ಶಾಲೆ-ಆಸ್ಪತ್ರೆ ಆವರಣದಲ್ಲಿ ಅಕ್ರಮ ನಡೆದರೆ ಕ್ರಮ: ಎಸ್ಪಿ
Team Udayavani, Aug 19, 2022, 4:49 PM IST
ಜೇವರ್ಗಿ: ಶಾಲೆ ಹಾಗೂ ಆಸ್ಪತ್ರೆ ಆವರಣದಲ್ಲಿ ಅಕ್ರಮ ಚಟುವಟಿಕೆ ನಡೆದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಇಶಾ ಪಂತ್ ಎಚ್ಚರಿಕೆ ನೀಡಿದರು.
ತಾಲೂಕಿನ ಗಂವ್ಹಾರ ಗ್ರಾಮದಲ್ಲಿ ಗುರುವಾರ ಆಯೋಜಿಸಲಾಗಿದ್ದ “ನಿಮ್ಮ ಮನೆ ಬಾಗಿಲಿಗೆ ಪೊಲೀಸ್’ ಗ್ರಾಮಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಗ್ರಾಮದಲ್ಲಿ ನಡೆಯುತ್ತಿರುವ ಅಕ್ರಮ ಚಟುವಟಿಕೆಗಳ ಕಡಿವಾಣಕ್ಕೆ ಇಬ್ಬರು ಬೀಟ್ ಪೊಲೀಸರನ್ನು ನೇಮಿಸಲಾಗುವುದು. ಜತೆಗೆ ರಾತ್ರಿ ವೇಳೆ ಪೆಟ್ರೋಲಿಂಗ್ ಮಾಡುವಂತೆ ಸೂಚಿಸಲಾಗುವುದು ಎಂದು ಭರವಸೆ ನೀಡಿದರು.
ಪಿಎಸ್ಐ ಸಂಗಮೇಶ ಅಂಗಡಿ ಮಾತನಾಡಿದರು. ಯುವ ಸಾಹಿತಿ ಸದಾನಂದ ಪಾಟೀಲ ನಿರೂಪಿಸಿ, ವಂದಿಸಿದರು. ಸಭೆ ನಂತರ ಎಸ್ಪಿ ಅವರು ಶ್ರೀ ತ್ರಿವಿಕ್ರಮಾನಂದ ಸರಸ್ವತಿ ಸ್ವಾಮೀಜಿ ಮಠಕ್ಕೆ ಹಾಗೂ ಗೋ ಶಾಲೆಗೆ ಭೇಟಿ ನೀಡಿದರು. ಡಿಸಿಸಿ ಬ್ಯಾಂಕ್ ನಿರ್ದೇಶಕ ನಿಂಗಣ್ಣ ದೊಡ್ಡಮನಿ, ಪಿಡಿಒ ರಾಘವೇಂದ್ರ ಇನ್ನಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ
Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ
MUST WATCH
ಹೊಸ ಸೇರ್ಪಡೆ
PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ
Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