ಸುರಕ್ಷತೆಯೊಂದಿಗೆ ಸ್ವಾತಂತ್ರ್ಯೊತ್ಸವ ಆಚರಣೆ

Team Udayavani, Aug 12, 2020, 2:34 PM IST

ಸುರಕ್ಷತೆಯೊಂದಿಗೆ ಸ್ವಾತಂತ್ರ್ಯೊತ್ಸವ ಆಚರಣೆ

ಕಲಬುರಗಿ: ಕೋವಿಡ್‌-19 ಸೋಂಕು ತಡೆ ಹಿನ್ನೆಲೆಯಲ್ಲಿ ಮಾಸ್ಕ್, ಸ್ಯಾನಿಟೈಸರ್‌ ನಂತಹ ಸುರಕ್ಷತಾ ಕ್ರಮ ಕೈಗೊಂಡು ಯಾವುದೇ ಲೋಪವಾಗದಂತೆ ಜಿಲ್ಲೆಯಲ್ಲಿ ಆ.15ರಂದು ಸ್ವಾತಂತ್ರ್ಯೊತ್ಸವ ಆಚರಿಸಲಾಗುತ್ತದೆ ಎಂದು ಜಿಲ್ಲಾಧಿ ಕಾರಿ ಶರತ್‌ ಬಿ. ಹೇಳಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ 74ನೇ ಸ್ವಾತಂತ್ರ್ಯ ದಿನಾಚರಣೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಮಾರಂಭದಲ್ಲಿ ಹೆಚ್ಚು ಜನರು ಸೇರುವಂತಿಲ್ಲ. ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸಿ ಬರಬೇಕು. ಸ್ಥಳದಲ್ಲಿ ಸುರಕ್ಷತಾ ಕ್ರಮ ಕೈಗೊಂಡಿರಬೇಕು. ಕೇಂದ್ರ ಗೃಹ ಸಚಿವಾಲಯ ನೀಡಿರುವ ನಿರ್ದೇಶನಗಳನ್ನು ಚಾಚೂ ತಪ್ಪದೇ ಪಾಲಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಕೋವಿಡ್ ಭೀತಿ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಯಾವುದೇ ಶಾಲಾ ಮಕ್ಕಳನ್ನು ಸಮಾರಂಭಕ್ಕೆ ಕರೆತರಬಾರದು ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ ಅವರು, ಎನ್‌ ಸಿಸಿ, ಸ್ಕೌಟ್ಸ್‌, ಹೋಂಗಾರ್ಡ್‌ ಹಾಗೂ ಪೊಲೀಸ್‌ ತಂಡಗಳ ಪಥಸಂಚಲನ ಮಾತ್ರ ನಡೆಸಬೇಕು. ಈ ಸಂಬಂಧ ಮೊದಲೇ ಪೂರ್ವ ತಯಾರಿ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದರು.

ಈ ಬಾರಿ ಕೋವಿಡ್‌ ಸೋಂಕು ಬಗ್ಗೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಸ್ತಬ್ದ ಚಿತ್ರಗಳನ್ನು ತಯಾರಿಸಬೇಕು. ಆರೋಗ್ಯ, ಕಾರ್ಮಿಕ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಸಾರಿಗೆ ಇಲಾಖೆಗಳು ತಮ್ಮ-ತಮ್ಮ ಯೋಜನೆ-ಕ್ರಮಗಳ ಕುರಿತ ಟ್ಯಾಬ್ಲೋ ನಿರ್ಮಿಸಬೇಕು ಎಂದು ಸಲಹೆ ನೀಡಿದರು.

ಜಿಲ್ಲಾ ಕೇಂದ್ರದಲ್ಲಿ ಎಲ್ಲಾ ಕಚೇರಿಗಳಲ್ಲಿ ಮುಖ್ಯಸ್ಥರು ಹಾಗೂ ಸಿಬ್ಬಂದಿ ವರ್ಗದವರು ಅಂದು ಬೆಳಗ್ಗೆ 7.30ಕ್ಕೆ ಧ್ವಜಾರೋಹಣ ಮಾಡಬೇಕು. ನಂತರ ನಗರದ ಪೊಲೀಸ್‌ ಮೈದಾನದಲ್ಲಿ ನಡೆಯುವ ಪ್ರಧಾನ ಕಾರ್ಯಕ್ರಮಕ್ಕೆ ಅಂದು ಬೆಳಗ್ಗೆ 8.30ರೊಳಗಾಗಿ ಬಂದು ಸೇರಬೇಕು. ಇಲ್ಲಿ ಸರಿಯಾಗಿ ಬೆಳಗ್ಗೆ 9ಗಂಟೆಗೆ ಧ್ವಜಾರೋಹಣ ನೆರವೇರಿಸಲಾಗುವುದು. ವೈದ್ಯರು, ನರ್ಸ್‌, ಪೌರ ಕಾರ್ಮಿಕರು ಹಾಗೂ ಕೋವಿಡ್‌ನಿಂದ ಗುಣಮುಖರಾದ ರೋಗಿಗಳನ್ನು ಸನ್ಮಾನಿಸಲಾಗುವುದು. ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳು ಪಟ್ಟಿ ತಯಾರಿಸಬೇಕು ಎಂದರು.

ಜಿಪಂ ಸಿಇಒ ಡಾ| ರಾಜಾ ಪಿ., ಎಸ್‌ಪಿ ಸಿಮಿ ಮರಿಯಂ ಜಾರ್ಜ್‌, ಮಹಾನಗರ ಪಾಲಿಕೆ ಆಯುಕ್ತ ರಾಹುಲ್‌ ಪಾಂಡ್ವೆ, ಅಪರ ಜಿಲ್ಲಾಧಿಕಾರಿ ಡಾ| ಶಂಕರ್‌ ವಣಿಕ್ಯಾಳ ಹಾಗೂ ಜಿಲ್ಲಾಮಟ್ಟದ ಅಧಿಕಾರಿಗಳು ಇದ್ದರು

ಟಾಪ್ ನ್ಯೂಸ್

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.