ಉದ್ಯೋಗ ಕೇಳಿದವರಿಗೂ ಜಾಬ್‌ಕಾರ್ಡ್‌

ರಾಜ್ಯಾದ್ಯಂತ ಭರದಿಂದ ಸಾಗಿದೆ ಮನರೇಗಾಬದು ನಿರ್ಮಾಣ ಕಾಮಗಾರಿ ವೀಕ್ಷಿಸಿದ ಈಶ್ವರಪ್ಪ

Team Udayavani, Jun 6, 2020, 3:48 PM IST

06-June-12

ಸಾಂದರ್ಭಿಕ ಚಿತ್ರ

ಕಲಬುರಗಿ: ಕೋವಿಡ್ ಸಂಕಷ್ಟ ಮತ್ತು ಲಾಕ್‌ ಡೌನ್‌ ನಿರುದ್ಯೋಗ ಸಮಸ್ಯೆಯಲ್ಲಿರುವ ಕೂಲಿ ಕಾರ್ಮಿಕರು ಮತ್ತು ರೈತಾಪಿ ವರ್ಗದ ದುಡಿಯುವ ಕೈಗಳಿಗೆ ರಾಷ್ಟ್ರೀಯ ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆ ವರವಾಗಿದ್ದು, ಹಲವು ಕಾಮಗಾರಿಗಳು ರಾಜ್ಯಾದ್ಯಂತ ಭರದಿಂದ ಸಾಗಿವೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯಿತಿ ರಾಜ್‌ ಸಚಿವ ಕೆ.ಎಸ್‌. ಈಶ್ವರಪ್ಪ ಹೇಳಿದರು.

ತಾಲೂಕಿನ ಹೊನ್ನಕಿರಣಗಿ ಗ್ರಾಮದ ರೈತರ ಜಮೀನಿನಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ನಡೆಯುತ್ತಿದ್ದ ಬದು ನಿರ್ಮಾಣ ಕಾಮಗಾರಿ ವೀಕ್ಷಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ 6,021 ಗ್ರಾಮ ಪಂಚಾಯಿತಿಗಳ ಪೈಕಿ 5,900 ಗ್ರಾಪಂಗಳಲ್ಲಿ ಈಗಾಗಲೇ ಉದ್ಯೋಗ ಖಾತ್ರಿ ಕೆಲಸಗಳು ಆರಂಭಿಸಲಾಗಿದೆ. ಕೆರೆ ಹೂಳೆತ್ತುವ, ಬದು ನಿರ್ಮಾಣ, ಚೆಕ್‌ ಡ್ಯಾಂದಂತಹ ಕಾಮಗಾರಿಗಳು ಪ್ರತಿ ಹಳ್ಳಿಯಲ್ಲಿ ಕಾಣಬಹುದಾಗಿದೆ ಎಂದರು.

ಪ್ರತಿ ಕೂಲಿ ಕಾರ್ಮಿಕನಿಗೂ ಉದ್ಯೋಗ ಸಿಗಬೇಕು ಎಂಬುದು ಪ್ರಧಾನಿ ನರೇಂದ್ರ ಮೋದಿ ಅವರ ಆಶಯವಾಗಿದೆ. ಇದಕ್ಕಾಗಿ ಉದ್ಯೋಗ ಖಾತ್ರಿ ಯೋಜನೆಗೆ 60 ಸಾವಿರ ಕೋಟಿ ರೂ. ಜತೆಗೆ ಇತ್ತೀಚೆಗೆ 20 ಲಕ್ಷ ಕೋಟಿ ಪ್ಯಾಕೇಜ್‌ನಲ್ಲಿ 40 ಸಾವಿರ ಕೋಟಿ ರೂ. ನರೇಗಾ ಕೆಲಸಗಳಿಗೆ ಮೀಸಲಿರಿಸಲಾಗಿದೆ. ಅಲ್ಲದೇ, ಪ್ರತಿ ವ್ಯಕ್ತಿಗೆ ಕೂಲಿ ದಿನಗಳನ್ನು 100ರಿಂದ 150ಕ್ಕೆ ಹೆಚ್ಚಿಸಲು ಕ್ರಮ ವಹಿಸಲಾಗಿದೆ ಎಂದರು.

