ಪತ್ರಿಕೋದ್ಯಮ ಓದೋರು ಅದೃಷ್ಟವಂತರು

Team Udayavani, Nov 25, 2017, 1:10 PM IST

gul-6.jpg

ಕಲಬುರಗಿ: ವಿಶ್ವವಿದ್ಯಾಲಯವೆಂದರೆ ವಿಶ್ವಕ್ಕೆ ವಿದ್ಯೆಯನ್ನು ವಿಶ್ವದೆಲ್ಲೆಡೆ ಪಸರಿಸುವ ಕೆಲಸವೇ ಆಗಿರುತ್ತದೆ. ವಿಶ್ವವಿದ್ಯಾಲಯದ ಪತ್ರಿಕೋದ್ಯಮ ವಿದ್ಯಾರ್ಥಿಗಳು ವೈಚಾರಿಕ ಮತ್ತು ಬರವಣಿಗೆ ಮೂಲಕ ಗುರುತಿಸಿಕೊಳ್ಳಲು ಪ್ರಯತ್ನಿಸಬೇಕು. ಪತ್ರಿಕೋದ್ಯಮ ವೃತ್ತಿಪರ ಶಿಕ್ಷಣ ಪಡೆಯಲು ಆಯ್ಕೆಯಾಗಿರುವ ವಿದ್ಯಾರ್ಥಿಗಳು ಅದೃಷ್ಟಶಾಲಿಗಳು ಎಂದು ಗುಲಬರ್ಗಾ ವಿಶ್ವವಿದ್ಯಾಲಯದ ಕುಲಪತಿ ಪ್ರೊ| ಎಸ್‌.ಆರ್‌. ನಿರಂಜನ ಹೇಳಿದರು.

ಗುಲಬರ್ಗಾ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ, ಬಹು ಮಾಧ್ಯಮ ನಿರ್ಮಾಣ
ಕೇಂದ್ರದ ಸಹಯೋಗದಲ್ಲಿ ಕಿರುಚಿತ್ರಗಳ ಪ್ರಸ್ತುತತೆ ಮತ್ತು ಸವಾಲುಗಳು ವಿಶೇಷ ಉಪನ್ಯಾಸ, ಸರ್ಕಾರಕ್ಕೆ ಹಾಳು ಕಿರುಚಿತ್ರ ಪ್ರದರ್ಶನ ಹಾಗೂ ಸಂವಾದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಈ ವರ್ಷದಲ್ಲಿ ಮೆರಿಟ್‌ ಮೂಲಕ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗಿದೆ. ಒಂದು ಲಕ್ಷದ
ಇಪ್ಪತ್ತು ಸಾವಿರ ವಿದ್ಯಾರ್ಥಿಗಳಲ್ಲಿ ಮೂರರಿಂದ ನಾಲ್ಕು ಸಾವಿರ ವಿದ್ಯಾರ್ಥಿಗಳ ಆಯ್ಕೆ ಮಾಡಿಕೊಳ್ಳಲಾಗಿದೆ ಎಂದರು.

ಎಲ್ಲ ವಿಭಾಗಗಳಲ್ಲಿ ಶಿಕ್ಷಕರ ಕೊರತೆಯಿದೆ. ಈ ವಿಶ್ವವಿದ್ಯಾಲಯದಲ್ಲಿ ಅಗತ್ಯ 120 ಹುದ್ದೆಗಳಿವೆ 90 ಉಪನ್ಯಾಸಕರು ಮಾತ್ರ ಇದ್ದಾರೆ. ಮುಂದಿನ ದಿನಗಳಲ್ಲಿ ಉಪನ್ಯಾಸಕರ ಆಯ್ಕೆ ಮಾಡಲಾಗುತ್ತದೆ. ಈ ಕುರಿತು ಸರ್ಕಾರಕ್ಕೆ ಅನೇಕ ಬಾರಿ ಪ್ರಸ್ತಾವನೆ ಸಲ್ಲಿಸಲಾಗಿದೆ. ಶೀಘ್ರದಲ್ಲೇ ಅನುಮತಿ ದೊರೆಯುವ ಸಾಧ್ಯತೆಗಳಿವೆ. ಪತ್ರಿಕೋದ್ಯಮದಲ್ಲಿ ಒಂದು ಸೆಮಿಸ್ಟರ್‌ನಲ್ಲಿ ಎರಡು ಉಪನ್ಯಾಸ ಮಾಲೆಗಳನ್ನು ಏರ್ಪಡಿಸಿರಿ. ಈ ವಿಶ್ವವಿದ್ಯಾಲಯ ಅವರಣದಲ್ಲಿ 25 ಕಿ.ಮೀ ವ್ಯಾಪ್ತಿಯಲ್ಲಿ ಪ್ರಸಾರವಾಗುವ ಆಕಾಶವಾಣಿ ಕೇಂದ್ರವನ್ನು ಸದ್ಯದಲ್ಲೇ ಆರಂಭಿಸಲಾಗುವುದು ಎಂದು ಹೇಳಿದರು.

