ಮಾನವೀಯತೆ ಮೆರೆದ ಶಾಸಕ ಡಾ| ಅಜಯಸಿಂಗ್
Team Udayavani, Jan 23, 2018, 11:48 AM IST
ಜೇವರ್ಗಿ: ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಮಹಿಳೆಯೊಬ್ಬರನ್ನು ಶಾಸಕ ಡಾ| ಅಜಯಸಿಂಗ್ ತಮ್ಮ ಸ್ವಂತ ಕಾರಿನಲ್ಲಿ ಆಸ್ಪತ್ರೆಗೆ ಕರೆದಕೊಂಡು ಬಂದು ಚಿಕಿತ್ಸೆ ಕೊಡಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.
ತಾಲೂಕಿನ ಇಜೇರಿ-ಕರಕಿಹಳ್ಳಿ ಮದ್ಯದಲ್ಲಿ ದಂಪತಿಗಳಿಬ್ಬರು ದ್ವಿಚಕ್ರವಾಹನದಲ್ಲಿ ತೆರಳುತ್ತಿದ್ದರು. ಈ ವೇಳೆ ಅಪಘಾತ ಸಂಭವಿಸಿ ಚನ್ನಮ್ಮ ಹಡಪದ ಎಂಬುವರಿಗೆ ಗಂಭೀರವಾದ ಗಾಯಗಳಾಗಿ ನರಳುತ್ತಿದ್ದರು.
ಕುಕನೂರಿನಲ್ಲಿ ತೊಗರಿ ಖರೀದಿ ಕೇಂದ್ರ ಉದ್ಘಾಟಿಸಿ ಪಟ್ಟಣದ ಕಡೆ ಆಗಮಿಸುತ್ತಿದ್ದ ಶಾಸಕ ಡಾ| ಅಜಯಸಿಂಗ್ ರಸ್ತೆ ಮೇಲೆ ಚನ್ನಮ್ಮಳ ನರಳಾಟ ಕಂಡು ವಾಹನ ನಿಲ್ಲಿಸುವಂತೆ ಚಾಲಕನಿಗೆ ಸೂಚಿಸಿದರು. ಗಂಭಿರವಾಗಿ ಗಾಯಗೊಂಡಿದ್ದ ಚನ್ನಮ್ಮಳಿಗೆ ಸಾಂತ್ವನ ಹೇಳಿ ಧೈರ್ಯ ತುಂಬಿದ ಶಾಸಕರು ತಕ್ಷಣ ತಮ್ಮ ವಾಹನದಲ್ಲಿಯೇ ಪಟ್ಟಣಕ್ಕೆ ಕರೆದುಕೊಂಡು ಬಂದು ಚಿಕಿತ್ಸೆ ಕೊಡಿಸಿದ್ದಾರೆ. ಚನ್ನಮ್ಮ ದಂಪತಿ ತಾಲೂಕಿನ ನರಿಬೋಳ ಗ್ರಾಮದಿಂದ ನಂದಿಹಳ್ಳಿ ಗ್ರಾಮಕ್ಕೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ತಾಲೂಕು ಆರೋಗ್ಯಾಧಿಕಾರಿ ಡಾ| ಸಿದ್ದು ಪಾಟೀಲ ಗಾಯಾಳುಗೆ ಚಿಕಿತ್ಸೆ ನೀಡುತ್ತಿದ್ದು, ಯಾವುದೇ ಪ್ರಾಣಾಪಾಯವಿಲ್ಲ ಎಂದು ತಿಳಿಸಿದ್ದಾರೆ. ಶಾಸಕರ ಕಾರ್ಯಕ್ಕೆ ತಾಲೂಕಿನ ಜನ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್
Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ
ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್ಡಿಐಎ ಧ್ಯೇಯ: ಜೆ.ಪಿ. ನಡ್ಡಾ
MUST WATCH
ಹೊಸ ಸೇರ್ಪಡೆ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ
Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ
BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ
Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!