ಸಚಿವರ ಖಾತೆ ಹಂಚಿಕೆಯಲ್ಲಿ ನನ್ನ ಹಸ್ತಕ್ಷೇಪ ಇಲ್ಲ: ಬಿ.ವೈ.ವಿಜಯೇಂದ್ರ
Team Udayavani, Jan 21, 2021, 3:32 PM IST
ಕಲಬುರಗಿ: ನೂತನ ಏಳು ಸಚಿವರಿಗೆ ಖಾತೆ ಹಂಚಿಕೆ ಮತ್ತು ಹತ್ತು ಜನ ಸಚಿವರ ಖಾತೆ ಬದಲಾವಣೆಯಲ್ಲಿ ನನ್ನ ಹಸ್ತಕ್ಷೇಪ ಇಲ್ಲ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಪುತ್ರ, ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಸ್ಪಷ್ಟ ಪಡಿಸಿದರು.
ಕಲಬುರಗಿ ವಿಮಾನ ನಿಲ್ದಾಣದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಗಳಿಗೆ ಸಾಕಷ್ಟು ಆಡಳಿತ ಅನುಭವ ಇದೆ. ಸಚಿವರ ಅಸಮಾಧಾನವನ್ನು ಮುಖ್ಯಮಂತ್ರಿಗಳು ಸರಿಪಡಿಸುತ್ತಾರೆ. ಎಲ್ಲರೊಂದಿಗೆ ಚರ್ಚೆ ಮಾಡಿ ಸಮಾಧಾನ ಪಡಿಸುತ್ತಾರೆ ಎಂದರು.
ಇದನ್ನೂ ಓದಿ:ಕುತೂಹಲ ಮೂಡಿಸಿದ ಬೊಮ್ಮಾಯಿ- ಕುಮಾರಸ್ವಾಮಿ ಭೇಟಿ: ರಾಜಕೀಯ ಮಾತನಾಡಿಲ್ಲ ಎಂದ ಉಭಯ ನಾಯಕರು
ಮುಖ್ಯಮಂತ್ರಿ ಯಡಿಯೂರಪ್ಪನವರ ಮೂರ್ನಾಲ್ಕು ದಶಕಗಳ ರಾಜಕೀಯ ಹೋರಾಟ ಮತ್ತು ಬಿಜೆಪಿ ಕಾರ್ಯಕರ್ತರ ಪರಿಶ್ರಮದಿಂದ ಪಕ್ಷ ಅಧಿಕಾರಕ್ಕೆ ಬಂದಿದೆ. ಹೀಗಾಗಿ ಸರ್ಕಾರದಲ್ಲಿ ಯಾರ ಹಸ್ತಕ್ಷೇಪದ ಅಗತ್ಯವೂ ಬೀಳುವುದಿಲ್ಲ ಎಂದರು.