ಮಾನವತೆಯಿಂದ ದೈವತ್ವಕ್ಕೆ ಕರೆದೊಯ್ಯುವುದೇ ಧರ್ಮ

Team Udayavani, May 26, 2018, 2:45 PM IST

gul-4.jpg

ಕಲಬುರಗಿ: ಮಾನವತೆಯಿಂದ ದೈವತ್ವಕ್ಕೆ ಕರೆದೊಯ್ಯುವುದೇ ಧರ್ಮದ ಮೂಲ ಗುರಿಯಾಗಿದೆ ಎಂದು ಹೊನ್ನಕಿರಣಗಿಯ ಚಂದ್ರಗುಂಡ ಶಿವಾಚಾರ್ಯರು ನುಡಿದರು.

ನಗರದ ಗೋದುತಾಯಿ ಕಾಲೋನಿಯ ಪಂಚಲಿಂಗೇಶ್ವರ ದೇವಸ್ಥಾನದ ಪ್ರಾಂಗಣದಲ್ಲಿ ಆಯೋಜಿಸಿರುವ ಕರಿಬಸವೇಶ್ವರ ಗುರುಕುಲ ವೈದಿಕ ಸಂಸ್ಕಾರ ಶಿಬಿರ ಸಮಾರೋಪ ಸಮಾರಂಭದ ಸಾನ್ನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿದರು.

ಸೂರ್ಯ ಭೂಮಿಗಿಂತ ಎಷ್ಟೋ ದೊಡ್ಡವ. ಆದರೆ ಆತ ದೂರದಲ್ಲಿ ಇರುವುದರಿಂದ ಸಣ್ಣವನಾಗಿ ಕಾಣುತ್ತಾನೆ. ಅದರಂತೆಯೇ ದೇವರು ನಮಗಿಂತ ಎಷ್ಟೋ ದೊಡ್ಡವನು. ಅವನಿಂದ ನಾವು ದೂರ ಇರುವುದರಿಂದ ನೈಜ ಸ್ವರೂಪವನ್ನು ತಿಳಿಯಲಾರೆವು. ಧರ್ಮಾಚರಣೆಗಳು ಭಿನ್ನವಾದರೂ ಸೇರುವ ಗುರಿ ಒಂದೇ. ವಿಚಾರಗಳು ಭಿನ್ನವಾದರೂ ಮುಟ್ಟುವ ಗುರಿ ಒಂದೇ ಎಂದರು.

ಸ್ವಧರ್ಮ ಅನುಷ್ಠಾನ, ಪರಧರ್ಮ ಸಹಿಷ್ಣುತೆ ಬಾಳಿನ ಎರಡು ಕಣ್ಣುಗಳಾಗಬೇಕು. ಧರ್ಮ ದಿಕ್ಸೂಚಿ ಇಟ್ಟುಕೊಂಡು ನಡೆದರೆ ದಾರಿ ತಪ್ಪುವುದಿಲ್ಲ ಎಂದು ನುಡಿದರು. ಜಿಪಂ ಸದಸ್ಯರಾದ ಅರುಣಕುಮಾರ ಪಾಟೀಲ ಉದ್ಘಾಟಿಸಿ, ವೈದಿಕ ಸಂಸ್ಕಾರ ಶಿಬಿರಗಳನ್ನು ಮಾಡುವುದರಿಂದ ಜನರಲ್ಲಿ ಧರ್ಮ ಪ್ರಜ್ಞೆ ಮೂಡುವುದು. ವಿದ್ಯಾರ್ಥಿಗಳಿಗೆ ವೈದಿಕ ಸಂಸ್ಕಾರ ಕೊಡುವುದರಿಂದ ಧರ್ಮ ಸಂಸ್ಕತಿ ಗಟ್ಟಿಗೊಳ್ಳುವುದು ಎಂದರು. 

