ಜೇವರ್ಗಿ: ಮಳೆಗೆ ಕೊಚ್ಚಿ ಹೋದ ಸೇತುವೆ
Team Udayavani, Jul 2, 2020, 9:50 AM IST
ಕಲಬುರಗಿ: ರಾತ್ರಿ ಸುರಿದ ಮಳೆಗೆ ಸೇತುವೆಯೊಂದು ಕೊಚ್ಚಿ ಹೋಗಿರುವ ಘಟನೆ ಜಿಲ್ಲೆಯ ಜೇವರ್ಗಿ ಪಟ್ಟಣದಲ್ಲಿ ನಡೆದಿದೆ. ಪರೀಕ್ಷಾ ಕೇಂದ್ರಕ್ಕೆ ತೆರಳಲು ಇದೇ ಸೇತುವೆ ಆಶ್ರಯಿಸಿದ್ದ ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳು ಪರದಾಡುವಂತೆ ಆಗಿದೆ.
ಜೇವರ್ಗಿ ಪಟ್ಟಣದ ಹೊರ ವಲಯದಲ್ಲಿ ಹರಿಯುವ ಹಳ್ಳದ ಸೇತುವೆ ಇದಾಗಿದ್ದು, ಮುರಾರ್ಜಿ ದೇಸಾಯಿ ವಸತಿ ಶಾಲೆಯ ಪರೀಕ್ಷಾ ಕೇಂದ್ರಕ್ಕೆ ಸಂಪರ್ಕ ಕಲ್ಪಿಸುತ್ತದೆ. ಮಳೆಗೆ ದಿಢೀರನೆ ಸೇತುವೆ ಹಾಳಾಗಿರುವುದರಿಂದ ಪರೀಕ್ಷೆಗೆ ತೆರಳಲು ವಿದ್ಯಾರ್ಥಿಗಳಿಗೆ ಸಮಸ್ಯೆ ಎದುರಿಸುವಂತೆ ಆಗಿದೆ.
ವಿದ್ಯಾರ್ಥಿಗಳನ್ನು ಪರೀಕ್ಷಾ ಕೇಂದ್ರಕ್ಕೆ ತಲುಪಿಸಲು ಪರ್ಯಾಯ ವ್ಯವಸ್ಥೆ ಕಲ್ಪಿಸಲು ನಿಟ್ಟಿನಲ್ಲಿ ಸ್ಥಳೀಯರು ಮತ್ತು ಅಧಿಕಾರಿಗಳು ಮುಂದಾಗಿದ್ದಾರೆ.