Kalaburagi; ಕಲ್ಯಾಣಕ್ಕೆ ಪ್ರತ್ಯೇಕ ಸಚಿವಾಲಯ! ಸಿಎಂ ಸಿದ್ದರಾಮಯ್ಯ ಘೋಷಣೆ
ಕಲಬುರಗಿ ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ; ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ 46 ನಿರ್ಣಯ ಅನುಮೋದನೆ
Team Udayavani, Sep 18, 2024, 6:35 AM IST
ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದ ಸಮಗ್ರ ಅಭಿವೃದ್ಧಿಗೆ ಪ್ರತ್ಯೇಕ ಸಚಿ ವಾಲಯ ರಚನೆ, ಬೀದರ್ ಹಾಗೂ ರಾಯ ಚೂರು ನಗರಸಭೆಗಳನ್ನು ಮಹಾನಗರ ಪಾಲಿಕೆ ಗಳಾಗಿ ಮೇಲ್ದರ್ಜೆಗೇರಿಸುವುದರ ಸಹಿತ ಈ ಭಾಗದ ವಿಕಾಸಕ್ಕೆ ಪೂರಕವಾದ 46 ನಿರ್ಣಯ ಗಳನ್ನು ನಗರದಲ್ಲಿ ಮಂಗಳವಾರ ನಡೆದ ಸಚಿವ ಸಂಪುಟ ಸಭೆಯು ಅಂಗೀಕರಿಸಿದೆ.
10 ವರ್ಷಗಳ ಅನಂತರ ಕಲಬುರಗಿಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಭಾಗದ ಅಭಿವೃದ್ಧಿಗೆ ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸುದ್ದಿಗಾರರಿಗೆ ತಿಳಿಸಿದರು.
ಕಲ್ಯಾಣ ಕರ್ನಾಟಕ ಭಾಗಕ್ಕೆ ಪ್ರತ್ಯೇಕ ಸಚಿವಾಲಯ ಬಹು ದಿನಗಳ ಬೇಡಿಕೆಯಾಗಿತ್ತು. ಇದನ್ನು ಕಲ್ಯಾಣ ಕರ್ನಾಟಕ ಉತ್ಸವ ದಿನದಂದೇ ಪ್ರಕಟಿಸುವ ಮೂಲಕ ಈ ಭಾಗದ ಅಭಿವೃದ್ಧಿಗೆ ನಾವು ಬದ್ಧ ಎಂಬುದನ್ನು ಸಾಬೀತು ಪಡಿಸಲಾಗಿದೆ. ಪ್ರತ್ಯೇಕ ಸಚಿವಾಲಯ ರಚನೆಯಿಂದ ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಯ ವೇಗ ಹೆಚ್ಚಲಿದೆ ಎಂದರು.
ಈ ಸಚಿವ ಸಂಪುಟ ಸಭೆಯಲ್ಲಿ ಒಟ್ಟು 56 ನಿರ್ಣಯಗಳನ್ನು ಅಂಗೀಕರಿಸಿದ್ದು, ಈ ಪೈಕಿ 46 ಕಲ್ಯಾಣ ಕರ್ನಾಟಕ ಭಾಗಕ್ಕೆ ಸಂಬಂಧಿಸಿವೆ. ಒಟ್ಟು 11,770 ಕೋಟಿ ರೂ. ವೆಚ್ಚದ ಯೋಜನೆ ಗಳಿಗೆ ಅನುಮೋದನೆ ನೀಡಲಾಗಿದೆ ಎಂದರು.
ಕಲ್ಯಾಣ ಕರ್ನಾಟಕ ಭಾಗದ 17,439 ಖಾಲಿ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲು ತೀರ್ಮಾನಿಸಲಾಗಿದೆ.
ಅದೇ ರೀತಿ ಹಿಂದುಳಿದ ತಾಲೂಕುಗಳ ವಾಸ್ತವ ಸ್ಥಿತಿಗತಿ ಅರಿಯಲು ರಚಿಸಲಾಗಿರುವ ಡಾ| ಗೋವಿಂದ ರಾವ್ ಅಧ್ಯಕ್ಷತೆಯ ಸಮಿತಿ ವರದಿ ಸಲ್ಲಿಸಿದ ಬಳಿಕ ಪ್ರಾದೇಶಿಕ ಅಸಮತೋಲನ ನಿವಾರಣೆ ನಿಟ್ಟಿನಲ್ಲಿ ಈ ತಾಲೂಕುಗಳ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುವುದು ಎಂದರು.
