ಮುಂಗಾರು ನಿರೀಕ್ಷೆಯಲ್ಲಿ ಅನ್ನದಾತ

8.25 ಲಕ್ಷ ಟನ್‌ ಉತ್ಪಾದನಾ ಗುರಿಬಿತ್ತನೆ ಬೀಜ-ರಸಗೊಬ್ಬರ ವಿತರಣೆಗೆ ಇಲಾಖೆ ಸನ್ನದ್ಧ

Team Udayavani, Jun 5, 2020, 4:14 PM IST

5-June-20

ಜೇವರ್ಗಿ: ಹೊಲ ಹದಗೊಳಿಸುತ್ತಿರುವ ರೈತ.

ಜೇವರ್ಗಿ: ಸತತ ಕಳೆದ ಎರಡ್ಮೂರು ವರ್ಷಗಳಿಂದ ತಾಲೂಕಿನಲ್ಲಿ ಬರಗಾಲ ಆವರಿಸಿದ ಪರಿಣಾಮ ರೈತಾಪಿ ವರ್ಗ ಸಾಕಷ್ಟು ತೊಂದರೆ ಅನುಭವಿಸುವಂತಾಯಿತು. ಬರಗಾಲದ ಛಾಯೆ ಮಾಸುವ ಮುನ್ನವೇ ಮುಂಗಾರು ಹಂಗಾಮು ಆಗಮಿಸಿದ್ದು, ರೈತರು ಉಳುಮೆ ಮಾಡಿ ಭೂಮಿ ಹದಗೊಳಿಸುವ ಕಾರ್ಯದಲ್ಲಿ ತೊಡಗಿದ್ದಾರೆ.

ಮುಂಗಾರು ಹಂಗಾಮಿನ ಬಿತ್ತನೆ ಬೀಜ ಹಾಗೂ ಅಗತ್ಯ ರಸಗೊಬ್ಬರ ದಾಸ್ತಾನು ಸಂಗ್ರಹಿಸಿಡುವ ಮೂಲಕ ಕೃಷಿ ಇಲಾಖೆ ಸಕಲ ಸಿದ್ಧತೆ ಮಾಡಿಕೊಂಡಿದೆ. ಜೇವರ್ಗಿ ಸೇರಿದಂತೆ ಆಂದೋಲಾ, ಇಜೇರಿ, ನೆಲೋಗಿ, ಯಡ್ರಾಮಿ ಹೋಬಳಿಗಳ ಒಟ್ಟು 1,18,271 ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆ ಗುರಿ ಹೊಂದಿದೆ. ಮುಂಗಾರು ಹಂಗಾಮಿನಲ್ಲಿ 8.25 ಲಕ್ಷ ಟನ್‌ ಉತ್ಪಾದನಾ ಗುರಿ ಹೊಂದಲಾಗಿದೆ.

ತಾಲೂಕಿನ ಪ್ರಮುಖ ಬೆಳೆಗಳಾದ ತೊಗರಿ 64,450 ಹೆಕ್ಟೇರ್‌, ಹತ್ತಿ 42,725 ಹೆಕ್ಟೇರ್‌, ಸಜ್ಜೆ, ಸೂರ್ಯಕಾಂತಿ ಮತ್ತು ಮೆಕ್ಕೆಜೋಳ 1,000 ಹೆಕ್ಟೇರ್‌, ಹೆಸರು 1,250 ಹೆಕ್ಟೇರ್‌, ಎಳ್ಳು 500 ಹೆಕ್ಟೇರ್‌ ಸೇರಿದಂತೆ ಒಟ್ಟು 1,18,271 ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆ ಮಾಡಲು ಗುರಿ ಹೊಂದಲಾಗಿದೆ. ಈಗಾಗಲೇ ಬೀಜ ದಾಸ್ತಾನು ಸಂಗ್ರಹದ ಮೂಲಕ ಮುಂಗಾರು ಆರಂಭವಾಗುತ್ತಿದ್ದಂತೆ ಬೀಜ ವಿತರಣೆ ಪ್ರಕ್ರಿಯೆ ಆರಂಭಿಸಲು ಇಲಾಖೆ ಕ್ರಮ ಕೈಗೊಂಡಿದೆ. ಪ್ರಸ್ತಕ ಮುಂಗಾರು ಹಂಗಾಮಿನಲ್ಲಿ ರೈತರಿಗೆ ರಿಯಾಯತಿ ದರದಲ್ಲಿ ಬಿತ್ತನೆ ಬೀಜ ಒದಗಿಸಲು ಬಿತ್ತನೆ ಬೀಜಗಳಾದ ತೊಗರಿ, ಹೆಸರು, ಸಜ್ಜೆ ಸೂರ್ಯಕಾಂತಿ, ಮೆಕ್ಕೆ ಜೋಳ ಬೀಜಗಳನ್ನು ರೈತ ಸಂಪರ್ಕ ಕೇಂದ್ರಗಳಲ್ಲಿ ದಾಸ್ತಾನು ಮಾಡಲಾಗಿದೆ. ಪ್ರತಿ ರೈತ ಸಂಪರ್ಕ ಕೇಂದ್ರದ ವ್ಯಾಪ್ತಿಯಲ್ಲಿ 2 ರಿಂದ 3 ಹೆಚ್ಚುವರಿ ಬೀಜ ವಿತರಣಾ ಕೇಂದ್ರಗಳನ್ನು ಸ್ಥಾಪಿಸಿ ರೈತರಿಗೆ ಬೀಜ ವಿತರಿಸಲು ಸೂಕ್ತ ಕ್ರಮ ತೆಗೆದುಕೊಳ್ಳಲಾಗುತ್ತಿದೆ.