ಸರ್ಕಾರಿ ನೌಕರರು, ತರಿಗೆ ಪಾವತಿದಾರರು ಹೊರತುಪಡಿಸಿ ಉದ್ಯೋಗ ಕೇಳಿ ಬರುವ ಎಲ್ಲರಿಗೂ ಉದ್ಯೋಗ ನೀಡಲಾಗುತ್ತದೆ. ರೈತರು ತಮ್ಮ ಹೊಲದಲ್ಲಿ ಪಪ್ಪಾಯ, ಬಾಳೆ ಬೆಳೆಯಲು ಸಹ ಮುಂದೆ ಅವಕಾಶ ನೀಡಲಾಗುತ್ತದೆ ಎಂದು ತಿಳಿಸಿದರು. ನರೇಗಾ ಯೋಜನೆಯಡಿ ಅಂತರ್ಜಲ ಹೆಚ್ಚಳಕ್ಕೆ ಒತ್ತು ನೀಡಲಾಗುತ್ತಿದೆ. ಇದಕ್ಕಾಗಿ ಕೆರೆ ಹೂಳೆತ್ತುವುದು, ಕೃಷಿ ಹೊಂಡ, ಪುಷ್ಕರಣಿ, ಗೋಕಟ್ಟಾ ಕಾಮಗಾರಿಗಳನ್ನು ಹೆಚ್ಚು ಕೈಗೆತ್ತಿಕೊಳ್ಳಲಾಗಿದೆ. ಆರ್ಟ್‌ ಆಫ್‌ ಲೀವಿಂಗ್‌ ಸಂಸ್ಥೆಯೊಂದಿಗೆ ಒಪ್ಪಂದ ಮಾಡಿಕೊಂಡು “ಅಂತರ್ಜಲ ಚೇತನ’ ಎಂಬ ನೂತನ ಕಾರ್ಯಕ್ರಮ ಆರಂಭಿಸಲಾಗಿದೆ ಎಂದರು.

ಇದೇ ಸಂದರ್ಭದಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಕೈಗೆತ್ತಿಕೊಂಡ ಗೋಕಟ್ಟಾದಲ್ಲಿ ಇತ್ತೀಚೆಗೆ ಸುರಿದ ಮಳೆಯಿಂದ ನೀರು ಸಂಗ್ರಹಣೆಗೊಂಡಿರುವುದುನ್ನು ಸಚಿವರು ವೀಕ್ಷಿಸಿದರು. ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಗ್ರಾಮದ ರಸ್ತೆ ಬದಿಯಲ್ಲಿ ಸಸಿ ನೆಟ್ಟು ನೀರೆರೆದರು. ಜಿಲ್ಲೆಯ ಚುನಾಯಿತ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಸಾಥ್‌ ನೀಡಿದರು. ಸಂಸದ ಡಾ.ಉಮೇಶ ಜಾಧವ, ಶಾಸಕರಾದ ಎಂ.ವೈ.ಪಾಟೀಲ, ಬಸವರಾಜ ಮತ್ತಿಮಡು, ಡಾ.ಅವಿನಾಶ ಜಾಧವ, ವಿಧಾನ ಪರಿಷತ್‌ ಸದಸ್ಯ ಬಿ.ಜಿ ಪಾಟೀಲ, ಜಿಪಂ ಅಧ್ಯಕ್ಷೆ ಸುವರ್ಣ ಮಾಲಾಜಿ, ಜಿಪಂ ಉಪಾಧ್ಯಕ್ಷೆ ಶೋಭಾ ಸಿರಸಗಿ, ಮಾಜಿ ಸಚಿವ ಮಾಲೀಕಯ್ಯ ಗುತ್ತೇದಾರ, ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ ನರಿಬೋಳ, ಜಿಪಂ ಕೃಷಿ ಮತ್ತು ಕೈಗಾರಿಕೆ ಸಮಿತಿ ಅಧ್ಯಕ್ಷ ಶಿವರಾಜ ಪಾಟೀಲ ರದ್ದೇವಾಡಿ, ಜಿಪಂ ಸದಸ್ಯರಾದ ದಿಲೀಪ್‌ ಪಾಟೀಲ, ರೇವಣಸಿದ್ದಪ್ಪ ಸಂಕಾಲಿ, ಸಂಜೀವನ್‌ ಯಾಕಾಪುರ, ಅರವಿಂದ ಚವ್ಹಾಣ್‌, ಶಿವಶರಣ ಶಂಕರ, ಜಿಪಂ ಸಿಇಒ ಡಾ.ರಾಜಾ ಪಿ., ತಾಪಂ ಅಧ್ಯಕ್ಷ ಶಿವರಾಜ ಸಜ್ಜನ್‌, ಗ್ರಾಪಂ ಅಧ್ಯಕ್ಷೆ ಜಗದೇವಿ ಗುರುನಾಥ ಜುಲಿ , ತಾಪಂ ಇಒ ಮಾನಪ್ಪ ಕಟ್ಟಿಮನಿ, ಪಿಡಿಒ ಮೇನಕಾ ಜಾಧವ ಸೇರಿ ಹಲವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Kundapura; ಹಲ್ಲೆ , ಬೆದರಿಕೆ, ಚಿನ್ನದ ಸರ ಲೂಟಿ: ದೂರು

Kundapura; ಹಲ್ಲೆ,ಬೆದರಿಕೆ, ಚಿನ್ನದ ಸರ ಲೂಟಿ: ದೂರು

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.