ಕಲ್ಯಾಣ ಕರ್ನಾಟಕ ಭಾಗದಲ್ಲಿ 45 ಪ್ರಾಥಮಿಕ ಆರೋಗ್ಯ ಕೇಂದ್ರ, 31 ಸಮು ದಾಯ ಆರೋಗ್ಯ ಕೇಂದ್ರ ಪ್ರಾರಂಭ; 9 ತಾಲೂಕು ಆಸ್ಪತ್ರೆ ಮೇಲ್ದರ್ಜೆಗೇರಿಸಲು ಹಾಗೂ 2 ತಾಲೂಕು ಆಸ್ಪತ್ರೆಗಳನ್ನು ಜಿಲ್ಲಾಸ್ಪತ್ರೆಗಳನ್ನಾಗಿ ಮೇಲ್ದರ್ಜೆಗೇರಿಸಲು ಅನುಮೋದನೆ ನೀಡಲಾಗಿದ್ದು, ಇದಕ್ಕಾಗಿ 890 ಕೋಟಿ ರೂ. ವೆಚ್ಚ ಮಾಡಲಾಗುವುದು ಎಂದರು.
ಭೀಮಾ ನದಿಗೆ ಹರವಾಳ-ಬೆಳಗುಂಪಾ ನಡುವೆ 130 ಕೋಟಿ ರೂ. ವೆಚ್ಚದಲ್ಲಿ ಬ್ರಿಜ್ ಕಂ ಬ್ಯಾರೇಜ್ ನಿರ್ಮಾಣಕ್ಕೂ ಸಂಪುಟ ಅನುಮೋದನೆ ನೀಡಿದೆ.
ಅನುದಾನಕ್ಕಾಗಿ ಕೇಂದ್ರಕ್ಕೆ ಮನವಿ
ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಪ್ರತೀ ವರ್ಷ 5 ಸಾವಿರ ಕೋಟಿ ರೂ. ಬಿಡುಗಡೆ ಮಾಡಲಾಗುವುದು. ಆದರೆ 371ಜೆ ವಿಧಿ ಜಾರಿ ಬಳಿಕ ಕೇಂದ್ರ ಸರಕಾರ ಈ ಭಾಗಕ್ಕೆ ಒಂದು ರೂಪಾಯಿ ಅನುದಾನವನ್ನೂ ನೀಡಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಆದ್ದರಿಂದ ಈ ಭಾಗದ ಅಭಿವೃದ್ಧಿಗೆ 5 ಸಾವಿರ ಕೋಟಿ ರೂ. ನೀಡಬೇಕು ಎಂದು ಕೇಂದ್ರಕ್ಕೆ ಮನವಿ ಮಾಡಲು ನಿರ್ಧರಿಸಲಾಗಿದೆ ಎಂದು ಸಿಎಂ ಇದೇ ವೇಳೆ ಹೇಳಿದರು.
ಮಿನಿ ವಿಧಾನ ಸೌಧಗಳು ಇನ್ನು ಪ್ರಜಾಸೌಧ
ರಾಜ್ಯಾದ್ಯಂತ 43 “ಭಾರತ ರತ್ನ ಡಾ| ಬಿ.ಆರ್. ಅಂಬೇಡ್ಕರ್ ಕಾರ್ಮಿಕ ಸೇವಾ ಕೇಂದ್ರ’ಗಳನ್ನು 48 ಕೋಟಿ ರೂ. ವೆಚ್ಚದಲ್ಲಿ ಸ್ಥಾಪಿಸಲು ಸಚಿವ ಸಂಪುಟ ನಿರ್ಧರಿಸಿದೆ. ಅಲ್ಲದೆ ಮಿನಿ ವಿಧಾನಸೌಧಗಳಿಗೆ ಇನ್ನು “ಪ್ರಜಾಸೌಧ’ ಎಂದು ನಾಮಕರಣ ಮಾಡಲು ಸಂಪುಟ ಸಭೆ ತೀರ್ಮಾನಿಸಿದೆ. ವೈದ್ಯಕೀಯ ಕಾಲೇಜುಗಳ ಆಸ್ಪತ್ರೆಗಳು ಮತ್ತು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಿಗೆ 85.60 ಕೋಟಿ ರೂ. ವೆಚ್ಚದಲ್ಲಿ ಎಂಆರ್‌ಐ ಯಂತ್ರಗಳ ಖರೀದಿ, ಬೆಂಗಳೂರಿನ ಹೆಬ್ಟಾಳ ಬಳಿ ರಾಜ್ಯ ಬೀಜ ನಿಗಮದ ಜಮೀನಿನಲ್ಲಿ ಕೃಷಿ ಇಲಾಖೆ ಜಂಟಿ ಸಹಭಾಗಿತ್ವದಲ್ಲಿ 56.63 ಕೋಟಿ ರೂ. ವೆಚ್ಚದಲ್ಲಿ ರಾಜ್ಯ ಪಾನೀಯ ನಿಗಮದ ಕಚೇರಿ ಕಟ್ಟಡವನ್ನು ನಿರ್ಮಿಸಲು ಅನು ಮೋದನೆ ನೀಡಲಾಗಿದೆ.