ಮುಂಗಾರು ಹಂಗಾಮಿಗೆ ಬೇಕಾಗುವ ರಸಗೊಬ್ಬರವನ್ನು ಎಲ್ಲಾ ಹೋಬಳಿಗಳ ವ್ಯವಸಾಯ ಸೇವಾ ಸಹಕಾರ ಸಂಘಗಳ ಮೂಲಕ ಹಾಗೂ ಅಧಿಕೃತ ಮಾರಾಟಗಾರರ ಮೂಲಕ ವಿತರಿಸಲು ವ್ಯವಸ್ಥೆ ಮಾಡಲಾಗಿದೆ. ಜೇವರ್ಗಿ ರೈತ ಸಂಪರ್ಕ ಕೇಂದ್ರದ ವ್ಯಾಪ್ತಿಯ ಹರನೂರ, ಕೂಡಿ ಮತ್ತು ಸೊನ್ನದಲ್ಲಿ, ನೆಲೋಗಿ ರೈತ ಸಂಪರ್ಕ ಕೇಂದ್ರದ ವ್ಯಾಪ್ತಿಯ ಅಂಕಲಗಾ, ಮಂದೇವಾಲ ಹಾಗೂ ಜೇರಟಗಿಯಲ್ಲಿ, ಆಂದೋಲಾ ರೈತ ಸಂಪರ್ಕ ಕೇಂದ್ರದ ಚಿಗರಳ್ಳಿ ಕ್ರಾಸ್‌ ಮತ್ತು ನರಿಬೋಳದಲ್ಲಿ, ಇಜೇರಿ ರೈತ ಸಂಪರ್ಕ ಕೇಂದ್ರ ವ್ಯಾಪ್ತಿಯ ಬಿಳವಾರ ಮತ್ತು ಯಲಗೋಡ, ಯಡ್ರಾಮಿ ರೈತ ಕೇಂದ್ರ ವ್ಯಾಪ್ತಿಯ ಅರಳಗುಂಡಗಿ, ಕುಕನೂರ ಹಾಗೂ ಮಳ್ಳಿಯಲ್ಲಿ ಹೆಚ್ಚುವರಿ ಬೀಜ ವಿತರಣಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ.

ರೈತರಿಗೆ ಬಿತ್ತನೆ ಸಮಯದಲ್ಲಿ ರಸಗೊಬ್ಬರ ಪೂರೈಕೆಗೆ ಯಾವುದೇ ತೊಂದರೆಯಾಗದಂತೆ ಪೂರ್ವಭಾವಿ ಕ್ರಮ ಕೈಗೊಳ್ಳಲಾಗಿದೆ. ಈಗಾಗಲೇ 2,500 ಟನ್‌ ವಿವಿಧ ರಾಸಾಯನಿಕ ರಸಗೊಬ್ಬರ ದಾಸ್ತಾನು ಮಾಡಲಾಗಿದೆ. ನಿಗದಿತ ಮಾರುಕಟ್ಟೆ ಬೆಲೆಗೆ ಮಾರಾಟ ಮಾಡುವಂತೆ ರಸಗೊಬ್ಬರ ವಿತರಕರಿಗೆ ಆದೇಶ ನೀಡಲಾಗಿದೆ. ಹವಾಮಾನ ಇಲಾಖೆ ಮುನ್ಸೂಚನೆಗಳ ಪ್ರಕಾರ ಜೂನ್‌ ಮೊದಲ ವಾರದ ಆಸುಪಾಸಿನಲ್ಲಿ ರಾಜ್ಯಕ್ಕೆ ಮುಂಗಾರು ಪ್ರವೇಶವಾಗುವ ಸಾಧ್ಯತೆಗಳಿವೆ. ರೈತರು ಬಿತ್ತನೆ ಸಮಯದಲ್ಲಿ ಅನಗತ್ಯ ಗಡಿಬಿಡಿ ಮಾಡುವ ಬದಲಾಗಿ ಭೂಮಿಯ ತೇವಾಂಶ ನೋಡಿಕೊಂಡು ಬಿತ್ತನೆ ಮಾಡಬೇಕು. ತೇವಾಂಶ ಕೊರತೆಯಿಂದ ಬಿತ್ತಿದ ಬೀಜ ನಾಟದೇ ಹೋಗಬಹುದು. ಪರಿಸ್ಥಿತಿಗೆ ಅನುಗುಣವಾಗಿ ಬಿತ್ತನೆ ಮಾಡಬೇಕು ಎಂದು ಕೃಷಿ ಅಧಿಕಾರಿಗಳು ಸಲಹೆ ನೀಡಿದ್ದಾರೆ.

ಪ್ರಸಕ್ತ ವರ್ಷ ಮುಂಗಾರು ಹಂಗಾಮಿನಲ್ಲಿ ತಾಲೂಕಿನ ರೈತರಿಗೆ ರಿಯಾಯತಿ ದರದಲ್ಲಿ ಬಿತ್ತನೆಗೆ ಬೀಜ ದಾಸ್ತಾನು ಮಾಡಲಾಗಿದೆ. ರೈತರು ಕಡ್ಡಾಯವಾಗಿ ಮಾಸ್ಕ್ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಂಡು ಬೀಜ, ರಸಗೊಬ್ಬರ ಖರೀದಿಸಬೇಕು.
ಸುನೀಲಕುಮಾರ ಜವಳಗಿ,
ಸಹಾಯಕ ಕೃಷಿ ನಿರ್ದೇಶಕರು

ವಿಜಯಕುಮಾರ ಎಸ್‌.ಕಲ್ಲಾ

ಟಾಪ್ ನ್ಯೂಸ್

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.