ಎಚ್‌ಕೆಆರ್‌ಡಿಬಿ ಕಾಮಗಾರಿ ಪರಿಶೀಲನೆ


Team Udayavani, Nov 18, 2018, 10:57 AM IST

gul-2.jpg

ಕಲಬುರಗಿ: ಹೈದ್ರಾಬಾದ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಕಾರ್ಯದರ್ಶಿ ಸುಬೋಧ ಯಾದವ್‌ ಗುಲಬರ್ಗಾ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ಭೇಟಿ ನೀಡಿ ಎಚ್‌ಕೆಆರ್‌ಡಿಬಿ ಅನುದಾನದಡಿ ಕೈಗೊಂಡಿರುವ ಕಾಮಗಾರಿಗಳನ್ನು ಪರಿಶೀಲಿಸಿದರು.

ಕಲಬುರಗಿ ವೈದ್ಯಕೀಯ ಕಾಲೇಜಿನಲ್ಲಿ ಸಭೆ ಕರೆದು ಎಚ್‌ಕೆಆರ್‌ಡಿಬಿಯಿಂದ 2015-16ನೇ ಸಾಲಿನಲ್ಲಿ ಜಿಲ್ಲಾ ಆಸ್ಪತ್ರೆ ಹಾಗೂ ವೈದ್ಯಕೀಯ ಕಾಲೇಜಿಗೆ ವೈದ್ಯಕೀಯ ಉಪಕರಣಗಳನ್ನು ಸರಬರಾಜು ಮಾಡಲು ಟೆಂಡರ್‌ ಕರೆಯಲಾಗಿತ್ತು. ಈ ಪೈಕಿ ಕೆಲವು ಉಪಕರಣಗಳನ್ನು ಇನ್ನು ಸರಬರಾಜು ಮಾಡಿಲ್ಲ. ಅಂತಹ ಉಪಕರಣಗಳ ಪಟ್ಟಿ ಮಾಡಿ ಅವುಗಳನ್ನು ರದ್ದುಗೊಳಿಸಬೇಕು ಎಂದು ಸೂಚಿಸಿದರು.

ಜಿಮ್ಸ್‌ ಆವರಣದಲ್ಲಿ 1.68 ಕೋಟಿ ರೂ. ವೆಚ್ಚದಲ್ಲಿ 60 ಹಾಸಿಗೆಯ ವಿಶೇಷ ನವಜಾತ ಶಿಶುಗಳ ಆರೈಕೆ (ಎಸ್‌ಎನ್‌ಸಿಯು) ಆಸ್ಪತ್ರೆ ನಿರ್ಮಾಣ ಕಾರ್ಯ ನಡೆಯುತ್ತಿದೆ. ಅದರ ಮೇಲೆ ಉಪನ್ಯಾಸ ಸಭಾಂಗಣ ನಿರ್ಮಿಸಲು ಮಂಜೂರಾತಿ ನೀಡಲಾಗಿದೆ. ಎಸ್‌ ಎನ್‌ಸಿಯುಗೆ ಹೊಂದಿಕೊಂಡಂತೆ ಹೆರಿಗೆ ವಾರ್ಡ್‌ ನಿರ್ಮಿಸಲು ಮಂಜೂರಾತಿ ನೀಡಲಾಗಿದೆ ಎಂದು ಹೇಳಿದರು.

ಈ ಮೂರು ಕಾಮಗಾರಿಗಳು ಒಂದಕ್ಕೊಂದು ಹೊಂದಾಣಿಕೆ ಇರುವುದರಿಂದ ಶೀಘ್ರಗತಿಯಲ್ಲಿ ಕಾರ್ಯ ಕೈಗೊಂಡು ಪೂರ್ಣಗೊಳಿಸಬೇಕು. ಈ ಕಟ್ಟಡಗಳ ಮಧ್ಯದಲ್ಲಿರುವ ಒಳಚರಂಡಿ ಪೈಪ್‌ಗ್ಳನ್ನು ಸರಿಯಾದ ಸ್ಥಳಕ್ಕೆ ಸ್ಥಳಾಂತರಿಸಿ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳಬೇಕು ಎಂದರು. 