ಪ್ರಮುಖ ನಿರ್ಣಯಗಳು
-ರಾಜ್ಯದ 15 ವಕ್ಫ್ ಸಂಸ್ಥೆಗಳಡಿ ಮಹಿಳಾ ಪ.ಪೂ. ಕಾಲೇಜು ಪ್ರಾರಂಭಿಸಲು 447.76 ಕೋಟಿ ರೂ. ವೆಚ್ಚದಲ್ಲಿ ಕಟ್ಟಡ ನಿರ್ಮಾಣ
– ಗದಗ ಜಿಲ್ಲೆಯ ರೋಣದಲ್ಲಿ 50 ಕೋಟಿ ರೂ. ನಬಾರ್ಡ್ ಅನುದಾನದಡಿ ಜಿಟಿಟಿಸಿ ಕೇಂದ್ರ ಸ್ಥಾಪನೆ
-ರಾಜ್ಯ ಬೀಜ ನಿಗಮ ನಿಯಮಿತಕ್ಕೆ 200 ಕೋಟಿ ರೂ. ಬ್ಯಾಂಕ್ ಸಾಲಕ್ಕೆ ಖಾತರಿ
-ಗದಗ, ಕೊಪ್ಪಳ, ಚಾಮರಾಜನಗರದ ಆಸ್ಪತ್ರೆಗಳಿಗೆ 149 ಕೋಟಿ ರೂ. ವೆಚ್ಚದಲ್ಲಿ ಅಗತ್ಯ ಸೌಲಭ್ಯ
ಕಲ್ಯಾಣ ಕರ್ನಾಟಕದ ಸಮಗ್ರ ವಿಕಾಸ ನಮ್ಮ ಸರಕಾರದ ಬದ್ಧತೆಯಾಗಿದೆ. ಅದಕ್ಕಾಗಿಯೇ ಪ್ರತೀ ವರ್ಷ 5 ಸಾವಿರ ಕೋಟಿ ರೂ.ಗಳನ್ನು ಮೀಸಲಿಟ್ಟು ರಸ್ತೆ, ನೀರಾವರಿ, ಆರೋಗ್ಯ, ಶಿಕ್ಷಣದ ವಿಕಾಸಕ್ಕೆ ಶ್ರಮಿಸಲಾಗುತ್ತಿದೆ.
-ಸಿದ್ದರಾಮಯ್ಯ, ಮುಖ್ಯಮಂತ್ರಿ
ಕಲ್ಯಾಣ ಕರ್ನಾಟಕ ಭಾಗದ ಈ ಭಾಗದ ಎಲ್ಲ ಸ್ಮಾರಕಗಳನ್ನು ಸಂಪರ್ಕ ಕಲ್ಪಿಸಲು ಯೋಜನೆ ರೂಪಿಸಿ ಅವುಗಳ ರಕ್ಷಣೆ ಜತೆಗೆ ಸಚಿವ ಎಚ್.ಕೆ. ಪಾಟೀಲ್ ಬೇಡಿಕೆ ಇಟ್ಟಿದ್ದರು. ಅದಕ್ಕೆ ಒಪ್ಪಿಗೆ ನೀಡುವ ಮೂಲಕ ಸರಕಾರ ಐತಿಹಾಸಿಕ ನಿರ್ಣಯ ಕೈಗೊಂಡಿದೆ.
-ಡಿ.ಕೆ. ಶಿವಕುಮಾರ್, ಡಿಸಿಎಂ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kunigal: ಬೈಕ್ ಗೆ ಮಿನಿ ಗೂಡ್ಸ್ ವಾಹನ ಡಿಕ್ಕಿ… ಪಿಗ್ಮಿ ಸಂಗ್ರಹಗಾರ ಮೃತ್ಯು
Haveri: ಆಕಾಶದತ್ತ ಚಿಗರಿತಲೇ ಬೇರು ಮುತ್ತಾಯಿತಲೇ ಪರಾಕ್… ಗೊರವಯ್ಯ ಕಾರ್ಣಿಕದ ನುಡಿ
Mysuru Dasara; ಅರಮನೆಯಲ್ಲಿ ಡಬಲ್ ಸಂಭ್ರಮ: ಯದುವೀರ್ ಅವರಿಗೆ 2ನೇ ಮಗು ಜನನ
Elephant: ಆಗುಂಬೆ ಪರಿಸರದಲ್ಲಿ ಕಾಡಾನೆ ಹಾವಳಿ… ಮಾಹಿತಿ ನೀಡಿದರೂ ಸ್ಪಂದಿಸದ ಅಧಿಕಾರಿಗಳು
Thirthahalli: ವ್ಯವಹಾರದಲ್ಲಿ ನಷ್ಟ, ಉಡುಪಿ ಮೂಲದ ವ್ಯಕ್ತಿ ತೀರ್ಥಹಳ್ಳಿಯಲ್ಲಿ ನೇಣಿಗೆ ಶರಣು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.