ಮುಲ್ಲಾಮಾರಿ ಯೋಜನೆಯಡಿ ನೀರಾವರಿ ಸೌಲಭ್ಯ


Team Udayavani, Nov 13, 2018, 11:35 AM IST

gul-6.jpg

ಚಿಂಚೋಳಿ: ತಾಲೂಕಿನ ಕೆಳದಂಡೆ ಮುಲ್ಲಾಮಾರಿ ನೀರಾವರಿ ಯೋಜನೆ ವ್ಯಾಪ್ತಿಯ ಒಟ್ಟು 9,713 ಹೆಕ್ಟೇರ್‌ ಪ್ರದೇಶಕ್ಕೆ ನೀರು ಹರಿಸುವ ಉದ್ದೇಶವಿದೆ. ಯೋಜನೆ ಕೊನೆ ಭಾಗದ ರೈತರ ಜಮೀನುಗಳಿಗೆ ನೀರಾವರಿ ಸೌಲಭ್ಯ ಒದಗಿಸಿ ಕೊಡುವುದು ನಮ್ಮ ಮುಖ್ಯ ಉದ್ದೇಶವಾಗಿದೆ ಎಂದು ಯೋಜನೆ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ವಿಕಾಸ ಕುಲಕರ್ಣಿ ತಿಳಿಸಿದರು.

ತಾಲೂಕಿನ ರೋಹಿಲಾ ತಾಂಡಾದ ಹತ್ತಿರ ಕೆಳದಂಡೆ ಮುಲ್ಲಾಮಾರಿ ಯೋಜನೆ ಬಲದಂಡೆ ಮುಖ್ಯ ಕಾಲುವೆ ನವೀಕರಣ ಕಾಮಗಾರಿ ಪರಿಶೀಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನೇಕ ವರ್ಷಗಳಿಂದ ಬಲದಂಡೆ ಮುಖ್ಯ ಕಾಲುವೆ
ಆಧುನೀಕರಣವಾಗದ ಕಾರಣ ನೀರು ಸೋರಿಕೆಯಿಂದಾಗಿ ರೈತರ ಹೊಲಗಳಿಗೆ ತಲುಪುತ್ತಿಲ್ಲ. ಹೀಗಾಗಿ ಈಗ ಸಿಮೆಂಟ್‌
ಕಾಂಕ್ರಿಟ್‌ ಕಾಲುವೆ ನಿರ್ಮಾಣ ಕಾರ್ಯ ನಡೆಯುತ್ತಿದೆ ಎಂದು ತಿಳಿಸಿದರು.

ಅನೇಕ ವರ್ಷಗಳ ನಂತರ ಬಲದಂಡೆ ಮುಖ್ಯ ಕಾಲುವೆ ಆಧುನೀಕರಣ ಕಾಮಗಾರಿ ನಡೆಯುತ್ತಿದೆ. ಗುಣಮಟ್ಟದ ಕಾಮಗಾರಿ ನಡೆಸುವಂತೆ ಗುತ್ತಿಗೆದಾರರಿಗೆ ಸೂಚಿಸಲಾಗಿದೆ. ಅಲ್ಲದೇ ನಾನು ಪ್ರತಿನಿತ್ಯ ಕಾಮಗಾರಿ ವೀಕ್ಷಿಸುತ್ತಿದ್ದೇನೆ. ನಮ್ಮ ಭಾಗದ ನೀರಾವರಿ ಯೋಜನೆಗಳು ಅಭಿವೃದ್ಧಿ ಆಗಬೇಕು ಎಂಬುದು ಸರಕಾರದ ಮುಖ್ಯಗುರಿ ಆಗಿದೆ ಎಂದು ತಿಳಿಸಿದರು. 

ಕೆಳದಂಡೆ ಮುಲ್ಲಾಮಾರಿ ನೀರಾವರಿ ಯೋಜನೆ ಬಲದಂಡೆ ಮುಖ್ಯ ಕಾಲುವೆ 80 ಕಿಮೀ ವರೆಗೆ ನವೀಕರಣ ಮಾಡುತ್ತಿರುವುದರಿಂದ ಕಾಲುವೆಯಲ್ಲಿನ ಹೂಳು ಕಲ್ಲಿನ ಪರಸಿ ಮತ್ತು ಗಿಡಗಂಟಿ ಕಿಳಲಾಗಿದೆ. ಮರುಮ ಹಾಕಿ ಸಮತಟ್ಟಾಗಿ ಲೈನಿಂಗ್‌ ಮಾಡಲಾಗುತ್ತಿದೆ. ಈಗಾಗಲೇ ಸಿಮೆಂಟ್‌ ಲೈನಿಂಗ್‌ ಕೆಲಸ ಶೇ. 60ರಷ್ಟು ಪೂರ್ಣಗೊಂಡಿದೆ ಎಂದು ವಿವರಿಸಿದರು. ಬಲದಂಡೆ ಮುಖ್ಯಕಾಲುವೆ ಪೂರ್ಣಗೊಂಡರೆ ಯೋಜನೆ ವ್ಯಾಪ್ತಿಯ ಚಿಮ್ಮನಚೋಡ, ತಾಜಲಾಪುರ, ದೋಟಿಕೊಳ, ಖೋದಂಪುರ, ಕನಕಪುರ, ಗಾರಂಪಳ್ಳಿ, ಗೌಡನಹಳ್ಳಿ, ನಿಮಾಹೊಸಳ್ಳಿ, ಚಿಂಚೋಳಿ, ಪೋಲಕಪಳ್ಳಿ, ಅಣವಾರ, ಮೋತಕಪಳ್ಳಿ, ರಾಮತೀರ್ಥ, ಚಿಮ್ಮಾಇದಲಾಯಿ, ದಸ್ತಾಪುರ, ಯಾಕಾಪುರ, ಬೆಡಕಪಳ್ಳಿ, ಕೊಡಂಪಳ್ಳಿ, ಕೆರೋಳಿ, ಕರ್ಚಖೇಡ ಗ್ರಾಮಗಳ ರೈತರು ಇನ್ನು ಮುಂದೆ ನೀರಾವರಿ ಸೌಲಭ್ಯಪಡೆದುಕೊಳ್ಳಲಿದ್ದಾರೆ ಎಂದು ತಿಳಿಸಿದರು.

ಟಾಪ್ ನ್ಯೂಸ್

1-asasa

Vote; ಬೇರೆಲ್ಲ ಬದಿಗಿಡಿ ಇಂದು ತಪ್ಪದೆ ಮತ ಚಲಾಯಿಸಿ! :ನೀವು ಗಮನಿಸಬೇಕಾದದ್ದು..

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

1-waadassda

OBC-Muslim ಮೀಸಲು ವಿವಾದ ತಾರಕಕ್ಕೆ: ಪ್ರಧಾನಿ ಹೇಳಿಕೆ ಅಲ್ಲಗಳೆದ ಸಿದ್ದರಾಮಯ್ಯ

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

1-asasa

Vote; ಬೇರೆಲ್ಲ ಬದಿಗಿಡಿ ಇಂದು ತಪ್ಪದೆ ಮತ ಚಲಾಯಿಸಿ! :ನೀವು ಗಮನಿಸಬೇಕಾದದ್ದು..

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

20

Election illegal: ನಿನ್ನೆ 2.31 ಕೋ. ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.