ಎಸ್‌ಎನ್‌ಸಿಯು ಕಟ್ಟಡಕ್ಕೆ ವಿಶೇಷ ತಂತ್ರಜ್ಞಾನದ ವಿದ್ಯುತ್‌ ಉಪಕರಣಗಳು ಹಾಗೂ ವೈದ್ಯಕೀಯ ಉಪಕರಣಗಳು, ಪೀಠೊಪಕರಣಗಳ ಅವಶ್ಯಕತೆಗಾಗಿ 2.2 ಕೋಟಿ ರೂ.ಗಳ ಅಂದಾಜು ಪಟ್ಟಿ ನೀಡಲಾಗಿದೆ. ಇದಕ್ಕೆ ಸಂಬಂಧಿ ಸಿದಂತೆ ಅನುದಾನವನ್ನು ಸರ್ಕಾರದಿಂದ ಹಾಗೂ ಇಲಾಖೆಯಿಂದ ಪಡೆದುಕೊಳ್ಳಲು ಪ್ರಸ್ತಾವನೆ ಸಲ್ಲಿಸಬೇಕು. ಹೈಕ ಭಾಗದ ಯಾವುದೇ ಇಲಾಖೆಗಳು ಎಚ್‌ಕೆಆರ್‌ಡಿಬಿಗೆ ಪ್ರಸ್ತಾವನೆ ಸಲ್ಲಿಸಿದಾಗ ಸಂಬಂಧಿಸಿದ ಇಲಾಖೆಗಳ ಮುಖ್ಯಸ್ಥರಿಂದ ಸ್ಪಷ್ಟೀಕರಣ ಮತ್ತು ನಿರ್ದಿಷ್ಟ ವಿವರಣೆ ಪಡೆಯಬೇಕು. ಯಾಕೆಂದರೆ ವಿವಿಧ ಇಲಾಖೆಗಳಿಗೆ ನೀಡಲಾಗುತ್ತಿರುವ ಅನುದಾನದ ಕುರಿತು ಆಯಾ ಇಲಾಖೆಗಳ ಮುಖ್ಯಸ್ಥರಿಗೆ ಮಾಹಿತಿ ಇಲ್ಲದಂತಾಗಿದೆ ಎಂದರು.

ಯಾವುದೇ ಬೃಹತ್‌ ಪ್ರಮಾಣದ ಯೋಜನೆಗಳಿಗೆ ಮಂಜೂರಾತಿ ನೀಡುವ ಮುನ್ನ ಇಲಾಖೆ ಮುಖ್ಯಸ್ಥರಿಂದ ಪ್ರಸ್ತಾವನೆ ಮತ್ತು ವಿವರಣೆ ಪಡೆಯಬೇಕು. ಇದರಿಂದ ಎಚ್‌ಕೆಆರ್‌ಡಿಬಿಯಿಂದ ಕೈಗೊಳ್ಳಲಾದ ಕಾಮಗಾರಿಗಳು ಇಲಾಖೆ ಗಮನಕ್ಕೆ ಬಂದು ಕಟ್ಟಡಗಳ ನಿರ್ವಹಣೆ ಹಾಗೂ ಸಿಬ್ಬಂದಿಗಳ ಅವಶ್ಯಕತೆಗಳ ಬಗ್ಗೆ ತಿಳಿಯುತ್ತದೆ ಎಂದು ಹೇಳಿದರು. 

ಜಿಮ್ಸ್‌ ಕಟ್ಟಡಗಳಿಗಾಗಿ ಪ್ರತ್ಯೇಕ ಕೊಳಚೆ ನೀರು ಶುದ್ಧೀಕರಣ ಘಟಕ ರೂಪಿಸುವ ಅವಶ್ಯಕತೆಯಿದೆ. ಜಿಮ್ಸ್‌ ಆವರಣದ ಕಟ್ಟಡಗಳ ನಿರ್ವಹಣೆ ಅವಶ್ಯಕತೆ ಇದೆ. ಇವುಗಳನ್ನು ಇಲಾಖೆಯಿಂದ ಕೈಗೊಳ್ಳಲು ತಿಳಿಸಲಾಗಿತ್ತು. ಈ ನಿಟ್ಟಿನಲ್ಲಿ ಇಲಾಖೆಯಿಂದ ಕೈಗೊಂಡ ಕ್ರಮದ ಬಗ್ಗೆ ಅಧಿಕಾರಿಗಳು ಮಾಹಿತಿ ಪಡೆಯಬೇಕು.

ಕಲಬುರಗಿಯಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ ನಿರ್ಮಾಣಕ್ಕಾಗಿ ಎಚ್‌ಕೆಆರ್‌ಡಿಬಿಯಿಂದ 3 ಕೋಟಿ ರೂ. ನೀಡಲಾಗಿದೆ. ಈ ಹಣವು ಖರ್ಚಾಗದೇ ಉಳಿದಿರುವುದರಿಂದ ಇದನ್ನು ಹಿಂದಕ್ಕೆ ಪಡೆದು ಆಸ್ಪತ್ರೆ ನಿರ್ಮಾಣದ ಸಮಯದಲ್ಲಿ ನೀಡಬೇಕು. ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ಖರ್ಚಾಗುವ ಒಟ್ಟು ಮೊತ್ತದಲ್ಲಿ ಎಚ್‌ಕೆಆರ್‌ಡಿಬಿಯಿಂದ 3 ಕೋಟಿ ರೂ. ನೀಡಲಾಗುವುದು ಎಂದು ಕ್ರಿಯಾ ಯೋಜನೆಯಲ್ಲಿ ಅಳವಡಿಸಿಕೊಳ್ಳಬೇಕು ಎಂದರು.

2018-19ನೇ ಸಾಲಿನಲ್ಲಿ ಜಿಮ್ಸ್‌ಗೆ ಟ್ರಾಮಾ ಸೆಂಟರ್‌ನಲ್ಲಿ 10 ವೆಂಟಿಲೇಟರ್‌ ಅಳವಡಿಸಲು ಒಂದು ಕೋಟಿ ರೂ. ಹಾಗೂ ಜಿಲ್ಲಾ ಆಸ್ಪತ್ರೆಯ ನಾಲ್ಕನೇ ಮಹಡಿಯಲ್ಲಿ ಐಸಿಯು ವಿಭಾಗಕ್ಕೆ ವೈದ್ಯಕೀಯ ಉಪಕರಣಗಳ ಖರೀದಿಗಾಗಿ 9.73 ಕೋಟಿ ರೂ. ನೀಡಲಾಗಿದೆ. ಆದಷ್ಟು ಬೇಗ ಉಪಕರಣಗಳನ್ನು ಖರೀದಿಸಲು ಟೆಂಡರ್‌ ಕರೆಯಬೇಕು ಎಂದು ತಿಳಿಸಿದರು.

ಟ್ರಾಮಾ ಸೆಂಟರ್‌ನ ಮೂರನೇ ಮಹಡಿಯಲ್ಲಿ 31 ಹಾಸಿಗೆಯ ಬರ್ನ್ಸ್ ವಾರ್ಡ್‌ ಮತ್ತು 20 ಹಾಸಿಗೆಯ ಪ್ಲಾಸ್ಟಿಕ್‌ ಸರ್ಜರಿ ವಾರ್ಡ್‌ ಪ್ರಾರಂಭಿಸಲು ಒಟ್ಟು 13 ಕೋಟಿ ರೂ.ಗಳ ಅವಶ್ಯಕತೆಯಿದೆ. ಈಗಾಗಲೇ ಬರ್ನ್ಸ್ ವಾರ್ಡನಲ್ಲಿ 12 ಹಾಸಿಗೆ ಪ್ರಾರಂಭಿಸಲು ಕೇಂದ್ರ ಸರ್ಕಾರ 4.9 ಕೋಟಿ ರೂ. ನೀಡುತ್ತಿದೆ. 

