ಮಾಸ್ಕ್ ಬಗ್ಗೆ ಜಾಗೃತಿ: ಧರಿಸದವರಿಗೆ ದಂಡ ವಿಧಿಸಿದ ಕಲಬುರಗಿ ಡಿಸಿ
Team Udayavani, Nov 5, 2020, 2:17 PM IST
ಕಲಬುರಗಿ: ಕೋವಿಡ್ ಸೋಂಕು ಹರಡದಂತೆ ನಿಯಂತ್ರಿಸಲು ಮತ್ತು ಮಾಸ್ಕ್ ಧರಿಸುವಿಕೆ ಬಗ್ಗೆ ಜಿಲ್ಲಾಧಿಕಾರಿ ವಿ.ವಿ. ಜ್ಯೋತ್ಸ್ನಾ ಸಾರ್ವಜನಿಕರಿಗೆ ಜಾಗೃತಿ ಮೂಡಿಸಿದ್ದಲ್ಲದೇ ಮಾಸ್ಕ್ ಧರಿಸದರಿಗೆ ತಾವೇ ಮುಂದೆ ನಿಂತು ದಂಡ ಹಾಕಿಸಿದರು.
ಕೋವಿಡ್ ಕುರಿತು ಜಾಗೃತಿ ಮೂಡಿಸಲು ಗುರುವಾರ ಸ್ವತಃ ಜಿಲ್ಲಾಧಿಕಾರಿಗಳು ನಗರದ ಪ್ರಮುಖ ಸಾರ್ವಜನಿಕ ಸ್ಥಳಗಳಿಗೆ ಭೇಟಿ ನೀಡಿದರು. ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತ, ಜಗತ್ ವೃತ್ತದಲ್ಲಿ ಕಾರು, ಆಟೋ, ಬೈಕ್ ಗಳಲ್ಲಿ ಮಾಸ್ಕ್ ಹಾಕದೆ ಸಂಚರಿಸುತ್ತಿದ್ದ ಸವಾರರನ್ನು ತಡೆದು ಮಾಸ್ಕ್ ಹಾಕಿಕೊಳ್ಳವಂತೆ ಸೂಚಿಸಿದರು. ಅಲ್ಲದೇ, ಸಂಚಾರ ಪೊಲೀಸರಿಗೆ ದಂಡ ವಿಧಿಸುವಂತೆ ಡಿಸಿ ಜ್ಯೋತ್ಸ್ನಾ ಸೂಚಿಸಿದರು.
ಸೂಪರ್ ಮಾರ್ಕೆಟ್ ಪ್ರದೇಶಕ್ಕೂ ಜಿಲ್ಲಾಧಿಕಾರಿಗಳು ಭೇಟಿ ಕೊಟ್ಟು, ಮಾಸ್ಕ್ ಹಾಕದೆ ತಿರುಗಾಡುತ್ತಿದ್ದ ಜನರಿಗೆ ನಿಮ್ಮ ಮಾಸ್ಕ್ ಎಲ್ಲಿದೆ? ಯಾಕೆ ಧರಿಸಿಲ್ಲ ಎಂದು ಪ್ರಶ್ನಿಸಿದರು. ಮಾಸ್ಕ್ ಇಲ್ಲದವರಿಗೆ ಮಾಸ್ಕ್ ವಿತರಿಸಿದರು. ಜಿಲ್ಲಾಧಿಕಾರಿಗಳಿಗೆ ಮಹಾನಗರ ಪಾಲಿಕೆ ಆಯುಕ್ತ ಸ್ನೇಹಲ್ ಸುಧಾಕರ್ ಲೋಖಂಡೆ ಸಾಥ್ ನೀಡಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್
Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