ಹಿರಿಯ ಪತ್ರಕರ್ತ ಶ್ರೀನಿವಾಸ ಸಿರನೂರರ್‌, ಗುವಿವಿ ವಿಶ್ರಾಂತ ಪ್ರಾಧ್ಯಾಪಕ ಹಾಗೂ ಪತ್ರಿಕೋದ್ಯಮ ವಿಭಾಗದ ಪ್ರಥಮ ಸಂಯೋಜನಾಧಿಕಾರಿ ಪ್ರೊ| ಬಿ.ಎಸ್‌. ಮಹೇಶ್ವರಪ್ಪ ಅವರನ್ನು ಕುಲಪತಿ ನಿರಂಜನ ಸನ್ಮಾನಿಸಿದರು.

ಮುಖ್ಯ ಅಥಿಯಾಗಿದ್ದ ಪತ್ರಕರ್ತ ವಾದಿರಾಜ ವ್ಯಾಸಮುದ್ರ ಮಾತನಾಡಿ, ಪತ್ರಿಕೋದ್ಯಮ ವಿಭಾಗಕ್ಕೆ ಹತ್ತು ವರ್ಷಗಳು
ತುಂಬಿವೆ. ಈ ವಿಭಾಗ ಸೊರಗಿದ್ದು ಉಂಟು, ಆಗಾಗ ಶಕ್ತಿ ಪಡೆದದ್ದು ಉಂಟು. ಈಗ ಪತ್ರಿಕೋದ್ಯಮ ವಿಭಾಗಕ್ಕೆ ತುಂಬಾ ಬಲ ಬಂದಿದೆ ಎಂದರು.

ಗುಲಬರ್ಗಾ ವಿಶ್ವವಿದ್ಯಾಲಯದ ಎಂಜೆಎಂಸೆ ವಿಭಾಗದ ಪ್ರಥಮ ಸಂಯೋಜನಾಧಿಕಾರಿ ಹಾಗೂ ವಿಶ್ರಾಂತ ಪ್ರಾಧ್ಯಾಪಕ ಪ್ರೊ| ಬಿ. ಎಸ್‌. ಮಹೇಶ್ವರಪ್ಪ ಮಾತನಾಡಿ, ವಿವಿಯಲ್ಲಿ ಪತ್ರಿಕೋದ್ಯಮ ವಿಭಾಗ ಸ್ಥಾಪನೆ ಮಾಡಿ ಹಲವಾರು ಸಮಸ್ಯೆಗಳು ಎದುರಾದವು. ಆಗ ಇದ್ದ ಕುಲಪತಿ ಪ್ರೊ| ಬಿ.ಜಿ. ಮೂಲಿಮನಿ ಅವರಿಗೆ ಪತ್ರಿಕೋದ್ಯಮ ಸ್ಥಾಪನೆ ಶ್ರೇಯಸ್ಸು ಸಲ್ಲಬೇಕು. ಮೊದಲಿಗೆ ಮಾಹಿತಿ ತಂತ್ರಜ್ಞಾನ ಗುರುಗಳು ಬೋಧನೆ ಮಾಡುತ್ತಿದ್ದರು.

ನಂತರ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಲಾಯಿತು. ಈ ಹತ್ತು ವರ್ಷಗಳಲ್ಲಿ ಹಲವಾರು ಸುಧಾರಣೆಗಳು ಕಂಡು ಬಂದಿವೆ. ವಿದ್ಯಾರ್ಥಿಗಳು ಭಕ್ತಿ, ಶ್ರದ್ಧೆಯಿಂದ ವಿಷಯ ಕಲಿಯಬೇಕು ಎಂದರು.

ವಿಶೇಷ ಉಪನ್ಯಾಸಕರಾಗಿ ರಾಯಚೂರು ದೂರದರ್ಶನ ಕೇಂದ್ರದ ಅಭಿಯಾಂತ್ರಿಕ ಸಹಾಯಕ ಪ್ರಭು ನಿಷ್ಠಿ ಕಿರುಚಿತ್ರಗಳ ಪ್ರಸ್ತುತತೆ ಮತ್ತು ಸವಾಲುಗಳು ವಿಷಯ ಕುರಿತು ಉಪನ್ಯಾಸ ನೀಡಿದರು. ನಂತರ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.

