ವಿಶ್ವಾಸದಿಂದ ಮುನ್ನುಗ್ಗಿದರೆ ಕಾರ್ಯ ಸಿದ್ಧಿ

Team Udayavani, Nov 13, 2018, 11:12 AM IST

gul-4.jpg

ಕಲಬುರಗಿ: ನಂಬಿಕೆ ಹಾಗೂ ಆತ್ಮ ವಿಶ್ವಾಸ- ದೃಢ ನಿರ್ಧಾರದೊಂದಿಗೆ ಮುನ್ನುಗ್ಗಿದರೆ ಎಂತಹ ಕೆಲಸಗಳಾದರೂ ಒಂದೊಂದಾಗಿ ತಾನೆ ಕಾರ್ಯಸಿದ್ಧಿಯಾಗುತ್ತವೆ ಎಂದು ಹಿರಿಯ ಪತ್ರಕರ್ತ ಹಾಗೂ ಶರಣಬಸವ ವಿಶ್ವವಿದ್ಯಾಯದ ಸಮೂಹ ಸಂವಹನ ಹಾಗೂ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಟಿ.ವಿ. ಶಿವಾನಂದನ್‌ ಹೇಳಿದರು.

ನಗರದಲ್ಲಿ ನಡೆಯುತ್ತಿರುವ ಶರಣಬಸವೇಶ್ವರ ವಸತಿ ಶಾಲೆ (ಎಸ್‌ಬಿಆರ್‌) ಶಾಲೆ ಸುವರ್ಣ ಮಹೋತ್ಸವ ಹಾಗೂ ಶಾಲೆ ಹಳೆ ವಿದ್ಯಾರ್ಥಿಗಳ ಸಮ್ಮಿಲನ ಉತ್ಸವದ ಮೂರನೇ ದಿನದ ಪ್ರೇರಣಾತ್ಮಕ ಉಪನ್ಯಾಸ ನೀಡಿದ ಅವರು, ನಂಬಿಕೆ ಮತ್ತು ಆತ್ಮಸ್ಥೈರ್ಯ ಮೈಗೂಡಿಸಿಕೊಂಡರೆ ಮಾತ್ರ ಸಾಧನೆ ಮಾಡುವುದು ಸುಲಭವಾಗಲಿದೆ.

ಸಕಾರಾತ್ಮಕವಾಗಿ ಸಂವಹನ ನಡೆಸಬೇಕು. ಆಗ ಮಾತ್ರ ಜೀವನದಲ್ಲಿ ಹೀಗಾಯಿತಲ್ಲ ಎಂದು ಪರಿತಪಿಸುವ ಪ್ರಮೇಯವೇ ಬರಲ್ಲ. ಜೀವನದಲ್ಲಿ ಹಿಂದೆ ನಡೆದುಕೊಂಡ ದಾರಿಯನ್ನು ಹಿಂದುರುಗಿ ನೋಡುವ ಮೂಲಕ ಮುಂದಿನ ಗುರಿಗೆ ಶಕ್ತಿ ಎಂಬ ಇಂಧನ ತುಂಬಿಸಿಕೊಳ್ಳಬೇಕು. ಆಗಲೇ ಯಶಸ್ವಿನ ಮೆಟ್ಟಲು ಹತ್ತಲು ಸಾಧ್ಯವಾಗುತ್ತದೆ. 

ಬಹು ಮುಖ್ಯವಾಗಿ ಕಠಿಣ ಪರಿಶ್ರಮದಿಂದ ಯಶೋಗಾಥೆಗಳಾಗಬಹುದು ಎಂದು ಹೇಳುವ ಮೂಲಕ ತಮ್ಮ ತಂದೆ ಅಗಲಿಕೆ ಬಳಿಕ ತಾಯಿ-ಸಹೋದರಿ ಜತೆಗೆ ಬೆಳೆದಿರುವುದು ಹಾಗೂ ಜೀವನದಲ್ಲಿ ಎದುರಾದ ಬಂಡೆಗಲ್ಲಿನಂತ ಸವಾಲುಗಳನ್ನು ಎದುರಿಸಿದ್ದನ್ನು ಶಿವಾನಂದನ್‌ ಎಳೆ-ಎಳೆಯಾಗಿ ವಿವರಿಸಿದರು.

