ಲಿ ಶಾಲೆ, ಪಿಯು ಹಾಗೂ ಪದವಿ ಕಾಲೇಜುಗಳ ಸ್ಥಾಪನೆಗೆ ಹೆಚ್ಚಿನ ಅನುದಾನ ಒದಗಿಸಲಾಗುವುದು ಎಂದು ಭರವಸೆ ನೀಡಿದರು.

ಲೋಕೋಪಯೋಗಿ ಇಲಾಖೆ ವತಿಯಿಂದ 2013ರಿಂದ 2018ರ ಮಾರ್ಚ್‌ವರೆಗೆ ರಸ್ತೆ ಕಾಮಗಾರಿಗಳಿಗೆ ಉತ್ತರ ಮತ್ತು ಈಶಾನ್ಯ ವಲಯಗಳಿಗೆ ಒಟ್ಟು 14369 ಕೋಟಿ ರೂ. ವೆಚ್ಚ ಮಾಡಲಾಗಿದೆ. ಪ್ರಸ್ತುತ ಸಾಲಿನಲ್ಲಿ ನವೆಂಬರ್‌ ಅಂತ್ಯದವರೆಗೆ 3039 ಕೋಟಿ ವೆಚ್ಚ ಮಾಡಲಾಗಿದೆ. ಪ್ರಸ್ತುತ ಸಾಲಿನಲ್ಲಿ ಬಜೆಟ್‌ನಲ್ಲಿ 1375 ಕೋಟಿ ರೂ. ಒದಗಿಸಲಾಗಿದ್ದರೂ ಈಗಾಗಲೇ 3173 ಕೋಟಿ ರೂ. ಗಳಿಗೆ ಕ್ರಿಯಾ ಯೋಜನೆ ಸಿದ್ಧಪಡಿಸಿ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ ಎಂದರು. 

ಉಪಮುಖ್ಯಮಂತ್ರಿ ಡಾ.ಪರಮೇಶ್ವರ್‌, ಎಚ್‌ಕೆಆರ್‌ಡಿಬಿ ಅಧ್ಯಕ್ಷ, ಗಣಿ ಮತ್ತು ಭೂ ವಿಜ್ಞಾನ ಸಚಿವ ರಾಜಶೇಖರ ಪಾಟೀಲ್‌, ಸಚಿವರಾದ ಪ್ರಿಯಾಂಕ್‌ ಖರ್ಗೆ, ಎಚ್‌.ಡಿ.ರೇವಣ್ಣ, ಡಿ.ಕೆ. ಶಿವಕುಮಾರ್‌, ಬಂಡೆಪ್ಪ ಖಾಶೆಂಪುರ, ಆರ್‌.ಶಂಕರ್‌, ವೆಂಕಟರಾವ್‌ ನಾಡಗೌಡ, ಸರ್ಕಾರದ ಮುಖ್ಯ ಕಾರ್ಯದರ್ಶಿ ವಿಜಯ ಭಾಸ್ಕರ್‌, ಹೈಕ ಭಾಗದ ಶಾಸಕರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

1-BVR-1

Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!

1-y-a

Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.