ವಿಭಾಗದ ಸಂಯೋಜನಾಧಿಕಾರಿ ಪ್ರೊ| ಎನ್‌. ಪಾರ್ವತಮ್ಮ ಅಧ್ಯಕ್ಷತೆ ವಹಿಸಿದ್ದರು. ಪ್ರೊ| ವಾಸುದೇವ ಸೇಡಂ, ಹಿರಿಯ ಪತ್ರಕರ್ತ ರಾಮಕೃಷ್ಣ ಬಡಶೇಷಿ, ವಿಶ್ವಜ್ಯೋತಿ ಪ್ರತಿಷ್ಠಾನದ ಅಧ್ಯಕ್ಷ ವಿಜಯಕುಮಾರ ತೇಗಲತಿಪ್ಪಿ, ಡಾ| ದೇವೆಂದ್ರಪ್ಪ ತೇಲ್ಕರ್‌, ಸಿಂಡಿಕೇಟ್‌ ಸದಸ್ಯರಾದ ಈಶ್ವರ್‌ ಇಂಗಿನ್‌, ಸಾಯಿಬಣ್ಣ ಕೆಂಗೂರಿ, ವಿಭಾಗದ ಶಿಕ್ಷಕರಾದ ಡಾ| ಕೆ.ಎಂ. ಕುಮಾರಸ್ವಾಮಿ, ವೆಂಕಟೇಶ ಕಡೂನ, ಚಂದ್ರಲೇಖಾ, ರೀತು ತಳವಾರ, ಹನುಮಂತ ಶೇರಿ, ಕಾನೂನು ವಿಭಾಗದ ಡೀನ್‌ ಪ್ರೊ| ದೇವಿದಾಸ ಮಾಲೆ, ಕಲಾ ನಿಕಾಯದ ಡೀನ್‌ ಪ್ರೊ| ವಿಜಯ ತೆಲಂಗ, ಮಲ್ಲಿಕಾರ್ಜುನ ಅಪಚಂದ, ಕಿರು ಚಿತ್ರದ ನಿರ್ದೇಶಕ ರಾಹುಲ್‌ ಮೈಸೂರು, ಚಿತ್ರ ತಂಡದ ಕಲಾವಿದರು ಹಾಜರಿದ್ದರು.

ಟಾಪ್ ನ್ಯೂಸ್

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

Kalaburagi; ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

crime (2)

Kalaburagi:ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ

Lok Sabha Elections; ಸೋಲಿನ ಭೀತಿಯಿಂದ ಸ್ಪರ್ಧೆ ಮಾಡದ ಖರ್ಗೆ: ಅಗರವಾಲ್‌

Lok Sabha Elections; ಸೋಲಿನ ಭೀತಿಯಿಂದ ಸ್ಪರ್ಧೆ ಮಾಡದ ಖರ್ಗೆ: ಅಗರವಾಲ್‌

ಮೊದಲಿನ ಗ್ಯಾರಂಟಿಗಳೇ ಕೊಟ್ಟಿಲ್ಲ, ಈಗೇನು ಕೊಡ್ತಾರೆ: ಕೇಂದ್ರಕ್ಕೆ ಖರ್ಗೆ ಪ್ರಶ್ನೆ

ಮೊದಲಿನ ಗ್ಯಾರಂಟಿಗಳೇ ಕೊಟ್ಟಿಲ್ಲ, ಈಗೇನು ಕೊಡ್ತಾರೆ: ಕೇಂದ್ರಕ್ಕೆ ಖರ್ಗೆ ಪ್ರಶ್ನೆ

Election; ದಿಂಗಾಲೇಶ್ವರ ಸ್ವಾಮೀಜಿ ಕಾಂಗ್ರೆಸ್ ಸೇರುವ ವಿಚಾರ ಸದ್ಯಕ್ಕಿಲ್ಲ:ಡಿಕೆ ಶಿವಕುಮಾರ್

Election; ದಿಂಗಾಲೇಶ್ವರ ಸ್ವಾಮೀಜಿ ಕಾಂಗ್ರೆಸ್ ಸೇರುವ ವಿಚಾರ ಸದ್ಯಕ್ಕಿಲ್ಲ:ಡಿಕೆ ಶಿವಕುಮಾರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.