ವಿದ್ಯಾರ್ಥಿಗಳು ಸಕಾರಾತ್ಮಕ ಚಿಂತನೆಗಳನ್ನು ಮೈಗೂಡಿಸಿಕೊಳ್ಳಬೇಕು. ಸಮಸ್ಯೆ ಮತ್ತು ಸವಾಲುಗಳು ನಮಗೆ ಬೆಳೆಯಲು ಸ್ಫೂರ್ತಿ ನೀಡುತ್ತವೆ. ಮಾಡುವ ಕಾಯಕದಲ್ಲಿ ನಿಷ್ಠೆ, ಶ್ರದ್ಧೆಯಿಂದ ಕಠಿಣ ಪರಿಶ್ರಮದಿಂದ, ಬದ್ಧತೆಯಿಂದ ಕೆಲಸವನ್ನು ಮಾಡಿದರೆ ಯಶಸ್ಸಿ ವ್ಯಕ್ತಿಗಳಾಗಬಹುದು ಎಂಬುದನ್ನು ಶಿವಾನಂದನ್‌ ನೋಬೆಲ್‌ ಸಾಧಕರ ಹೆಸರುಗಳನ್ನು ಉಲ್ಲೇಖೀಸಿ ಉದಾಹರಣೆ ನೀಡಿದರು. ಎಸ್‌ಬಿಆರ್‌ ಪ್ರಾಚಾರ್ಯ ಪ್ರೊ| ಎನ್‌.ಎಸ್‌. ದೇವರಕಲ್‌, ಹಳೆ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷರಾದ ಖ್ಯಾತ ನರರೋಗ ತಜ್ಞ ಡಾ| ಭರತ ಕೋಣಿನ್‌, ಉಪಾಧ್ಯಕ್ಷ ಬಸವರಾಜ ಖಂಡೇರಾವ್‌, ದಿನೇಶ ಪಾಟೀಲ, ಗುರುಬಸಪ್ಪ ಕಣಕಿ, ಪ್ರಶಾಂತ ಮಾನಕರ್‌, ಡಾ| ಸುಧಾ ಹಾಲಕಾಯಿ, ಉದಯಕುಮಾರ ನವಣಿ, ಶ್ರೀಕೃಷ್ಣ ಸತಾಳಕರ್‌, ಸಿದ್ದು ಪಾಟೀಲ ತೆಗನೂರ, ಸಂತೋಷ ಬಿಲಗುಂದಿ ಇದ್ದರು. ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರೂಪಣೆ ಮಾಡುತ್ತಿರುವ ಅಪ್ಪ ಪಬ್ಲಿಕ್‌ ಶಾಲೆ ಪ್ರಾಚಾರ್ಯ ಶಂಕರಗೌಡ ಹೊಸಮನಿ ಅವರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು.

ಟಾಪ್ ನ್ಯೂಸ್

Why Modi doesn’t talk about ladies now: Priyanka Gandhi

Davanagere; ಮೋದಿ ಯಾಕೆ ಬಲಾತ್ಕಾರಕ್ಕೊಳಗಾದ ಮಹಿಳೆಯರ ಬಗ್ಗೆ ಮಾತನಾಡಲ್ಲ: ಪ್ರಿಯಾಂಕಾ ಗಾಂಧಿ

1-wewqewewq

H.D. Revanna ಬಂಧಿಸಿದ ಎಸ್ ಐಟಿ; ನಿರೀಕ್ಷಣಾ ಜಾಮೀನು ನಿರಾಕರಿಸಿದ ಕೋರ್ಟ್

1-qwweqwewq

Tirunelveli; ನಾಪತ್ತೆಯಾಗಿದ್ದ ಕಾಂಗ್ರೆಸ್ ಜಿಲ್ಲಾಧ್ಯಕ್ಷನ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆ

POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್‌ ದಾಖಲು

POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್‌ ದಾಖಲು

Priyanka Gandhi Slams PM Modi in Banaskantha Rally

ರಾಹುಲ್ ಸಾಮಾನ್ಯ ಜನರ ಕಷ್ಟ ಕೇಳಿದ್ದಾರೆ, ಆದರೆ ಮೋದಿ ಅರಮನೆಯಲ್ಲಿ ಕುಳಿತಿದ್ದಾರೆ:ಪ್ರಿಯಾಂಕಾ

Allu Arjun: ಯೂಟ್ಯೂಬ್‌ನಲ್ಲಿ ಧೂಳೆಬ್ಬಿಸಿ ದಾಖಲೆ ಬರೆದ ʼಪುಷ್ಪ ಪುಷ್ಪʼ ಹಾಡು

Allu Arjun: ಯೂಟ್ಯೂಬ್‌ನಲ್ಲಿ ಧೂಳೆಬ್ಬಿಸಿ ದಾಖಲೆ ಬರೆದ ʼಪುಷ್ಪ ಪುಷ್ಪʼ ಹಾಡು

1-wwqewqe

BJP ಕುರುಬ ಸಮುದಾಯಕ್ಕೆ ಒಂದೂ ಟಿಕೆಟ್ ಕೊಟ್ಟಿಲ್ಲ: ಸಿಎಂ ಸಿದ್ದರಾಮಯ್ಯ ಕಿಡಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

DK Sivakumar: ಪ್ರಜ್ವಲ್‌ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ

DK Sivakumar: ಪ್ರಜ್ವಲ್‌ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ

Prajwal Revanna: ಪ್ರಜ್ವಲ್‌ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್‌

Prajwal Revanna: ಪ್ರಜ್ವಲ್‌ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್‌

Kamalapur: ಜಾತಿ ನಿಂದನೆ ಕೇಸ್‌ಗೆ ಹೆದರಿ ಯುವಕ ಆತ್ಮಹತ್ಯೆ

Kamalapur: ಜಾತಿ ನಿಂದನೆ ಕೇಸ್‌ಗೆ ಹೆದರಿ ಯುವಕ ಆತ್ಮಹತ್ಯೆ

ಬಿಜೆಪಿ ವರ್ಚಸ್ಸು ಕುಸಿತ; ಸೋಲಿನ ಭೀತಿಯಿಂದ ಮೋದಿ ದ್ವೇಷ ಭಾಷಣ: ಬಿ.ಆರ್.ಪಾಟೀಲ್

ಬಿಜೆಪಿ ವರ್ಚಸ್ಸು ಕುಸಿತ; ಸೋಲಿನ ಭೀತಿಯಿಂದ ಮೋದಿ ದ್ವೇಷ ಭಾಷಣ: ಬಿ.ಆರ್.ಪಾಟೀಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Why Modi doesn’t talk about ladies now: Priyanka Gandhi

Davanagere; ಮೋದಿ ಯಾಕೆ ಬಲಾತ್ಕಾರಕ್ಕೊಳಗಾದ ಮಹಿಳೆಯರ ಬಗ್ಗೆ ಮಾತನಾಡಲ್ಲ: ಪ್ರಿಯಾಂಕಾ ಗಾಂಧಿ

kejriwal 2

AAP ಚುನಾವಣ ಪ್ರಚಾರ ಹಾಡನ್ನು ಅನುಮೋದಿಸಿದ ಆಯೋಗ; ಕೆಲ ಮಾರ್ಪಾಡು

1-wewqewewq

H.D. Revanna ಬಂಧಿಸಿದ ಎಸ್ ಐಟಿ; ನಿರೀಕ್ಷಣಾ ಜಾಮೀನು ನಿರಾಕರಿಸಿದ ಕೋರ್ಟ್

1-qwweqwewq

Tirunelveli; ನಾಪತ್ತೆಯಾಗಿದ್ದ ಕಾಂಗ್ರೆಸ್ ಜಿಲ್ಲಾಧ್ಯಕ್ಷನ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆ

POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್‌ ದಾಖಲು

POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್‌ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.