ಉಳಿದ 7.1 ಕೋಟಿ ರೂ.ಗಳ ಪೈಕಿ ಅರ್ಧದಷ್ಟು ಅಂದರೆ 3.55 ಕೋಟಿ ರೂ.ಗಳನ್ನು ಎಚ್‌ಕೆಆರ್‌ಡಿಬಿ ನೀಡಲಿದೆ. ಉಳಿದ ಅರ್ಧದಷ್ಟು ಅನುದಾನವನ್ನು ಇಲಾಖೆಯಿಂದ ಪಡೆದುಕೊಳ್ಳಬೇಕು ಎಂದರು.

ಜಿಮ್ಸ್‌ ನಿರ್ದೇಶಕ ಡಾ| ಉಮೇಶ ಎಸ್‌.ಆರ್‌., ವೈದ್ಯಕೀಯ ಅಧಿಧೀಕ್ಷಕ ಡಾ| ಶಿವಕುಮಾರ ಸಿ.ಆರ್‌., ಜಿಲ್ಲಾ ಶಸ್ತ್ರಜ್ಞ ಡಾ| ಸುರಗಾಳಿ, ತಾಯಿ ಮತ್ತು ಮಕ್ಕಳ ಆಸ್ಪತ್ರೆ ವಿಶೇಷ ಅಧಿ ಕಾರಿ ಡಾ| ಸಂದೀಪ, ಜಯದೇವ ಹೃದ್ರೋಗ ಆಸ್ಪತ್ರೆಯ ವ್ಯವಸ್ಥಾಪಕ ಡಾ| ಬಾಬುರಾವ್‌ ಹುಡಗಿಕರ, ಕಿದ್ವಾಯಿ ಕ್ಯಾನ್ಸರ್‌ ಆಸ್ಪತ್ರೆ ಮೇಲ್ವಿಚಾರಕ ಡಾ. ದೇಶಪಾಂಡೆ, ಹೈಕ ಪ್ರದೇಶ ಅಭಿವೃದ್ಧಿ ಮಂಡಳಿ ಜಂಟಿ ನಿರ್ದೇಶಕ ಬಸವರಾಜ, ಬರ್ನ್ಸ್ ವಾರ್ಡ್‌ ವೈದ್ಯಾಧಿಕಾರಿ ಡಾ| ಶಫಿ ಹಾಜರಿದ್ದರು.

ಕಲಬುರಗಿ ವಿಭಾಗದಲ್ಲಿರುವ ಕ್ಯಾನ್ಸರ್‌ ರೋಗಿಗಳನ್ನು ಪತ್ತೆ ಹಚ್ಚಲು ಕಿದ್ವಾಯಿ ಕ್ಯಾನ್ಸರ್‌ ಆಸ್ಪತ್ರೆಯಿಂದ ಸಂಚಾರಿ ಕ್ಯಾನ್ಸರ್‌ ತಪಾಸಣೆ ವಾಹನ ಖರೀದಿಸಲು 2 ಕೋಟಿ ರೂ. ನೀಡಲಾಗಿದೆ. ಆದರೆ ಯಾವುದೇ ಪ್ರಗತಿ ಆಗಿಲ್ಲ. 20 ಲಕ್ಷ ರೂ.ಗಳನ್ನು ಬಟ್ಟೆ ಒಗೆಯುವ ಯಂತ್ರಕ್ಕಾಗಿ ನೀಡಲಾಗಿದೆ. ಈ ಅನುದಾನವು ಖರ್ಚಾಗಿಲ್ಲ. ಆದಷ್ಟು ಬೇಗ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು. ಜಯದೇವ ಹೃದ್ರೋಗ ಆಸ್ಪತ್ರೆಯ ಡಾರ್ಮೆಟರಿ ನಿರ್ಮಾಣಕ್ಕೆ 1.75 ಕೋಟಿ ರೂ. ನೀಡಲಾಗಿದ್ದು, ಶೀಘ್ರವೇ ಸ್ಥಳಾವಕಾಶ ಗುರುತಿಸಿ ಕಾಮಗಾರಿ  ರಂಭಿಸಬೇಕು.
 ಸುಬೋಧ ಯಾದವ್‌, ಎಚ್‌ಕೆಆರ್‌ಡಿಬಿ ಕಾರ್ಯದರ್ಶಿ

ಟಾಪ್ ನ್ಯೂಸ್

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.