ಪಂಡಿತ ಶಿವಕವಿ ಜೋಗುರ ಮಾತನಾಡಿ, ಅಗಸ್ತ್ಯ ಮಹಾಋಷಿ, ವ್ಯಾಸರಿಗೆ ಬೋಧಿಸಿರುವ ಕೀರ್ತಿ ಪಂಚಪೀಠಗಳ ಆಚಾರ್ಯರಿಗೆ ಸಲ್ಲುತ್ತದೆ. ಹೊನ್ನಕಿರಣಗಿಯ ಶ್ರೀಗಳು 110 ವಿದ್ಯಾರ್ಥಿಗಳಿಗೆ ಸಂಸ್ಕಾರ ಶಿಬಿರ ನಡೆಸುತ್ತಿರುವ ಕಾರ್ಯ ಸಮಾಜ ಸುಧಾರಣೆ ಆಗುವುದು ಎಂದು ನುಡಿದರು. 

ಶರಣ ಸಂಸ್ಥಾನದ ಲಿಂಗರಾಜಪ್ಪ ಅಪ್ಪಾ ಅಧ್ಯಕ್ಷತೆ ವಹಿಸಿ, ಇಂದು ಧರ್ಮ ಸಂಸ್ಕಾರ ಶಿಬಿರಗಳನ್ನು ಗಂಡು ಮಕ್ಕಳಿಗೆ ಕೊಡುವುದರ ಜೊತೆಗೆ, ಹೆಣ್ಣು ಮಕ್ಕಳಿಗೂ ಪಾಲ್ಗೊಳ್ಳುವ ಅವಕಾಶ ಕೊಡಬೇಕು. ಮುಂದಿನ ದಿನಮಾನದಲ್ಲಿ ವೈದಿಕ ಸಂಸ್ಕಾರ ಶಿಬಿರದ ಜೊತೆಗೆ ಕಂಪ್ಯೂಟರ್‌ ತರಬೇತಿ ಶಿಬಿರ ನಡೆಸಬೇಕೆಂದು ಸಲಹೆ ನೀಡಿದರು. 

ಪಾಳಾದ ಗುರುಮೂರ್ತಿ ಶಿವಾಚಾರ್ಯರು, ರೇವಣಸಿದ್ದ ಚರಂತೇಶ್ವರ ಶಿವಾಚಾರ್ಯರು, ಓಂಕಾರ ಬೇನೂರಿನ ಸಿದ್ಧರೇಣುಕಾ ಶಿವಾಚಾರ್ಯರು, ಮಹಾಗಾಂವದ ಗುರುಲಿಂಗ ಶಿವಾಚಾರ್ಯರು, ಸ್ಟೇಷನ್‌ ಬಬಲಾದದ ರೇವಣಸಿದ್ದ ಶಿವಾಚಾರ್ಯರು, ಮಲ್ಲಿಕಾರ್ಜುನ ಟೆಂಗಳಿ ಶಾಸ್ತ್ರೀ, ಮಲ್ಲಿಕಾರ್ಜುನ ಎಸ್‌. ಪಾಟೀಲ, ಶಾಂತವೀರ ತುಪ್ಪದ, ಡಾ| ಮಲ್ಲಿಕಾರ್ಜುನ ಪಾಟೀಲ, ಶಿವಶಂಕರ ಗಚ್ಚಿನಮಠ, ವೀರಯ್ಯಶಾಸ್ತ್ರಿ ಮಲಕೂಡ, ಬಸವರಾಜ ಪುರಾಣಿಕ, ಅಣ್ಣಾರಾವ ಕಲಗುರ್ತಿ, ವಿಶ್ವರಾಧ್ಯ ನಾಮಕಲ್‌, ಕೇಶವರಾವ ಪಾಟೀಲ್‌, ಜಾನಪ್ಪಗೌಡ ಪಾಟೀಲ, ಶರಣಬಸಪ್ಪ ಬಗಲಿ, ಸಿದ್ರಾಮಪ್ಪ ಆಲಗೂಡಕರ ಇದ್ದರು. ವೈದಿಕ ಪಟುಗಳಿಂದ ವೇದಘೋಷ ಜರುಗಿತು. ಸಿದ್ದಮಲ್ಲಯ್ಯ ಹಿರೇಮಠ ಸ್ವಾಗತಿಸಿದರು. ನಾಗಲಿಂಗಯ್ಯ ಮಠಪತಿ ನಿರೂಪಿಸಿದರು.

ಟಾಪ್ ನ್ಯೂಸ್

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.